Isaiah · chapter 22 · verse 12
Isaiah 22:12 in Kannada
ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.
Aa divasadalli sainyagala devaraada kartanu --alabekendu, duhkhisabekendu, talebolisi kollabekendu, goneetattannu suttikollabe kendu aatanu karedanu.
Isaiah 22:12 in English
- King James Version (KJV)
- And in that day did the Lord GOD of hosts call to weeping, and to mourning, and to baldness, and to girding with sackcloth:
- World English Bible (WEB)
- In that day, the Lord, GOD of Armies, called to weeping, to mourning, to baldness, and to dressing in sackcloth;
- American Standard Version (ASV)
- And in that day did the Lord, Jehovah of hosts, call to weeping, and to mourning, and to baldness, and to girding with sackcloth:
- Bible in Basic English (BBE)
- And in that day the Lord, the Lord of armies, was looking for weeping, and cries of sorrow, cutting off of the hair, and putting on the clothing of grief:
- Darby Translation (DBY)
- And in that day did the Lord Jehovah of hosts call to weeping, and to mourning, and to baldness, and to girding with sackcloth;
- Webster's Bible (WBS)
- And in that day did the Lord GOD of hosts call to weeping, and to mourning, and to baldness, and to girding with sackcloth:
- Young's Literal Translation (YLT)
- And call doth the Lord, Jehovah of Hosts, In that day, to weeping and to lamentation, And to baldness and to girding on of sackcloth,
Read in context
- 10ಯೆರೂಸಲೇಮಿನ ಮನೆಗ ಳನ್ನು ಲೆಕ್ಕ ಮಾಡಿ ಪೌಳಿಗೋಡೆಯನ್ನು ಭದ್ರಪಡಿ ಸುವದಕ್ಕೆ ನೀವು ಮನೆಗಳನ್ನು ಒಡೆದುಹಾಕುತ್ತೀರಿ.
- 11ಎರಡು ಗೋಡೆಗಳ ನಡುವೆ ಹಳೇ ಕೆರೆಯ ನೀರಿ ಗೋಸ್ಕರ ತೊಟ್ಟಿಯನ್ನು ಮಾಡಿದ್ದೀರಿ, ಆದರೆ ಅದನ್ನು ಮಾಡಿದವನನ್ನು ನೀವು ದೃಷ್ಟಿಸಲಿಲ್ಲ. ಇಲ್ಲವೆ ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಲ್ಲ.
- 12ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.
- 13ಆದರೆ ಇಗೋ, ಉತ್ಸಾ ಹವು ಸಂತೋಷವು, ದನಕೊಯ್ಯುವದು ಕುರಿಕಡಿಯು ವದು ಮಾಂಸವನ್ನು ತಿನ್ನುವದು, ದ್ರಾಕ್ಷಾರಸ ಕುಡಿ ಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯು ವದೇ (ಇವೆ, ನಿಮ್ಮ ಕಾರ್ಯ).
- 14ಆದದರಿಂದ ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದೇನಂದರೆ ನಿಶ್ಚಯವಾಗಿ ಈ ದುಷ್ಕೃತ್ಯಗಳು ನೀವು ಸಾಯುವ ತನಕ ಮನ್ನಿಸಲ್ಪಡುವದೇ ಇಲ್ಲ.
Cross references
- Joel 1:13 ಯೋವೇಲ 1:13ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.
- Micah 1:16 ಮೀಕ 1:16ನಿನ್ನ ಮುದ್ದು ಮಕ್ಕಳಿಗೋಸ್ಕರ ತಲೆಬೋಳಿಸಿಕೊಂಡು ಕ್ಷೌರ ಮಾಡಿಸಿಕೊ; ಹದ್ದಿನಂತೆ ನಿನ್ನ ಬೋಳುತನವನ್ನು ಅಗಲ ಮಾಡಿಕೊ; ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗಿದ್ದಾರೆ.
- Joel 2:17 ಯೋವೇಲ 2:17ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು?
- James 5:1 ಯಾಕೋಬನು 5:1ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ
- Ecclesiastes 3:4 ಪ್ರಸಂಗಿ 3:4ಅಳುವದಕ್ಕೆ ಒಂದು ಸಮಯ, ನಗುವದಕ್ಕೆ ಒಂದು ಸಮಯ; ಗೋಳಾಡುವದಕ್ಕೆ ಒಂದು ಸಮಯ, ಕುಣಿದಾಡುವದಕ್ಕೆ ಒಂದು ಸಮಯ;
- Amos 8:10 ಆಮೋಸ 8:10ನಿಮ್ಮ ಹಬ್ಬಗಳನ್ನು ದುಃಖಕ್ಕೂ ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು; ಎಲ್ಲರೂ ಸೊಂಟಗಳಿಗೆ ಗೋಣೀತಟ್ಟನ್ನು ಕಟ್ಟಿಕೊಂಡು ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು; ಅದನ್ನು ಒಬ್ಬನೇ ಮಗನಿಗಾಗಿ ದುಃಖಿಸುವಂತೆಯೂ ಅದರ ಅಂತ್ಯವು ಕಹಿಯಾದ ದಿನವಾಗುವಂತೆಯೂ ಮಾಡುವೆನು.
- Nehemiah 9:9 ನೆಹೆಮೀಯ 9:9ಇದಲ್ಲದೆ ಐಗುಪ್ತದಲ್ಲಿ ನಮ್ಮ ಪಿತೃಗಳ ದೀನ ಸ್ಥಿತಿಯನ್ನು ನೋಡಿದಿ; ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿ.
- Jonah 3:6 ಯೋನ 3:6ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು.
- Job 1:20 ಯೋಬನು 1:20ಆಗ ಯೋಬನು ಎದ್ದು ತನ್ನ ನಿಲುವಂಗಿಯನ್ನು ಹರಿದು ತನ್ನ ತಲೆಬೋಳಿಸಿಕೊಂಡು ನೆಲಕ್ಕೆ ಬಿದ್ದು ಆರಾಧಿಸಿ
- Ezra 9:3 ಎಜ್ರನು 9:3ನಾನು ಈ ಕಾರ್ಯವನ್ನು ಕೇಳಿದಾಗ ನನ್ನ ವಸ್ತ್ರವನ್ನೂ ನನ್ನ ನಿಲುವಂಗಿಯನ್ನೂ ಹರಿದು ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತು ಭ್ರಮೆಗೊಂಡು ಕುಳಿತಿದ್ದೆನು.
- 2 Chronicles 35:25 2 ಪೂರ್ವಕಾಲವೃತ್ತಾಂತ 35:25ಇದಲ್ಲದೆ ಯೆರೆವಿಾಯನು ಯೋಷೀಯನಿಗೋಸ್ಕರ ಗೋಳಾಡಿದನು. ಹಾಡುಗಾರರೂ ಹಾಡುಗಾರ್ತಿ ಯರೂ ಯೋಷೀಯನಿಗೋಸ್ಕರ ಇದುವರೆಗೂ ತಮ್ಮ ಗೋಳಾಟಗಳಲ್ಲಿ ಹೇಳುತ್ತಾರೆ. ಇದು ಇಸ್ರಾಯೇಲಿ ನಲ್ಲಿ ನೇಮಕವಾಯಿತು. ಇಗೋ, ಅವು ಪ್ರಲಾಪ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- Nehemiah 8:9–12 ನೆಹೆಮೀಯ 8:9–12ಇದಲ್ಲದೆ ತಿರ್ಷತನಾದ ನೆಹೆವಿಾಯನೂ ಶಾಸ್ತ್ರಿ ಯೂ, ಯಾಜಕನೂ ಆದ ಎಜ್ರನೂ ಜನರನ್ನು ಬೋಧಿಸಿದ ಲೇವಿಯರೂ ಜನರೆಲ್ಲರಿಗೆ ಹೇಳಿದ್ದೇ ನಂದರೆ--ಈ ದಿನವು ನಿಮ್ಮ ದೇವರಾಗಿರುವ ಕರ್ತನಿಗೆ ಪರಿಶುದ್ಧವಾದದರಿಂದ ದುಃಖಿಸದೆ, ಅಳದೆ ಇರ್ರಿ. ಯಾಕಂದರೆ ಜನರೆಲ್ಲರು ನ್ಯಾಯಪ್ರಮಾಣದ ಮಾತು ಗಳನ್ನು ಕೇಳಿದಾಗ ಅತ್ತರು. ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ. ಹೀಗೆಯೇ ಲೇವಿಯರು--ಈ ದಿನವು ಪರಿಶುದ್ಧವಾದದರಿಂದ ನೀವು ಮೌನವಾಗಿದ್ದು ವ್ಯಥೆಪಡಬೇಡಿರೆಂದು ಹೇಳಿ ಜನರನ್ನು ಸುಮ್ಮನಿರಿಸಿದರು. ಆಗ ಜನರೆಲ್ಲರೂ ಅವರಿಗೆ ತಿಳಿಸಿದ ಮಾತುಗಳನ್ನು ಗ್ರಹಿಸಿದ್ದರಿಂದ ಅವರು ತಿನ್ನಲೂ ಕುಡಿಯಲೂ ಭಾಗಗಳನ್ನು ಕಳುಹಿ ಸಲೂ ಸಂತೋಷಿಸಲೂ ಹೊರಟು ಹೋದರು.