Isaiah · chapter 24 · verse 13
Isaiah 24:13 in Kannada
ಎಣ್ಣೇ ಮರವನ್ನು ಬಡಿದ ಮೇಲೆಯೂ ದ್ರಾಕ್ಷೇ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವದು.
Enne maravannu badida meleyoo draakshe suggiyu teerida nantaravu nilluva ulida kaayigala haage deshadalliruvadu.
Isaiah 24:13 in English
- King James Version (KJV)
- When thus it shall be in the midst of the land among the people, [there shall be] as the shaking of an olive tree, [and] as the gleaning grapes when the vintage is done.
- World English Bible (WEB)
- For it will be so within the earth among the peoples, as the shaking of an olive tree, as the gleanings when the vintage is done.
- American Standard Version (ASV)
- For thus shall it be in the midst of the earth among the peoples, as the shaking of an olive-tree, as the gleanings when the vintage is done.
- Bible in Basic English (BBE)
- For it will be in the heart of the earth among the peoples, like the shaking of an olive-tree, as the last of the grapes after the getting-in is done.
- Darby Translation (DBY)
- For so will it be in the midst of the land among the peoples, as the shaking of an olive-tree, as the grape-gleanings when the vintage is done.
- Webster's Bible (WBS)
- When thus it shall be in the midst of the land among the people, [there shall be] as the shaking of an olive-tree, [and] as the gleaning grapes when the vintage is done.
- Young's Literal Translation (YLT)
- When thus it is in the heart of the land, In the midst of the peoples, As the compassing of the olive, As gleanings when harvest hath been finished,
Read in context
- 11ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ.
- 12ಪಟ್ಟಣ ದಲ್ಲಿ ಹಾಳೇ ಉಳಿದಿವೆ; ನಾಶನವು ಹೆಬ್ಬಾಗಿಲಿಗೆ ತಟ್ಟಿದೆ.
- 13ಎಣ್ಣೇ ಮರವನ್ನು ಬಡಿದ ಮೇಲೆಯೂ ದ್ರಾಕ್ಷೇ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವದು.
- 14ಅವರು ತಮ್ಮ ಸ್ವರವನ್ನೆತ್ತಿ ಕರ್ತನ ಮಹತ್ತಿನ ನಿಮಿತ್ತ ಹಾಡು ವರು, ಸಮುದ್ರದ ಕಡೆಯಿಂದ ಆರ್ಭಟಿಸುವರು.
- 15ಆದದರಿಂದ ನೀವು ಕರ್ತನಿಗೆ ಬೆಂಕಿಯಲ್ಲಿಯೂ ಸಮುದ್ರದ ದ್ವೀಪಗಳಲ್ಲಿಯೂ ಇಸ್ರಾಯೇಲ್ಯರ ದೇವ ರಾದ ಕರ್ತನ ಹೆಸರನ್ನು ಘನಪಡಿಸಿರಿ.
Cross references
- Isaiah 1:9 ಯೆಶಾಯ 1:9ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
- Matthew 24:22 ಮತ್ತಾಯನು 24:22ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.
- Ezekiel 14:22–23 ಯೆಹೆಜ್ಕೇಲನು 14:22–23ಆದಾಗ್ಯೂ ಇಗೋ, ಅದರಲ್ಲಿ ಕುಮಾರ ಕುಮಾರ್ತೆಯರಲ್ಲಿ ಕೆಲವರು ಹೇಗೂ ತಪ್ಪಿಸಿಕೊಂಡು ಅಲ್ಲಿಂದ ಉಳಿದು ಒಯ್ಯಲ್ಪಡುವರು. ಇಗೋ, ಅವರು ನಿಮ್ಮ ಬಳಿಗೆ ಬಂದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ತಂದ ಕೇಡಿನ ವಿಷಯವಾಗಿಯೂ ನಾನು ಅವರ ಮೇಲೆ ತಂದ ಎಲ್ಲವುಗಳ ವಿಷಯವಾಗಿಯೂ ಸಮಾಧಾನ ಹೊಂದು ವಿರಿ.ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ. ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
- Isaiah 17:5–6 ಯೆಶಾಯ 17:5–6ಕೊಯ್ಯುವವನು ಪೈರನ್ನು ಕೂಡಿಸಿ ತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ ರೆಫಾಯಾಮಿನ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆಯೂ ಇರುವದು. ಆದರೂ ಎಣ್ಣೇ ಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿ ಯಲ್ಲಿ ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲು ಹಣ್ಣುಗಳು ಅದರಲ್ಲಿ ಉಳಿ ಯುವವು ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳುತ್ತಾನೆ.
- Romans 11:2–6 ರೋಮಾಪುರದವರಿಗೆ 11:2–6ದೇವರು ಮುಂದಾಗಿ ಅರಿತುಕೊಂಡಿದ್ದ ತನ್ನ ಜನರನ್ನು ತಳ್ಳಿಹಾಕಲಿಲ್ಲ. ಎಲೀಯನ ವಿಷಯವಾಗಿಯಾದರೋ ಅವನು ಇಸ್ರಾಯೇಲ್ಯರಿಗೆ ವಿರೋಧವಾಗಿ ದೇವರಿಗೆ ವಿಜ್ಞಾಪನೆ ಮಾಡುತ್ತಾ-- ಕರ್ತನೇ, ಅವರು ನಿನ್ನ ಪ್ರವಾದಿಗಳನ್ನು ಕೊಂದು ನಿನ್ನ ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ; ಆದರೆ ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಿದ್ದಾರೆ ಎಂದು ಬರಹವು ಹೇಳಿದ್ದು ನಿಮಗೆ ಗೊತ್ತಿಲ್ಲವೋ? ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು. ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ. ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.
- Ezekiel 7:16 ಯೆಹೆಜ್ಕೇಲನು 7:16ಆದರೆ ಅವರಲ್ಲಿ ತಪ್ಪಿಸಿಕೊಳ್ಳುವವರು ತಪ್ಪಿಸಿಕೊಳ್ಳುವರು; ಪ್ರತಿಯೊ ಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಗೋಳಾಡಿ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಪರ್ವತಗಳ ಮೇಲೆ ಇರುವರು.
- Micah 2:12 ಮೀಕ 2:12ಯಾಕೋಬೇ ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು; ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು, ಬೊಚ್ರದ ಕುರಿಗ ಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆ ಯಂತೆಯೂ ಅವರನ್ನು ಒಟ್ಟಾಗಿ ಕೂಡಿಡುವೆನು; ಬಹುಮಂದಿಯಾಗಿರುವ ಕಾರಣ ಅವರು ಮಹಾ ಶಬ್ದ ಮಾಡುವರು.ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
- Ezekiel 6:8–11 ಯೆಹೆಜ್ಕೇಲನು 6:8–11ಆದಾಗ್ಯೂ ನೀವು ದೇಶಗಳಲ್ಲಿ ಚದರಿಹೋಗುವಾಗ ಜನಾಂಗಗಳೊಳಗೆ ಕತ್ತಿ ಬೀಸಿದಾಗ ತಪ್ಪಿಸಿಕೊಳ್ಳು ವವರು ನಿಮ್ಮಲ್ಲಿರುವ ಹಾಗೆ ಕೆಲವರನ್ನು ಉಳಿಸುತ್ತೇನೆ. ನಿಮ್ಮಲ್ಲಿ ತಪ್ಪಿಸಿಕೊಂಡವರು ತಾವು ಸೆರೆಗೆ ಒಯ್ಯಲ್ಪ ಡುವ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳು ವರು, ಯಾಕಂದರೆ ನನ್ನನ್ನು ಬಿಟ್ಟುಬಿಡುವ ಅವರ ಜಾರಹೃದಯದಿಂದಲೂ ಅವರ ದೇವರ ವಿಗ್ರಹಗಳ ಹಿಂದೆ ಜಾರತ್ವ ಮಾಡುವವರ ಕಣ್ಣುಗಳಿಂದಲೂ ಮುರಿದುಹೋದೆನು; ಅವರು ತಮ್ಮ ಅಸಹ್ಯಗಳಲ್ಲಿ ಮಾಡುವ ಕೇಡುಗಳ ನಿಮಿತ್ತ ತಮಗೆ ತಾವೇ ಹೇಸಿ ಕೊಳ್ಳುವರು. ನಾನೇ ಕರ್ತನೆಂದೂ ನಾನು ಈ ಕೇಡನ್ನು ಮಾಡುತ್ತಿರುವೆನೆಂದೂ ನಾನು ವ್ಯರ್ಥವಾಗಿ ಹೇಳುವದಿಲ್ಲವೆಂದೂ ತಿಳಿದುಕೊಳ್ಳುವರು. ದೇವರಾದ ಕರ್ತನು ಹೇಳುವದೇನಂದರೆ; ನಿನ್ನ ಕೈಯಿಂದ ಬಡಿದು ನಿನ್ನ ಪಾದದಿಂದ ತುಳಿದು ಹೇಳ ಬೇಕಾದದ್ದೇನಂದರೆ--ಮನೆಯವರ ಸಮಸ್ತ ಕೆಟ್ಟ ಅಸಹ್ಯಗಳೇ ಅಯ್ಯೋ, ಅವರು ಕತ್ತಿಯಿಂದಲೂ ಬರ ದಿಂದಲೂ ಮತ್ತು ವ್ಯಾಧಿಗಳಿಂದಲೂ ಬೀಳುವರು.
- Ezekiel 11:16–20 ಯೆಹೆಜ್ಕೇಲನು 11:16–20ಆದದರಿಂದ ನೀವು ಹೇಳತಕ್ಕದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರನ್ನು ಅನ್ಯ ಜನಾಂಗ ಗಳಿಂದ ದೂರ ಹಾಕಿದ್ದಾಗ್ಯೂ ದೇಶಗಳನ್ನು ಚದರಿಸಿ ದ್ದಾಗ್ಯೂ ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದ ವರೆಗೆ ಪವಿತ್ರಾಲಯವಾಗಿರುವೆನು. ಆದದರಿಂದ ನೀನು ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆಹೇಳುತ್ತಾನೆ--ನಾನು ನಿಶ್ಚ ಯವಾಗಿ ನಿಮ್ಮನ್ನು ಜನಾಂಗಗಳೊಳಗಿಂದ ನೀವು ಚದ ರಿಹೋದ ದೇಶಗಳೊಳಗಿಂದ ಕೂಡಿಸುತ್ತೇನೆ; ಇಸ್ರಾ ಯೇಲ್ ದೇಶವನ್ನು ನಿಮಗೆ ಕೊಡುತ್ತೇನೆ. ಅವರು ಅಲ್ಲಿಗೆ ಬಂದು ಎಲ್ಲಾ ಹೇಸಿಗೆಯ ಸಂಗತಿಗಳನ್ನೂ ಎಲ್ಲಾ ಅಸಹ್ಯವಾದವುಗಳನ್ನೂ ಅಲ್ಲಿಂದ ತೆಗೆದು ಹಾಕುವರು; ಅವರಿಗೆ ಒಂದು ಹೃದಯವನ್ನು ಕೊಡು ವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು; ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು. ಆಗ ಅವರು ನನ್ನ ನಿಯಮಗಳಲ್ಲಿ ನಡೆದುಕೊಂಡು ನನ್ನ ನಿಯಮಗ ಳನ್ನು ಕೈಕೊಂಡು ನಡೆಯುವರು. ಅವರು ನನ್ನ ಜನರಾಗು ವರು, ನಾನು ಅವರ ದೇವರಾಗುವೆನು.
- Isaiah 6:13 ಯೆಶಾಯ 6:13ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.
- Revelation 11:2–3 ಪ್ರಕಟನೆ 11:2–3ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು. ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.
- Jeremiah 44:28 ಯೆರೆಮೀಯ 44:28ಆದರೆ ಕತ್ತಿಗೆ ತಪ್ಪಿಸಿಕೊಂಡು ಸ್ವಲ್ಪ ಜನರು ಐಗುಪ್ತದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂತಿರುಗಿ ಹೋಗುವರು; ಆಗ ಐಗುಪ್ತ ದೇಶದಲ್ಲಿ ತಂಗುವದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವದೋ ಅವರ ಮಾತು ನಿಲ್ಲುವದೋ ಎಂಬದನ್ನು ತಿಳಿದುಕೊಳ್ಳುವರು.