Isaiah · chapter 17 · verse 4
Isaiah 17:4 in Kannada
ಆ ದಿವಸದಲ್ಲಿ ಆಗುವದೇನಂದರೆ--ಯಾಕೋ ಬಿನ ವೈಭವ ತಗ್ಗುವದು; ಅದರ ಮಾಂಸದ ಕೊಬ್ಬು ಕರಗಿಸಲ್ಪಡುವದು.
Aa divasadalli aaguvadenandare--yaako bina vaibhava tagguvadu; adara maansada kobbu karagisalpaduvadu.
Isaiah 17:4 in English
- King James Version (KJV)
- And in that day it shall come to pass, [that] the glory of Jacob shall be made thin, and the fatness of his flesh shall wax lean.
- World English Bible (WEB)
- “It will happen in that day that the glory of Jacob will be made thin, and the fatness of his flesh will become lean.
- American Standard Version (ASV)
- And it shall come to pass in that day, that the glory of Jacob shall be made thin, and the fatness of his flesh shall wax lean.
- Bible in Basic English (BBE)
- And it will be in that day that the glory of Jacob will be made small, and the strength of his body will become feeble.
- Darby Translation (DBY)
- And in that day it shall come to pass, that the glory of Jacob shall be made thin, and the fatness of his flesh shall become lean.
- Webster's Bible (WBS)
- And in that day it shall come to pass, [that] the glory of Jacob shall be diminished, and the fatness of his flesh shall become lean.
- Young's Literal Translation (YLT)
- And it hath come to pass, in that day, Wax poor doth the honour of Jacob, And the fatness of his flesh doth wax lean.
Read in context
- 2ಆರೋಯೇರಿನ ಪಟ್ಟಣಗಳು ತಳ್ಳಿಹಾಕ ಲ್ಪಟ್ಟಿವೆ; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ಮಲಗುವ ಮಂದೆಗಳಿಗೆ ಸ್ಥಳವಾಗುವದು.
- 3ಎಫ್ರಾ ಯಾಮಿನಿಂದ ಕೋಟೆಯೂ ದಮಸ್ಕದ ರಾಜ್ಯವೂ ಸಿರಿಯಾದ ಉಳಿದವುಗಳೂ ನಿಂತು ಹೋಗುವವು; ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರು ವರು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 4ಆ ದಿವಸದಲ್ಲಿ ಆಗುವದೇನಂದರೆ--ಯಾಕೋ ಬಿನ ವೈಭವ ತಗ್ಗುವದು; ಅದರ ಮಾಂಸದ ಕೊಬ್ಬು ಕರಗಿಸಲ್ಪಡುವದು.
- 5ಕೊಯ್ಯುವವನು ಪೈರನ್ನು ಕೂಡಿಸಿ ತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ ರೆಫಾಯಾಮಿನ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆಯೂ ಇರುವದು.
- 6ಆದರೂ ಎಣ್ಣೇ ಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿ ಯಲ್ಲಿ ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲು ಹಣ್ಣುಗಳು ಅದರಲ್ಲಿ ಉಳಿ ಯುವವು ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳುತ್ತಾನೆ.
Cross references
- Isaiah 10:16 ಯೆಶಾಯ 10:16ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.
- Deuteronomy 32:15–27 ಧರ್ಮೋಪದೇಶಕಾಂಡ 32:15–27ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು. ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು. ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು. ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ. ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು. ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ. ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು. ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು. ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು. ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು. ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು. ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು. ಅವರ ಶತ್ರುಗಳು--ನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು.
- Isaiah 9:8 ಯೆಶಾಯ 9:8ಕರ್ತನು ಯಾಕೋಬನಿಗೆ ಒಂದು ಮಾತನ್ನು ಹೇಳಿ ಕಳುಹಿಸಿದನು; ಅದು ಇಸ್ರಾಯೇಲ್ಯರ ಮೇಲೆ ಹೊಳೆಯಿತು.
- Isaiah 24:16 ಯೆಶಾಯ 24:16ಭೂಮಂಡಲದ ಕಟ್ಟಕಡೆಯಿಂದ ನೀತಿವಂತರ ಘನತೆಗೆ ಬರುವಂತಹ ಗೀತೆಗಳು ನಮಗೆ ಕೇಳಿ ಬರು ತ್ತಿವೆ. ನಾನಾದರೋ--ಕ್ಷಮಿಸೇ ಕ್ಷಮಿಸುತ್ತೇನೆ. ನನಗೆ ಅಯ್ಯೋ! ಬಾಧಕರು ಬಾಧಿಸುವದರಲ್ಲಿಯೇ ನಿರತ ರಾಗಿದ್ದಾರೆ; ಹೌದು, ಬಾಧಕರು, ಬಹಳವಾಗಿ ಬಾಧಿ ಸುವದರಲ್ಲಿ ನಿರತರಾಗಿದ್ದಾರೆ.
- Isaiah 24:13 ಯೆಶಾಯ 24:13ಎಣ್ಣೇ ಮರವನ್ನು ಬಡಿದ ಮೇಲೆಯೂ ದ್ರಾಕ್ಷೇ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವದು.
- Zephaniah 2:11 ಚೆಫನ್ಯ 2:11ಕರ್ತನು ಅವರಿಗೆ ಭಯಂಕರನಾಗಿ ರುವನು. ಆತನು ಭೂಮಿಯ ಎಲ್ಲಾ ದೇವರುಗಳನ್ನು ಕ್ಷೀಣಮಾಡುವನು; ಅನ್ಯಜನಾಂಗಗಳ ದ್ವೀಪಗಳವ ರೆಲ್ಲರು ತಮ್ಮ ತಮ್ಮ ಸ್ಥಳಗಳಿಂದ ಆತನನ್ನು ಆರಾ ಧಿಸುವರು.
- Ezekiel 34:20 ಯೆಹೆಜ್ಕೇಲನು 34:20ಆದದರಿಂದ ದೇವರಾದ ಕರ್ತನು ನಿಮಗೆ ಹೀಗೆ ಹೇಳುತ್ತಾನೆ-- ಇಗೋ, ನಾನು, ನಾನೇ ಕೊಬ್ಬಿದ ದನಕ್ಕೂ ಮತ್ತು ಬಡಕಲಾದ ದನಕ್ಕೂ ನಡುವೆ ನ್ಯಾಯತೀರಿಸುತ್ತೇನೆ.
- Isaiah 10:4 ಯೆಶಾಯ 10:4ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವದೇ ಇವರ ಗತಿ. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
- Isaiah 9:21 ಯೆಶಾಯ 9:21ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.