Isaiah · chapter 23 · verse 5
Isaiah 23:5 in Kannada
ಐಗುಪ್ತದ ಸುದ್ದಿಗೆ ಆದ ಹಾಗೆ ತೂರಿನ ಸುದ್ದಿಗೆ ಬಹಳ ವೇದನೆಪಡು ವರು.
Aiguptada suddige aada haage toorina suddige bahala vedanepadu varu.
Isaiah 23:5 in English
- King James Version (KJV)
- As at the report concerning Egypt, [so] shall they be sorely pained at the report of Tyre.
- World English Bible (WEB)
- When the report comes to Egypt, they will be in anguish at the report of Tyre.
- American Standard Version (ASV)
- When the report cometh to Egypt, they shall be sorely pained at the report of Tyre.
- Bible in Basic English (BBE)
- When the news comes to Egypt they will be bitterly pained at the fate of Tyre.
- Darby Translation (DBY)
- — When the report came into Egypt, they were sorely pained at the news of Tyre.
- Webster's Bible (WBS)
- As at the report concerning Egypt, [so] shall they be sorely pained at the report of Tyre.
- Young's Literal Translation (YLT)
- As [at] the report of Egypt they are pained, So [at] the report of Tyre.
Read in context
- 3ವಿಶಾಲವಾದ ನೀರುಗಳಿಂದ ಸೀಹೋರಿನ ಧಾನ್ಯವೂ ನದಿಯ ಸುಗ್ಗಿಯೂ ನೈಲಿನ ಬೆಳೆಯಿಂ ದಲೂ ಅದಕ್ಕೆ ಆದಾಯವಾಗಿತ್ತು. ಅನೇಕ ಜನಾಂಗ ಗಳಿಗೆ ವ್ಯಾಪಾರ ಸ್ಥಳವಾಗಿತ್ತು.
- 4ಚೀದೋನೇ, ನಾಚಿಕೆ ಪಡು, ಸಮುದ್ರವು, ಸಮುದ್ರದುರ್ಗವೂ--ನಾವು ಪ್ರಸವವೇದನೆ ಪಡುವದಿಲ್ಲ, ಹೆರುವದಿಲ್ಲ; ಇಲ್ಲವೆ ಮಕ್ಕಳನ್ನು ಬೆಳೆಸುವದಿಲ್ಲ ಕನ್ಯಾಸ್ತ್ರೀಯರನ್ನು ಸಾಕಿ ಸಲ ಹಲಿಲ್ಲ ಎಂದು ಹೇಳಿದೆಯಷ್ಟೆ.
- 5ಐಗುಪ್ತದ ಸುದ್ದಿಗೆ ಆದ ಹಾಗೆ ತೂರಿನ ಸುದ್ದಿಗೆ ಬಹಳ ವೇದನೆಪಡು ವರು.
- 6ತಾರ್ಷೀಷಿಗೆ ದಾಟಿಹೋಗಿರಿ, ದ್ವೀಪ ನಿವಾ ಸಿಗಳೇ ಗೋಳಾಡಿರಿ.
- 7ನಿಮ್ಮ ಉಲ್ಲಾಸದ ಪಟ್ಟಣವೂ ಪೂರ್ವಕಾಲದ ಹಳೆಯ ಸಂಪ್ರದಾಯದಿಂದ ಬಂದಿದ್ದೂ ಇದೆಯೋ? ಅವಳ ಸ್ವಂತ ಕಾಲುಗಳು ಅದನ್ನು ದೂರ ದೇಶದಲ್ಲಿ ನಿವಾಸಿಸುವದಕ್ಕೆ ತಕ್ಕೊಂಡು ಹೋ ಗುವವು.
Cross references
- Exodus 15:14–16 ವಿಮೋಚನಕಾಂಡ 15:14–16ಜನರು ಇದನ್ನು ಕೇಳಿ ಭಯಪಡುವರು; ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವದು. ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು. ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು.
- Joshua 2:9–11 ಯೆಹೋಶುವ 2:9–11ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು. ನೀವು ಐಗುಪ್ತದಿಂದ ಹೊರಡುವಾಗ ಕರ್ತನು ನಿಮಗೋಸ್ಕರ ಕೆಂಪು ಸಮುದ್ರದ ನೀರನ್ನು ಬತ್ತಿಹೋಗ ಮಾಡಿದ್ದನ್ನೂ ಯೊರ್ದನಿಗೆ ಆಚೆಯಲ್ಲಿದ್ದ ಅಮೋರಿ ಯರ ಇಬ್ಬರು ಅರಸುಗಳಾದ ಸೀಹೋನನನ್ನು ಓಗನನ್ನು ನೀವು ಸಂಪೂರ್ಣ ನಿರ್ಮೂಲ ಮಾಡಿದ್ದನ್ನೂ ನಾವು ಕೇಳಿದ್ದೇವೆ. ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕರಗಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ಯಾಕಂದರೆ ನಿಮ್ಮ ದೇವರಾದ ಕರ್ತನೇ ಮೇಲಿರುವ ಆಕಾಶದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾನೆ.
- Ezekiel 28:19 ಯೆಹೆಜ್ಕೇಲನು 28:19ನಿನ್ನನ್ನು ಅರಿತ ಜನರೆಲ್ಲರೂ ನಿನ್ನ ವಿಷಯದಲ್ಲಿ ವಿಸ್ಮಯಗೊಳ್ಳುವರು; ನೀನು ಸಂಪೂರ್ಣ ಭೀತಿಗೊಳ ಗಾಗಿ ಇನ್ನೆಂದಿಗೂ ಇಲ್ಲದಂತಾಗುವಿ.
- Ezekiel 26:15–21 ಯೆಹೆಜ್ಕೇಲನು 26:15–21ದೇವರಾದ ಕರ್ತನು ತೂರಿಗೆ ಹೀಗೆ ಹೇಳು ತ್ತಾನೆ--ನಿಮ್ಮನ್ನು ಬೀಳುವಿಕೆಯ ಶಬ್ದದಿಂದಲೂ ಗಾಯ ಪಟ್ಟವರು ಕೂಗುವಾಗಲೂ ನಿನ್ನ ಮಧ್ಯದಲ್ಲಿ ಕೊಲೆ ಯಾಗುವಾಗಲೂ ದ್ವೀಪಗಳು ನಡುಗುವದಿಲ್ಲವೇ? ಆಮೇಲೆ ಸಮುದ್ರದ ಎಲ್ಲಾ ಪ್ರಭುಗಳು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲು ವಂಗಿಗಳನ್ನು ತೆಗೆದುಹಾಕುವರು, ಚಿತ್ರವಾಗಿ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು; ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳು ವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯ ವಾಗಿ ಆಶ್ಚರ್ಯಪಡುವರು. ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವದೇನಂದರೆ, ಸಮು ದ್ರಗಳ ಬಳಿಯಲ್ಲಿ ವಾಸಿಸಿದವಳೇ, ಹೆಸರು ಗೊಂಡ ಪಟ್ಟಣವೇ, ನೀನೂ ತನ್ನ ನಿವಾಸಿಗಳೂ ಸಮುದ್ರದಲ್ಲಿ ಬಲವಾಗಿದ್ದವಳೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದಿ? ಈಗ ನೀನು ಬೀಳುವ ದಿವಸದಲ್ಲಿ ದ್ವೀಪಗಳು ನಡುಗುವವು ಹೌದು, ನೀನು ಹೋಗಿಬಿಡುವದರಿಂದ ಸಮುದ್ರದಲ್ಲಿರುವ ದ್ವೀಪಗಳು ಗಾಬರಿಯಾಗುವವು. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧವನ್ನು ನಿನ್ನ ಮೇಲೆ ಬರ ಮಾಡುವೆನು. ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವ ಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವ ಲೋಕದಲ್ಲಿ ನೆಲೆಗೊಳಿಸದ ನಿರ್ನಿವಾಸಿಯಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರ ಸಹವಾಸಕ್ಕೆ ಸೇರಿಸುವೆನು.ನಾನೂ ನಿನ್ನನ್ನು ದಿಗಿಲುಪಡಿಸುವೆನು, ಇನ್ನು ಮೇಲೆ ನೀನು ಇರುವದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡು ಕಿದರೂ ನೀನು ಸಿಗುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ. ನಾನೂ ನಿನ್ನನ್ನು ದಿಗಿಲುಪಡಿಸುವೆನು, ಇನ್ನು ಮೇಲೆ ನೀನು ಇರುವದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡು ಕಿದರೂ ನೀನು ಸಿಗುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
- Revelation 18:17–19 ಪ್ರಕಟನೆ 18:17–19ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು. ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು
- Ezekiel 27:29–36 ಯೆಹೆಜ್ಕೇಲನು 27:29–36ಹುಟ್ಟು ಹಾಕುವವರೆಲ್ಲರೂ ಅಂಬಿಗರೂ ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದಿಳಿದು ನೆಲದ ಮೇಲೆ ನಿಂತುಕೊಂಡು, ನಿನ್ನ ನಿಮಿತ್ತ ದುಃಖದಿಂದ ಅರಚಿ ತಲೆಗೆ ದೂಳೆರೆಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ; ನಿನಗಾಗಿ ತಲೆಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆ ಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು. ಅವರು ಗೋಳಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು--ಸಮುದ್ರದ ನಡುವೆ ಹಾಳಾಗಿರುವ ತೂರಿನಂತ ಪಟ್ಟಣ ಯಾವದು? ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ; ಅವುಗಳಿಂದ ಬಹು ಜನಾಂಗ ಗಳನ್ನು ತುಂಬಿಸಿದೆ; ನಿನ್ನ ಅಪಾರವಾದ ಐಶ್ವರ್ಯ ದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜ ರನ್ನು ಸಮೃದ್ಧಿಪಡಿಸಿದೆ. ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧ ಜಲದಲ್ಲಿ ಮುಳುಗಿ ಹೋದರು. ದ್ವೀಪದ ನಿವಾಸಿಗಳೆಲ್ಲಾ ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ. ಅರಸರು ಬಹಳ ವಾಗಿ ಭಯಪಟ್ಟಿದ್ದಾರೆ. ರಾಜರುಗಳು ನಡುಗಿ ಭೀತಿ ಗೊಂಡರು.ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ. ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.
- Isaiah 19:16 ಯೆಶಾಯ 19:16ಆ ದಿನದಲ್ಲಿ ಐಗುಪ್ತವು ಹೆಂಗಸರ ಹಾಗೆ ಇರು ವದು. ಸೈನ್ಯಗಳ ಕರ್ತನು ಅದರ ಮೇಲೆ ಆಡಿಸುವ ಕೈಯನ್ನು ಬೀಸುತ್ತಿರುವದರಿಂದ ಹೆದರಿ ಭಯಪಡು ವದು.