Isaiah · chapter 21 · verse 12
Isaiah 21:12 in Kannada
ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ, ವಿಚಾರಿಸಬೇಕಾದರೆ ವಿಚಾರಿಸಿರಿ; ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು.
Udayavu baruttade, raatriyoo baruttade, vichaarisabekaadare vichaarisiri; tirigi banniri endu kaavalugaaranu helidanu.
Isaiah 21:12 in English
- King James Version (KJV)
- The watchman said, The morning cometh, and also the night: if ye will enquire, enquire ye: return, come.
- World English Bible (WEB)
- The watchman said, “The morning comes, and also the night. If you will inquire, inquire. Come back again.”
- American Standard Version (ASV)
- The watchman said, The morning cometh, and also the night: if ye will inquire, inquire ye: turn ye, come.
- Bible in Basic English (BBE)
- The watchman says, The morning has come, but night is still to come: if you have questions to put, put them, and come back again.
- Darby Translation (DBY)
- The watchman said, The morning cometh, and also the night: if ye will inquire, inquire; return, come.
- Webster's Bible (WBS)
- The watchman said, The morning cometh, and also the night: if ye will inquire, inquire ye: return, come.
- Young's Literal Translation (YLT)
- The watchman hath said, 'Come hath morning, and also night, If ye inquire, inquire ye, turn back, come.'
Read in context
- 10ನಾನು ತುಳಿಯುವ ತೆನೆಯೇ, ನನ್ನ ಕಣದ ಧಾನ್ಯವೇ, ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನಿಂದ ನಾನು ಕೇಳಿದ್ದನ್ನು ನಿಮಗೆ ತಿಳಿಸಿದ್ದೇನೆ.
- 11ದೂಮದ ವಿಷಯವಾದ ದೈವೋಕ್ತಿ, ಆತನು ಸೇಯಾರಿನಿಂದ ನನಗೆ ಕರೆದನು. ಹೇಗಂದರೆ, ಕಾವ ಲುಗಾರನೇ, ಈಗ ರಾತ್ರಿ ಎಷ್ಟು ಕಳೆಯಿತು? ಕಾವಲು ಗಾರನೇ ರಾತ್ರಿ ಎಷ್ಟು ಕಳೆಯಿತು?
- 12ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ, ವಿಚಾರಿಸಬೇಕಾದರೆ ವಿಚಾರಿಸಿರಿ; ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು.
- 13ಅರಬಿಯದ ವಿಷಯವಾದ ದೈವೋಕ್ತಿ. ಓ ದೇದಾನ್ಯರ ಪ್ರಯಾಣಿಕರೇ, ಅರಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ.
- 14ತೇಮಾ ದೇಶದ ನಿವಾಸಿಗಳೇ, ಬಾಯಾರಿದವರಿಗೆ ನೀರನ್ನು ತರುತ್ತಾರೆ. ಓಡಿ ಹೋಗುವವರನ್ನು ತಮ್ಮ ರೊಟ್ಟಿಯಿಂದ ನಿವಾರಿಸು ತ್ತಾರೆ.
Cross references
- Acts 17:30–32 ಅಪೊಸ್ತಲರ ಕೃತ್ಯಗಳು 17:30–32ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ. ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು. ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.
- Acts 2:37–38 ಅಪೊಸ್ತಲರ ಕೃತ್ಯಗಳು 2:37–38ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು. ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
- Ezekiel 7:10 ಯೆಹೆಜ್ಕೇಲನು 7:10ಇಗೋ, ಆ ದಿನವು ಬಂತು, ಮುಂಜಾನೆ ಹೊರಟುಹೋಯಿತು. ಕೋಲು ಚಿಗು ರಿತು, ಗರ್ವ ಅರಳಿತು.
- Isaiah 55:7 ಯೆಶಾಯ 55:7ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Isaiah 17:14 ಯೆಶಾಯ 17:14ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
- Ezekiel 14:1–6 ಯೆಹೆಜ್ಕೇಲನು 14:1–6ಆಮೇಲೆ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನ ಮುಂದೆ ಕುಳಿತುಕೊಂಡರು. ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- ಮನುಷ್ಯಪುತ್ರನೇ, ಈ ಮನು ಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ ತಮ್ಮ ಅಕ್ರಮವಾದ ಎಡೆತಡೆಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವರೆಲ್ಲ ರನ್ನೂ ನಾನು ವಿಚಾರಿಸಬೇಕೇ? ಆದದರಿಂದ ನೀನು ಅವರ ಸಂಗಡ ಮಾತನಾಡಿ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ಹೃದಯಗಳಲ್ಲಿ ನೆಲೆಗೊಳಿಸಿ ಅಕ್ರಮದ ಎಡೆತಡೆಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾ ದಿಯ ಬಳಿಗೆ ಬರುವ ಮನುಷ್ಯನು ಯಾವನೋ ಅವನಿಗೆ ಕರ್ತನಾದ ನಾನು ಅವರ ವಿಗ್ರಹಗಳ ಸಮೂ ಹಕ್ಕೆ ತಕ್ಕ ಹಾಗೆ ಉತ್ತರ ಕೊಡುತ್ತೇನೆ. ಹೀಗೆ ನಾನು ಇಸ್ರಾಯೇಲಿನ ಮನೆತನ ದವರನ್ನು ಅವರ ಸ್ವಂತ ಹೃದಯದಿಂದಲೇ ಸಿಕ್ಕಿಸಿ ಹಿಡಿಯುತ್ತೇನೆ. ಯಾಕಂದರೆ ಅವರೆಲ್ಲರೂ ತಮ್ಮ ವಿಗ್ರಹಗಳ ಮುಖಾಂತರ ನನಗೆ ಅನ್ಯರಾದರು. ಇಸ್ರಾಯೇಲಿನ ಮನೆತನದವರಿಗೆ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮಾನ ಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾ ಗಿಯೇ ತಿರುಗಿ ಕೊಳ್ಳಿರಿ; ನಿಮ್ಮ ಅಸಹ್ಯವಾದವುಗಳ ನ್ನೆಲ್ಲಾ ಬಿಟ್ಟು ನಿಮ್ಮ ಮುಖಗಳನ್ನು ತಿರುಗಿಸಿರಿ.
- Ezekiel 7:5–7 ಯೆಹೆಜ್ಕೇಲನು 7:5–7ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಕೇಡು ಒಂದೇ ಒಂದು ಕೇಡು, ಇಗೋ, ಬಂತು. ಅಂತ್ಯವು ಬಂತು. ಅಂತ್ಯವು ಬಂದು ಅದು ನಿನಗೋಸ್ಕರ ಕಾಯುತ್ತಾ ಇದೆ. ಇಗೋ, ಅದು ಬಂತು. ಓ ದೇಶದಲ್ಲಿ ವಾಸಿಸುವವನೇ, ನಿನಗಾಗಿ ಮುಂಜಾನೆ ಬಂತು, ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು ಮತ್ತು ಪರ್ವತಗಳ ಆರ್ಭಟದ ಧ್ವನಿ ಇಲ್ಲ.
- Ezekiel 7:12 ಯೆಹೆಜ್ಕೇಲನು 7:12ಕಾಲವು ಬಂತು, ದಿನವು ಸವಿಾಪ ವಾಯಿತು; ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲ ದಿರಲಿ, ಮಾರುವವನು ದುಃಖಿಸದಿರಲಿ; ಯಾಕಂದರೆ ಎಲ್ಲಾ ಜನಸಮೂಹದ ಮೇಲೆ ರೌದ್ರವಿದೆ.
- Acts 17:19–20 ಅಪೊಸ್ತಲರ ಕೃತ್ಯಗಳು 17:19–20ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡುಹೋಗಿ--ನೀನು ಹೇಳುವ ಈ ನೂತನವಾದ ಬೋಧನೆಯನ್ನು ನಾವು ತಿಳಿಯಬಹುದೋ? ಅಪೂರ್ವವಾದ ಕೆಲವು ಸಂಗತಿಗಳನ್ನು ನಮಗೆ ಶ್ರುತಪಡಿಸುತ್ತೀಯಲ್ಲಾ. ಆದಕಾರಣ ಅದರ ಅರ್ಥ ವನ್ನು ತಿಳಿಯುವದಕ್ಕೆ ನಮಗೆ ಅಪೇಕ್ಷೆಯದೆ ಅಂದರು.
- Jeremiah 42:19–22 ಯೆರೆಮೀಯ 42:19–22ಯೆಹೂದದ ಶೇಷವೇ, ಕರ್ತನು ನಿಮ್ಮ ವಿಷಯ ಹೇಳಿದ್ದೇನಂದರೆ--ಐಗುಪ್ತಕ್ಕೆ ಹೋಗ ಬೇಡಿರಿ; ನಾನು ಈ ಹೊತ್ತು ನಿಮಗೆ ಸಾಕ್ಷಿ ಕೊಟ್ಟಿದ್ದೇ ನೆಂದು ಚೆನ್ನಾಗಿ ತಿಳುಕೊಳ್ಳಿರಿ. ನಿಶ್ಚಯವಾಗಿ ಸ್ವಂತ ಪ್ರಾಣಗಳಿಗೆ ವಿರೋಧವಾಗಿ ಮೋಸಮಾಡಿದ್ದೀರಿ; ನಮಗೋಸ್ಕರ ನಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡೆಂದೂ ನಮ್ಮ ದೇವರಾದ ಕರ್ತನು ಏನೇನು ಹೇಳುವನೋ ಅದನ್ನು ನಮಗೆ ತಿಳಿಸು, ಆಗ ನಾವು ಮಾಡುವೆವೆಂದೂ ಹೇಳಿ, ನನ್ನನ್ನು ನಿಮ್ಮ ದೇವರಾದ ಕರ್ತನ ಬಳಿಗೆ ಕಳುಹಿಸಿದಿರಿ. ನಾನು ಈ ಹೊತ್ತು ಅದನ್ನು ನಿಮಗೆ ತಿಳಿಸಿದ್ದೇನೆ; ಆದರೆ ನೀವು ನಿಮ್ಮ ದೇವರಾದ ಕರ್ತನ ಶಬ್ದವನ್ನಾದರೂ ಆತನು ಯಾವದರ ವಿಷಯ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೋ ಅದರಲ್ಲಿ ಯಾವದನ್ನಾದರೂ ಕೇಳ ಲಿಲ್ಲವಾದರೆನೀವು ವಾಸಿಸುವದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರೆಂದು ಈಗ ನೀವು ನಿಶ್ಚಯವಾಗಿ ತಿಳುಕೊಳ್ಳಿರಿ ಅಂದನು. ನೀವು ವಾಸಿಸುವದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರೆಂದು ಈಗ ನೀವು ನಿಶ್ಚಯವಾಗಿ ತಿಳುಕೊಳ್ಳಿರಿ ಅಂದನು.
- Ezekiel 18:30–32 ಯೆಹೆಜ್ಕೇಲನು 18:30–32ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ. ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ. ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
- Jeremiah 50:27 ಯೆರೆಮೀಯ 50:27ಅದರ ಹೋರಿಗಳನ್ನೆಲ್ಲಾ ಕೊಂದುಹಾಕಿರಿ; ಅವು ಕೊಲೆಗೆ ಇಳಿಯಲಿ; ಅವರಿಗೆ ಅಯ್ಯೋ! ಅವರ ದಿನವೂ ಅವರ ವಿಚಾರಣೆಯ ಕಾಲವೂ ಬಂತು.