Isaiah · chapter 17 · verse 7
Isaiah 17:7 in Kannada
ಆ ದಿನದಲ್ಲಿ ಮನುಷ್ಯನು ತನ್ನನ್ನು ಉಂಟು ಮಾಡಿದವನ ಮೇಲೆ ದೃಷ್ಟಿಯಿಡು ವನು ಇಸ್ರಾಯೇಲಿನ ಪರಿಶುದ್ಧನ ಕಡೆಗೆ ಅವನ ಕಣ್ಣುಗಳು ಲಕ್ಷಿಸುವವು.
Aa dinadalli manushyanu tannannu untu maadidavana mele drushtiyidu vanu israayelina parishuddhana kadege avana kannugalu lakshisuvavu.
Isaiah 17:7 in English
- King James Version (KJV)
- At that day shall a man look to his Maker, and his eyes shall have respect to the Holy One of Israel.
- World English Bible (WEB)
- In that day, people will look to their Maker, and their eyes will have respect for the Holy One of Israel.
- American Standard Version (ASV)
- In that day shall men look unto their Maker, and their eyes shall have respect to the Holy One of Israel.
- Bible in Basic English (BBE)
- In that day a man's heart will be turned to his Maker, and his eyes to the Holy One of Israel.
- Darby Translation (DBY)
- In that day shall man look to his Maker, and his eyes shall have regard to the Holy One of Israel.
- Webster's Bible (WBS)
- At that day shall a man look to his Maker, and his eyes shall have respect to the Holy One of Israel.
- Young's Literal Translation (YLT)
- In that day doth man look to His Maker, Yea, his eyes to the Holy One of Israel look,
Read in context
- 5ಕೊಯ್ಯುವವನು ಪೈರನ್ನು ಕೂಡಿಸಿ ತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ ರೆಫಾಯಾಮಿನ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆಯೂ ಇರುವದು.
- 6ಆದರೂ ಎಣ್ಣೇ ಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿ ಯಲ್ಲಿ ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲು ಹಣ್ಣುಗಳು ಅದರಲ್ಲಿ ಉಳಿ ಯುವವು ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳುತ್ತಾನೆ.
- 7ಆ ದಿನದಲ್ಲಿ ಮನುಷ್ಯನು ತನ್ನನ್ನು ಉಂಟು ಮಾಡಿದವನ ಮೇಲೆ ದೃಷ್ಟಿಯಿಡು ವನು ಇಸ್ರಾಯೇಲಿನ ಪರಿಶುದ್ಧನ ಕಡೆಗೆ ಅವನ ಕಣ್ಣುಗಳು ಲಕ್ಷಿಸುವವು.
- 8ಅವನು ತನ್ನ ಕೈಕೆಲಸ ವಾದ ಬಲಿಪೀಠಗಳನ್ನು ದೃಷ್ಟಿಸನು ತನ್ನ ಬೆರಳುಗಳು ಮಾಡಿದ್ದನೂಅಥವಾ ತೋಪುಗಳನ್ನೂ ವಿಗ್ರಹ ಗಳನ್ನೂ ನೋಡನು.
- 9ಆ ದಿವಸದಲ್ಲಿ ಅವನ ಬಲ ವಾದ ಪಟ್ಟಣಗಳು ಬಿಟ್ಟುಬಿಟ್ಟ ಅರಣ್ಯಗಳ ಹಾಗೆಯೂ ಇಸ್ರಾಯೇಲಿನ ಮಕ್ಕಳ ಮುಂದೆ ಬಿಡಲ್ಪಟ್ಟ ಕೊನೆಗಳ ಹಾಗೆಯೂ ಇದ್ದು ಹಾಳಾಗಿರುವದು.
Cross references
- Micah 7:7 ಮೀಕ 7:7ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು.
- Hosea 6:1 ಹೋಶೇಯ 6:1ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ.
- Hosea 3:5 ಹೋಶೇಯ 3:5ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
- Isaiah 29:18–19 ಯೆಶಾಯ 29:18–19ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು. ದೀನರ ಸಂತೋಷವು ಕರ್ತನಲ್ಲಿ ಹೆಚ್ಚಾಗುವದು, ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸು ವರು.
- Judges 10:15–16 ನ್ಯಾಯಸ್ಥಾಪಕರು 10:15–16ಇಸ್ರಾಯೇಲ್ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು. ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.
- Jeremiah 3:12–14 ಯೆರೆಮೀಯ 3:12–14ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು; ಯಾವವಂದರೆ--ಹಿಂದಿ ರುಗಿದ ಇಸ್ರಾಯೇಲೇ, ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ. ನಾನು ನನ್ನ ಕೋಪವನ್ನು ನಿನ್ನ ಮೇಲೆ ಬೀಳ ಮಾಡುವದಿಲ್ಲ; ನಾನು ದಯಾಪರನು ಎಂದು ಕರ್ತನು ಅನ್ನುತ್ತಾನೆ, ಎಂದೆಂದಿಗೂ ಕೋಪವಿಟ್ಟು ಕೊಳ್ಳುವದಿಲ್ಲ. ನಿನ್ನ ದೇವರಾದ ಕರ್ತನಿಗೆ ವಿರೋಧ ವಾಗಿ ದ್ರೋಹಮಾಡಿ ಒಂದೊಂದು ಹಸಿರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯರಿಗೆ ಚದರಿಸಿ ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆಮಾಡೆಂದು ಕರ್ತನು ಅನ್ನುತ್ತಾನೆ. ಹಿಂಜರಿದ ಮಕ್ಕಳೇ, ತಿರುಗಿಕೊಳ್ಳಿರೆಂದು ಕರ್ತನು ಅನ್ನುತ್ತಾನೆ; ನಾನು ನಿಮ್ಮನ್ನು ಮದುವೆಯಾಗಿದ್ದೇನೆ; ನಿಮ್ಮನ್ನು ಪಟ್ಟಣದೊಳಗಿಂದ ಒಬ್ಬನಂತೆಯೂ ಗೋತ್ರ ದೊಳಗಿಂದ ಇಬ್ಬರಂತೆಯೂ ತೆಗೆದುಕೊಂಡು ಚೀಯೋನಿಗೆ ಕರಕೊಂಡು ಬರುವೆನು.
- Jeremiah 31:4–10 ಯೆರೆಮೀಯ 31:4–10ಇಸ್ರಾ ಯೇಲಿನ ಕನ್ಯಾಸ್ತ್ರೀಯೇ, ನೀನು ಕಟ್ಟಲ್ಪಟ್ಟಿರುವ ಹಾಗೆ ತಿರುಗಿ ನಿನ್ನನ್ನು ಕಟ್ಟುವೆನು; ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷಪಡು ವವರ ನಾಟ್ಯದಲ್ಲಿ ಹೊರಡುವಿ. ಸಮಾರ್ಯದ ಪರ್ವ ತಗಳಲ್ಲಿ ತಿರುಗಿ ದ್ರಾಕ್ಷೇಗಿಡಗಳನ್ನು ನೆಡುವಿ; ನೆಡು ವವರು ನೆಟ್ಟು ಸಾಧಾರಣವಾದವುಗಳಂತೆ ಫಲ ಅನುಭ ವಿಸುವರು. ಒಂದು ದಿನವದೆ; ಆಗ ಎಫ್ರಾಯಾಮಿನ ಪರ್ವತದಲ್ಲಿ ಕಾಯುವವರು--ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಕರ್ತನ ಬಳಿಗೆ ಹೋಗೋಣ ಎಂದು ಕೂಗುವರು. ಕರ್ತನು ಹೀಗೆ ಹೇಳುತ್ತಾನೆ --ಯಾಕೋಬನ ವಿಷಯ ಸಂತೋಷದಿಂದ ಹಾಡಿ ಮುಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ, ಸಾರಿರಿ, ಸ್ತುತಿಸಿರಿ; ಕರ್ತನೇ, ನಿನ್ನ ಜನರನ್ನೂ ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು ಎಂದು ಹೇಳಿರಿ. ಇಗೋ, ನಾನು ಅವರನ್ನು ಉತ್ತರ ದೇಶ ದಿಂದ ಬರಮಾಡಿ ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ; ಅವರಲ್ಲಿ ಕುರುಡರೂ ಕುಂಟರೂ ಗರ್ಭಿಣಿಯಾದವರೂ ದಿನತುಂಬಿದ ಗರ್ಭಿಣಿಯರ ಸಹಿತವಾಗಿ ಇರುವರು; ದೊಡ್ಡ ಗುಂಪಾಗಿ ಇಲ್ಲಿಗೆ ಹಿಂತಿರುಗಿ ಬರುವರು. ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ. ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು.
- Isaiah 22:11 ಯೆಶಾಯ 22:11ಎರಡು ಗೋಡೆಗಳ ನಡುವೆ ಹಳೇ ಕೆರೆಯ ನೀರಿ ಗೋಸ್ಕರ ತೊಟ್ಟಿಯನ್ನು ಮಾಡಿದ್ದೀರಿ, ಆದರೆ ಅದನ್ನು ಮಾಡಿದವನನ್ನು ನೀವು ದೃಷ್ಟಿಸಲಿಲ್ಲ. ಇಲ್ಲವೆ ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಲ್ಲ.
- 2 Chronicles 35:17–18 2 ಪೂರ್ವಕಾಲವೃತ್ತಾಂತ 35:17–18ಸಿದ್ಧವಾಗಿದ್ದ ಇಸ್ರಾಯೇಲಿನ ಮಕ್ಕಳು ಆ ಕಾಲದಲ್ಲಿ ಪಸ್ಕವನ್ನೂ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನೂ ಏಳು ದಿವಸ ಆಚರಿಸಿದರು. ಪ್ರವಾದಿಯಾದ ಸಮುವೇಲನ ದಿವಸಗಳು ಮೊದಲುಗೊಂಡು ಇಸ್ರಾಯೇಲಿನಲ್ಲಿ ಇಂಥಾ ಪಸ್ಕವನ್ನು ಆಚರಿಸಿದ್ದಿಲ್ಲ. ಇಸ್ರಾಯೇಲಿನ ಸಮಸ್ತ ಅರಸುಗಳಲ್ಲಿ ಯೋಷೀಯನೂ ಯಾಜಕರೂ ಲೇವಿಯರೂ ಸಿದ್ಧವಾಗಿದ್ದ ಯೆಹೂದ ಇಸ್ರಾಯೇಲ್ಯ ರೆಲ್ಲರೂ ಯೆರೂಸಲೇಮಿನ ನಿವಾಸಿಗಳೂ ಆಚರಿಸಿದ ಪಸ್ಕದ ಹಾಗೆ ಯಾರೂ ಆಚರಿಸಲಿಲ್ಲ.
- Isaiah 10:20–21 ಯೆಶಾಯ 10:20–21ಆ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಉಳಿದವರೂ ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಇಸ್ರಾಯೇಲಿನ ಪರಿಶುದ್ಧನಾದ ಕರ್ತನ ಸತ್ಯವನ್ನು ಆಧಾರ ಮಾಡಿಕೊಳ್ಳುವರು. ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾ ಕ್ರಮಿಯಾದ ದೇವರ ಕಡೆಗೆ ಹಿಂತಿರುಗುವರು.
- 2 Chronicles 30:10–11 2 ಪೂರ್ವಕಾಲವೃತ್ತಾಂತ 30:10–11ಹೀಗೆಯೇ ದೂತರು ಎಫ್ರಾಯಾಮಿನ, ಮನ ಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ ಪಟ್ಟಣದಿಂದ ಪಟ್ಟಣಕ್ಕೆ ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು. ಆದಾಗ್ಯೂ ಅಶೇರ, ಮನಸ್ಸೆ, ಜೆಬುಲೂನ್ ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.
- Isaiah 24:14–15 ಯೆಶಾಯ 24:14–15ಅವರು ತಮ್ಮ ಸ್ವರವನ್ನೆತ್ತಿ ಕರ್ತನ ಮಹತ್ತಿನ ನಿಮಿತ್ತ ಹಾಡು ವರು, ಸಮುದ್ರದ ಕಡೆಯಿಂದ ಆರ್ಭಟಿಸುವರು. ಆದದರಿಂದ ನೀವು ಕರ್ತನಿಗೆ ಬೆಂಕಿಯಲ್ಲಿಯೂ ಸಮುದ್ರದ ದ್ವೀಪಗಳಲ್ಲಿಯೂ ಇಸ್ರಾಯೇಲ್ಯರ ದೇವ ರಾದ ಕರ್ತನ ಹೆಸರನ್ನು ಘನಪಡಿಸಿರಿ.