Isaiah · chapter 19 · verse 21
Isaiah 19:21 in Kannada
ಕರ್ತನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು ಅವರು ಆ ದಿನದಲ್ಲಿ ಕರ್ತನನ್ನು ತಿಳಿದುಕೊಳ್ಳುವರು, ಬಲಿ ಕಾಣಿಕೆಗಳಿಂದ ಸೇವೆಮಾಡುವರು. ಹೌದು, ಅವರು ಕರ್ತನಿಗೆ ಪ್ರಮಾಣ ಮಾಡಿಕೊಂಡು ನೆರ ವೇರಿಸುವರು.
Kartanu tannannu aiguptyarige tiliyapadisalu avaru aa dinadalli kartanannu tilidukolluvaru, bali kaanikegalinda sevemaaduvaru. Haudu, avaru kartanige pramaana maadikondu nera verisuvaru.
Isaiah 19:21 in English
- King James Version (KJV)
- And the LORD shall be known to Egypt, and the Egyptians shall know the LORD in that day, and shall do sacrifice and oblation; yea, they shall vow a vow unto the LORD, and perform [it].
- World English Bible (WEB)
- The LORD will be known to Egypt, and the Egyptians will know the LORD in that day. Yes, they will worship with sacrifice and offering, and will vow a vow to the LORD, and will perform it.
- American Standard Version (ASV)
- And Jehovah shall be known to Egypt, and the Egyptians shall know Jehovah in that day; yea, they shall worship with sacrifice and oblation, and shall vow a vow unto Jehovah, and shall perform it.
- Bible in Basic English (BBE)
- And the Lord will give the knowledge of himself to Egypt, and the Egyptians will give honour to the Lord in that day; they will give him worship with offerings and meal offerings, and will take an oath to the Lord and give effect to it.
- Darby Translation (DBY)
- And Jehovah shall be known to the Egyptians, and the Egyptians shall know Jehovah in that day, and shall serve with sacrifice and oblation; and they shall vow a vow unto Jehovah, and perform it.
- Webster's Bible (WBS)
- And the LORD shall be known to Egypt, and the Egyptians shall know the LORD in that day, and shall do sacrifice and oblation; yes, they shall vow a vow to the LORD, and perform [it] .
- Young's Literal Translation (YLT)
- And known hath been Jehovah to Egypt, And the Egyptians have known Jehovah in that day, And done sacrifice and present, And vowed a vow to Jehovah, and completed [it].
Read in context
- 19ಆ ದಿನದಲ್ಲಿ ಐಗುಪ್ತದೇಶದ ಮಧ್ಯೆ ಕರ್ತನಿಗೆ ಬಲಿಪೀಠವೂ ದೇಶದ ಎಲ್ಲೆಯಲ್ಲಿ ಕರ್ತನಿಗೆ ಒಂದು ಸ್ತಂಭವೂ ಇರುವವು.
- 20ಅದು ಸೈನ್ಯಗಳ ಕರ್ತನಿಗೆ ಐಗುಪ್ತ ದೇಶದಲ್ಲಿ ಗುರುತಾಗಿಯೂ ಸಾಕ್ಷಿ ಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಕರ್ತನನ್ನು ಕೂಗಿ ಕೊಳ್ಳಲು ಆತನು ಅವರಿಗೆ ಒಬ್ಬ ಶೂರನಾದ ರಕ್ಷಕ ನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು.
- 21ಕರ್ತನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು ಅವರು ಆ ದಿನದಲ್ಲಿ ಕರ್ತನನ್ನು ತಿಳಿದುಕೊಳ್ಳುವರು, ಬಲಿ ಕಾಣಿಕೆಗಳಿಂದ ಸೇವೆಮಾಡುವರು. ಹೌದು, ಅವರು ಕರ್ತನಿಗೆ ಪ್ರಮಾಣ ಮಾಡಿಕೊಂಡು ನೆರ ವೇರಿಸುವರು.
- 22ಇದಲ್ಲದೆ ಕರ್ತನು ಐಗುಪ್ತ್ಯರನ್ನು ಹೊಡೆಯುವನು, ಹೊಡೆದು ಸ್ವಸ್ಥಮಾಡುವನು. ಅವರು ಕರ್ತನ ಕಡೆಗೆ ತಿರುಗಿಕೊಳ್ಳುವರು, ಆತನು ಅವರನ್ನು ಆಲೈಸಿ ಸ್ವಸ್ಥಮಾಡುವನು.
- 23ಆ ದಿವಸದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ಒಂದು ರಾಜಮಾರ್ಗವಿರುವದು. ಅಶ್ಶೂ ರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರ್ಯಕ್ಕೂ ಹೋಗಿ ಬರುವರು ಮತ್ತು ಐಗುಪ್ತ್ಯರು ಅಶ್ಶೂರ್ಯರೊಂದಿಗೆ (ಕರ್ತನನ್ನು) ಸೇವಿಸುವರು.
Cross references
- Malachi 1:11 ಮಲಾಕಿಯ 1:11ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Isaiah 11:9 ಯೆಶಾಯ 11:9ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
- Psalm 67:2 ಕೀರ್ತನೆಗಳು 67:2ಆಗ ನಿನ್ನ ಮಾರ್ಗವೂ ನಿನ್ನ ರಕ್ಷಣೆಯ ಸ್ವಸ್ಥತೆಯೂ, ಭೂಮಿಯಲ್ಲಿ, ಎಲ್ಲಾ ಜನಾಂಗಗಳಿಗೆ ತಿಳಿಯಲ್ಪಡು ವದು.
- Isaiah 56:7 ಯೆಶಾಯ 56:7ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು.
- Isaiah 37:20 ಯೆಶಾಯ 37:20ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು.
- 1 Samuel 17:46 1 ಸಮುವೇಲನು 17:46ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
- Isaiah 44:5 ಯೆಶಾಯ 44:5ಒಬ್ಬನು--ನಾನು ಕರ್ತನವನು, ಇನ್ನೊಬ್ಬನು ಯಾಕೋಬನ ಹೆಸರಿನವನು ಎಂದು ಹೇಳಿಕೊಳ್ಳುವನು; ಮತ್ತೊಬ್ಬನು ತನ್ನ ಕೈಯ ಮೇಲೆ ಕರ್ತನಿಗೆಂದು ಬರೆಯಿಸಿಕೊಂಡು ತನ್ನಷ್ಟಕ್ಕೆ ತಾನೇ ಇಸ್ರಾಯೇಲಿನ ಅಡ್ಡ ಹೆಸರನ್ನು ಇಟ್ಟುಕೊಳ್ಳುವನು.
- Psalm 98:2–3 ಕೀರ್ತನೆಗಳು 98:2–3ರ್ತನು ತನ್ನ ರಕ್ಷಣೆಯನ್ನು ತಿಳಿಯ ಮಾಡಿದ್ದಾನೆ; ತನ್ನ ನೀತಿಯನ್ನು ಜನಾಂಗಗಳ ದೃಷ್ಟಿಗೆ ಬಹಿರಂಗವಾಗಿ ಪ್ರಕಟಮಾಡಿದ್ದಾನೆ. ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.
- Habakkuk 2:14 ಹಬಕ್ಕೂಕ 2:14ನೀರುಗಳು ಸಮುದ್ರವನ್ನು ಮುಚ್ಚುವ ಪ್ರಕಾರ ಭೂಮಿಯು ಕರ್ತನ ಮಹಿಮೆಯ ತಿಳುವಳಿಕೆಯಿಂದ ತುಂಬಿರುವದು.
- Ecclesiastes 5:4 ಪ್ರಸಂಗಿ 5:4ದೇವರಿಗೆ ನೀನು ಪ್ರಮಾಣವನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ; ಮೂಢರಲ್ಲಿ ಆತನಿಗೆ ಸಂತೋಷವಿಲ್ಲ; ನೀನು ಪ್ರಮಾಣಮಾಡಿದ್ದನು ತೀರಿಸು.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- John 17:3 ಯೋಹಾನನು 17:3ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.