Isaiah · chapter 24 · verse 19
Isaiah 24:19 in Kannada
ಭೂಮಿಯು ಸಂಪೂರ್ಣ ವಾಗಿ ಮುರಿಯಲ್ಪಟ್ಟಿದೆ. ಪೂರ್ತಿಯಾಗಿ ತುಂಡು ತುಂಡಾಗಿ ಹೋಗಿದೆ. ಭೂಮಿಯು ಮಿತಿವಿಾರಿ ಚಲಿಸ ಲ್ಪಟ್ಟಿದೆ.
Bhoomiyu sampoorna vaagi muriyalpattide. Poortiyaagi tundu tundaagi hogide. Bhoomiyu mitiviాri chalisa lpattide.
Isaiah 24:19 in English
- King James Version (KJV)
- The earth is utterly broken down, the earth is clean dissolved, the earth is moved exceedingly.
- World English Bible (WEB)
- The earth is utterly broken. The earth is torn apart. The earth is shaken violently.
- American Standard Version (ASV)
- The earth is utterly broken, the earth is rent asunder, the earth is shaken violently.
- Bible in Basic English (BBE)
- The earth is completely broken, it is parted in two, it is violently moved.
- Darby Translation (DBY)
- The earth is utterly broken down, the earth is completely dissolved, the earth is violently moved.
- Webster's Bible (WBS)
- The earth is utterly broken down, the earth is entirely dissolved, the earth is exceedingly moved.
- Young's Literal Translation (YLT)
- Utterly broken down hath been the land, Utterly broken hath been the land, Utterly moved hath been the land.
Read in context
- 17ಓ, ಭೂಮಿಯ ನಿವಾಸಿಗಳೇ, ಭಯವೂ ಗುಂಡಿಯೂ ಬಲೆಯೂ ನಿಮಗೆ ಕಾದಿವೆ.
- 18ಆಗ ಭಯದ ಶಬ್ದಕ್ಕೆ ಓಡಿ ಹೋಗುವವನು, ಕುಣಿಯೊಳಗೆ ಬೀಳುವನು; ಆ ಕುಣಿಯೊಳಗಿಂದ ಏರಿ ಬರುವವನು ಬಲೆಗೆ ಬೀಳು ವನು; ಮೇಲಿನ ಕಿಟಕಿಗಳು (ಆಕಾಶದ ದ್ವಾರಗಳು) ತೆರೆಯಲ್ಪಟ್ಟಿವೆ. ಭೂಮಿಯ ಅಸ್ತಿವಾರಗಳು ನಡುಗು ತ್ತವೆ. (ಕಂಪಿಸುತ್ತವೆ).
- 19ಭೂಮಿಯು ಸಂಪೂರ್ಣ ವಾಗಿ ಮುರಿಯಲ್ಪಟ್ಟಿದೆ. ಪೂರ್ತಿಯಾಗಿ ತುಂಡು ತುಂಡಾಗಿ ಹೋಗಿದೆ. ಭೂಮಿಯು ಮಿತಿವಿಾರಿ ಚಲಿಸ ಲ್ಪಟ್ಟಿದೆ.
- 20ಭೂಮಿಯು ಕುಡುಕನ ಹಾಗೆ ಓಲಾಡು ತ್ತದೆ ಮತ್ತು ಗುಡಿಸಲಿನ ಹಾಗೆ ತೆಗೆಯಲ್ಪಡುತ್ತದೆ ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ; ಅದು ಬಿದ್ದುಹೋಗುತ್ತದೆ ತಿರಿಗಿ ಏಳುವದೇ ಇಲ್ಲ.
- 21ಆ ದಿವಸದಲ್ಲಿ ಆಗುವದೇನಂದರೆ--ಕರ್ತನು ಉನ್ನತದಲ್ಲಿರುವ ಉನ್ನತವಾದವರ ಸೈನ್ಯವನ್ನೂ ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸು ವನು.
Cross references
- Isaiah 34:4–10 ಯೆಶಾಯ 34:4–10ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವದು, ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ಅವುಗಳ ಸೈನ್ಯವೆಲ್ಲಾ ಬಾಡಿ ಕೆಳಗೆ ಬೀಳುವದು. ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು. ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ. ಕಾಡು ಕೋಣಗಳು ಅವುಗಳ ಸಂಗಡಲೂ ಎತ್ತುಗಳು ಹೋರಿ ಗಳ ಸಂಗಡಲೂ ಬೀಳುವವು; ಅವರ ದೇಶವು ರಕ್ತ ದಿಂದ ನೆನೆಯುವದು, ಅವರ ಧೂಳು ಕೊಬ್ಬಿನಿಂದ ಪುಷ್ಟಿಯಾಗುವದು-- ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ. ಪ್ರವಾಹಗಳು ಇಳಿಜಾರಾಗಿ ಮಾರ್ಪಡುವದೂ; ಅದರ ದೂಳು ಗಂಧಕವಾಗುವದು; ದೇಶವು ಉರಿ ಯುವ ಇಳಿಜಾರು ಪ್ರದೇಶವಾಗುವದು. ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರು ವದಿಲ್ಲ; ಅದರ ಹೊಗೆಯು ನಿರಂತರವಾಗಿ ಏಳುತ್ತಿರು ವದು; ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರು ವದು; ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು.
- Deuteronomy 11:6 ಧರ್ಮೋಪದೇಶಕಾಂಡ 11:6ಆತನು ರೂಬೇನನ ಮಗನಾದ ಎಲಿಯಾಬನ ಕುಮಾರರಾಗಿರುವ ದಾತಾನನಿಗೂ ಅಬೀರಾಮನಿಗೂ ಮಾಡಿದ್ದನ್ನೂ ಭೂಮಿಯು ತನ್ನ ಬಾಯನ್ನು ತೆರೆದು ಅವರ ಮನೆಗಳನ್ನೂ ಡೇರೆಗಳನ್ನೂ ಮೇರೆಗಳನ್ನೂ ಅವರಿಗಿದ್ದ ಎಲ್ಲಾ ಆಸ್ತಿಯನ್ನೂ ಸಮಸ್ತ ಇಸ್ರಾಯೇಲ್ ಮಧ್ಯದಲ್ಲಿ ಹೇಗೆ ನುಂಗಿತೆಂಬದನ್ನೂ ನೋಡದೆ ತಿಳಿಯದೆ ಇರುವ ನಿಮ್ಮ ಮಕ್ಕಳ ಸಂಗಡ ನಾನು ಮಾತನಾಡುವದಿಲ್ಲ.
- Jeremiah 4:23–28 ಯೆರೆಮೀಯ 4:23–28ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ ಹಾಳಾಗಿಯೂ ಶೂನ್ಯವಾಗಿಯೂ ಇತ್ತು; ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ. ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು. ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿಹೋಗಿದ್ದವು. ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು. ಕರ್ತನು ಹೀಗೆ ಹೇಳಿದ್ದಾನೆ--ದೇಶವೆಲ್ಲಾ ಹಾಳಾಗುವದು; ಆದಾಗ್ಯೂ ನಾನು ಅದನ್ನು ಪೂರ್ಣ ಮಾಡಿಲ್ಲ. ಇದರ ನಿಮಿತ್ತ ಭೂಮಿಯು ದುಃಖಿಸುವದು; ಮೇಲಿರುವ ಆಕಾಶವು ಕಪ್ಪಾಗುವದು; ನಾನು ಅದನ್ನು ಹೇಳಿ ನಿಶ್ಚಯಿಸಿದ್ದೇನೆ; ಮಾನಸಾಂತರಪಡುವದಿಲ್ಲ; ಇಲ್ಲವೆ ಅದರಿಂದ ಹಿಂತಿರುಗುವದಿಲ್ಲ;
- Nahum 1:5 ನಹೂಮ 1:5ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು.
- Revelation 20:11 ಪ್ರಕಟನೆ 20:11ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
- Isaiah 24:1–5 ಯೆಶಾಯ 24:1–5ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ. ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೂ ದಾಸನಿಗೆ ಹೇಗೋ ಹಾಗೆಯೇ ಅವನ ಯಜಮಾನನಿಗೆ, ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ತರುವ ವನಿಗೆ; ಬಡ್ಡಿಕೊಡುವವನಿಗೆ ಹೇಗೋ ಹಾಗೆಯೇ ತಕ್ಕೊಳ್ಳುವವನಿಗೆ ಆಗುವದು. ಭೂಮಿಯು ಬರಿದೇ ಬರಿದಾಗುವದು ಮತ್ತು ಸಂಪೂರ್ಣ ಸುಲಿಗೆಯಾಗು ವದು. ಕರ್ತನು ತಾನೇ ಈ ಮಾತನ್ನು ಹೇಳಿದ್ದಾನೆ. ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವದು. ಲೋಕವು ಸೊರಗಿ ಬಾಡಿಹೋಗುವದು ಭೂಮಿಯ ಗರ್ವಿಷ್ಠರು ಕುಗ್ಗಿಹೋಗುವರು. ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು.
- Habakkuk 3:6 ಹಬಕ್ಕೂಕ 3:6ಆತನು ನಿಂತುಕೊಂಡು ಭೂಮಿಯನ್ನು ಅಳೆದನು. ಆತನು ನೋಡಿ ಜನಾಂಗ ಗಳನ್ನು ಓಡಿಸಿಬಿಟ್ಟನು; ಶಾಶ್ವತವಾದ ಪರ್ವತಗಳು ಚದುರಿಸಲ್ಪಟ್ಟವು; ನಿತ್ಯವಾದ ಗುಡ್ಡಗಳು ನಡುಗಿ ದವು; ಆತನ ಮಾರ್ಗಗಳು ನಿತ್ಯವಾದವುಗಳೇ.
- Matthew 24:3 ಮತ್ತಾಯನು 24:3ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.