Isaiah · chapter 2 · verse 8
Isaiah 2:8 in Kannada
ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು.
Avara deshavu vigrahagalindaloo tumbide; tamma beralugalinda maadida tamma kaikelasavanne aaraadhisuvaru.
Isaiah 2:8 in English
- King James Version (KJV)
- Their land also is full of idols; they worship the work of their own hands, that which their own fingers have made:
- World English Bible (WEB)
- Their land also is full of idols. They worship the work of their own hands, that which their own fingers have made.
- American Standard Version (ASV)
- Their land also is full of idols; they worship the work of their own hands, that which their own fingers have made.
- Bible in Basic English (BBE)
- Their land is full of images; they give worship to the work of their hands, even to that which their fingers have made.
- Darby Translation (DBY)
- And their land is full of idols; they bow themselves down to the work of their own hands, to that which their fingers have made.
- Webster's Bible (WBS)
- Their land also is full of idols; they worship the work of their own hands, that which their own fingers have made:
- Young's Literal Translation (YLT)
- And its land is full of idols, To the work of its hands it boweth itself, To that which its fingers have made,
Read in context
- 6ಆದದರಿಂದ ಯಾಕೋಬಿನ ಮನೆತನದವರು ಮೂಡಣ ದೇಶ ಗಳಲ್ಲಿ ಮಗ್ನರಾಗಿ ಫಿಲಿಷ್ಟಿಯರಂತೆ ಕಣಿ ಹೇಳುವವ ರಾಗಿಯೂ ಅನ್ಯ ದೇಶಗಳವರ ಮಧ್ಯದಲ್ಲಿ ಮೆಚ್ಚಿಕೆ ಯುಳ್ಳವರಾಗಿಯೂ ಇರುವದರಿಂದ ಈ ನಿನ್ನ ಜನರನ್ನು ತಳ್ಳಿಬಿಟ್ಟಿದ್ದೀ.
- 7ಅವರ ದೇಶವು ಬೆಳ್ಳಿ ಬಂಗಾರಗ ಳಿಂದಲೂ ತುಂಬಿದೆ, ಅವರ ಬೊಕ್ಕಸಗಳಿಗೆ ಮಿತಿ ಯಿಲ್ಲ; ಅವರ ದೇಶವು ಕುದುರೆಗಳಿಂದಲೂ ತುಂಬಿದೆ, ಅವರ ರಥಗಳಿಗೆ ಮಿತಿಯೇ ಇಲ್ಲ.
- 8ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು.
- 9ನೀಚನು ಹಿಗ್ಗಿಕೊಳ್ಳುತ್ತಾನೆ, ಉತ್ತಮನು ತಗ್ಗಿಸಿಕೊಳ್ಳು ತ್ತಾನೆ; ಆದಕಾರಣ ಅವರನ್ನು ಮನ್ನಿಸಬೇಡ.
- 10ಕರ್ತನ ಭಯಕ್ಕೂ ಆತನ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ, ದೂಳಿನಲ್ಲಿ ನೀನು ಅಡಗಿಕೋ.
Cross references
- Psalm 115:4–8 ಕೀರ್ತನೆಗಳು 115:4–8ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ. ಅವುಗಳಿಗೆ ಬಾಯಿ ಉಂಟು; ಮಾತಾಡುವದಿಲ್ಲ; ಕಣ್ಣುಗಳುಂಟು; ನೋಡು ವದಿಲ್ಲ. ಕಿವಿಗಳುಂಟು; ಕೇಳುವದಿಲ್ಲ. ಮೂಗು ಉಂಟು; ಮೂಸುವದಿಲ್ಲ. ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ, ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
- Revelation 9:20 ಪ್ರಕಟನೆ 9:20ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು.ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.
- Isaiah 37:19 ಯೆಶಾಯ 37:19ಅವು ದೇವರುಗಳಲ್ಲ, ಮರ, ಕಲ್ಲು, ಮನುಷ್ಯರ ಕೈ ಕೆಲಸ ಗಳೇ ಆದದರಿಂದಲೇ ಅವರು ಅವುಗಳನ್ನು ಹಾಳು ಮಾಡಿದರು.
- Jeremiah 2:28 ಯೆರೆಮೀಯ 2:28ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟ ಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಯಾಕಂದರೆ ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.
- Jeremiah 11:13 ಯೆರೆಮೀಯ 11:13ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು; ಯೆರೂಸಲೇಮಿಗೆ ಎಷ್ಟು ಬೀದಿಗಳೋ ಅಷ್ಟು ಬಲಿಪೀಠಗಳನ್ನು ನಾಚಿಕೆಗೆ ಅಂದರೆ ಅಷ್ಟು ಬಲಿ ಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವದಕ್ಕೆ ಇಟ್ಟಿ ದ್ದೀರಿ.
- 2 Chronicles 27:2 2 ಪೂರ್ವಕಾಲವೃತ್ತಾಂತ 27:2ಇವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು. ಆದರೆ ಕರ್ತನ ಮನೆಯಲ್ಲಿ ಪ್ರವೇಶಿಸಲಿಲ್ಲ. ಜನರು ಇನ್ನೂ ಕೆಟ್ಟದ್ದನ್ನು ಮಾಡುತ್ತಾ ಇದ್ದರು.
- 2 Chronicles 33:3–7 2 ಪೂರ್ವಕಾಲವೃತ್ತಾಂತ 33:3–7ಏನಂದರೆ, ಅವನು ತನ್ನ ತಂದೆಯಾದ ಹಿಜ್ಕೀಯನು ಕೆಡವಿಹಾಕಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಎಬ್ಬಿಸಿ ತೋಪುಗಳನ್ನು ಹಾಕಿ ಆಕಾಶದ ಸೈನ್ಯ ಕ್ಕೆಲ್ಲಾ ಅಡ್ಡಬಿದ್ದು ಅವುಗಳನ್ನು ಸೇವಿಸಿದನು. ಇದ ಲ್ಲದೆ--ಯೆರೂಸಲೇಮಿನಲ್ಲಿ ನನ್ನ ಹೆಸರು ಯುಗ ಯುಗಕ್ಕೂ ಇರುವದೆಂದು ಕರ್ತನು ಹೇಳಿದ ಕರ್ತನ ಆಲಯದಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು. ಕರ್ತನ ಆಲಯದ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು. ಬೆನ್ ಹಿನ್ನೋಮ್ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು. ದೇವರು--ಈ ಆಲಯದಲ್ಲಿಯೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಯೆರೂ ಸಲೇಮಿನಲ್ಲಿಯೂ ನಾನು ನನ್ನ ಹೆಸರನ್ನು ಯುಗ ಯುಗಕ್ಕೂ ಇರಿಸುವೆನೆಂದೂ ಮೋಶೆಯಿಂದ
- Isaiah 57:5 ಯೆಶಾಯ 57:5ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿ ಕೊಂಡು ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ ಸುಳ್ಳಿನ ಸಂತತಿಯೂ ಅಲ್ಲವೋ?
- Isaiah 17:8 ಯೆಶಾಯ 17:8ಅವನು ತನ್ನ ಕೈಕೆಲಸ ವಾದ ಬಲಿಪೀಠಗಳನ್ನು ದೃಷ್ಟಿಸನು ತನ್ನ ಬೆರಳುಗಳು ಮಾಡಿದ್ದನೂಅಥವಾ ತೋಪುಗಳನ್ನೂ ವಿಗ್ರಹ ಗಳನ್ನೂ ನೋಡನು.
- Hosea 13:2 ಹೋಶೇಯ 13:2ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ; ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅವೆಲ್ಲವೂ ಶಿಲ್ಪಿಗಳ ಕೈಕೆಲಸವೇ, ಬಲಿ ಅರ್ಪಿಸುವ ಮನುಷ್ಯರು ಹಸುಗಳಿಗೆ ಮುದ್ದಿಡಲೆಂದು ಅವರು ಅವರ ವಿಷಯ ವಾಗಿ ಹೇಳಿದರು.
- Isaiah 10:10–11 ಯೆಶಾಯ 10:10–11ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ?
- Isaiah 44:15–20 ಯೆಶಾಯ 44:15–20ಆಗ ಅದು ಮನುಷ್ಯರು ಉರಿಸು ವದಕ್ಕಾಗುವದು; ಅದರಿಂದ ಚಳಿಕಾಯಿಸಿಕೊಳ್ಳು ವನು, ಹೌದು, ಅದನ್ನು ಬೆಂಕಿ ಹಚ್ಚಿ ರೊಟ್ಟಿ ಸುಡು ವನು; ಹೌದು, ಅವನು ಒಂದು ದೇವರನ್ನು ಮಾಡಿ ಅದಕ್ಕೆ ನಮಸ್ಕರಿಸುವನು; ಅದರಲ್ಲಿ ಒಂದು ಕೆತ್ತಿದ ವಿಗ್ರಹವನ್ನು ಮಾಡಿ, ಅದಕ್ಕೆ ಅಡ್ಡಬಿಳುವನು. ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು; ಅದರ ಇನ್ನೊಂದು ಭಾಗದಲ್ಲಿ ಮಾಂಸವನ್ನು ಉಣ್ಣುವನು; ಮಾಂಸವನ್ನು ಸುಟ್ಟು ತೃಪ್ತಿಹೊಂದುವನು; ಹೌದು, ಅವನು ಚಳಿಕಾಯಿಸಿ ಕೊಳ್ಳುತ್ತಾ--ಆಹಾ! ಬೆಂಕಿ ಯನ್ನು ಕಂಡೆ, ಬೆಚ್ಚಗಾಯಿತು ಅಂದುಕೊಳ್ಳುವನು; ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು. ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ. ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು. ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.