Isaiah · chapter 24 · verse 21
Isaiah 24:21 in Kannada
ಆ ದಿವಸದಲ್ಲಿ ಆಗುವದೇನಂದರೆ--ಕರ್ತನು ಉನ್ನತದಲ್ಲಿರುವ ಉನ್ನತವಾದವರ ಸೈನ್ಯವನ್ನೂ ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸು ವನು.
Aa divasadalli aaguvadenandare--kartanu unnatadalliruva unnatavaadavara sainyavannoo bhoomiya meliruva bhooraajarannoo dandisu vanu.
Isaiah 24:21 in English
- King James Version (KJV)
- And it shall come to pass in that day, [that] the LORD shall punish the host of the high ones [that are] on high, and the kings of the earth upon the earth.
- World English Bible (WEB)
- It will happen in that day that the LORD will punish the army of the high ones on high, and the kings of the earth on the earth.
- American Standard Version (ASV)
- And it shall come to pass in that day, that Jehovah will punish the host of the high ones on high, and the kings of the earth upon the earth.
- Bible in Basic English (BBE)
- And in that day the Lord will send punishment on the army of the high ones on high, and on the kings of the earth on the earth.
- Darby Translation (DBY)
- And it shall come to pass in that day, [that] Jehovah will punish the host of the high ones on high, and the kings of the earth upon the earth.
- Webster's Bible (WBS)
- And it shall come to pass in that day, [that] the LORD shall punish the host of the high ones [that are] on high, and the kings of the earth upon the earth.
- Young's Literal Translation (YLT)
- And it hath come to pass, in that day, Jehovah layeth a charge on the host of the high place in the high place, And on the kings of the land on the land.
Read in context
- 19ಭೂಮಿಯು ಸಂಪೂರ್ಣ ವಾಗಿ ಮುರಿಯಲ್ಪಟ್ಟಿದೆ. ಪೂರ್ತಿಯಾಗಿ ತುಂಡು ತುಂಡಾಗಿ ಹೋಗಿದೆ. ಭೂಮಿಯು ಮಿತಿವಿಾರಿ ಚಲಿಸ ಲ್ಪಟ್ಟಿದೆ.
- 20ಭೂಮಿಯು ಕುಡುಕನ ಹಾಗೆ ಓಲಾಡು ತ್ತದೆ ಮತ್ತು ಗುಡಿಸಲಿನ ಹಾಗೆ ತೆಗೆಯಲ್ಪಡುತ್ತದೆ ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ; ಅದು ಬಿದ್ದುಹೋಗುತ್ತದೆ ತಿರಿಗಿ ಏಳುವದೇ ಇಲ್ಲ.
- 21ಆ ದಿವಸದಲ್ಲಿ ಆಗುವದೇನಂದರೆ--ಕರ್ತನು ಉನ್ನತದಲ್ಲಿರುವ ಉನ್ನತವಾದವರ ಸೈನ್ಯವನ್ನೂ ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸು ವನು.
- 22ಕುಣಿಯೊಳಗೆ ಒಟ್ಟುಗೂಡಿದ ಸೆರೆಯವರ ಹಾಗೆ ಅವರು ಒಟ್ಟುಗೂಡಿ ಸೆರೆಮನೆಯಲ್ಲಿ ಮುಚ್ಚ ಲ್ಪಟ್ಟು ಬಹಳ ದಿವಸಗಳಾದ ಮೇಲೆ ದಂಡನೆಗೆ ಗುರಿ ಯಾಗುವರು.ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
- 23ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
Cross references
- Psalm 76:12 ಕೀರ್ತನೆಗಳು 76:12ಆತನು ಪ್ರಧಾನರ ಪ್ರಾಣವನ್ನು ತೆಗೆದು ಹಾಕು ತ್ತಾನೆ; ಭೂಮಿಯ ಅರಸುಗಳಿಗೆ ಭಯಂಕರ ನಾಗಿದ್ದಾನೆ.
- Zechariah 14:12–19 ಜೆಕರ್ಯ 14:12–19ಯೆರೂಸಲೇಮಿಗೆ ವಿರೋಧವಾಗಿ ದಂಡುಕಟ್ಟಿ ಕೊಂಡಿರುವ ಎಲ್ಲಾ ಜನಗಳನ್ನು ಕರ್ತನು ವ್ಯಾಧಿ ಯಿಂದ ಬಾಧಿಸುವನು; ಹೀಗೆಯೇ ಅವರು ಕಾಲಿನ ಮೇಲೆ ನಿಲ್ಲುವಾಗ ಅವರ ಶರೀರವು ಕ್ಷಯಿಸಿಹೋಗು ವದು; ಅವರ ಕಣ್ಣುಗಳು ಗುಣಿಗಳಲ್ಲಿ ಇಂಗಿಹೋಗು ವವು; ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವದು. ಆ ದಿನದಲ್ಲಿ ಆಗುವದೇನಂದರೆ --ಕರ್ತನಿಂದಾದ ದೊಡ್ಡ ಕೋಲಾಹಲ ಅವರಲ್ಲಿ ಇರುವದು; ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಅವನ ಕೈ ತನ್ನ ನೆರೆಯವನ ಮೇಲೆ ಎತ್ತಲ್ಪಡುವದು. ಯೆಹೂದವು ಸಹ ಯೆರೂಸಲೇಮಿನಲ್ಲಿ ಯುದ್ಧ ಮಾಡುವದು; ಸುತ್ತಲಿರುವ ಎಲ್ಲಾ ಅನ್ಯ ಜನಾಂಗಗಳ ಸಂಪತ್ತಾಗಿ ರುವ, ಚಿನ್ನ, ಬೆಳ್ಳಿ, ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲ್ಪಡುವವು. ಆ ಗುಡಾರಗಳಲ್ಲಿರುವ ಕುದುರೆ, ಹೇಸರಕತ್ತೆ, ಒಂಟೆ, ಕತ್ತೆ ಮೊದಲಾದ ಎಲ್ಲಾ ಪಶುಗಳ ಬಾಧೆಯು ಈ ಬಾಧೆಯ ಹಾಗೆಯೇ ಇರುವದು. ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು. ಆಗುವದೇನಂದರೆ, ಭೂಮಿಯ ಗೋತ್ರಗಳಲ್ಲಿ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೆ ಯೆರೂಸಲೇಮಿಗೆ ಹೋಗದೆ ಇರುವವರ್ಯಾರೋ ಅವರ ಮೇಲೆ ಮಳೆ ಇಲ್ಲದೆ ಇರುವದು. ಮಳೆ ಇಲ್ಲದ ಐಗುಪ್ತದ ಗೋತ್ರದವರು ಹೋಗದಿದ್ದರೆ ಗುಡಾರಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದ ಅನ್ಯಜನಾಂಗಗಳನ್ನು ಕರ್ತನು ಹೊಡೆಯುವ ವ್ಯಾಧಿಯು ಅವರ ಮೇಲೆ ಇರುವದು. ಇದೇ ಐಗುಪ್ತದ ದಂಡನೆಯೂ ಗುಡಾರಗಳ ಹಬ್ಬ ವನ್ನು ಆಚರಿಸುವದಕ್ಕೆ ಬಾರದ ಎಲ್ಲಾ ಜನಾಂಗಗಳ ದಂಡನೆಯೂ ಆಗಿರುವದು.
- Isaiah 34:2–17 ಯೆಶಾಯ 34:2–17ಕರ್ತನು ಸಕಲ ಜನಾಂಗಗಳ ಮೇಲೆ ಕೋಪಮಾಡಿ ಅವುಗಳ ಎಲ್ಲಾ ಸೈನ್ಯಗಳ ಮೇಲೆ ರೋಷಗೊಂಡು ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ನಾಶಮಾಡಿದ್ದಾನೆ. ಅವರಲ್ಲಿ ಕೊಂದುಹಾಕಲ್ಪಟ್ಟವರು ಬಿಸಾಡಲ್ಪಡು ವರು. ಅವರ ಹೆಣಗಳ ದುರ್ವಾಸನೆಯು ಮೇಲಕ್ಕೆ ಏರುವದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗಿಹೋಗುವವು. ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವದು, ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ಅವುಗಳ ಸೈನ್ಯವೆಲ್ಲಾ ಬಾಡಿ ಕೆಳಗೆ ಬೀಳುವದು. ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು. ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ. ಕಾಡು ಕೋಣಗಳು ಅವುಗಳ ಸಂಗಡಲೂ ಎತ್ತುಗಳು ಹೋರಿ ಗಳ ಸಂಗಡಲೂ ಬೀಳುವವು; ಅವರ ದೇಶವು ರಕ್ತ ದಿಂದ ನೆನೆಯುವದು, ಅವರ ಧೂಳು ಕೊಬ್ಬಿನಿಂದ ಪುಷ್ಟಿಯಾಗುವದು-- ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ. ಪ್ರವಾಹಗಳು ಇಳಿಜಾರಾಗಿ ಮಾರ್ಪಡುವದೂ; ಅದರ ದೂಳು ಗಂಧಕವಾಗುವದು; ದೇಶವು ಉರಿ ಯುವ ಇಳಿಜಾರು ಪ್ರದೇಶವಾಗುವದು. ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರು ವದಿಲ್ಲ; ಅದರ ಹೊಗೆಯು ನಿರಂತರವಾಗಿ ಏಳುತ್ತಿರು ವದು; ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರು ವದು; ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು. ಆದರೆ ಬಕ ಪಕ್ಷಿಯು ಮತ್ತು ಮುಳ್ಳು ಹಂದಿಯು ಅದನ್ನು ಆವರಿಸಿಕೊಳ್ಳುವವು; ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವವು; ಗಲಿಬಿಲಿ ಯೆಂಬ ನೂಲನ್ನು ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು. ಅವರ ರಾಜ್ಯಕ್ಕೆ ಪ್ರಮುಖರನ್ನು ಕರೆಯುವರು; ಆದರೆ ಅಲ್ಲಿ ಯಾರೂ ಇರುವದಿಲ್ಲ; (ಅದರ) ಅವಳ ಪ್ರಭುಗಳು ಇಲ್ಲದಂತಾಗುವರು. ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು; ಅವಳ ಕೋಟೆಗಳಲ್ಲಿ ತುರುಚಿಯೂ ದತ್ತೂರಿಯೂ ಇರುವವು; ಅದು (ಉಷ್ಟ್ರ ಪಕ್ಷಿಗಳ) ಸರ್ಪಗಳ ನಿವಾಸವೂ ಗೂಬೆಗಳಿಗೆ ಸ್ಥಾನವೂ ಆಗುವದು. ಮರುಭೂಮಿಯ ಕಾಡು ಮೃಗಗಳು ಸಹ ದ್ವೀಪದ ಕಾಡುಮೃಗಗಳೊಂದಿಗೆ ಸಂಧಿಸುವವು; ದೆವ್ವವು ತನ್ನ ಜೊತೆಯನ್ನು ಕೂಗು ವದು; ಅಲ್ಲಿ ಚೀರುಗೂಬೆಯು ಸಹ ವಿಶ್ರಮಿಸಿಕೊಂಡು ಉಪಶಮನ ಸ್ಥಳವನ್ನು ಕಂಡುಕೊಳ್ಳುವದು. ದೊಡ್ಡ ಗೂಬೆಯು ಅಲ್ಲಿ ಗೂಡನ್ನು ಮಾಡಿಕೊಂಡು ಮೊಟ್ಟೆ ಯಿಟ್ಟು ಮರಿ ಮಾಡಿ ಅವುಗಳನ್ನು ತನ್ನ ನೆರಳಿನಲ್ಲಿ ಕೂಡಿಸುವದು; ಅಲ್ಲಿ ಹದ್ದುಗಳಲ್ಲಿ ಪ್ರತಿಯೊಂದು ತಮ್ಮ ಜೊತೆಜೊತೆಯಾಗಿ ಕೂಡಿಕೊಳ್ಳುವವು. ಕರ್ತನ ಪುಸ್ತಕದಲ್ಲಿ ನೀವು ಹುಡುಕಿ ಓದಿರಿ; ಇವು ಗಳಲ್ಲಿ ಒಂದಾದರೂ ತಪ್ಪದು, ಜೊತೆಯಿಲ್ಲದೆ ಒಂದೂ ಇಲ್ಲ; ನನ್ನ ಬಾಯಿಯೇ ಅದನ್ನು ಆಜ್ಞಾಪಿ ಸಿತು; ಆತನ ಆತ್ಮವೇ ಅವುಗಳನ್ನು ಒಟ್ಟುಗೂಡಿಸಿತುಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು. ಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.
- Isaiah 10:12 ಯೆಶಾಯ 10:12ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
- Revelation 19:18–21 ಪ್ರಕಟನೆ 19:18–21ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು. ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು. ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು. ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Revelation 17:14 ಪ್ರಕಟನೆ 17:14ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
- Psalm 149:6–9 ಕೀರ್ತನೆಗಳು 149:6–9ಉನ್ನತ ದೇವರ ಸ್ತೋತ್ರಗಳು ಅವರ ಬಾಯಿಯ ಲ್ಲಿಯೂ ಇಬ್ಬಾಯಿ ಕತ್ತಿಯು ಅವರ ಕೈಯಲ್ಲಿಯೂ ಇರಲಿ. ಜನಾಂಗಗಳಲ್ಲಿ ಮುಯ್ಯಿಗೆಮುಯ್ಯನ್ನೂ ಪ್ರಜೆ ಗಳಲ್ಲಿ ಶಿಕ್ಷೆಗಳನ್ನೂ ಮಾಡಲಿ. ಅವರ ಅರಸುಗಳನ್ನು ಸಂಕೋಲೆಗಳಿಂದಲೂ ಅವರ ಘನವುಳ್ಳವರನ್ನು ಕಬ್ಬಿ ಣದ ಬೇಡಿಗಳಿಂದಲೂ ಬಂಧಿಸಲಿ;ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ. ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ.
- Revelation 18:9 ಪ್ರಕಟನೆ 18:9ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು.
- Revelation 6:14–17 ಪ್ರಕಟನೆ 6:14–17ಆಕಾಶವು ಸುರುಳಿಯ ಹಾಗೆ ಸುತ್ತಲ್ಪಟ್ಟು ಹೋಗಿ ಬಿಟ್ಟಿತು; ಎಲ್ಲಾ ಬೆಟ್ಟಗಳೂ ದ್ವೀಪಗಳೂ ತಮ್ಮ ತಮ್ಮ ಸ್ಥಳಗಳಿಂದ ಚದರಿದವು. ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು. ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
- Isaiah 10:25–27 ಯೆಶಾಯ 10:25–27ಇನ್ನು ಸ್ವಲ್ಪ ಕಾಲದಲ್ಲಿ, (ನಿಮ್ಮ ಮೇಲಿನ) ಉಗ್ರವು ತೀರಿ ನನ್ನ ಕೋಪವು ಅವರ ನಾಶನಕ್ಕಾ ಗುವದು. ಸೈನ್ಯಗಳ ಕರ್ತನು ಓರೇಬನ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು. ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವದು; ನೀವು ಅಭಿಷಿಕ್ತರಾದ ಕಾರಣ ನೊಗವು ನಾಶವಾಗಿ ಹೋಗುವದು.
- Isaiah 25:10–12 ಯೆಶಾಯ 25:10–12ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು. ಈಜುವವನು ಈಜುವದಕ್ಕೆ ತನ್ನ ಕೈಗಳನ್ನು ಹರಡಿಕೊಂಡ ಹಾಗೆ, ಆತನು ಅದರ ಮಧ್ಯೆ ತನ್ನ ಕೈಗಳನ್ನು ಚಾಚುವನು. ಅದರ ಗರ್ವವನ್ನು ಅವರ ಕೊಳ್ಳೆಯೊಂದಿಗೆ ತಗ್ಗಿಸಿ ಬಿಡುವನು.ದುರ್ಗಮವಾಗಿಯೂ ಎತ್ತರವಾಗಿ ಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲಸಮಮಾಡಿ ದೂಳಿಗೆ ತರುವನು. ದುರ್ಗಮವಾಗಿಯೂ ಎತ್ತರವಾಗಿ ಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲಸಮಮಾಡಿ ದೂಳಿಗೆ ತರುವನು.
- Joel 3:19 ಯೋವೇಲ 3:19ಐಗುಪ್ತವು ಹಾಳಾಗು ವದು; ಎದೋಮು ಹಾಳಾದ ಅರಣ್ಯವಾಗುವದು; ಅವರು ಯೆಹೂದನ ಮಕ್ಕಳನ್ನು ಬಲಾತ್ಕಾರಮಾಡಿ ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿ ದರು.