Isaiah · chapter 2 · verse 13
Isaiah 2:13 in Kannada
ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಏಲಾಮರಗಳ ಮೇಲೆಯೂ
Ettaravaagi belediruva lebanonina ellaa devadaaru vrukshagala mattu baashaanina ellaa elaamaragala meleyoo
Isaiah 2:13 in English
- King James Version (KJV)
- And upon all the cedars of Lebanon, [that are] high and lifted up, and upon all the oaks of Bashan,
- World English Bible (WEB)
- for all the cedars of Lebanon, that are high and lifted up, for all the oaks of Bashan,
- American Standard Version (ASV)
- and upon all the cedars of Lebanon, that are high and lifted up, and upon all the oaks of Bashan,
- Bible in Basic English (BBE)
- And on all the high trees of Lebanon, and on all the strong trees of Bashan;
- Darby Translation (DBY)
- and upon all the cedars of Lebanon, high and lifted up, and upon all the oaks of Bashan;
- Webster's Bible (WBS)
- And upon all the cedars of Lebanon, [that are] high and lifted up, and upon all the oaks of Bashan,
- Young's Literal Translation (YLT)
- And for all cedars of Lebanon, The high and the exalted ones, And for all oaks of Bashan,
Read in context
- 11ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
- 12ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.
- 13ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಏಲಾಮರಗಳ ಮೇಲೆಯೂ
- 14ಎಲ್ಲಾ ಎತ್ತರವಾದ ಪರ್ವತಗಳ ಮತ್ತು ಎತ್ತರವಾಗಿ ರುವ ಗುಡ್ಡಗಳ ಮೇಲೆಯೂ
- 15ಎಲ್ಲಾ ಎತ್ತರವಾದ ಗೋಪುರಗಳ ಭದ್ರವಾದ ಎಲ್ಲಾ ಗೋಡೆಗಳ ಮೇಲೆ ಯೂ
Cross references
- Isaiah 14:8 ಯೆಶಾಯ 14:8ಹೌದು, ತುರಾಯಿ ಮರಗಳೂ ಲೆಬನೋನಿನ ದೇವದಾರು ಮರಗಳೂ ನೀನು ಬಿದ್ದಂದಿನಿಂದ ಕಡಿಯುವವನು ಯಾವನೂ ತಮ್ಮ ಮೇಲೆ ಬರಲಿಲ್ಲವೆಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.
- Zechariah 11:1–2 ಜೆಕರ್ಯ 11:1–2ಓ ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ ನಿನ್ನ ಬಾಗಲು ಗಳನ್ನು ತೆರೆ. ತುರಾಯಿ ಗಿಡವೇ, ಗೋಳಿಡು; ದೇವದಾರು ಬಿದ್ದುಹೋಯಿತು, ಬಲವಾದವುಗಳು ಹಾಳಾದವು; ಬಾಷಾನಿನ ಓಕ್ ಮರಗಳೇ, ಗೋಳಾ ಡಿರಿ; ದ್ರಾಕ್ಷೆಯ ಅಡವಿಯು ಇಳಿದು ಬಂದಿದೆ.
- Isaiah 10:33–34 ಯೆಶಾಯ 10:33–34ಇಗೋ, ಕರ್ತನೂ ಸೈನ್ಯಗಳ ಕರ್ತನು ಭಯಂಕರ ವಾಗಿ ಕೊಂಬೆಯನ್ನು ಕತ್ತರಿಸುವನು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವವು; ಗರ್ವಿಷ್ಠರು ತಗ್ಗಿಸಲ್ಪಡು ವರು.ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು. ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.
- Ezekiel 31:3–12 ಯೆಹೆಜ್ಕೇಲನು 31:3–12ಇಗೋ, ಅಶ್ಶೂರ್ಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವ ದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಎತ್ತರವು ನೀಳವಾಗಿದೆ; ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು. ನೀರು ಅದನ್ನು ಬೆಳೆಸಿತು, ಅಗಾಧವು ತನ್ನ ನದಿಗಳನ್ನು ಅದರ ಸುತ್ತಲೂ ಹರಿಸಿ ತನ್ನ ಕಾಲುವೆಗಳನ್ನು ಬಯಲಿನ ಮರಗಳಿಗೆಲ್ಲಾ ಕಳುಹಿಸಿ, ಅದನ್ನು ಎತ್ತರವಾಗಿ ಬೆಳೆಯುವಂತೆ ಮಾಡಿತು. ಆದ ದರಿಂದ ಅದರ ಎತ್ತರವು ಬಯಲಿನ ಎಲ್ಲಾ ಮರ ಗಳಿಗಿಂತ ಎತ್ತರವಾಗಿತ್ತು; ಅದು ಹಬ್ಬಿದ್ದದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ ಅದರ ಕೊಂಬೆಗಳು ಅಧಿಕವಾದವು; ಅದರ ರೆಂಬೆಗಳು ಉದ್ದವಾದವು. ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು; ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು. ಹೀಗೆ ಅವನು ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ಕೊಂಬೆಗಳ ಉದ್ದದಲ್ಲಿ ಸುಂದರವಾಗಿದ್ದನು; ಯಾಕಂದರೆ ಅವನ ಬೇರು ಮಹಾ ನೀರಿನಿಂದಾಗಿತ್ತು. ದೇವರ ತೋಟದ ದೇವದಾರುಗಳು ಅವನನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅವನ ಕೊಂಬೆಗಳಿಗೆ ಸಮ ವಾಗಲಿಲ್ಲ; ಆಲದ ಮರಗಳು ಅವನ ರೆಂಬೆಗಳಷ್ಟೂ ಇಲ್ಲ; ಆ ದೇವರ ತೋಟದ ಯಾವುದೇ ಮರವು ಇವನ ಸೌಂದರ್ಯಕ್ಕೆ ಸಮವಾಗಲಿಲ್ಲ. ನಾನು ಅವನನ್ನು ಅವನ ಕೊಂಬೆಗಳ ಸಮೂಹದಿಂದ ಸೌಂದರ್ಯಪಡಿಸಿದೆನು; ಅದರಿಂದ ದೇವರ ತೋಟ ದಲ್ಲಿನ ಏದೆನಿನ ಮರಗಳೆಲ್ಲಾ ಅವನ ಮೇಲೆ ಹೊಟ್ಟೇ ಕಿಚ್ಚುಪಟ್ಟವು. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಯಾಕಂದರೆ ನೀನು ನೀಳದಲ್ಲಿ ಎತ್ತರವಾಗಿ ಅವನು ತನ್ನ ತಲೆಯನ್ನು ಒತ್ತಿಕೊಂಡಿರುವ ಕೊಂಬೆಗಳ ಕಡೆಗೆ ಚಾಚಿದ ಕಾರಣದಿಂದ ಅವನ ಹೃದಯವು ತನ್ನ ಎತ್ತರದಲ್ಲಿ ಹೆಚ್ಚಿಸಲ್ಪಟ್ಟಿದೆ. ಆದದರಿಂದ ನಾನು ಅವನನ್ನು ಅನ್ಯಜನಾಂಗಗಳಲ್ಲಿ ಶೂರನಾದ ಒಬ್ಬನ ಕೈಗೆ ಒಪ್ಪಿಸಿದ್ದೇನೆ; ಇವನು ನಿಶ್ಚಯವಾಗಿ ಅವನನ್ನು ದಂಡಿಸುತ್ತಾನೆ. ಅವನ ದುಷ್ಟತ್ವದ ನಿಮಿತ್ತ ನಾನು ಅವನನ್ನು ತಳ್ಳಿಹಾಕಿದ್ದೇನೆ. ಜನಾಂಗಗಳಲ್ಲಿ ಭಯಂಕರವಾದ ಅಪರಿಚಿತರು ಅವನನ್ನು ಕಡಿದುಹಾಕು ವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅವನ ಕೊಂಬೆಗಳು ಬೀಳುವವು, ದೇಶದ ಹಳ್ಳಗಳ ಲ್ಲೆಲ್ಲಾ ಅವನ ರೆಂಬೆಗಳು ಮುರಿದುಹೋಗುವವು; ಭೂಮಿಯ ಜನಗಳೆಲ್ಲಾ ಅವನ ನೆರಳಿನಿಂದ ದೂರ ಸರಿದು ಅವನನ್ನು ಬಿಟ್ಟುಬಿಡುವರು.
- Amos 2:5 ಆಮೋಸ 2:5ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು; ಅದು ಯೆರೂಸಲೇಮಿನ ಅರಮನೆ ಗಳನ್ನು ನುಂಗಿ ಬಿಡುವದು.
- Isaiah 37:24 ಯೆಶಾಯ 37:24ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ;