Isaiah · chapter 23 · verse 12
Isaiah 23:12 in Kannada
ಆತನು ಹೇಳಿದ್ದೇನಂದರೆ--ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.
Aatanu heliddenandare--hinsege eedaada kanyeyantiruva cheedon nagariye, innu mele ninage harshave illa; eddu kitteemige samudrada mele haaduhogu alliyoo ninage vishraanti iradu.
Isaiah 23:12 in English
- King James Version (KJV)
- And he said, Thou shalt no more rejoice, O thou oppressed virgin, daughter of Zidon: arise, pass over to Chittim; there also shalt thou have no rest.
- World English Bible (WEB)
- He said, “You shall rejoice no more, you oppressed virgin daughter of Sidon. Arise, pass over to Kittim. Even there you will have no rest.”
- American Standard Version (ASV)
- And he said, Thou shalt no more rejoice, O thou oppressed virgin daughter of Sidon: arise, pass over to Kittim; even there shalt thou have no rest.
- Bible in Basic English (BBE)
- And he said, There is no more joy for you, O crushed virgin daughter of Zidon: up! go over to Kittim; even there you will have no rest.
- Darby Translation (DBY)
- and hath said, Thou shalt no more exult, [thou] oppressed virgin, daughter of Sidon: get thee up, pass over to Chittim; even there shalt thou have no rest.
- Webster's Bible (WBS)
- And he said, Thou shalt no more rejoice, O thou oppressed virgin, daughter of Zidon: arise, pass over to Chittim; there also shalt thou have no rest.
- Young's Literal Translation (YLT)
- And He saith, 'Thou dost not add any more to exult, O oppressed one, virgin daughter of Zidon, To Chittim arise, pass over, Even there — there is no rest for thee.'
Read in context
- 10ತಾರ್ಷೀಷಿನ ಮಗಳೇ, ನದಿಯಂತೆ ನಿನ್ನ ದೇಶದಲ್ಲಿ ಹಾದುಹೋಗು, ಅಲ್ಲಿ ಇನ್ನು ಬಲವು ಇರುವುದೇ ಇಲ್ಲ.
- 11ಆತನು ಸಮುದ್ರದ ಮೇಲೆ ತನ್ನ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ; ಕರ್ತನು ವ್ಯಾಪಾರದ ಪಟ್ಟಣವನ್ನು (ಕಾನಾನ್) ಅದರ ದುರ್ಗ ಗಳನ್ನು ನಾಶಮಾಡಬೇಕೆಂದು ಆಜ್ಞಾಪಿಸಿದ್ದಾನೆ.
- 12ಆತನು ಹೇಳಿದ್ದೇನಂದರೆ--ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.
- 13ಇಗೋ, ಕಸ್ದೀಯರ ದೇಶವು! ಅಶ್ಶೂರರು ಅದನ್ನು ಅರಣ್ಯ ನಿವಾಸಿಗಳಿಗೆ ಈಡು ಮಾಡುವತನಕ ಈ ಜನರು ಇರಲಿಲ್ಲ. (ನಿರ್ನಾ ಮವಾಗಿರಲಿಲ್ಲ) ಅವರು ಗೋಪುರಗಳನ್ನೂ ಅದರ ಅರಮನೆಗಳನ್ನೂ ಕಟ್ಟಿಸಿಕೊಂಡು ಅದನ್ನು ಹಾಳು ಮಾಡಿದ್ದಾರೆ.
- 14ತಾರ್ಷೀಷಿನ ಹಡಗುಗಳೇ, ಗೋ ಳಾಡಿರಿ! ನಮ್ಮ ಆಶ್ರಯಸ್ಥಾನವು ಹಾಳಾಯಿತು.
Cross references
- Revelation 18:22 ಪ್ರಕಟನೆ 18:22ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.
- Isaiah 23:1–2 ಯೆಶಾಯ 23:1–2ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು. ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ದಾಟುವ ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನ ವಾಗಿರ್ರಿ.
- Isaiah 47:1 ಯೆಶಾಯ 47:1ಬಾಬೆಲಿನ ಕುಮಾರ್ತೆಯಾದ ಓ ಕನ್ಯಾ ಸ್ತ್ರೀಯೇ, ಕೆಳಕ್ಕೆ ಇಳಿದು ಬಂದು ದೂಳಿ ನಲ್ಲಿ ಕುಳಿತುಕೋ, ಓ ಕಸ್ದೀಯರ ಕುಮಾರಿಯೇ ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಯಾಕಂದರೆ ಇನ್ನು ಮೇಲೆ ನೀನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯಲ್ಪಡುವದಿಲ್ಲ.
- Ezekiel 26:13–14 ಯೆಹೆಜ್ಕೇಲನು 26:13–14ಆಗ ನಿನ್ನ ಹಾಡು ಗಳ ಶಬ್ದವನ್ನು ನಿಲ್ಲಿಸುವೆನು, ಇನ್ನು ನಿನ್ನ ಕಿನ್ನರಿಗಳ ಧ್ವನಿ ಕೇಳಲ್ಪಡುವದಿಲ್ಲ. ನಿನ್ನನ್ನು ಬಂಡೆಯ ತುದಿ ಯಂತೆ ಮಾಡುವೆನು. ನೀನು ಅಲ್ಲಿ ಬಲೆ ಹಾಸುವ ಸ್ಥಳವಾಗುವಿ. ಇನ್ನು ನೀನು ಕಟ್ಟಲ್ಪಡುವದಿಲ್ಲ; ಯಾಕಂ ದರೆ ಕರ್ತನಾದ ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
- Jeremiah 14:17 ಯೆರೆಮೀಯ 14:17ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
- Ezekiel 27:6 ಯೆಹೆಜ್ಕೇಲನು 27:6ನಿನ್ನ ಹುಟ್ಟು ಗೋಲನ್ನು ಬಾಷಾನಿನ ಓಕ್ ವೃಕ್ಷದಿಂದ ಮಾಡಿದ್ದಾರೆ, ಕಿತ್ತೀಯರ ದ್ವೀಪಗಳಿಂದ ತಂದ ದಂತದ ಹಲಗೆಗಳಿಂದ ಅಶ್ಶೂರ್ಯರ ಗುಂಪಿನವರು ಕೆತ್ತಿದ್ದಾರೆ.
- Numbers 24:24 ಅರಣ್ಯಕಾಂಡ 24:24ಕಿತ್ತೀಮಿನ ತೀರದಿಂದ ಹಡಗುಗಳು ಬಂದು ಅಶ್ಶೂರ್ಯರನ್ನೂ ಏಬೆರರನ್ನೂ ಶ್ರಮೆ ಪಡಿಸುವವು. ಅವನು ಸಹ ಸದಾಕಾಲಕ್ಕೂ ನಾಶವಾಗು ವನು ಎಂದು ಹೇಳಿದನು.ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.
- Lamentations 1:3 ಪ್ರಲಾಪಗಳು 1:3ಯೆಹೂದವು ಸಂಕಟದ ನಿಮಿತ್ತವೂ ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋಯಿತು; ಆಕೆಯು ಅನ್ಯಜನಾಂಗಗಳೊಳಗೆ ವಾಸಮಾಡುವವಳಾಗಿ ವಿಶ್ರಾಂತಿಯನ್ನು ಕಾಣಳು; ಅವಳನ್ನು ಹಿಂಸಿಸುವವ ರೆಲ್ಲರೂ ಅವಳನ್ನು ಇಕ್ಕಟ್ಟಿನ ಮಧ್ಯದಲ್ಲಿ ಸಿಕ್ಕಿಸಿರುತ್ತಾರೆ.
- Isaiah 23:7 ಯೆಶಾಯ 23:7ನಿಮ್ಮ ಉಲ್ಲಾಸದ ಪಟ್ಟಣವೂ ಪೂರ್ವಕಾಲದ ಹಳೆಯ ಸಂಪ್ರದಾಯದಿಂದ ಬಂದಿದ್ದೂ ಇದೆಯೋ? ಅವಳ ಸ್ವಂತ ಕಾಲುಗಳು ಅದನ್ನು ದೂರ ದೇಶದಲ್ಲಿ ನಿವಾಸಿಸುವದಕ್ಕೆ ತಕ್ಕೊಂಡು ಹೋ ಗುವವು.
- Genesis 10:15–19 ಆದಿಕಾಂಡ 10:15–19ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂ ಯೆಬೂಸಿಯನೂ ಅಮೋರಿಯನೂ ಗಿರ್ಗಾಷಿಯನೂ ಹಿವ್ವಿಯನೂ ಅರ್ಕಿಯನೂ ಸೀನಿಯನೂ ಅರ್ವಾದಿಯನೂ ಚೆಮಾರಿಯನೂ ಹಮಾತಿಯನೂ ಹುಟ್ಟಿದರು. ತರುವಾಯ ಕಾನಾನ್ ಕುಟುಂಬಗಳು ವಿಸ್ತಾರವಾಗಿ ಹರಡಿದವು. ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
- Lamentations 1:15 ಪ್ರಲಾಪಗಳು 1:15ಕರ್ತನು ನನ್ನ ಎದುರಿನಲ್ಲಿ ನನ್ನ ಪರಾಕ್ರಮಶಾಲಿಗಳನ್ನೆಲ್ಲಾ ಕಾಲಿನ ಕೆಳಗೆ ತುಳಿದುಬಿಟ್ಟಿದ್ದಾನೆ; ಆತನು ನನ್ನ ಯೌವನಸ್ಥರನ್ನು ಜಜ್ಜಲು ನನಗೆ ವಿರುದ್ಧವಾಗಿ ಸಭೆಯನ್ನು ಕರೆದಿದ್ದಾನೆ; ಕರ್ತನು ಯೆಹೂದದ ಮಗಳಾದ ಕನ್ಯೆಯನ್ನು ದ್ರಾಕ್ಷೆಯ ತೊಟ್ಟಿಯಂತೆ ತುಳಿದಿದ್ದಾನೆ.
- Jeremiah 46:11 ಯೆರೆಮೀಯ 46:11ಐಗುಪ್ತದ ಮಗಳಾದ ಕನ್ಯಾಸ್ತ್ರೀಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತಕ್ಕೋ! ನೀನು ಬಹಳ ಮದ್ದು ತಕ್ಕೊಳ್ಳುವದು ವ್ಯರ್ಥವಾಗಿದೆ; ನಿನಗೆ ಗುಣವಾಗು ವದಿಲ್ಲ.