Isaiah · chapter 24 · verse 10
Isaiah 24:10 in Kannada
ಗಲಿಬಿಲಿಗುಂಟಾದ ಪಟ್ಟಣವು ಹಾಳಾಗಿದೆ. ಯಾರು ಒಳಗೆ ಬಾರದಂತೆ ಪ್ರತಿಯೊಂದು ಮನೆಯು ಮುಚ್ಚಿದೆ.
Galibiliguntaada pattanavu haalaagide. Yaaru olage baaradante pratiyondu maneyu muchchide.
Isaiah 24:10 in English
- King James Version (KJV)
- The city of confusion is broken down: every house is shut up, that no man may come in.
- World English Bible (WEB)
- The confused city is broken down. Every house is shut up, that no man may come in.
- American Standard Version (ASV)
- The waste city is broken down; every house is shut up, that no man may come in.
- Bible in Basic English (BBE)
- The town is waste and broken down: every house is shut up, so that no man may come in.
- Darby Translation (DBY)
- The city of solitude is broken down; every house is shut up, so that none entereth in.
- Webster's Bible (WBS)
- The city of confusion is broken down: every house is shut up, that no man may enter.
- Young's Literal Translation (YLT)
- It was broken down — a city of emptiness, Shut hath been every house from entrance.
Read in context
- 8ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು.
- 9ಇನ್ನು ಗಾನದೊಡನೆ ದ್ರಾಕ್ಷಾರಸ ವನ್ನು ಕುಡಿಯರು; ಕುಡಿಯುವವರಿಗೆ ಮದ್ಯಪಾನವು ಕಹಿಯಾಗುವದು.
- 10ಗಲಿಬಿಲಿಗುಂಟಾದ ಪಟ್ಟಣವು ಹಾಳಾಗಿದೆ. ಯಾರು ಒಳಗೆ ಬಾರದಂತೆ ಪ್ರತಿಯೊಂದು ಮನೆಯು ಮುಚ್ಚಿದೆ.
- 11ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ.
- 12ಪಟ್ಟಣ ದಲ್ಲಿ ಹಾಳೇ ಉಳಿದಿವೆ; ನಾಶನವು ಹೆಬ್ಬಾಗಿಲಿಗೆ ತಟ್ಟಿದೆ.
Cross references
- Revelation 18:2 ಪ್ರಕಟನೆ 18:2ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು.
- Revelation 17:5–6 ಪ್ರಕಟನೆ 17:5–6ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು. ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ
- 2 Kings 25:4 2 ಅರಸುಗಳು 25:4ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು.
- Isaiah 34:13–15 ಯೆಶಾಯ 34:13–15ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು; ಅವಳ ಕೋಟೆಗಳಲ್ಲಿ ತುರುಚಿಯೂ ದತ್ತೂರಿಯೂ ಇರುವವು; ಅದು (ಉಷ್ಟ್ರ ಪಕ್ಷಿಗಳ) ಸರ್ಪಗಳ ನಿವಾಸವೂ ಗೂಬೆಗಳಿಗೆ ಸ್ಥಾನವೂ ಆಗುವದು. ಮರುಭೂಮಿಯ ಕಾಡು ಮೃಗಗಳು ಸಹ ದ್ವೀಪದ ಕಾಡುಮೃಗಗಳೊಂದಿಗೆ ಸಂಧಿಸುವವು; ದೆವ್ವವು ತನ್ನ ಜೊತೆಯನ್ನು ಕೂಗು ವದು; ಅಲ್ಲಿ ಚೀರುಗೂಬೆಯು ಸಹ ವಿಶ್ರಮಿಸಿಕೊಂಡು ಉಪಶಮನ ಸ್ಥಳವನ್ನು ಕಂಡುಕೊಳ್ಳುವದು. ದೊಡ್ಡ ಗೂಬೆಯು ಅಲ್ಲಿ ಗೂಡನ್ನು ಮಾಡಿಕೊಂಡು ಮೊಟ್ಟೆ ಯಿಟ್ಟು ಮರಿ ಮಾಡಿ ಅವುಗಳನ್ನು ತನ್ನ ನೆರಳಿನಲ್ಲಿ ಕೂಡಿಸುವದು; ಅಲ್ಲಿ ಹದ್ದುಗಳಲ್ಲಿ ಪ್ರತಿಯೊಂದು ತಮ್ಮ ಜೊತೆಜೊತೆಯಾಗಿ ಕೂಡಿಕೊಳ್ಳುವವು.
- Revelation 11:7–8 ಪ್ರಕಟನೆ 11:7–8ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು. ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.
- Jeremiah 39:8 ಯೆರೆಮೀಯ 39:8ಅರಸನ ಮನೆಯನ್ನೂ ಜನರ ಮನೆಗಳನ್ನೂ ಕಸ್ದೀಯರು ಬೆಂಕಿಯಿಂದ ಸುಟ್ಟರು; ಮತ್ತು ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು.
- Luke 21:24 ಲೂಕನು 21:24ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
- Isaiah 34:11 ಯೆಶಾಯ 34:11ಆದರೆ ಬಕ ಪಕ್ಷಿಯು ಮತ್ತು ಮುಳ್ಳು ಹಂದಿಯು ಅದನ್ನು ಆವರಿಸಿಕೊಳ್ಳುವವು; ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವವು; ಗಲಿಬಿಲಿ ಯೆಂಬ ನೂಲನ್ನು ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು.
- Jeremiah 52:13–14 ಯೆರೆಮೀಯ 52:13–14ಕರ್ತನ ಆಲಯವನ್ನೂ ಅರಸನ ಮನೆಯನ್ನೂ ಯೆರೂಸಲೇಮಿನ ಎಲ್ಲಾ ಮನೆಗಳನ್ನೂ ದೊಡ್ಡವರ ಎಲ್ಲಾ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು; ಸುತ್ತಲಿರುವ ಯೆರೂಸಲೇಮಿನ ಗೋಡೆ ಗಳನ್ನೆಲ್ಲಾ ಕಾವಲಿನವರ ಅಧಿಪತಿಯ ಸಂಗಡ ಇದ್ದ ಕಸ್ದೀಯರ ದಂಡೆಲ್ಲಾ ಕೆಡವಿ ಹಾಕಿತು.
- Jeremiah 52:7 ಯೆರೆಮೀಯ 52:7ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು.
- Matthew 23:34–35 ಮತ್ತಾಯನು 23:34–35ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
- Micah 2:13 ಮೀಕ 2:13ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.