Isaiah · chapter 14 · verse 23
Isaiah 14:23 in Kannada
ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Adannu saha mulluhandige baadhya vaagiyoo neerina kunigalaagiyoo maadi naasha vemba kasabarikeyinda gudisuttenendu sainyagala kartanu heluttaane.
Isaiah 14:23 in English
- King James Version (KJV)
- I will also make it a possession for the bittern, and pools of water: and I will sweep it with the besom of destruction, saith the LORD of hosts.
- World English Bible (WEB)
- “I will also make it a possession for the porcupine, and pools of water. I will sweep it with the broom of destruction,” says the LORD of Armies.
- American Standard Version (ASV)
- I will also make it a possession for the porcupine, and pools of water: and I will sweep it with the besom of destruction, saith Jehovah of hosts.
- Bible in Basic English (BBE)
- And I will make you a heritage for the hedgehog, and pools of water: and I will go through it with the brush of destruction, says the Lord of armies.
- Darby Translation (DBY)
- And I will make it a possession for the bittern, and pools of water; and I will sweep it with the besom of destruction, saith Jehovah of hosts.
- Webster's Bible (WBS)
- I will also make it a possession for the bittern, and pools of water: and I will sweep it with the besom of destruction, saith the LORD of hosts.
- Young's Literal Translation (YLT)
- And have made it for a possession of a bittern, And ponds of waters, And daubed it with the mire of destruction, The affirmation of Jehovah of Hosts!
Read in context
- 21ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ.
- 22ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 23ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 24ಸೈನ್ಯಗಳ ಕರ್ತನು ಆಣೆಯಿಟ್ಟು ಹೇಳುವದೇನ ಂದರೆ--ನಾನು ನೆನಸಿದ ಪ್ರಕಾರವೇ ನೆರವೇರುವದು; ನಾನು ಉದ್ದೇಶಿಸಿದ್ದೇ ನಿಲ್ಲುವದು.
- 25ಏನಂದರೆ ಅಶ್ಶೂ ರ್ಯರನ್ನು ನನ್ನ ದೇಶದಲ್ಲಿ ಮುರಿದುಬಿಡುತ್ತೇನೆ. ನನ್ನ ಪರ್ವತಗಳ ಮೇಲೆ ಅವನನ್ನು ತುಳಿದುಬಿಡುತ್ತೇನೆ; ಅವನ ನೊಗವು ಅವರ ಮೇಲಿನಿಂದ ತೊಲಗಿ ಅವ ನ ಭಾರವು ಅವನ ಭುಜದ ಮೇಲಿನಿಂದ ತೊಲಗು ವದು.
Cross references
- Zephaniah 2:14 ಚೆಫನ್ಯ 2:14ಅದರ ಮಧ್ಯದಲ್ಲಿ ಮಂದೆಗಳೂ ಜನಾಂಗಗಳ ಮೃಗಗಳೆಲ್ಲವೂ ಮಲಗುವವು; ಬಕಪಕ್ಷಿಯೂ ಮುಳ್ಳು ಹಂದಿಯೂ ಅದರ ಮೇಲಿನ ಅವುಗಳ ಹಾಸುಗಳಲ್ಲಿ ಇಳುಕೊಳ್ಳುವವು; ಕಿಟಕಿಗಳಲ್ಲಿ ಹಾಡುವ ಶಬ್ದವಿರುವದು; ಹೊಸ್ತಿಲಗಳಲ್ಲಿ ಹಾಳು ಇರುವದು; ದೇವದಾ ರಿನ ಕೆಲಸವನ್ನು ಬೈಲುಮಾಡುವನು.ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
- Isaiah 34:11–15 ಯೆಶಾಯ 34:11–15ಆದರೆ ಬಕ ಪಕ್ಷಿಯು ಮತ್ತು ಮುಳ್ಳು ಹಂದಿಯು ಅದನ್ನು ಆವರಿಸಿಕೊಳ್ಳುವವು; ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವವು; ಗಲಿಬಿಲಿ ಯೆಂಬ ನೂಲನ್ನು ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು. ಅವರ ರಾಜ್ಯಕ್ಕೆ ಪ್ರಮುಖರನ್ನು ಕರೆಯುವರು; ಆದರೆ ಅಲ್ಲಿ ಯಾರೂ ಇರುವದಿಲ್ಲ; (ಅದರ) ಅವಳ ಪ್ರಭುಗಳು ಇಲ್ಲದಂತಾಗುವರು. ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು; ಅವಳ ಕೋಟೆಗಳಲ್ಲಿ ತುರುಚಿಯೂ ದತ್ತೂರಿಯೂ ಇರುವವು; ಅದು (ಉಷ್ಟ್ರ ಪಕ್ಷಿಗಳ) ಸರ್ಪಗಳ ನಿವಾಸವೂ ಗೂಬೆಗಳಿಗೆ ಸ್ಥಾನವೂ ಆಗುವದು. ಮರುಭೂಮಿಯ ಕಾಡು ಮೃಗಗಳು ಸಹ ದ್ವೀಪದ ಕಾಡುಮೃಗಗಳೊಂದಿಗೆ ಸಂಧಿಸುವವು; ದೆವ್ವವು ತನ್ನ ಜೊತೆಯನ್ನು ಕೂಗು ವದು; ಅಲ್ಲಿ ಚೀರುಗೂಬೆಯು ಸಹ ವಿಶ್ರಮಿಸಿಕೊಂಡು ಉಪಶಮನ ಸ್ಥಳವನ್ನು ಕಂಡುಕೊಳ್ಳುವದು. ದೊಡ್ಡ ಗೂಬೆಯು ಅಲ್ಲಿ ಗೂಡನ್ನು ಮಾಡಿಕೊಂಡು ಮೊಟ್ಟೆ ಯಿಟ್ಟು ಮರಿ ಮಾಡಿ ಅವುಗಳನ್ನು ತನ್ನ ನೆರಳಿನಲ್ಲಿ ಕೂಡಿಸುವದು; ಅಲ್ಲಿ ಹದ್ದುಗಳಲ್ಲಿ ಪ್ರತಿಯೊಂದು ತಮ್ಮ ಜೊತೆಜೊತೆಯಾಗಿ ಕೂಡಿಕೊಳ್ಳುವವು.
- Revelation 14:8 ಪ್ರಕಟನೆ 14:8ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.
- 1 Kings 14:10 1 ಅರಸುಗಳು 14:10ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ.
- Isaiah 13:21–22 ಯೆಶಾಯ 13:21–22ಆದರೆ ಮರುಭೂಮಿಯ ಕಾಡುಮೃಗಗಳು ಅಲ್ಲಿ ಮಲಗುವವು; ಅವರ ಮನೆಗಳು ವ್ಯೆಥೆಯಿಂದ ತುಂಬಿರುವವು; ಅಲ್ಲಿ ಗೂಬೆಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು. ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
- Revelation 18:2 ಪ್ರಕಟನೆ 18:2ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು.
- 2 Kings 21:13 2 ಅರಸುಗಳು 21:13ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ನೂಲನ್ನೂ ಅಹಾಬನ ಮನೆಯ ಗಟ್ಟಿ ತೂಕವನ್ನೂ ಗುಂಡನ್ನೂ ಚಾಚುವೆನು; ತಟ್ಟೆ ಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿಬಿಡುವೆನು.
- Jeremiah 51:25–26 ಯೆರೆಮೀಯ 51:25–26ನಾಶಮಾಡುವ ಬೆಟ್ಟವೇ! ಭೂಮಿಯನ್ನೆಲ್ಲಾ ನಾಶಮಾಡುವಂಥಾದ್ದೇ! ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. ನಿನ್ನ ಮೇಲೆ ನನ್ನ ಕೈಯನ್ನು ಚಾಚಿ ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ. ಒಬ್ಬರೂ ನಿನ್ನಿಂದ ಮೂಲೆಯ ಕಲ್ಲನ್ನಾಗಲಿ, ಅಸ್ತಿವಾರದ ಕಲ್ಲನ್ನಾಗಲಿ ತೆಗೆಯರು; ನೀನು ಎಂದೆಂದಿಗೂ ಹಾಳಾಗುವಿ ಎಂದು ಕರ್ತನು ಅನ್ನುತ್ತಾನೆ.
- Jeremiah 51:42–43 ಯೆರೆಮೀಯ 51:42–43ಬಾಬೆಲಿನ ಮೇಲೆ ಸಮುದ್ರವು ಬಂತು; ಅದರ ತೆರೆಗಳ ಸಮೂಹದಿಂದ ಮುಚ್ಚಲ್ಪಟ್ಟಿದೆ. ಅದರ ಪಟ್ಟಣಗಳು ಹಾಳಾದವು; ಅವು ಒಣನೆಲವೂ ಅಡವಿಯೂ ಯಾರೂ ವಾಸಮಾಡದೆ, ಮನುಷ್ಯನ ಮಗನು ಹಾದುಹೋಗದೆ ಇರುವ ದೇಶವೂ ಆಗಿವೆ.
- Revelation 18:21–23 ಪ್ರಕಟನೆ 18:21–23ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ. ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ. ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
- Jeremiah 50:39–40 ಯೆರೆಮೀಯ 50:39–40ಆದದರಿಂದ ಅರಣ್ಯದ ಕಾಡು ಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವವು. ಗೂಬೆಗಳೂ ಸಹ ಅದರಲ್ಲಿ ವಾಸಮಾಡುವವು; ಅದು ಇನ್ನು ಮೇಲೆ ಎಂದೆಂದಿಗೂ ನಿವಾಸವಾಗುವದಿಲ್ಲ; ತಲತಲಾಂತರಗಳ ವರೆಗೂ ಯಾರೂ ಅದರಲ್ಲಿ ತಂಗುವದಿಲ್ಲ. ದೇವರು ಸೊದೋಮನ್ನೂ ಗೊಮೋರವನ್ನು ಅವುಗಳ ಸವಿಾಪದಲ್ಲಿದ್ದ ಪಟ್ಟಣಗಳನ್ನೂ ಕೆಡವಿಹಾಕಿದಾಗ ಆದ ಹಾಗೆ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ; ಅದರಲ್ಲಿ ಯಾವ ನರಪುತ್ರನಾದರೂ ತಂಗುವದಿ ಲ್ಲವೆಂದು ಕರ್ತನು ಅನ್ನುತ್ತಾನೆ.