Isaiah · chapter 2 · verse 7
Isaiah 2:7 in Kannada
ಅವರ ದೇಶವು ಬೆಳ್ಳಿ ಬಂಗಾರಗ ಳಿಂದಲೂ ತುಂಬಿದೆ, ಅವರ ಬೊಕ್ಕಸಗಳಿಗೆ ಮಿತಿ ಯಿಲ್ಲ; ಅವರ ದೇಶವು ಕುದುರೆಗಳಿಂದಲೂ ತುಂಬಿದೆ, ಅವರ ರಥಗಳಿಗೆ ಮಿತಿಯೇ ಇಲ್ಲ.
Avara deshavu belli bangaaraga lindaloo tumbide, avara bokkasagalige miti yilla; avara deshavu kuduregalindaloo tumbide, avara rathagalige mitiye illa.
Isaiah 2:7 in English
- King James Version (KJV)
- Their land also is full of silver and gold, neither [is there any] end of their treasures; their land is also full of horses, neither [is there any] end of their chariots:
- World English Bible (WEB)
- Their land is full of silver and gold, neither is there any end of their treasures. Their land also is full of horses, neither is there any end of their chariots.
- American Standard Version (ASV)
- And their land is full of silver and gold, neither is there any end of their treasures; their land also is full of horses, neither is there any end of their chariots.
- Bible in Basic English (BBE)
- And their land is full of silver and gold, and there is no end to their stores; their land is full of horses, and there is no end to their carriages.
- Darby Translation (DBY)
- And their land is full of silver and gold, and there is no end of their treasures: their land also is full of horses, and there is no end of their chariots.
- Webster's Bible (WBS)
- Their land also is full of silver and gold, neither [is there any] end of their treasures; their land is also full of horses, neither [is there any] end of their chariots:
- Young's Literal Translation (YLT)
- And its land is full of silver and gold, And there is no end to its treasures, And its land is full of horses, And there is no end to its chariots,
Read in context
- 5ಓ ಯಾಕೋಬಿನ ಮನೆತನದವರೇ, ಬನ್ನಿರಿ, ಕರ್ತನ ಬೆಳಕಿನಲ್ಲಿ ನಡೆಯೋಣ.
- 6ಆದದರಿಂದ ಯಾಕೋಬಿನ ಮನೆತನದವರು ಮೂಡಣ ದೇಶ ಗಳಲ್ಲಿ ಮಗ್ನರಾಗಿ ಫಿಲಿಷ್ಟಿಯರಂತೆ ಕಣಿ ಹೇಳುವವ ರಾಗಿಯೂ ಅನ್ಯ ದೇಶಗಳವರ ಮಧ್ಯದಲ್ಲಿ ಮೆಚ್ಚಿಕೆ ಯುಳ್ಳವರಾಗಿಯೂ ಇರುವದರಿಂದ ಈ ನಿನ್ನ ಜನರನ್ನು ತಳ್ಳಿಬಿಟ್ಟಿದ್ದೀ.
- 7ಅವರ ದೇಶವು ಬೆಳ್ಳಿ ಬಂಗಾರಗ ಳಿಂದಲೂ ತುಂಬಿದೆ, ಅವರ ಬೊಕ್ಕಸಗಳಿಗೆ ಮಿತಿ ಯಿಲ್ಲ; ಅವರ ದೇಶವು ಕುದುರೆಗಳಿಂದಲೂ ತುಂಬಿದೆ, ಅವರ ರಥಗಳಿಗೆ ಮಿತಿಯೇ ಇಲ್ಲ.
- 8ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು.
- 9ನೀಚನು ಹಿಗ್ಗಿಕೊಳ್ಳುತ್ತಾನೆ, ಉತ್ತಮನು ತಗ್ಗಿಸಿಕೊಳ್ಳು ತ್ತಾನೆ; ಆದಕಾರಣ ಅವರನ್ನು ಮನ್ನಿಸಬೇಡ.
Cross references
- Isaiah 30:16 ಯೆಶಾಯ 30:16ಆದರೆ ನೀವು ಬೇಡವೇ ಬೇಡ, ನಾವು ಕುದುರೆಗಳ ಮೇಲೆ ಓಡುವೆವು ಅಂದುಕೊಂಡಿದ್ದರಿಂದ ನೀವು ಓಡೇ ಹೋಗುವಿರಿ, ಮತ್ತು--ನಾವು ವೇಗವಾಗಿ ಸವಾರಿ ಮಾಡುವೆವು ಅಂದುಕೊಂಡದ್ದರಿಂದ ಆ ವೇಗ ಗಳೇ ನಿಮ್ಮನ್ನು ಅಟ್ಟಿಬಿಡುವವು.
- Deuteronomy 17:16–17 ಧರ್ಮೋಪದೇಶಕಾಂಡ 17:16–17ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ. ಅವನ ಹೃದಯವು ತೊಲಗದ ಹಾಗೆ ಅವನು ತನಗೆ ಅನೇಕ ಪತ್ನಿಯರನ್ನು ಮಾಡಿಕೊಳ್ಳಬಾರದು; ಅವನು ತನಗೆ ಬೆಳ್ಳಿ ಬಂಗಾರವನ್ನು ಬಹಳವಾಗಿ ಹೆಚ್ಚಿಸಿಕೊಳ್ಳಬಾರದು.
- Psalm 20:7 ಕೀರ್ತನೆಗಳು 20:7ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ.
- Isaiah 31:1 ಯೆಶಾಯ 31:1ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.
- Micah 5:10 ಮೀಕ 5:10ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಆಗುವದೇನಂದರೆ--ನಾನು ನಿನ್ನ ಮಧ್ಯದೊಳಗಿಂದ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು.
- Jeremiah 5:27–28 ಯೆರೆಮೀಯ 5:27–28ಪಂಜರವು ಪಕ್ಷಿಗಳಿಂದ ತುಂಬಿರುವ ಪ್ರಕಾರ ಅವರ ಮನೆಗಳು ಮೋಸದಿಂದ ತುಂಬಿಯವೆ. ಆದದರಿಂದ ಅವರು ದೊಡ್ಡವರೂ ಐಶ್ವರ್ಯವಂತರೂ ಆಗಿದ್ದಾರೆ; ಕೊಬ್ಬಿದ್ದಾರೆ, ಪ್ರಕಾಶಿಸುತ್ತಾರೆ; ಹೌದು, ದುಷ್ಟರ ಕೃತ್ಯಗಳಿಗಿಂತ ವಿಾರಿ ಹೋಗಿದ್ದಾರೆ. ವ್ಯಾಜ್ಯ ವನ್ನು, ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವದಿಲ್ಲ; ಆದಾಗ್ಯೂ ಅವರು ಸಫಲವಾಗುತ್ತಾರೆ; ಬಡವರ ನ್ಯಾಯವನ್ನು ತೀರಿಸರು.
- 2 Chronicles 9:20–25 2 ಪೂರ್ವಕಾಲವೃತ್ತಾಂತ 9:20–25ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹೀಗೆಯೇ ಅಪ ರಂಜಿಯವುಗಳು. ಬೆಳ್ಳಿಯದು ಒಂದೂ ಇರಲಿಲ್ಲ. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ. ಯಾಕಂದರೆ ಹೂರಾಮನ ಸೇವಕರ ಸಂಗಡ ಅರಸನ ಹಡಗುಗಳು ತಾರ್ಷಿಷಿಗೆ ಹೋಗಿ ಮೂರು ವರುಷಕ್ಕೆ ಒಂದುಸಾರಿ ಬಂಗಾರವನ್ನೂ ಬೆಳ್ಳಿ ಯನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು. ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದ ಲ್ಲಿಯೂ ಭೂಮಿಯ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು. ದೇವರು ಸೊಲೊಮೋನನ ಹೃದಯದಲ್ಲಿ ಉಂಟುಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯ ಸಮಸ್ತ ಅರಸುಗಳು ಸೊಲೊಮೋನನ ಮುಖದರ್ಶನವನ್ನು ಹುಡುಕಿದರು. ಅವರವರು ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಿದ್ದರು. ಸೊಲೊಮೋನನಿಗೆ ನಾಲ್ಕು ಸಾವಿರ ಜೋಡು ಕುದುರೆಗಳೂ ರಥಗಳೂ ಇದ್ದವು. ಇದ ಲ್ಲದೆ ಹನ್ನೆರಡು ಸಾವಿರ ರಾಹುತರಿದ್ದರು. ಅವರನ್ನು ರಥಗಳ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ಇರಿಸಿದನು.
- 1 Kings 4:26 1 ಅರಸುಗಳು 4:26ಸೊಲೊಮೋನನಿಗೆ ತನ್ನ ರಥಗಳಿಗೋಸ್ಕರ ನಾಲ್ವತ್ತು ಸಾವಿರ ಜೋಡಿ ಕುದುರೆಗಳೂ ಹನ್ನೆರಡು ಸಾವಿರ ರಾಹುತರೂ ಇದ್ದರು.
- Revelation 18:3 ಪ್ರಕಟನೆ 18:3ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
- James 5:1–3 ಯಾಕೋಬನು 5:1–3ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ. ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ.
- 1 Kings 10:21–27 1 ಅರಸುಗಳು 10:21–27ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆ ಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹಾಗೆಯೇ ಬಂಗಾ ರದವುಗಳಾಗಿದ್ದವು. ಬೆಳ್ಳಿಯದು ಯಾವದೂ ಇರಲಿಲ್ಲ. ಯಾಕಂದರೆ ಸೊಲೊಮೋನನ ದಿವಸಗಳಲ್ಲಿ ಅದು ಏನೂ ಇಲ್ಲದ್ದಾಗಿ ಎಣಿಸಲ್ಪಟ್ಟಿತ್ತು. ಅರಸನಿಗೆ ತಾರ್ಷೀ ಷಿನ ಹಡಗುಗಳು ಹೀರಾಮನ ಹಡಗುಗಳ ಸಂಗಡ ಸಮುದ್ರದಲ್ಲಿ ಇದ್ದವು. ಮೂರು ವರುಷಕ್ಕೆ ಒಂದು ಸಾರಿ ತಾರ್ಷೀಷಿನ ಹಡಗುಗಳು ಬೆಳ್ಳಿಬಂಗಾರ ವನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು. ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಿಂದಲೂ ಜ್ಞಾನ ದಿಂದಲೂ ಭೂಲೋಕದ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು. ದೇವರು ಸೊಲೊಮೋನನ ಹೃದಯದಲ್ಲಿ ಉಂಟು ಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯಲ್ಲಿರುವ ಸಮಸ್ತರು ಅವನ ಬಳಿಗೆ ಬಂದರು. ಅವರವರು ಕಾಣಿಕೆಯಾಗಿ ಬೆಳ್ಳಿ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಾ ಇದ್ದರು. ಇದಲ್ಲದೆ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನಿಗೆ ಸಾವಿರದ ನಾನೂರು ರಥಗಳೂ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ತಾನು ಇರಿಸಿದ ಹನ್ನೆರಡು ಸಾವಿರ ಕುದುರೆಯ ರಾಹುತರೂ ಇದ್ದರು. ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳ ಹಾಗೆಯೂ ದೇವದಾರುಗಳನ್ನು ತಗ್ಗಿನಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿ ದನು.
- Hosea 14:3 ಹೋಶೇಯ 14:3ಅಶ್ಯೂರ್ಯವು ನಮ್ಮನ್ನು ರಕ್ಷಿಸುವದಿಲ್ಲ; ನಾವು ಕುದುರೆಗಳ ಮೇಲೆ ಸವಾರಿ ಮಾಡುವದಿಲ್ಲ; ಇಲ್ಲವೆ ನಮ್ಮ ಕೈಗಳಿಂದ ಆದ ಕೆಲಸಕ್ಕೆ--ನೀವು ನಮ್ಮ ದೇವರು ಗಳೇ ಎಂದು ನಾವು ಇನ್ನು ಮುಂದೆ ಹೇಳುವದೇ ಇಲ್ಲ; ನಿನ್ನಲ್ಲಿ ತಂದೆಗಳಿಲ್ಲದವರಿಗೆ ಕರುಣೆಯುಂಟು ಎಂದು ಆತನಿಗೆ ಹೇಳಿರಿ.