Isaiah · chapter 19 · verse 20
Isaiah 19:20 in Kannada
ಅದು ಸೈನ್ಯಗಳ ಕರ್ತನಿಗೆ ಐಗುಪ್ತ ದೇಶದಲ್ಲಿ ಗುರುತಾಗಿಯೂ ಸಾಕ್ಷಿ ಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಕರ್ತನನ್ನು ಕೂಗಿ ಕೊಳ್ಳಲು ಆತನು ಅವರಿಗೆ ಒಬ್ಬ ಶೂರನಾದ ರಕ್ಷಕ ನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು.
Adu sainyagala kartanige aigupta deshadalli gurutaagiyoo saakshi yaagiyoo iruvavu. Hinsakara deseyinda kartanannu koogi kollalu aatanu avarige obba shooranaada rakshaka nannu kaluhisi avarannu bidugade maaduvanu.
Isaiah 19:20 in English
- King James Version (KJV)
- And it shall be for a sign and for a witness unto the LORD of hosts in the land of Egypt: for they shall cry unto the LORD because of the oppressors, and he shall send them a saviour, and a great one, and he shall deliver them.
- World English Bible (WEB)
- It will be for a sign and for a witness to the LORD of Armies in the land of Egypt; for they will cry to the LORD because of oppressors, and he will send them a savior and a defender, and he will deliver them.
- American Standard Version (ASV)
- And it shall be for a sign and for a witness unto Jehovah of hosts in the land of Egypt; for they shall cry unto Jehovah because of oppressors, and he will send them a saviour, and a defender, and he will deliver them.
- Bible in Basic English (BBE)
- And it will be a sign and a witness to the Lord of armies in the land of Egypt: when they are crying out to the Lord because of their cruel masters, then he will send them a saviour and a strong one to make them free.
- Darby Translation (DBY)
- and it shall be for a sign and for a witness to Jehovah of hosts in the land of Egypt; for they shall cry unto Jehovah because of the oppressors, and he will send them a saviour and defender, who shall deliver them.
- Webster's Bible (WBS)
- And it shall be for a sign and for a witness to the LORD of hosts in the land of Egypt: for they shall cry to the LORD because of the oppressors, and he shall send them a savior, and a great one, and he shall deliver them.
- Young's Literal Translation (YLT)
- And it hath been for a sign and for a testimony, To Jehovah of Hosts in the land of Egypt, For they cry unto Jehovah from the face of oppressors, And He sendeth to them a saviour, Even a great one, and hath delivered them.
Read in context
- 18ಆ ದಿವಸದಲ್ಲಿ ಕಾನಾನಿನ ಭಾಷೆಯನ್ನಾಡುವ ಐಗುಪ್ತದ ಐದು ಪಟ್ಟಣಗಳು ಸೈನ್ಯಗಳ ಕರ್ತನಿಗೆ ಆಣೆ ಇಟ್ಟುಕೊಳ್ಳುವವು. ಅವುಗಳಲ್ಲಿ ಒಂದರ ಹೆಸರು ನಾಶಪುರ.
- 19ಆ ದಿನದಲ್ಲಿ ಐಗುಪ್ತದೇಶದ ಮಧ್ಯೆ ಕರ್ತನಿಗೆ ಬಲಿಪೀಠವೂ ದೇಶದ ಎಲ್ಲೆಯಲ್ಲಿ ಕರ್ತನಿಗೆ ಒಂದು ಸ್ತಂಭವೂ ಇರುವವು.
- 20ಅದು ಸೈನ್ಯಗಳ ಕರ್ತನಿಗೆ ಐಗುಪ್ತ ದೇಶದಲ್ಲಿ ಗುರುತಾಗಿಯೂ ಸಾಕ್ಷಿ ಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಕರ್ತನನ್ನು ಕೂಗಿ ಕೊಳ್ಳಲು ಆತನು ಅವರಿಗೆ ಒಬ್ಬ ಶೂರನಾದ ರಕ್ಷಕ ನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು.
- 21ಕರ್ತನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು ಅವರು ಆ ದಿನದಲ್ಲಿ ಕರ್ತನನ್ನು ತಿಳಿದುಕೊಳ್ಳುವರು, ಬಲಿ ಕಾಣಿಕೆಗಳಿಂದ ಸೇವೆಮಾಡುವರು. ಹೌದು, ಅವರು ಕರ್ತನಿಗೆ ಪ್ರಮಾಣ ಮಾಡಿಕೊಂಡು ನೆರ ವೇರಿಸುವರು.
- 22ಇದಲ್ಲದೆ ಕರ್ತನು ಐಗುಪ್ತ್ಯರನ್ನು ಹೊಡೆಯುವನು, ಹೊಡೆದು ಸ್ವಸ್ಥಮಾಡುವನು. ಅವರು ಕರ್ತನ ಕಡೆಗೆ ತಿರುಗಿಕೊಳ್ಳುವರು, ಆತನು ಅವರನ್ನು ಆಲೈಸಿ ಸ್ವಸ್ಥಮಾಡುವನು.
Cross references
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- Titus 2:13 ತೀತನಿಗೆ 2:13ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
- Isaiah 45:21–22 ಯೆಶಾಯ 45:21–22ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ. ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
- Luke 2:11 ಲೂಕನು 2:11ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
- Joshua 24:26–27 ಯೆಹೋಶುವ 24:26–27ಈ ಮಾತುಗಳನ್ನು ಯೆಹೋಶುವನು ದೇವರ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದು ಒಂದು ದೊಡ್ಡ ಕಲ್ಲನ್ನು ಎತ್ತಿ ಅದನ್ನು ಅಲ್ಲಿ ಕರ್ತನ ಪರಿಶುದ್ಧ ಸ್ಥಳದ ಬಳಿಯಲ್ಲಿ ಏಲಾಮರದ ಕೆಳಗೆ ನೆಟ್ಟನು. ಯೆಹೋಶುವನು ಜನ ರಿಗೆಲ್ಲಾ--ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಯಾಕಂದರೆ ಅದು ಕರ್ತನು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿತು. ಆದದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.
- Isaiah 49:25–26 ಯೆಶಾಯ 49:25–26ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು. ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
- Isaiah 37:36 ಯೆಶಾಯ 37:36ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
- Isaiah 52:5 ಯೆಶಾಯ 52:5ಹಾಗಾದರೆ ಈಗ ಕರ್ತನು ಹೇಳುವದೇನಂದರೆ ನನಗೆ ಇಲ್ಲಿ ಏನಿದೆ? ನನ್ನ ಜನರು ಏನೂ ಇಲ್ಲದೆ ಒಯ್ಯಲ್ಪಟ್ಟಿದ್ದಾರಲ್ಲಾ; ಆಳುವವರು ಅವರನ್ನು ಗೋಳಾಡಿಸುತ್ತಾರಲ್ಲಾ ಮತ್ತು ನನ್ನ ಹೆಸರು ಪ್ರತಿದಿನವೂ ಎಡೆಬಿಡದೇ ದೂಷಣೆಗೆ ಗುರಿಯಾಗಿದೆ ಎಂದು ಕರ್ತನು ಹೇಳುತ್ತಾನೆ.
- Exodus 2:23 ವಿಮೋಚನಕಾಂಡ 2:23ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.
- Isaiah 19:4 ಯೆಶಾಯ 19:4ಇದ ಲ್ಲದೆ ಐಗುಪ್ತವನ್ನು ಕ್ರೂರನಾದ ಒಡೆಯನ ಕೈಗೆ ಒಪ್ಪಿಸುವೆನು; ಭಯಂಕರನಾದ ರಾಜನು ಅವರ ನ್ನಾಳುವನು ಎಂದು ಸೈನ್ಯಗಳ ಕರ್ತನಾದ ಕರ್ತನು ಹೇಳುತ್ತಾನೆ.
- Isaiah 55:13 ಯೆಶಾಯ 55:13ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
- Joshua 22:27–28 ಯೆಹೋಶುವ 22:27–28ನಾವು ಕರ್ತನ ಸನ್ನಿಧಿಯಲ್ಲಿ ದಹನ ಬಲಿಗಳಿಂದಲೂ ಯಜ್ಞಗಳಿಂದಲೂ ಸಮಾಧಾನದ ಬಲಿಗಳಿಂದಲೂ ಆತನನ್ನು ಸೇವಿಸುವ ಹಾಗೆಯೂ ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿ ಯವರಿಗೂ ಮಧ್ಯದಲ್ಲಿ ಸಾಕ್ಷಿ ಉಂಟಾಗುವ ಹಾಗೆ ಯಜ್ಞವೇದಿಯನ್ನು ಕಟ್ಟಿಕೊಳ್ಳುವದಕ್ಕೆ ಮಾಡಿದೆವು. ನಾವು ಅಂದುಕೊಂಡದ್ದೇನಂದರೆ--ಮುಂದೆ ನಮ ಗಾದರೂ ನಮ್ಮ ಸಂತತಿಯವರಿಗಾದರೂ ಹಾಗೆ ಹೇಳಿದರೆ ಆಗ ದಹನಬಲಿಗಳಿಗಾದರೂ ಬಲಿ ಗಳಿಗಾದರೂ ಅಲ್ಲ, ನಮಗೂ ನಿಮಗೂ ನಡುವೆ ಸಾಕ್ಷಿಗೋಸ್ಕರ ನಮ್ಮ ತಂದೆಗಳು ಮಾಡಿದ ಕರ್ತನ ಬಲಿಪೀಠದ ಹೋಲಿಕೆಯಾದ ಯಜ್ಞವೇದಿಯನ್ನು ನೋಡಿರಿ ಎಂದು ಹೇಳುವರು.
Original words (Hebrew)
- sign · H226אוֹת ʼôwth
- witness · H5707עֵד ʻêd
- hosts · H6635צָבָא tsâbâʼ
- land · H776אֶרֶץ ʼerets
- Egypt · H4714מִצְרַיִם Mitsrayim
- cry · H6817צָעַק tsâʻaq
- because · H6440פָּנִים pânîym
- oppressors · H3905לָחַץ lâchats
- send · H7971שָׁלַח shâlach
- saviour · H3467יָשַׁע yâshaʻ
- one · H7227רַב rab
- deliver · H5337נָצַל nâtsal