Isaiah · chapter 2 · verse 5
Isaiah 2:5 in Kannada
ಓ ಯಾಕೋಬಿನ ಮನೆತನದವರೇ, ಬನ್ನಿರಿ, ಕರ್ತನ ಬೆಳಕಿನಲ್ಲಿ ನಡೆಯೋಣ.
O yaakobina manetanadavare, banniri, kartana belakinalli nadeyona.
Isaiah 2:5 in English
- King James Version (KJV)
- O house of Jacob, come ye, and let us walk in the light of the LORD.
- World English Bible (WEB)
- House of Jacob, come, and let’s walk in the light of the LORD.
- American Standard Version (ASV)
- O house of Jacob, come ye, and let us walk in the light of Jehovah.
- Bible in Basic English (BBE)
- O family of Jacob, come, and let us go in the light of the Lord.
- Darby Translation (DBY)
- House of Jacob, come ye, and let us walk in the light of Jehovah.
- Webster's Bible (WBS)
- O house of Jacob, come ye, and let us walk in the light of the LORD.
- Young's Literal Translation (YLT)
- O house of Jacob, come, And we walk in the light of Jehovah.'
Read in context
- 3ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
- 4ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.
- 5ಓ ಯಾಕೋಬಿನ ಮನೆತನದವರೇ, ಬನ್ನಿರಿ, ಕರ್ತನ ಬೆಳಕಿನಲ್ಲಿ ನಡೆಯೋಣ.
- 6ಆದದರಿಂದ ಯಾಕೋಬಿನ ಮನೆತನದವರು ಮೂಡಣ ದೇಶ ಗಳಲ್ಲಿ ಮಗ್ನರಾಗಿ ಫಿಲಿಷ್ಟಿಯರಂತೆ ಕಣಿ ಹೇಳುವವ ರಾಗಿಯೂ ಅನ್ಯ ದೇಶಗಳವರ ಮಧ್ಯದಲ್ಲಿ ಮೆಚ್ಚಿಕೆ ಯುಳ್ಳವರಾಗಿಯೂ ಇರುವದರಿಂದ ಈ ನಿನ್ನ ಜನರನ್ನು ತಳ್ಳಿಬಿಟ್ಟಿದ್ದೀ.
- 7ಅವರ ದೇಶವು ಬೆಳ್ಳಿ ಬಂಗಾರಗ ಳಿಂದಲೂ ತುಂಬಿದೆ, ಅವರ ಬೊಕ್ಕಸಗಳಿಗೆ ಮಿತಿ ಯಿಲ್ಲ; ಅವರ ದೇಶವು ಕುದುರೆಗಳಿಂದಲೂ ತುಂಬಿದೆ, ಅವರ ರಥಗಳಿಗೆ ಮಿತಿಯೇ ಇಲ್ಲ.
Cross references
- Ephesians 5:8 ಎಫೆಸದವರಿಗೆ 5:8ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
- Isaiah 60:19–20 ಯೆಶಾಯ 60:19–20ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು. ನಿನ್ನ ಸೂರ್ಯನು ಅಸ್ತಮಿಸು ವದಿಲ್ಲ, ನಿನ್ನ ಚಂದ್ರನು ಕಾಣದೆ ಹೋಗುವದಿಲ್ಲ; ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು ನಿನ್ನ ದುಃಖದ ದಿನಗಳು ಮುಗಿದುಹೋಗಿರುವವು.
- Luke 1:79 ಲೂಕನು 1:79ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
- 1 John 1:7 1 ಯೋಹಾನನು 1:7ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
- John 12:35–36 ಯೋಹಾನನು 12:35–36ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು. ನೀವು ಬೆಳಕಿನ ಮಕ್ಕಳಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ ಅಂದನು. ಯೇಸು ಇವುಗಳನ್ನು ಹೇಳಿದ ಮೇಲೆ ಹೊರಟುಹೋಗಿ ಅವರಿಂದ ಅಡಗಿಕೊಂಡನು.
- 1 John 1:5 1 ಯೋಹಾನನು 1:5ನಾವು ಆತನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವದಂದರೆ--ದೇವರು ಬೆಳಕಾಗಿದ್ದಾನೆ; ಆತನಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ ಎಂಬದೇ.
- Revelation 21:23–24 ಪ್ರಕಟನೆ 21:23–24ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ. ರಕ್ಷಿಸಲ್ಪಟ್ಟ ಜನಾಂಗದವರು ಅದರ ಬೆಳಕಿನಲಿ ನಡೆಯುವರು; ಭೂರಾಜರು ತಮ್ಮ ವೈಭವವನ್ನೂ ಘನವನ್ನೂ ಅಲ್ಲಿಗೆ ತರುವರು.
- Isaiah 58:1 ಯೆಶಾಯ 58:1ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.
- Isaiah 50:10–11 ಯೆಶಾಯ 50:10–11ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ. ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
- Psalm 89:15 ಕೀರ್ತನೆಗಳು 89:15ಉತ್ಸಾಹ ಧ್ವನಿಯನ್ನು ತಿಳಿದ ಜನರು ಧನ್ಯರು; ಕರ್ತನೇ, ನಿನ್ನ ಮುಖದ ಬೆಳಕಿನಲ್ಲಿ ಅವರು ನಡೆದುಕೊಳ್ಳುವರು.
- Isaiah 2:3 ಯೆಶಾಯ 2:3ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
- 1 Thessalonians 5:5–6 1 ಥೆಸಲೊನೀಕದವರಿಗೆ 5:5–6ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ. ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ.