Isaiah · chapter 2 · verse 10
Isaiah 2:10 in Kannada
ಕರ್ತನ ಭಯಕ್ಕೂ ಆತನ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ, ದೂಳಿನಲ್ಲಿ ನೀನು ಅಡಗಿಕೋ.
Kartana bhayakkoo aatana mahimeya ghanategoo bandegalalli seriko, doolinalli neenu adagiko.
Isaiah 2:10 in English
- King James Version (KJV)
- Enter into the rock, and hide thee in the dust, for fear of the LORD, and for the glory of his majesty.
- World English Bible (WEB)
- Enter into the rock, and hide in the dust, from before the terror of the LORD, and from the glory of his majesty.
- American Standard Version (ASV)
- Enter into the rock, and hide thee in the dust, from before the terror of Jehovah, and from the glory of his majesty.
- Bible in Basic English (BBE)
- Go into a hole in the rock, covering yourselves with dust, in fear of the Lord, before the glory of his power.
- Darby Translation (DBY)
- Enter into the rock, and hide thee in the dust, from before the terror of Jehovah, and from the glory of his majesty.
- Webster's Bible (WBS)
- Enter into the rock, and hide thee in the dust, for fear of the LORD, and for the glory of his majesty.
- Young's Literal Translation (YLT)
- Enter into a rock, and be hidden in dust, Because of the fear of Jehovah, And because of the honour of His excellency.
Read in context
- 8ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು.
- 9ನೀಚನು ಹಿಗ್ಗಿಕೊಳ್ಳುತ್ತಾನೆ, ಉತ್ತಮನು ತಗ್ಗಿಸಿಕೊಳ್ಳು ತ್ತಾನೆ; ಆದಕಾರಣ ಅವರನ್ನು ಮನ್ನಿಸಬೇಡ.
- 10ಕರ್ತನ ಭಯಕ್ಕೂ ಆತನ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ, ದೂಳಿನಲ್ಲಿ ನೀನು ಅಡಗಿಕೋ.
- 11ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
- 12ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.
Cross references
- Revelation 6:15–16 ಪ್ರಕಟನೆ 6:15–16ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
- Isaiah 2:19–21 ಯೆಶಾಯ 2:19–21ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು. ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು. ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು.ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
- Hosea 10:8 ಹೋಶೇಯ 10:8ಇಸ್ರಾಯೇಲಿನ ಪಾಪವಾದ ಅವೇ ನಿನ ಉನ್ನತವಾದ ಸ್ಥಳಗಳು ಹಾಳಾಗಿಹೋಗುವವು. ಮುಳ್ಳುಗಿಡಗಳೂ ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವವು; ಅವರು ಬೆಟ್ಟಗಳಿಗೆ--ನಮ್ಮನ್ನು ಮುಚ್ಚಿರಿ, ಗುಡ್ಡಗಳೇ ನಮ್ಮ ಮೇಲೆ ಬೀಳಿರಿ ಅನ್ನುವರು.
- Luke 23:30 ಲೂಕನು 23:30ಆಗ ಅವರು ಬೆಟ್ಟಗಳಿಗೆ--ನಮ್ಮ ಮೇಲೆ ಬೀಳಿರಿ; ಗುಡ್ಡಗಳಿಗೆ-- ನಮ್ಮನ್ನು ಮುಚ್ಚಿಕೊಳ್ಳಿರಿ ಎಂದು ಹೇಳಲಾರಂಭಿಸು ವರು.
- Job 37:22–24 ಯೋಬನು 37:22–24ಉತ್ತರದಿಂದ ಉತ್ತಮ ಹವಾಮಾನ ಬರುತ್ತದೆ; ದೇವರ ಬಳಿಯಲ್ಲಿ ಭಯಂಕರವಾದ ಘನ ಉಂಟು. ಸರ್ವ ಶಕ್ತನನ್ನು ನಾವು ಕಂಡುಕೊಳ್ಳುವದಿಲ್ಲ; ಆತನು ಶಕ್ತಿಯಲ್ಲಿಯೂ ನ್ಯಾಯತೀರ್ಪಿನಲ್ಲಿಯೂ ಬಹುನೀತಿಯಲ್ಲಿಯೂ ಉನ್ನ ತನಾಗಿದ್ದಾನೆ; ಆತನು ಶ್ರಮೆಪಡಿಸುವದಿಲ್ಲ.ಆದ ದರಿಂದ ಮನುಷ್ಯರು ಆತನಿಗೆ ಭಯಪಡುತ್ತಾರೆ; ಹೃದಯದಲ್ಲಿ ಜ್ಞಾನಿಗಳಾದವರೆಲ್ಲರನ್ನು ಆತನು ಲಕ್ಷಿಸುವದಿಲ್ಲ. ಆದ ದರಿಂದ ಮನುಷ್ಯರು ಆತನಿಗೆ ಭಯಪಡುತ್ತಾರೆ; ಹೃದಯದಲ್ಲಿ ಜ್ಞಾನಿಗಳಾದವರೆಲ್ಲರನ್ನು ಆತನು ಲಕ್ಷಿಸುವದಿಲ್ಲ.
- Isaiah 6:3–5 ಯೆಶಾಯ 6:3–5ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು. ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು, ಆಲಯವು ಧೂಮದಿಂದ ತುಂಬಿತ್ತು. ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
- Judges 6:1–2 ನ್ಯಾಯಸ್ಥಾಪಕರು 6:1–2ಆದರೆ ಇಸ್ರಾಯೇಲ್ ಮಕ್ಕಳು ಕರ್ತನ ದೃಷ್ಟಿಯಲ್ಲಿ ಕೆಟ್ಟತನಮಾಡಿದರು; ಆದದ ರಿಂದ ಕರ್ತನು ಅವರನ್ನು ಏಳು ವರುಷ ಮಿದ್ಯಾನ್ಯರ ಕೈಗೆ ಒಪ್ಪಿಸಿಕೊಟ್ಟನು. ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದದರಿಂದ ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಗುಹೆಗಳನ್ನೂ ಗವಿಗಳನ್ನೂ ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.
- Jeremiah 10:7 ಯೆರೆಮೀಯ 10:7ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ.
- Revelation 15:3–4 ಪ್ರಕಟನೆ 15:3–4ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ. ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- Job 30:5–6 ಯೋಬನು 30:5–6ಜನರಿಂದ ಅವರನ್ನು ಹೊರಗೆ ಹಾಕುತ್ತಾರೆ; (ಕಳ್ಳರ ಹಿಂಡಿನಂತೆ ಅವರ ಹಿಂದೆ ಕೂಗುತ್ತಾರೆ). ಭಯಂಕರವಾದ ತಗ್ಗು ಗಳ ಸಂದುಗಳಲ್ಲಿಯೂ ಭೂಮಿಯ ಗುಹೆಗಳಲ್ಲಿಯೂ ಬಂಡೆಗಳಲ್ಲಿಯೂ ವಾಸವಾಗಿರಬೇಕು.
- Psalm 90:11 ಕೀರ್ತನೆಗಳು 90:11ನಿನ್ನ ಕೋಪದ ಬಲವನ್ನು ತಿಳಿದ ವನಾರು? ನಿನ್ನ ಭಯದ ಪ್ರಕಾರವೇ ನಿನ್ನ ಉಗ್ರತೆ ಇದೆ.
- Jeremiah 10:10 ಯೆರೆಮೀಯ 10:10ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.