Isaiah · chapter 19 · verse 3
Isaiah 19:3 in Kannada
ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು.
Aiguptada aatmavu adara madhyadalli kunduvadu; adara aalochaneyannu kedisibiduvenu; alliya varu vigrahagalannoo maatagaararannoo yakshanigaara rannoo mantravaadigalannoo hudukuvaru.
Isaiah 19:3 in English
- King James Version (KJV)
- And the spirit of Egypt shall fail in the midst thereof; and I will destroy the counsel thereof: and they shall seek to the idols, and to the charmers, and to them that have familiar spirits, and to the wizards.
- World English Bible (WEB)
- The spirit of the Egyptians will fail within them. I will destroy their counsel. They will seek the idols, the charmers, those who have familiar spirits, and the wizards.
- American Standard Version (ASV)
- And the spirit of Egypt shall fail in the midst of it; and I will destroy the counsel thereof: and they shall seek unto the idols, and to the charmers, and to them that have familiar spirits, and to the wizards.
- Bible in Basic English (BBE)
- And the spirit of Egypt will be troubled in her, and I will make her decisions without effect: and they will be turning to the false gods, and to those who make hollow sounds, and to those who have control of spirits, and to those who are wise in secret arts.
- Darby Translation (DBY)
- And the spirit of Egypt shall fail in the midst of it, and I will destroy the counsel thereof; and they shall seek unto the idols and unto the conjurers, and unto the necromancers, and unto the soothsayers.
- Webster's Bible (WBS)
- And the spirit of Egypt shall fail in the midst of her, and I will destroy her counsel: and they shall seek to the idols, and to the charmers, and to them that have familiar spirits, and to the wizards.
- Young's Literal Translation (YLT)
- And emptied out hath been in its midst the spirit of Egypt. And its counsel I swallow up, And they have sought unto the idols, And unto the charmers, And unto those having familiar spirits, And unto the wizards.
Read in context
- 1ಐಗುಪ್ತ್ಯರ ವಿಷಯವಾದ ದೈವೋಕ್ತಿ; ಇಗೋ ಕರ್ತನು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಐಗುಪ್ತಕ್ಕೆ ಬರುತ್ತಾನೆ; ಆತನು ಸಮ್ಮುಖ ನಾದಾಗ ಐಗುಪ್ತದ ವಿಗ್ರಹಗಳು ನಡುಗುವವು, ಐಗುಪ್ತ್ಯರ ಹೃದಯವು ಅವರ ಮಧ್ಯೆ ಕರಗುವದು.
- 2ಇದಲ್ಲದೆ ನಾನು ಐಗುಪ್ತಕ್ಕೆ ವಿರೋಧವಾಗಿ ಐಗುಪ್ತ ವನ್ನು ಎಬ್ಬಿಸುವೆನು; ಸಹೋದರನಿಗೆ ವಿರೋದವಾಗಿ ಸಹೋದರನೂ ನೆರೆಯವನಿಗೆ ವಿರೋದವಾಗಿ ನೆರೆ ಯವನೂ ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೋರಾಡುವವು.
- 3ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು.
- 4ಇದ ಲ್ಲದೆ ಐಗುಪ್ತವನ್ನು ಕ್ರೂರನಾದ ಒಡೆಯನ ಕೈಗೆ ಒಪ್ಪಿಸುವೆನು; ಭಯಂಕರನಾದ ರಾಜನು ಅವರ ನ್ನಾಳುವನು ಎಂದು ಸೈನ್ಯಗಳ ಕರ್ತನಾದ ಕರ್ತನು ಹೇಳುತ್ತಾನೆ.
- 5ಇದಲ್ಲದೆ ಸಮುದ್ರದ ಕಡೆಯಿಂದ ನೀರು ಬತ್ತಿ ಹೋಗುವದು; ನದಿಗಳು ಇಂಗಿ ಒಣಗುವವು.
Cross references
- Isaiah 8:19 ಯೆಶಾಯ 8:19ಲೊಚಗುಟ್ಟುವ ಪಿಸುಮಾತಾಡುವ ಮಂತ್ರಗಾರ ರನ್ನೂ ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ ಜನರು ತಮ್ಮ ದೇವರನ್ನೇ ಹುಡುಕುವದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವದುಂಟೋ?
- Daniel 2:2 ದಾನಿಯೇಲನು 2:2ಆಗ ಅರಸನಿಗೆ ತನ್ನ ಕನಸುಗಳನ್ನು ತಿಳಿಸುವ ಹಾಗೆ ಅರಸನು ಮಂತ್ರಗಾರರನ್ನೂ ಜೋತಿಷ್ಯರನ್ನೂ ಮಾಟ ಗಾರರನ್ನೂ ಕಸ್ದೀಯರನ್ನೂ ಕರೆಯಲು ಆಜ್ಞಾಪಿಸಿ ದನು; ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.
- 1 Chronicles 10:13 1 ಪೂರ್ವಕಾಲವೃತ್ತಾಂತ 10:13ಹೀಗೆಯೇ ಸೌಲನು ಕರ್ತನಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಕರ್ತನ ವಾಕ್ಯವನ್ನು ಕೈಕೊಳ್ಳದೆ,ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.
- Proverbs 21:30 ಜ್ಞಾನೋಕ್ತಿಗಳು 21:30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Isaiah 44:25 ಯೆಶಾಯ 44:25ಸುಳ್ಳುಗಾರರ ಗುರುತುಗಳನ್ನು ನಿರರ್ಥಕಮಾಡುವವನೂ ಕಣಿ ಹೇಳು ವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಬುದ್ದಿಹೀನ ವಾಗ ಮಾಡುವವನೂ
- Psalm 76:12 ಕೀರ್ತನೆಗಳು 76:12ಆತನು ಪ್ರಧಾನರ ಪ್ರಾಣವನ್ನು ತೆಗೆದು ಹಾಕು ತ್ತಾನೆ; ಭೂಮಿಯ ಅರಸುಗಳಿಗೆ ಭಯಂಕರ ನಾಗಿದ್ದಾನೆ.
- Daniel 4:6–7 ದಾನಿಯೇಲನು 4:6–7ಆದದರಿಂದ ನನ್ನ ಕನಸಿನ ಅರ್ಥವನ್ನು ನನಗೆ ತಿಳಿಸುವದಕ್ಕೋಸ್ಕರ ಬಾಬೆಲಿನ ಸಕಲ ಜ್ಞಾನಿಗಳನ್ನು ನನ್ನ ಮುಂದೆ ತರಬೇಕೆಂದು ಆಜ್ಞಾಪಿಸಿದೆನು. ಆಗ ಮಂತ್ರಗಾರರು, ಜೋತಿಷ್ಯರು, ಕಸ್ದೀಯರು, ಶಕುನಗಾರರು ಒಳಗೆ ಬಂದರು; ನಾನು ಕನಸನ್ನು ಅವರಿಗೆ ತಿಳಿಸಿದೆನು; ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ.
- 2 Chronicles 25:16–20 2 ಪೂರ್ವಕಾಲವೃತ್ತಾಂತ 25:16–20ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು. ಆಗ ಯೆಹೂದದ ಅರಸನಾದ ಅಮಚ್ಯನು ಆಲೋಚನೆ ಕೇಳಿ, ಇಸ್ರಾಯೇಲಿನ ಅರಸನಾದ ಯೇಹುವಿನ ಮಗನಾದ ಯೆಹೋವಾಹಾಜನ ಮಗ ನಾದ ಯೋವಾಷನಿಗೆ--ನಾವು ಒಬ್ಬರ ಮುಖ ವನ್ನು ಒಬ್ಬರು ನೋಡೋಣ ಬಾ ಎಂದು ಹೇಳಿ ಕಳುಹಿಸಿದನು. ಆದರೆ ಇಸ್ರಾಯೇಲಿನ ಅರಸ ನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ--ಲೆಬನೋನಿನಲ್ಲಿದ್ದ ಒಂದು ಮುಳ್ಳು ಗಿಡವು ಲೆಬನೋನಿನಲ್ಲಿರುವ ದೇವದಾರಿಗೆ--ನೀನು ನನ್ನ ಮಗನಿಗೆ ಹೆಂಡತಿಯಾಗಿರಲು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋ ನಿನಲ್ಲಿದ್ದ ಅಡವಿಯ ಮೃಗವು ಹಾದುಹೋಗುತ್ತಿರು ವಾಗ ಆ ಮುಳ್ಳು ಗಿಡವನ್ನು ತುಳಿಯಿತು. ಇಗೋನಾನು ಎದೋಮ್ಯರನ್ನು ಹೊಡೆದಿದ್ದೇನೆಂದು ಹೇಳಿ ಕೊಳ್ಳುತ್ತೀ; ಆದದರಿಂದ ನಿನ್ನ ಹೃದಯವು ನಿನ್ನನ್ನು ಅಹಂಕಾರದಿಂದ ಕೊಚ್ಕಿಕೊಳ್ಳುವಂತೆ ಮಾಡುತ್ತದೆ. ಈಗ ಮನೆಯಲ್ಲಿ ಕೂತಿರು. ನೀನೂ ನಿನ್ನ ಸಂಗಡ ಯೆಹೂದವೂ ಬಿದ್ದು ಹೋಗುವ ಹಾಗೆ ನಿನ್ನ ಕೇಡಿಗೆ ನೀನು ಕೈ ಹಾಕುವದೇನು ಅಂದನು. ಆದರೆ ಅಮ ಚ್ಯನು ಕೇಳದೆಹೋದನು. ಯಾಕಂದರೆ ಅವರು ಎದೋ ಮ್ಯರ ದೇವರುಗಳನ್ನು ಹುಡುಕಿದ ನಿಮಿತ್ತ ಅವರನ್ನು ಶತ್ರುಗಳ ಕೈಯಲ್ಲಿ ಒಪ್ಪಿಸುವ ಹಾಗೆ ಇದು ದೇವರಿಂದ ಆಯಿತು.
- Isaiah 15:2 ಯೆಶಾಯ 15:2ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.
- 2 Samuel 17:14 2 ಸಮುವೇಲನು 17:14ಆಗ ಅಬ್ಷಾ ಲೋಮನೂ ಇಸ್ರಾಯೇಲಿನ ಎಲ್ಲಾ ಜನರೂಅಹೀತೋಫೆಲನ ಆಲೋಚನೆಗಿಂತ ಅರ್ಕೀಯನಾದ ಹೂಷೈಯ ಆಲೋಚನೆ ಒಳ್ಳೇದು ಅಂದರು. ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೇ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ಕರ್ತನು ನೇಮಿಸಿದ್ದನು.
- Daniel 5:7 ದಾನಿಯೇಲನು 5:7ಆಗ ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ ಕಸ್ದೀಯರನ್ನೂ ಶಕುನರನ್ನೂ ಕರೆಸಿ ಬಾಬೆಲಿನ ಜ್ಞಾನಿ ಗಳಿಗೆ ಹೇಳಿದ್ದೇನಂದರೆ--ಯಾವನೂ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ತಿಳಿಸುವನೋ ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ರಾಜ್ಯದ ಮೂರನೆಯ ಅಧಿಕಾರಿ ಯಾಗಿ ಮಾಡುವೆನು ಅಂದನು.
- Psalm 107:27 ಕೀರ್ತನೆಗಳು 107:27ಅವರು ಅತ್ತಿತ್ತ ತೂಗಾಡಿ ಮತ್ತನ ಹಾಗೆ ಓಲಾ ಡುತ್ತಾರೆ. ಅವರ ಜ್ಞಾನವೆಲ್ಲಾ ನುಂಗಿ ಹೋಯಿತು.