Isaiah · chapter 14 · verse 6
Isaiah 14:6 in Kannada
ಆಳುತ್ತಿದ್ದ ದುಷ್ಟರ ಕೋಲನ್ನೂ ರಾಜರ ದಂಡವನ್ನೂ ಕರ್ತನು ಮುರಿದುಬಿಟ್ಟಿದ್ದಾನೆ. ಯಾವನೂ ಅಡ್ಡಿ ಮಾಡನು.
Aaluttidda dushtara kolannoo raajara dandavannoo kartanu muridubittiddaane. Yaavanoo addi maadanu.
Isaiah 14:6 in English
- King James Version (KJV)
- He who smote the people in wrath with a continual stroke, he that ruled the nations in anger, is persecuted, [and] none hindereth.
- World English Bible (WEB)
- who struck the peoples in wrath with a continual stroke, who ruled the nations in anger, with a persecution that no one restrained.
- American Standard Version (ASV)
- that smote the peoples in wrath with a continual stroke, that ruled the nations in anger, with a persecution that none restrained.
- Bible in Basic English (BBE)
- He whose rod was on the peoples with an unending wrath, ruling the nations in passion, with an uncontrolled rule.
- Darby Translation (DBY)
- He that smote the peoples in wrath with a relentless stroke, he that ruled the nations in anger, is persecuted unsparingly.
- Webster's Bible (WBS)
- He who smote the people in wrath with a continual stroke, he that ruled the nations in anger, is persecuted, [and] none hindereth.
- Young's Literal Translation (YLT)
- He who is smiting peoples in wrath, A smiting without intermission, He who is ruling in anger nations, Pursuing without restraint!
Read in context
- 4ಹೀಗೆ ಹಿಂಸಕನು ಕೊನೆ ಗೊಂಡನು, ಬಂಗಾರದ ಪಟ್ಟಣವು ಸುಮ್ಮನೆ ಇದೆ.
- 5ಜನರನ್ನು ಉಗ್ರಕೋಪದಿಂದ ಎಡೆಬಿಡದೆ ಹೊಡೆ ದು ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ
- 6ಆಳುತ್ತಿದ್ದ ದುಷ್ಟರ ಕೋಲನ್ನೂ ರಾಜರ ದಂಡವನ್ನೂ ಕರ್ತನು ಮುರಿದುಬಿಟ್ಟಿದ್ದಾನೆ. ಯಾವನೂ ಅಡ್ಡಿ ಮಾಡನು.
- 7ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿ ಗೊಂಡಿದೆ. ಅವರು ಉತ್ಸಾಹಧ್ವನಿಯನ್ನು ಎತ್ತುತ್ತಾರೆ.
- 8ಹೌದು, ತುರಾಯಿ ಮರಗಳೂ ಲೆಬನೋನಿನ ದೇವದಾರು ಮರಗಳೂ ನೀನು ಬಿದ್ದಂದಿನಿಂದ ಕಡಿಯುವವನು ಯಾವನೂ ತಮ್ಮ ಮೇಲೆ ಬರಲಿಲ್ಲವೆಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.
Cross references
- Daniel 7:19–21 ದಾನಿಯೇಲನು 7:19–21ಆ ಮೇಲೆ ನಾಲ್ಕನೆಯ ಮೃಗವು ಉಳಿದವು ಗಳಿಗಿಂತ ವ್ಯತ್ಯಾಸವಾಗಿಯೂ ಅತಿ ಭಯಂಕರವಾ ಗಿಯೂ ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ ಹಿತ್ತಾಳೆಯ ಉಗುರುಗಳುಳ್ಳದ್ದಾಗಿಯೂ ತುಂಡು ತುಂಡು ಮಾಡಿ ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥಾದ್ದೂ ಆಗಿದೆ. ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ಆ ಎದ್ದು ಬಂದ ಬೇರೊಂದರ ಕೊಂಬಿನ ವಿಷಯವಾಗಿಯೂ ಹೌದು, ಕಣ್ಣುಗಳು ಳ್ಳಂತ, ಬಹು ದೊಡ್ಡ ಮಾತುಗಳನ್ನು ಮಾತನಾಡಿದ ಬಾಯಿಯಂತ, ತನ್ನ ಜೊತೆಯವರಿಗಿಂತ ಬಲವಾದ ನೋಟವುಳ್ಳಂತ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥ ವನ್ನು ತಿಳಿಯಬೇಕೆಂದಿದ್ದೆನು. ನಾನು ನೋಡಲಾಗಿ ಆ ಕೊಂಬು ಪರಿಶುದ್ಧರ ಸಂಗಡ ಯುದ್ಧಮಾಡಿತು ಮತ್ತು ಅವರಿಗೆ ವಿರೋಧವಾಗಿ ಜಯಗಳಿಸಿತು;
- Jeremiah 50:31 ಯೆರೆಮೀಯ 50:31ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ; ನಿನ್ನ ದಿವಸವೂ ನಿನ್ನ ವಿಚಾರಣೆಯ ಕಾಲವೂ ಬಂತು.
- Revelation 18:8–10 ಪ್ರಕಟನೆ 18:8–10ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ. ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು. ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.
- Revelation 17:16–17 ಪ್ರಕಟನೆ 17:16–17ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು. ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನು.ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.
- James 2:13 ಯಾಕೋಬನು 2:13ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
- Jeremiah 25:9 ಯೆರೆಮೀಯ 25:9ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
- Proverbs 21:30 ಜ್ಞಾನೋಕ್ತಿಗಳು 21:30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Jeremiah 25:26 ಯೆರೆಮೀಯ 25:26ಹತ್ತಿರದ ಲ್ಲಿಯೂ ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿ ರುವ ಉತ್ತರದಿಕ್ಕಿನ ಅರಸರೆಲ್ಲರಿಗೂ ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯ ಗಳಿಗೂ ಕುಡಿಸಿದೆನು; ಶೇಷಕಿನ ಅರಸನು ಅವರ ತರುವಾಯ ಕುಡಿಯುವನು.
- Isaiah 21:1–10 ಯೆಶಾಯ 21:1–10ಸಮುದ್ರದ ಅಡವಿಯ ವಿಷಯವಾದ ದೈವೋಕ್ತಿ ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿಹೋಗುವಂತೆ ಅದು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತದೆ. ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ. ಆದ ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ; ಕೇಳಕೂಡದ ಹಾಗೆ ಸಂಕಟಪಡುತ್ತೇನೆ, ನೋಡಕೂಡದ ಹಾಗೆ ಭ್ರಾಂತನಾಗಿದ್ದೇನೆ. ನನ್ನ ಹೃದಯವು (ಎದುರಿಸುತ್ತದೆ) ಗಾಬರಿಗೊಂಡಿದೆ, ನಡು ಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನನ್ನ ಆನಂ ದದ ರಾತ್ರಿಯನ್ನು ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ. ಮೇಜನ್ನು ಸಿದ್ಧಮಾಡು ಬುರುಜಿನ ಮೇಲೆ ಕಾವ ಲಿರು, ಉಣ್ಣು, ಕುಡಿ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಬಳಿಯಿರಿ. ಕರ್ತನು ನನಗೆ ಹೇಳಿರುವ ದೇನಂದರೆ--ಹೋಗು, ಕಾವಲುಗಾರನನ್ನು ನೇಮಿಸು. ಅವನು ಕಂಡದ್ದನ್ನು ತಿಳಿಸಲಿ. ಅವನು ಜೋಡಿ ಜೋಡಿಯಾಗಿ ಬರುವ ರಥ ಸವಾರರ ಸಾಲನ್ನು ಕತ್ತೆಗಳ, ಒಂಟೆಗಳ, ರಥಗಳ ಸಾಲುಗಳನ್ನು ನೋಡಿ ದರೆ, ಬಹು ಗಮನದಿಂದ ಕಿವಿಗೊಟ್ಟು ಗಮನಿಸಲಿ ಎಂಬದೇ. ಬಳಿಕ ಅವನು ಸಿಂಹದಂತೆ ಕೂಗಿದ್ದೇ ನಂದರೆ, ನನ್ನ ಒಡೆಯನೇ, ನಾನು ಹಗಲೆಲ್ಲಾ ಕಾವ ಲಿನ ಬುರುಜಿನ ಮೇಲೆ ನಿಂತಿದ್ದೇನೆ. ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ. ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ ಮತ್ತು ಪ್ರತ್ಯುತ್ತರ ವಾಗಿ--ಬಾಬೆಲ್ ಬಿತ್ತು, ಆದರೆ ಕೆತ್ತಿದ ದೇವತೆಗಳ ವಿಗ್ರಹಗಳನ್ನು ಮುರಿದು ನೆಲಸಮ ಮಾಡಿಬಿಟ್ಟರು ಎಂದು ಹೇಳಿದನು. ನಾನು ತುಳಿಯುವ ತೆನೆಯೇ, ನನ್ನ ಕಣದ ಧಾನ್ಯವೇ, ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನಿಂದ ನಾನು ಕೇಳಿದ್ದನ್ನು ನಿಮಗೆ ತಿಳಿಸಿದ್ದೇನೆ.
- Isaiah 46:10–11 ಯೆಶಾಯ 46:10–11ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ. ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
- Isaiah 13:14–18 ಯೆಶಾಯ 13:14–18ಅದು ಅಟ್ಟಿದ ಜಿಂಕೆಯಂತೆಯೂ ಯಾರೂ ಕೂಡಿ ಸದ ಕುರಿಗಳಂತೆಯೂ ಇರುವದು. ಅವರಲ್ಲಿ ಪ್ರತಿಯೊ ಬ್ಬನೂ ತನ್ನ ಜನರ ಕಡೆಗೆ ತಿರುಗಿಕೊಳ್ಳುವನು ಪ್ರತಿಯೊ ಬ್ಬನೂ ತನ್ನ ಸ್ವದೇಶಕ್ಕೆ ಓಡಿಹೋಗುವನು. ಸಿಕ್ಕಿದ ಪ್ರತಿಯೊಬ್ಬನೂ ಇರಿಯಲ್ಪಡುವನು; ಅವರೊಂದಿಗೆ ಸೇರಿಕೊಂಡ ಪ್ರತಿಯೊಬ್ಬನೂ ಕತ್ತಿಯಿಂದ ಬೀಳು ವನು. ಅವರ ಮಕ್ಕಳೂ ಅವರ ಕಣ್ಣೆದುರಿಗೆ ತುಂಡು ತುಂಡಾಗುವಂತೆ ಅಪ್ಪಳಿಸಲ್ಪಡುವರು; ಅವರ ಮನೆ ಗಳು ಸೂರೆಯಾಗುವವು; ಅವರ ಪತ್ನಿಯರು ಕೆಡಿ ಸಲ್ಪಡುವರು. ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು. ಅವರ ಬಿಲ್ಲುಗಳು ಸಹ ಯುವಕರನ್ನು ಹೊಡೆದು ತುಂಡುತುಂಡು ಮಾಡುವವು; ಇವರು ಗರ್ಭಫಲವನ್ನು ಕರುಣಿಸರು, ಇವರ ಕಣ್ಣುಗಳು ಮಕ್ಕಳನ್ನೂ ಉಳಿಸುವದಿಲ್ಲ.
- Job 9:13 ಯೋಬನು 9:13ದೇವರು ತನ್ನ ಕೋಪವನ್ನು ಹಿಂತೆಗೆಯ ದಿದ್ದರೆ ಸೊಕ್ಕಿನ ಸಹಾಯಕರು ಆತನ ಕೆಳಗೆ ಬೊಗ್ಗಿ ಕೊಳ್ಳುತ್ತಾರೆ.