Isaiah · chapter 14 · verse 30
Isaiah 14:30 in Kannada
ದೀನರ ಚೊಚ್ಚಲು ಮಕ್ಕಳು ಉಣ್ಣುವರು, ದಿಕ್ಕಿಲ್ಲದವರು ನಿರ್ಭಯವಾಗಿ ಮಲಗಿಕೊಳ್ಳುವರು; ನಿನ್ನ ಸಂತಾನವನ್ನು ಕ್ಷಾಮದಿಂದ ಸಾಯಿಸುವೆನು. ನಿನ್ನಲ್ಲಿ ಉಳಿದವರನ್ನು ಅವನು ಹತ ಮಾಡುವನು.
Deenara chochchalu makkalu unnuvaru, dikkilladavaru nirbhayavaagi malagikolluvaru; ninna santaanavannu kshaamadinda saayisuvenu. Ninnalli ulidavarannu avanu hata maaduvanu.
Isaiah 14:30 in English
- King James Version (KJV)
- And the firstborn of the poor shall feed, and the needy shall lie down in safety: and I will kill thy root with famine, and he shall slay thy remnant.
- World English Bible (WEB)
- The firstborn of the poor will eat, and the needy will lie down in safety; and I will kill your root with famine, and your remnant will be killed.
- American Standard Version (ASV)
- And the first-born of the poor shall feed, and the needy shall lie down in safety; and I will kill thy root with famine, and thy remnant shall be slain.
- Bible in Basic English (BBE)
- And the poorest of the land will have food, and those in need will be given a safe resting-place: but your seed will come to an end for need of food, and the rest of you will be put to the sword.
- Darby Translation (DBY)
- And the firstborn of the poor shall feed, and the needy shall lie down in safety; but I will kill thy root with famine, and thy remnant shall be slain.
- Webster's Bible (WBS)
- And the first-born of the poor shall feed, and the needy shall lie down in safety: and I will kill thy root with famine, and he shall slay thy remnant.
- Young's Literal Translation (YLT)
- And delighted have the first-born of the poor, And the needy in confidence lie down, And I have put to death with famine thy root, And thy remnant it slayeth.
Read in context
- 28ಅರಸನಾದ ಆಹಾಜನು ಸತ್ತ ವರುಷದಲ್ಲಿ ಈ ದೇವವಾಣಿಯಾಯಿತು.
- 29ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಆತನ ಕೋಲು ಮುರಿದುಹೋಯಿ ತೆಂದು ನೀವು ಉಲ್ಲಾಸಿಸಬೇಡಿರಿ; ಹಾವಿನ ಸಂತಾನ ದಿಂದ ವಿಷಸರ್ಪವು ಉಂಟಾಗುವದು; ಅದರ ಫಲವು ಹಾರುವ ಅಗ್ನಿಮಯ ಸರ್ಪವೇ.
- 30ದೀನರ ಚೊಚ್ಚಲು ಮಕ್ಕಳು ಉಣ್ಣುವರು, ದಿಕ್ಕಿಲ್ಲದವರು ನಿರ್ಭಯವಾಗಿ ಮಲಗಿಕೊಳ್ಳುವರು; ನಿನ್ನ ಸಂತಾನವನ್ನು ಕ್ಷಾಮದಿಂದ ಸಾಯಿಸುವೆನು. ನಿನ್ನಲ್ಲಿ ಉಳಿದವರನ್ನು ಅವನು ಹತ ಮಾಡುವನು.
- 31ಓ ದ್ವಾರವೇ, ಗೋಳಾಡು; ಓ ಪಟ್ಟಣವೇ, ಕೂಗು; ನಿನ್ನ ಫಿಲಿಷ್ಟಿ ಯರೆಲ್ಲಾ ಕುಂದಿ ಹೋಗಿದ್ದಾರೆ; ಅವರ ಹೊಗೆಯು ಉತ್ತರದಿಂದ ಬರುತ್ತದೆ. ಆತನ ನೇಮಕವಾದ ಕಾಲ ಗಳಲ್ಲಿ ಯಾವನೂ ಒಂಟಿಯಾಗಿರುವದಿಲ್ಲ.ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
- 32ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
Cross references
- Isaiah 7:21–22 ಯೆಶಾಯ 7:21–22ಆ ದಿನದಲ್ಲಿ ಮನುಷ್ಯನು ಒಂದು ಕಡಸನ್ನು ಮತ್ತು ಎರಡು ಕುರಿಗಳನ್ನು ಸಾಕುವನು. ಆಗ ಅವು ಸಮೃದ್ಧಿಯಾಗಿ ಹಾಲನ್ನು ಕೊಡುವದರಿಂದ ಅವನು ಬೆಣ್ಣೆಯನ್ನು ತಿನ್ನುವನು; ಆ ದೇಶದಲ್ಲಿ ಉಳಿದಿರುವ ವರೆಲ್ಲರೂ ಬೆಣ್ಣೆಯನ್ನು ಮತ್ತು ಜೇನು ತುಪ್ಪವನ್ನು ತಿನ್ನುವರು.
- Zephaniah 2:4–7 ಚೆಫನ್ಯ 2:4–7ಗಾಜವು ಕೈಬಿಡಲ್ಪಡುವದು, ಅಷ್ಕೆಲೋನ್ ಹಾಳಾ ಗುವದು, ಅಷ್ಡೋದನ್ನು ಮಧ್ಯಾಹ್ನದಲ್ಲಿ ಹೊರಡಿಸು ವರು, ಎಕ್ರೋನ್ ಕೀಳಲ್ಪಡುವದು. ಸಮುದ್ರತೀರದ ನಿವಾಸಿಗಳಾದ ಕೆರೇತ್ಯರ ಜನಾಂಗಕ್ಕೆ ಅಯ್ಯೋ! ಕರ್ತನ ವಾಕ್ಯವು ನಿಮಗೆ ವಿರೋಧವಾಗಿದೆ; ಓ ಕಾನಾನೇ, ಫಿಲಿಷ್ಟಿಯರ ದೇಶವೇ, ನಿವಾಸಿಯೇ ಇಲ್ಲದ ಹಾಗೆ ನಿನ್ನನ್ನು ನಾಶಮಾಡುವೆನು. ಸಮುದ್ರದ ತೀರವು ಕುರುಬರು ಮೇಯಿಸುವ ಸ್ಥಳಗಳಾಗಿಯೂ ಕುಂಟೆ ಗಳಾಗಿಯೂ ಕುರೀಹಟ್ಟಿಗಳಾಗಿಯೂ ಇರುವದು. ತೀರವು ಯೆಹೂದದ ಮನೆತನದವರ ಉಳಿದವರಿಗೆ ಆಗುವದು; ಅದರ ಮೇಲೆ ಮೇಯಿಸುವರು; ಅಷ್ಕೆ ಲೋನಿನ ಮನೆತನಗಳಲ್ಲಿ ಸಾಯಂಕಾಲ ಅವರು ಮಲಗಿಕೊಳ್ಳುವರು; ಅವರ ದೇವರಾದ ಕರ್ತನು ಅವರನ್ನು ದರ್ಶಿಸಿ ಅವರ ಸೆರೆಯನ್ನು ತಿರುಗಿಸುವನು.
- Jeremiah 47:1–7 ಯೆರೆಮೀಯ 47:1–7ಫರೋಹನು ಗಾಜಾವನ್ನು ಹೊಡೆಯುವದಕ್ಕಿಂತ ಮುಂಚೆ ಫಿಲಿಷ್ಟಿಯರಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಬಂದ ಕರ್ತನ ವಾಕ್ಯವು. ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಪ್ರವಾಹಗಳು ಉತ್ತರದಿಂದ ಬರು ತ್ತವೆ, ಅವು ತುಂಬಿ ತುಳುಕುವ ಪ್ರಳಯವಾಗುವದು; ದೇಶವನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಅದರ ನಿವಾಸಿಗಳನ್ನೂ ಆಕ್ರಮಿಸುವವು, ಆಗ ಮನು ಷ್ಯರು ಕೂಗುವರು, ದೇಶದ ನಿವಾಸಿಗಳೆಲ್ಲರೂ ಗೋಳಾ ಡುವರು. ಅವನ ಬಲವಾದ ಕುದುರೆಗಳ ಗೊರಸು ಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಚಕ್ರಗಳ ಧ್ವನಿಯಿಂದಲೂ ತಂದೆ ಗಳ ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂತಿರುಗಿ ನೋಡರು. ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವದಕ್ಕೂ ತೂರಿನಿಂದ ಚೀದೋನಿನಿಂದ ಉಳಿದ ಪ್ರತಿ ಸಹಾಯಕನನ್ನು ಕಡಿದು ಬಿಡುವದಕ್ಕೂ ಆ ದಿವಸ ಬಂತು. ಕರ್ತನು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆ ಮಾಡುವನು. ಗಾಜಾದ ಮೇಲೆ ಬೋಳುತನ ಬಂತು; ಅಷ್ಕೆ ಲೋನು ಅವರ ತಗ್ಗಿನ ಉಳಿದವುಗಳಿಂದ ತೆಗೆದು ಹಾಕಲ್ಪಟ್ಟಿತು; ಎಷ್ಟು ಕಾಲ ನಿನಗೆ ನೀನೇ ಗಾಯಮಾಡಿ ಕೊಳ್ಳುವಿ? ಕರ್ತನ ಕತ್ತಿಯೇ, ಎಷ್ಟರ ವರೆಗೆ ವಿಶ್ರಮಿಸಿಕೊಳ್ಳದೆ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ! ವಿಶ್ರಮಿಸಿಕೋ, ಸುಮ್ಮನಿರು.ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ. ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ.
- Isaiah 33:16 ಯೆಶಾಯ 33:16ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
- Isaiah 51:19 ಯೆಶಾಯ 51:19ಈ ಎರಡು ಸಂಗತಿ ಗಳು ನಿನಗೆ ಸಂಭವಿಸಿವೆ; ನಿನಗೋಸ್ಕರ ಚಿಂತಿಸು ವವರು ಯಾರಿದ್ದಾರೆ? ನಾಶನವೋ ಸಂಹಾರವೋ ಕ್ಷಾಮವೋ ಕತ್ತಿಯೋ ನಾನು ಯಾರಿಂದ ನಿನ್ನನ್ನು ಆಧರಿಸಲಿ?
- Isaiah 3:15 ಯೆಶಾಯ 3:15ನೀವು ನನ್ನ ಪ್ರಜೆಯನ್ನು ಹೊಡೆದು ಚೂರು ಗಳನ್ನಾಗಿ ಮಾಡಿ ಬಡವರ ಮುಖಗಳನ್ನು ಹಿಂಡು ವದರ ಅರ್ಥವೇನು ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
- Isaiah 30:23–24 ಯೆಶಾಯ 30:23–24ಆಗ ನೀವು ಹೊಲದಲ್ಲಿ ಬೀಜ ಬಿತ್ತುವದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸು ವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರ ವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಸ್ಥಳದಲ್ಲಿ ಮೇಯುವವು. ಹೊಲ ಉಳುವ ಎತ್ತುಗಳು, ಪ್ರಾಯದ ಕತ್ತೆಗಳು, ಮರದಿಂದಲೂ ಕವೇ ಕೋಲಿನಿಂದಲೂ ತೂರಿದ ಮೇವನ್ನು ತಿನ್ನುವವು.
- Isaiah 37:30 ಯೆಶಾಯ 37:30ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನು ಎರಡನೇ ವರ್ಷದಲ್ಲಿ ಆದರಿಂದ ಮೊಳೆತದ್ದನ್ನು ತಿನ್ನುವಿರಿ. ಮೂರನೇ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ; ದ್ರಾಕ್ಷೇ ತೋಟವನ್ನು ನೆಟ್ಟು ಅವುಗಳ ಫಲವನ್ನು ತಿನ್ನುವದೇ ನಿಮಗೆ ಗುರುತಾಗಿ ರುವದು.
- Isaiah 5:17 ಯೆಶಾಯ 5:17ಆಗ ಕುರಿಮರಿಗಳು ತಮಗೆ ಮನಸ್ಸು ಬಂದ ಹಾಗೆ ಮೇಯುವವು, ಕೊಬ್ಬಿದವರ ಹಾಳಾದವುಗಳನ್ನು ಅನ್ಯರು ತಿನ್ನುವರು.
- Job 18:13 ಯೋಬನು 18:13ಅವನ ಚರ್ಮದ ಬಲವನ್ನು ತಿನ್ನುವನು; ಮರಣದ ಚೊಚ್ಟಲ ಮಗನು ಅವನ ಬಲವನ್ನು ತಿನ್ನುವನು.
- Isaiah 9:20 ಯೆಶಾಯ 9:20ಅವನು ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು (ತಿಂದರೂ) ಹಸಿದೇ ಇರುವನು; ಅವನು ಎಡಗಡೆ ಯಲ್ಲಿರುವದನ್ನು ತಿಂದರೂ ಅವು ಅವನನ್ನು ತೃಪ್ತಿ ಪಡಿಸಲಾರವು. ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುವನು.ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
- Joel 3:4–8 ಯೋವೇಲ 3:4–8ಹೌದು, ಓ ತೂರೇ, ಚೀದೋನೇ, ಪಾಲೆಸ್ತಿನದ ಎಲ್ಲಾ ಪ್ರಾಂತ್ಯಗಳೇ, ನನ್ನ ಕೂಡ ನಿಮಗೇನು? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ನನಗೆ ಸಲ್ಲಿಸಿದರೆ ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು. ನೀವು ನನ್ನ ಬೆಳ್ಳಿಯನ್ನೂ ನನ್ನ ಬಂಗಾರವನ್ನೂ ತೆಗೆದುಕೊಂಡು ನನ್ನ ಒಳ್ಳೇ ರಮ್ಯವಾದವುಗಳನ್ನು ನಿಮ್ಮ ದೇವಸ್ಥಾನಗಳಿಗೆ ತಕ್ಕೊಂಡು ಹೋಗಿದ್ದೀರಿ. ಯೆಹೂದದ ಮಕ್ಕಳನ್ನೂ ಯೆರೂಸಲೇಮಿನ ಮಕ್ಕ ಳನ್ನೂ ತಮ್ಮ ಪ್ರಾಂತ್ಯಗಳಿಂದ ದೂರ ಮಾಡುವ ಹಾಗೆ ಗ್ರೀಕರಿಗೆ ಮಾರಿದ್ದೀರಿ. ಇಗೋ, ಎಲ್ಲಿ ಅವ ರನ್ನು ಮಾರಿದ್ದಿರೋ ಆ ಸ್ಥಳದಿಂದ ನಾನು ಅವರನ್ನು ಎಬ್ಬಿಸಿ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು. ನಿಮ್ಮ ಕುಮಾರರನ್ನೂ ನಿಮ್ಮ ಕುಮಾರ್ತೆ ಯರನ್ನೂ ಯೆಹೂದನ ಮಕ್ಕಳ ಕೈಯಲ್ಲಿ ಮಾರುವೆನು; ಇವರು ಅವರನ್ನು ದೂರ ಜನವಾದ ಶೆಬದನರಿಗೆ ಮಾರುವರು; ಕರ್ತನು ಅದನ್ನು ಹೇಳಿದ್ದಾನೆ.