Isaiah · chapter 23 · verse 2
Isaiah 23:2 in Kannada
ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ದಾಟುವ ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನ ವಾಗಿರ್ರಿ.
Dveepagala nivaasigale, samudravannu daatuva cheedonina vartakarinda samruddhiyannu hondidavare, mauna vaagirri.
Isaiah 23:2 in English
- King James Version (KJV)
- Be still, ye inhabitants of the isle; thou whom the merchants of Zidon, that pass over the sea, have replenished.
- World English Bible (WEB)
- Be still, you inhabitants of the coast, you whom the merchants of Sidon that pass over the sea have replenished.
- American Standard Version (ASV)
- Be still, ye inhabitants of the coast, thou whom the merchants of Sidon, that pass over the sea, have replenished.
- Bible in Basic English (BBE)
- Send out a cry of grief, you men of the sea-land, traders of Zidon, who go over the sea, whose representatives are on great waters;
- Darby Translation (DBY)
- Be still, ye inhabitants of the isle! The merchants of Sidon, that pass over the sea, have replenished thee.
- Webster's Bible (WBS)
- Be still, ye inhabitants of the isle; thou whom the merchants of Zidon, that pass over the sea, have replenished.
- Young's Literal Translation (YLT)
- Be silent, ye inhabitants of the isle, Trader of Zidon, passing the sea, they filled thee.
Read in context
- 1ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.
- 2ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ದಾಟುವ ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನ ವಾಗಿರ್ರಿ.
- 3ವಿಶಾಲವಾದ ನೀರುಗಳಿಂದ ಸೀಹೋರಿನ ಧಾನ್ಯವೂ ನದಿಯ ಸುಗ್ಗಿಯೂ ನೈಲಿನ ಬೆಳೆಯಿಂ ದಲೂ ಅದಕ್ಕೆ ಆದಾಯವಾಗಿತ್ತು. ಅನೇಕ ಜನಾಂಗ ಗಳಿಗೆ ವ್ಯಾಪಾರ ಸ್ಥಳವಾಗಿತ್ತು.
- 4ಚೀದೋನೇ, ನಾಚಿಕೆ ಪಡು, ಸಮುದ್ರವು, ಸಮುದ್ರದುರ್ಗವೂ--ನಾವು ಪ್ರಸವವೇದನೆ ಪಡುವದಿಲ್ಲ, ಹೆರುವದಿಲ್ಲ; ಇಲ್ಲವೆ ಮಕ್ಕಳನ್ನು ಬೆಳೆಸುವದಿಲ್ಲ ಕನ್ಯಾಸ್ತ್ರೀಯರನ್ನು ಸಾಕಿ ಸಲ ಹಲಿಲ್ಲ ಎಂದು ಹೇಳಿದೆಯಷ್ಟೆ.
Cross references
- Isaiah 47:5 ಯೆಶಾಯ 47:5ಓ ಕಸ್ದೀಯರ ಕುಮಾರಿಯೇ, ಮೌನ ವಾಗಿ ಕುಳಿತುಕೋ, ಕತ್ತಲೊಳಗೆ ಹೋಗು; ಯಾಕಂ ದರೆ ಇನ್ನು ಮೇಲೆ ನೀನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವದಿಲ್ಲ.
- Isaiah 41:1 ಯೆಶಾಯ 41:1ಓ ದ್ವೀಪನಿವಾಸಿಗಳೇ, ನನ್ನ ಮುಂದೆ ಮೌನದಿಂದಿರ್ರಿ; ಜನಗಳು ಹೊಸ ಬಲ ವನ್ನು ಹೊಂದಿಕೊಳ್ಳಲಿ; ಅವರು ನನ್ನ ಸವಿಾಪಕ್ಕೆ ಬಂದು ಮಾತಾಡಲಿ; ನ್ಯಾಯತೀರ್ಪಿಗಾಗಿ ಸವಿಾಪಕ್ಕೆ ಒಟ್ಟಾಗಿ ಬರೋಣ.
- Psalm 46:10 ಕೀರ್ತನೆಗಳು 46:10ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Ezekiel 27:8–36 ಯೆಹೆಜ್ಕೇಲನು 27:8–36ಚೀದೋ ನಿನ ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವ ವರಾಗಿದ್ದಾರೆ; ತೂರೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು. ಗೆಬಲಿನ ಹಿರಿಯರೂ ಅದರ ಜ್ಞಾನಿಗಳೂ ನಿನ್ನ ಬಿರುಕುಗಳನ್ನು ಮುಚ್ಚುವವರಾಗಿ ನಿನ್ನಲ್ಲಿದ್ದಾರೆ. ಸಮುದ್ರದ ಸಕಲ ನಾವೆಗಳೂ ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸು ತ್ತಿದ್ದವು. ಪಾರಸೀಯರೂ ಲೂದ್ಯರೂ ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು; ಗುರಾಣಿ ಯನ್ನೂ ಶಿರಸ್ತ್ರಾಣವನ್ನೂ ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು. ಅರ್ವಾದಿನವರು ನಿನ್ನ ದಂಡಿನ ಸಂಗಡ ನಿನ್ನ ಗೋಡೆಗಳ ಸುತ್ತಲೂ ಮೇಲೆ ಇದ್ದರು; ಗಮ್ಮಾದ್ಯರು ನಿನ್ನ ಕೊತ್ತಲುಗಳಲ್ಲಿ ಕಾವಲಾಗಿದ್ದರು. ತಮ್ಮ ಖೇಡ್ಯಗಳನ್ನು ಸುತ್ತ ಮುತ್ತಲೂ ನಿನ್ನ ಗೋಡೆಗಳ ಮೇಲೆ ನೇತುಹಾಕಿ ಇವರು ನಿನ್ನ ಸೌಂದರ್ಯವನ್ನು ಪೂರ್ತಿಗೊಳಿಸಿದರು. ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ, ಸೀಸಗಳಿಂದ ನಿನ್ನ ಸಂತೆಗಳಲ್ಲಿ ವ್ಯಾಪಾರ ಮಾಡಿದರು; ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು. ಯಾವಾನ್, ತೂಬಲ್, ಮೇಷೆಕ್ ಇವರು ನಿನ್ನ ವರ್ತಕರಾಗಿದ್ದರು; ಮನುಷ್ಯರ ಪ್ರಾಣಗಳಿಂದಲೂ (ವ್ಯಕ್ತಿ) ಹಿತ್ತಾಳೆಯ ಪಾತ್ರೆ ಗಳಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡಿಸಿದರು. ತೋಗರ್ಮದ ಮನೆತನದವರು ಕುದುರೆಗಳಿಂ ದಲೂ ಕುದುರೆ ಸವಾರಿಗಳಿಂದಲೂ ಹೇಸರ ಕತ್ತೆ ಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡಿಸಿದರು. ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು. ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾಮಿನವರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು. ಯೆಹೂದವೂ ಇಸ್ರಾಯೇಲ್ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಕಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧ ತೈಲ ದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು. ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿ ದ್ದದರಿಂದಲೂ ಅಪರಿಮಿತವಾದ ಬಗೆ ಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದರಿಂದಲೂ ದಾನ್ ಮತ್ತು ಯಾವಾನ್ ಸಹ ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಸಂತೆಯಲ್ಲಿ ಇದ್ದವು. ದೇದಾನು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು. ಅರಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ವ್ಯಾಪಾರಿಗಳಾಗಿದ್ದರು; ಕುರಿಮರಿಗಳಿಂದಲೂ ಟಗರುಗಳಿಂದಲೂ ಹೋತಗ ಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು. ಶೆಬ ದವರು, ರಗ್ಮದವರು ನಿನ್ನ ಕಡೆಯ ವರ್ತಕರಾಗಿ ಶ್ರೇಷ್ಟವಾದ ಎಲ್ಲಾ ಸುಗಂಧ ದ್ರವ್ಯದಿಂದಲೂ ಬೆಲೆ ಯುಳ್ಳ ಎಲ್ಲಾ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಹಾರಾನ್, ಕನ್ನೆ, ಏದೆನ್, ಶೆಬ, ಅಶ್ಶೂರ್ ಮತ್ತು ಕಿಲ್ಮದ್ವರು ನಿನ್ನ ವ್ಯಾಪಾರಿಗಳಾಗಿದ್ದರು. ಇವರು ಎಲ್ಲಾ ತರಹದ ಸಾಮಾನುಗಳಲ್ಲೂ ನಿನ್ನ ವ್ಯಾಪಾರಿಗಳಾಗಿದ್ದರು. ಅಂದರೆ ನೀಲಿಬಟ್ಟೆಗಳು, ಕಸೂತಿಯ ಕೆಲಸ ದೇವ ದಾರುವಿನಿಂದ ಮಾಡಿ ಹಗ್ಗಗಳಿಂದ ಕಟ್ಟಿದಂತ, ರೇಷ್ಮೆ ತುಂಬಿಸಿದ ಪೆಟ್ಟಿಗೆಗಳನ್ನು ತಂದು ನಿನ್ನ ಪಟ್ಟಣಗಳಲ್ಲಿ ವರ್ತಕರಾಗಿದ್ದರು. ತಾರ್ಷೀಷಿನ ಹಡಗುಗಳು ನಿನ್ನ ಮಾರುಕಟ್ಟೆಯಲ್ಲಿ ಸರಕುಗಳನ್ನು ತರುತ್ತಿದ್ದವು; ಹೀಗೆ ನೀನು ತುಂಬಿದ್ದೀ ಮತ್ತು ಸಮುದ್ರಗಳ ಮಧ್ಯದಲ್ಲಿ ಬಹಳ ಘನವುಳ್ಳವಳಾದಿ. ಹುಟ್ಟುಹಾಕುವವರು ನಿನ್ನನ್ನು (ಮಹಾತರಂಗ ಗಳಿಗೆ) ಸಿಕ್ಕಿಸಿದ್ದಾರೆ. ಮೂಡಣ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ. ನಿನ್ನ ಆಸ್ತಿಪಾಸ್ತಿಗಳೂ ಸರಕುಗಳೂ ನಾವಿಕರೂ ಅಂಬಿಗರೂ ಒಡಕುಗಳನ್ನು ಮುಚ್ಚುವವರೂ ವ್ಯಾಪಾರಿ ಗಳೂ ನಿನ್ನಲ್ಲಿನ ಸಮಸ್ತ ಸೈನಿಕರೂ ಅಂತೂ ನಿನ್ನೊಳಗೆ ಸೇರಿಕೊಂಡಿರುವ ಸಿಬ್ಬಂದಿಯೆಲ್ಲವೂ ನಿನ್ನ ನಾಶನದ ದಿನದಲ್ಲಿ ಸಮುದ್ರದೊಳಗೆ ನಿನ್ನೊಂದಿಗೆ ಮುಳುಗಿ ಹೋಗುವರು. ನಿನ್ನ ನಾವಿಕರ ಕಿರಿಚಾಟಕ್ಕೆ ಉಪ ನಗರಗಳು, ಪ್ರದೇಶಗಳು, ನಡುಗುವವು. ಹುಟ್ಟು ಹಾಕುವವರೆಲ್ಲರೂ ಅಂಬಿಗರೂ ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದಿಳಿದು ನೆಲದ ಮೇಲೆ ನಿಂತುಕೊಂಡು, ನಿನ್ನ ನಿಮಿತ್ತ ದುಃಖದಿಂದ ಅರಚಿ ತಲೆಗೆ ದೂಳೆರೆಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ; ನಿನಗಾಗಿ ತಲೆಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆ ಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು. ಅವರು ಗೋಳಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು--ಸಮುದ್ರದ ನಡುವೆ ಹಾಳಾಗಿರುವ ತೂರಿನಂತ ಪಟ್ಟಣ ಯಾವದು? ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ; ಅವುಗಳಿಂದ ಬಹು ಜನಾಂಗ ಗಳನ್ನು ತುಂಬಿಸಿದೆ; ನಿನ್ನ ಅಪಾರವಾದ ಐಶ್ವರ್ಯ ದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜ ರನ್ನು ಸಮೃದ್ಧಿಪಡಿಸಿದೆ. ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧ ಜಲದಲ್ಲಿ ಮುಳುಗಿ ಹೋದರು. ದ್ವೀಪದ ನಿವಾಸಿಗಳೆಲ್ಲಾ ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ. ಅರಸರು ಬಹಳ ವಾಗಿ ಭಯಪಟ್ಟಿದ್ದಾರೆ. ರಾಜರುಗಳು ನಡುಗಿ ಭೀತಿ ಗೊಂಡರು.ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ. ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.
- Ezekiel 27:3–4 ಯೆಹೆಜ್ಕೇಲನು 27:3–4ತೂರಿಗೆ ಹೇಳು--ಸಮುದ್ರದ ಪ್ರವೇಶದಲ್ಲಿ ವಾಸಿಸುವವಳೇ, ಬಹು ದ್ವೀಪಗಳಿಗೆ ಜನರ ವ್ಯಾಪಾರವನ್ನು ನಡಿಸುವ ವಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಓ ತೂರೇ, ನಾನು ಪೂರ್ಣ ಸೌಂದರ್ಯವಂತಳೆಂದು ನೀನು ಹೇಳಿದ್ದೀ. ನಿನ್ನ ಮೇರೆಗಳು ಸಮುದ್ರದ ಮಧ್ಯದಲ್ಲಿವೆ, ನಿನ್ನನ್ನು ಕಟ್ಟಿದವರು ನಿನ್ನ ಸೌಂದರ್ಯ ವನ್ನು ಸಂಪೂರ್ಣಪಡಿಸಿದ್ದಾರೆ.
- Habakkuk 2:20 ಹಬಕ್ಕೂಕ 2:20ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
- Ezekiel 28:2 ಯೆಹೆಜ್ಕೇಲನು 28:2ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ.