Isaiah · chapter 22 · verse 14
Isaiah 22:14 in Kannada
ಆದದರಿಂದ ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದೇನಂದರೆ ನಿಶ್ಚಯವಾಗಿ ಈ ದುಷ್ಕೃತ್ಯಗಳು ನೀವು ಸಾಯುವ ತನಕ ಮನ್ನಿಸಲ್ಪಡುವದೇ ಇಲ್ಲ.
Aadadarinda sainya gala kartanu nanna kivigalalli prakata maadiddenandare nishchayavaagi ee dushkrutyagalu neevu saayuva tanaka mannisalpaduvade illa.
Isaiah 22:14 in English
- King James Version (KJV)
- And it was revealed in mine ears by the LORD of hosts, Surely this iniquity shall not be purged from you till ye die, saith the Lord GOD of hosts.
- World English Bible (WEB)
- The LORD of Armies revealed himself in my ears, “Surely this iniquity will not be forgiven you until you die,” says the Lord, GOD of Armies.
- American Standard Version (ASV)
- And Jehovah of hosts revealed himself in mine ears, Surely this iniquity shall not be forgiven you till ye die, saith the Lord, Jehovah of hosts.
- Bible in Basic English (BBE)
- And the Lord of armies said to me secretly, Truly, this sin will not be taken from you till your death, says the Lord, the Lord of armies.
- Darby Translation (DBY)
- And it was revealed in mine ears by Jehovah of hosts: Assuredly this iniquity shall not be purged from you till ye die, saith the Lord, Jehovah of hosts.
- Webster's Bible (WBS)
- And it was revealed in my ears by the LORD of hosts, Surely this iniquity shall not be purged from you till ye die, saith the Lord GOD of hosts.
- Young's Literal Translation (YLT)
- And revealed it hath been in mine ears, [By] Jehovah of Hosts: Not pardoned is this iniquity to you, Till ye die, said the Lord, Jehovah of Hosts.
Read in context
- 12ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.
- 13ಆದರೆ ಇಗೋ, ಉತ್ಸಾ ಹವು ಸಂತೋಷವು, ದನಕೊಯ್ಯುವದು ಕುರಿಕಡಿಯು ವದು ಮಾಂಸವನ್ನು ತಿನ್ನುವದು, ದ್ರಾಕ್ಷಾರಸ ಕುಡಿ ಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯು ವದೇ (ಇವೆ, ನಿಮ್ಮ ಕಾರ್ಯ).
- 14ಆದದರಿಂದ ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದೇನಂದರೆ ನಿಶ್ಚಯವಾಗಿ ಈ ದುಷ್ಕೃತ್ಯಗಳು ನೀವು ಸಾಯುವ ತನಕ ಮನ್ನಿಸಲ್ಪಡುವದೇ ಇಲ್ಲ.
- 15ಸೈನ್ಯಗಳ ಕರ್ತನಾದ ದೇವರು ಹೀಗೆ ನುಡಿದಿ ದ್ದಾನೆ--ಹೋಗು, ಅರಮನೆಯ ಉಗ್ರಾಣದವನಾದ ಶೆಬ್ನನೆಂಬ ಈ ಖಜಾಂಚಿ ಬಳಿಗೆ ಹೋಗಿ ಹೀಗೆ ಹೇಳು--
- 16ನಿನಗೆ ಇಲ್ಲಿ ಏನು ಕೆಲಸ? ಇಲ್ಲಿ ನಿನಗೆ ಯಾರಿದ್ದಾರೆ? ನೀನು ಉನ್ನತದಲ್ಲಿ ತನಗೆ ಸಮಾಧಿ ಯನ್ನು ತೋಡಿಸಿ, ಬಂಡೆಯಲ್ಲಿ ತನಗೆ ನಿವಾಸವನ್ನು ಕೆತ್ತಿಸುವವನ ಹಾಗೆ, ನಿನಗೆ ಇಲ್ಲಿ ಸಮಾಧಿಯನ್ನು ತೋಡಿಸಿದ್ದಿ ಅಲ್ಲವೆ?
Cross references
- Ezekiel 24:13 ಯೆಹೆಜ್ಕೇಲನು 24:13ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
- Isaiah 5:9 ಯೆಶಾಯ 5:9ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಹೇಳುವದೇನಂದರೆ --ನಿಜವಾಗಿಯೂ ಅನೇಕ ದೊಡ್ಡದಾದವುಗಳೂ ಸೊಗಸಾದ ಅನೇಕ ಮನೆಗಳೂ ವಾಸಿಸುವವನು ಇಲ್ಲದೆ ಹಾಳುಬೀಳುವವು.
- 1 Samuel 3:14 1 ಸಮುವೇಲನು 3:14ಆದದರಿಂದ ಏಲಿಯ ಮನೆಯ ದುಷ್ಟತನವು ಎಂದೆಂದಿಗೂ ಬಲಿ ಯಿಂದಲಾದರೂ ಅರ್ಪಣೆಯಿಂದಲಾದರೂ ಶುದ್ಧ ಮಾಡಲ್ಪಡುವದಿಲ್ಲ ಎಂದು ನಾನು ಏಲಿಯ ಮನೆ ಯನ್ನು ಕುರಿತು ಆಣೆ ಇಟ್ಟೆನು ಅಂದನು.
- Isaiah 13:11 ಯೆಶಾಯ 13:11ಅವರ ಕೆಟ್ಟವುಗಳಿಗೋಸ್ಕರವೂ ದುಷ್ಟರ ಅಪ ರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸು ವೆನು; ಗರ್ವಿಷ್ಟರ ಅಹಂಕಾರವನ್ನು ನಿಲ್ಲಿಸಿಬಿಡುವೆನು, ಭಯಂಕರವಾದ ಹೆಮ್ಮೆಯನ್ನು ತಗ್ಗಿಸುವೆನು.
- Revelation 22:11–12 ಪ್ರಕಟನೆ 22:11–12ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ; ಮೈಲಿಗೆಯಾದವನು ಇನ್ನೂ ತನ್ನನ್ನು ಮೈಲಿಗೆ ಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿವಂತ ನಾಗಲಿ; ಪವಿತ್ರನು ತಾನು ಇನ್ನೂ ಪವಿತ್ರನಾಗಿರಲಿ; ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.
- Isaiah 26:21 ಯೆಶಾಯ 26:21ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
- Numbers 15:25–31 ಅರಣ್ಯಕಾಂಡ 15:25–31ಯಾಜಕನು ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತಮಾಡಬೇಕು; ಅದು ತಿಳಿಯದೆ ಮಾಡಲಾಗಿತ್ತು. ಆದಾಗ್ಯೂ ಅವರು ಕರ್ತ ನಿಗೆ ದಹನ ಬಲಿಯಾಗಿ ತಮ್ಮ ಅರ್ಪಣೆಯನ್ನೂ ತಮ್ಮ ತಪ್ಪಿಗೋಸ್ಕರ ಪಾಪ ಬಲಿಯನ್ನೂ ಕರ್ತನ ಮುಂದೆ ತರಬೇಕು. ಆಗ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಅವರೊಳಗೆ ಪರಕೀಯನಾಗಿ ಪ್ರವಾಸಿ ಯಾಗಿರುವವನಿಗೂ ಅದು ಪರಿಹಾರವಾಗುವದು. ಯಾಕಂದರೆ ಎಲ್ಲರೂ ತಿಳುವಳಿಕೆ ಇಲ್ಲದವರಾಗಿದ್ದರು. ಆದರೆ ಯಾವನಾದರೂ ತಿಳಿಯದೆ ಪಾಪ ಮಾಡಿದರೆ ಪಾಪದ ಬಲಿಗಾಗಿ ಒಂದು ವರುಷದ ಮೇಕೆಯನ್ನು ತರಬೇಕು. ತಿಳಿಯದೆ ಪಾಪಮಾಡಿ ದಂಥ ಆ ಪಾಪಮಾಡಿದವನಿಗೋಸ್ಕರ ಯಾಜಕನು ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅದು ಪರಿಹಾರವಾಗುವ ಹಾಗೆ ಅದಕ್ಕೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ಇಸ್ರಾಯೇಲ್ ಮಕ್ಕಳಲ್ಲಿ ಹುಟ್ಟಿದವ ರಿಗೂ ಅವರಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ನಿಮ್ಮೆಲ್ಲರಿಗೂ ತಿಳಿಯದೆ ಪಾಪಮಾಡಿದವನಿಗೂ ಒಂದೇ ಆಜ್ಞೆ ಇರಬೇಕು. ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು. ಅವನು ಕರ್ತನ ವಾಕ್ಯವನ್ನು ಅವಮಾನ ಮಾಡಿ ಆತನ ಆಜ್ಞೆಗಳನ್ನು ವಿಾರಿದ್ದರಿಂದ ಆ ಮನು ಷ್ಯನು ನಿಶ್ಚಯವಾಗಿ ತೆಗೆದುಹಾಕಲ್ಪಡಬೇಕು. ಅವನ ಅಕ್ರಮವು ಅವನ ಮೇಲಿರುವದು ಎಂದು ಹೇಳಿದನು.
- 1 Samuel 9:15 1 ಸಮುವೇಲನು 9:15ಆದರೆ ಸೌಲನು ಬರುವದಕ್ಕೆ ಒಂದು ದಿವಸ ಮುಂಚೆ ಕರ್ತನು ಸಮುವೇಲನ ಕಿವಿಯಲ್ಲಿ ತಿಳಿಯ ಪಡಿಸಿದ್ದೇನಂದರೆ--
- John 8:21–24 ಯೋಹಾನನು 8:21–24ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು. ಅದಕ್ಕೆ ಯೆಹೂದ್ಯರು--ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿ ದ್ದಾನೋ? ಯಾಕಂದರೆ--ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ಹೇಳುತ್ತಾನಲ್ಲಾ ಅಂದರು. ಆತನು ಅವರಿಗೆ--ನೀವು ಕೆಳಗಿನವರು, ನಾನು ಮೇಲಿನವನು; ನೀವು ಈ ಲೋಕದವರು, ನಾನು ಈ ಲೋಕದವನಲ್ಲ. ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.
- Amos 3:7 ಆಮೋಸ 3:7ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.
- Hebrews 10:26–27 ಇಬ್ರಿಯರಿಗೆ 10:26–27ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ. ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು.
- Isaiah 30:13 ಯೆಶಾಯ 30:13ನೀವು ಈ ಮಾತನ್ನು ತಿರಸ್ಕಾರ ಮಾಡಿ ಬಲತ್ಕಾರ, ಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದ್ದರಿಂದ ಎತ್ತರ ವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವದು.