Isaiah · chapter 14 · verse 17
Isaiah 14:17 in Kannada
ಲೋಕವನ್ನು ಕಾಡ ನ್ನಾಗಿ ಮಾಡಿ ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದ ವನು ಈ ಮನುಷ್ಯನೋ ಎಂದು ಅಂದುಕೊಳ್ಳುವರು.
Lokavannu kaada nnaagi maadi serehididavarannu manege bidade idda vanu ee manushyano endu andukolluvaru.
Isaiah 14:17 in English
- King James Version (KJV)
- [That] made the world as a wilderness, and destroyed the cities thereof; [that] opened not the house of his prisoners?
- World English Bible (WEB)
- who made the world like a wilderness, and overthrew its cities, who didn’t release his prisoners to their home?”
- American Standard Version (ASV)
- that made the world as a wilderness, and overthrew the cities thereof; that let not loose his prisoners to their home?
- Bible in Basic English (BBE)
- Who made the world a waste, overturning its towns; who did not let his prisoners loose from the prison-house.
- Darby Translation (DBY)
- [that] made the world as a wilderness, and overthrew the cities thereof; [that] dismissed not his prisoners homewards?
- Webster's Bible (WBS)
- [That] made the world as a wilderness, and destroyed its cities; [that] opened not the house of his prisoners?
- Young's Literal Translation (YLT)
- He hath made the world as a wilderness, And his cities he hath broken down, Of his bound ones he opened not the house.
Read in context
- 15ಆದಾಗ್ಯೂ ಪಾತಾಳದ ಕುಣಿಯ ಪಾರ್ಶ್ವಗಳಿಗೆ ಇಳಿಸಲ್ಪಡುವಿ.
- 16ನಿನ್ನನ್ನು ನೋಡುವ ವರು ನಿನ್ನನ್ನು ಸೂಕ್ಷ್ಮವಾಗಿ ದೃಷ್ಟಿಸಿ ಯೋಚಿಸುತ್ತಾ --ಭೂಮಿಯನ್ನು ನಡುಗಿಸಿ ರಾಜ್ಯಗಳನ್ನು ಕದಲಿಸಿ ಪಟ್ಟಣವನ್ನು ನಾಶಮಾಡಿ
- 17ಲೋಕವನ್ನು ಕಾಡ ನ್ನಾಗಿ ಮಾಡಿ ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದ ವನು ಈ ಮನುಷ್ಯನೋ ಎಂದು ಅಂದುಕೊಳ್ಳುವರು.
- 18ಜನಾಂಗಗಳ ಅರಸುಗಳೆಲ್ಲಾ ಅವರೆಲ್ಲರೂ ವೈಭವ ದಿಂದ ತಮ್ಮತಮ್ಮ ಮನೆಗಳಲ್ಲಿ ಮಲಗುತ್ತಾರೆ.
- 19ಆದರೆ ನೀನು ಅಸಹ್ಯವಾದ ಕೊಂಬೆಯಂತೆಯೂ ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಉಡುಪಿನಂತೆಯೂ ಕಾಲಕೆಳಗೆ ತುಳಿಯಲ್ಪಟ್ಟ ಹೆಣ ದಂತೆಯೂ ನಿನ್ನ ಸಮಾಧಿಯೊಳಗಿಂದ ಹೊರಗೆ ಹಾಕ ಲ್ಪಟ್ಟಿದ್ದೀ.
Cross references
- Joel 2:3 ಯೋವೇಲ 2:3ಅವರ ಮುಂದೆ ಬೆಂಕಿ ದಹಿಸುತ್ತದೆ; ಅವರ ಹಿಂದೆ ಜ್ವಾಲೆ ಸುಡುತ್ತದೆ; ಅವರ ಮುಂದೆ ದೇಶವು ಏದೆನ್ ತೋಟದ ಹಾಗಿದೆ; ಅವರ ಹಿಂದೆ ಹಾಳಾದ ಕಾಡು; ಹೌದು, ಅವುಗಳಿಗೆ ಯಾವದೂ ತಪ್ಪಿಸಿಕೊಳ್ಳಲಾರದು.
- Zephaniah 2:13–14 ಚೆಫನ್ಯ 2:13–14ಆತನು ತನ್ನ ಕೈಯನ್ನು ಉತ್ತರದ ಮೇಲೆ ಚಾಚಿ ಅಶ್ಶೂರನ್ನು ನಾಶಮಾಡಿ ನಿನೆವೆಯನ್ನು ಹಾಳಾಗಿಯೂ ಅರಣ್ಯದಂತೆ ಒಣಗಿ ದ್ದಾಗಿಯೂ ಮಾಡುವನು. ಅದರ ಮಧ್ಯದಲ್ಲಿ ಮಂದೆಗಳೂ ಜನಾಂಗಗಳ ಮೃಗಗಳೆಲ್ಲವೂ ಮಲಗುವವು; ಬಕಪಕ್ಷಿಯೂ ಮುಳ್ಳು ಹಂದಿಯೂ ಅದರ ಮೇಲಿನ ಅವುಗಳ ಹಾಸುಗಳಲ್ಲಿ ಇಳುಕೊಳ್ಳುವವು; ಕಿಟಕಿಗಳಲ್ಲಿ ಹಾಡುವ ಶಬ್ದವಿರುವದು; ಹೊಸ್ತಿಲಗಳಲ್ಲಿ ಹಾಳು ಇರುವದು; ದೇವದಾ ರಿನ ಕೆಲಸವನ್ನು ಬೈಲುಮಾಡುವನು.ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
- Isaiah 13:19–22 ಯೆಶಾಯ 13:19–22ರಾಜ್ಯಗಳ ಘನತೆಯೂ ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬೆಲಿಗೆ ದೇವರು ಸೊದೋ ಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಇದನ್ನು ಸಹ ಕೆಡವಿಬಿಡುವನು. ಅದು ಎಂದಿಗೂ ನಿವಾಸ ಸ್ಥಳ ವಾಗದು, ಇಲ್ಲವೆ ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಇಲ್ಲವೆ ಯಾವ ಅರಬಿಯನೂ ಗುಡಾರ ಹಾಕನು; ಅಥವಾ ಕುರುಬರು ಮಂದೆಯನ್ನು ತಂಗಿಸರು. ಆದರೆ ಮರುಭೂಮಿಯ ಕಾಡುಮೃಗಗಳು ಅಲ್ಲಿ ಮಲಗುವವು; ಅವರ ಮನೆಗಳು ವ್ಯೆಥೆಯಿಂದ ತುಂಬಿರುವವು; ಅಲ್ಲಿ ಗೂಬೆಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು. ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
- 2 Chronicles 28:8–15 2 ಪೂರ್ವಕಾಲವೃತ್ತಾಂತ 28:8–15ಇಸ್ರಾಯೇಲಿನ ಮಕ್ಕಳು ತಮ್ಮ ಸಹೋದರರಲ್ಲಿ ಎರಡು ಲಕ್ಷ ಮಂದಿ ಸ್ತ್ರೀಯರನ್ನೂ ಕುಮಾರರನ್ನೂ ಕುಮಾರ್ತೆಗಳನ್ನೂ ಸೆರೆ ಯಾಗಿ ತಕ್ಕೊಂಡುಹೋದರು. ಇದಲ್ಲದೆ ಅವರಿಂದ ಬಹು ಕೊಳ್ಳೆಯನ್ನು ತಕ್ಕೊಂಡು ಆ ಕೊಳ್ಳೆಯನ್ನು ಸಮಾರ್ಯಕ್ಕೆ ಒಯ್ದರು. ಅಲ್ಲಿ ಕರ್ತನ ಒಬ್ಬ ಪ್ರವಾದಿ ಇದ್ದನು; ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯೆಕ್ಕೆದುರಾಗಿ ಹೊರಟುಹೋಗಿ ಅವರಿಗೆ--ಇಗೋ, ನಿಮ್ಮ ಪಿತೃಗಳ ಕರ್ತನಾದ ದೇವರು ಯೆಹೂದದ ಮೇಲೆ ಉರಿಗೊಂಡದ್ದರಿಂದ ಆತನು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿರಲಾಗಿ, ನೀವು ಆಕಾಶಕ್ಕೆ ಮುಟ್ಟುವ ಉಗ್ರದಿಂದ ಅವರನ್ನು ಕೊಂದುಹಾಕಿದ್ದೀರಿ. ಈಗ ನಿಮಗೆ ದಾಸರೂ ದಾಸಿಗಳೂ ಆಗಿರುವ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ಮಕ್ಕಳನ್ನೂ ನಿಮ್ಮ ವಶಮಾಡಬೇಕೆಂದು ಅಂದುಕೊಳ್ಳುತ್ತೀರಿ. ಆದರೆ ನಿಮ್ಮಲ್ಲಿಯೇ ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಗಳು ಇಲ್ಲವೋ? ಆದದ ರಿಂದ ನೀವು ನನ್ನ ಮಾತು ಕೇಳಿ ನಿಮ್ಮ ಸಹೋದರ ರಲ್ಲಿ ನೀವು ಸೆರೆಯಾಗಿ ತಕ್ಕೊಂಡ ಸೆರೆಯವರನ್ನು ಬಿಟ್ಟುಬಿಡಿರಿ. ಯಾಕಂದರೆ ಉರಿಯುತ್ತಿರುವ ಕರ್ತನ ಕೋಪವು ನಿಮ್ಮ ಮೇಲೆ ಇರುವದು ಅಂದನು. ಆಗ ಎಫ್ರಾಯಾಮನ ಮಕ್ಕಳ ಶ್ರೇಷ್ಠರಲ್ಲಿ ಕೆಲವರಾಗಿರುವ ಯೆಹೋಹಾನಾನನ ಮಗನಾದ ಅಜರ್ಯನೂ ಮೆಷಿ ಲ್ಲೇಮೋತನ ಮಗನಾದ ಬೆರಕ್ಯನೂ ಶಲ್ಲೂಮನ ಮಗನಾದ ಹಿಜ್ಕಿಯನೂ ಹದ್ಲೈಯನ ಮಗನಾದ ಅಮಾಸನೂ ಯುದ್ಧದಿಂದ ಬಂದವರಿಗೆ ವಿರೋಧ ವಾಗಿ ಎದ್ದು ಅವರಿಗೆ--ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ ಎಂದು ಹೇಳಿದರು; ಯಾಕಂದರೆ ನಾವು ಕರ್ತನಿಗೆ ವಿರೋಧವಾಗಿ ಅಪರಾಧ ಮಾಡಿ ದ್ದೇವೆ. ನೀವು ನಮ್ಮ ಪಾಪಗಳನ್ನೂ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾ ಧವು ದೊಡ್ಡದಾಗಿದೆ; ಇಸ್ರಾಯೇಲಿನ ಮೇಲೆ ಉಗ್ರ ಕೋಪವು ಉಂಟಾಯಿತು ಅಂದರು. ಆಗ ಸೈನ್ಯದ ವರು ಸೆರೆಯವರನ್ನೂ ಕೊಳ್ಳೆಯನ್ನೂ ಪ್ರಧಾನರ ಮುಂದೆಯೂ ಸಮಸ್ತ ಕೂಟದ ಮುಂದೆಯೂ ಬಿಟ್ಟು ಬಿಟ್ಟರು. ಆಗ ಹೆಸರಿನಿಂದ ಹೇಳಲ್ಪಟ್ಟ ಆ ಮನು ಷ್ಯರು ಎದ್ದು ಸೆರೆಯವರನ್ನು ತೆಗೆದುಕೊಂಡು ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವದಕ್ಕೂ ಕುಡಿಯುವದಕ್ಕೂ ಕೊಟ್ಟು ಅವರ ತಲೆಗಳಿಗೆ ಎಣ್ಣೆ ಯನ್ನು ಹಚ್ಚಿ ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ಕರಕೊಂಡು ಹೋಗಿ ಸಮಾರ್ಯಕ್ಕೆ ಹಿಂತಿರುಗಿದರು.
- Ezekiel 6:14 ಯೆಹೆಜ್ಕೇಲನು 6:14ಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.
- Isaiah 45:13 ಯೆಶಾಯ 45:13ನಾನೇ ಅವನನ್ನು ನೀತಿಯಲ್ಲಿ ಎಬ್ಬಿಸಿ ದ್ದೇನೆ; ಅವನ ಎಲ್ಲಾ ಮಾರ್ಗಗಳನ್ನು ಸರಾಗ ಮಾಡು ತ್ತೇನೆ; ಅವನು ನನ್ನ ಪಟ್ಟಣವನ್ನು ಕಟ್ಟಿ ಕ್ರಯವ ನ್ನಾಗಲೀ ಬಹುಮಾನವನ್ನಾಗಲೀ ಕೇಳಿಕೊಳ್ಳದೆ ನನ್ನ ಸೆರೆಯವರನ್ನು ಕಳುಹಿಸಿಬಿಡುವನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Ezra 1:2–4 ಎಜ್ರನು 1:2–4ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮೊಳಗೆ ಯಾರಿದ್ದೀರಿ? ಅವನ ಸಂಗಡ ಅವನ ದೇವರು ಇರಲಿ. ಅವನು ಯೆಹೂದದಲ್ಲಿ ರುವ ಯೆರೂಸಲೇಮಿಗೆ ಹೋಗಲಿ. ಯೆರೂಸಲೇಮಿನಲ್ಲಿರುವ ಇಸ್ರಾಯೇಲಿನ ದೇವರಾದ ಕರ್ತನ ಆಲಯವನ್ನು ಕಟ್ಟಲಿ (ಆತನೇ ದೇವರು). ಇದಲ್ಲದೆ ಯಾವ ಸ್ಥಳದಲ್ಲಾದರೂ ಯಾವನಾದರೂ ಪರದೇಶಸ್ಥ ನಾಗಿ ಉಳಿದಿದ್ದರೆ ಅವನ ಸ್ಥಳದ ಮನುಷ್ಯರು ಯೆರೂ ಸಲೇಮಿನಲ್ಲಿರುವ ದೇವರ ಆಲಯಕ್ಕೆ ಕೊಡುವ ಉಚಿತವಾದ ಕಾಣಿಕೆ ಅಲ್ಲದೆ ಅವನಿಗೆ ಬೆಳ್ಳಿಯಿಂದ ಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗ ಳಿಂದಲೂ ಸಹಾಯಮಾಡಲಿ ಅಂದನು.
- Isaiah 58:6 ಯೆಶಾಯ 58:6ನಾನು ಆದುಕೊಳ್ಳುವ ಉಪವಾಸವು ಕೇಡಿನ ಬಂಧನಗಳನ್ನು ಬಿಚ್ಚುವದೂ ಭಾರವಾದ ಹೊರೆಯನ್ನು ಬಿಚ್ಚುವದೂ ಹಿಂಸಿಸಲ್ಪಟ್ಟವರು ಬಿಡಿಸ ಲ್ಪಟ್ಟವರಾಗಿ ಹಾಕುವದೂ ಆಗಿದೆಯಲ್ಲವೋ?
- Isaiah 64:10 ಯೆಶಾಯ 64:10ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು.