Isaiah · chapter 24 · verse 5
Isaiah 24:5 in Kannada
ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು.
Bhoonivaasigalu nyaayapramaanagalannu viాri niyamagalannu bada laayisi nityavaada odambadikeyannu bhangapadisi ddarinda bhoomiyu saha adara nivaasigala hejje yinda apavitravaaguvadu.
Isaiah 24:5 in English
- King James Version (KJV)
- The earth also is defiled under the inhabitants thereof; because they have transgressed the laws, changed the ordinance, broken the everlasting covenant.
- World English Bible (WEB)
- The earth also is polluted under its inhabitants, because they have transgressed the laws, violated the statutes, and broken the everlasting covenant.
- American Standard Version (ASV)
- The earth also is polluted under the inhabitants thereof; because they have transgressed the laws, violated the statutes, broken the everlasting covenant.
- Bible in Basic English (BBE)
- The earth has been made unclean by those living in it; because the laws have not been kept by them, the orders have been changed, and the eternal agreement has been broken.
- Darby Translation (DBY)
- And the land is polluted under the inhabitants thereof; for they have violated the laws, changed the statute, broken the everlasting covenant.
- Webster's Bible (WBS)
- The earth also is defiled under its inhabitants; because they have transgressed the laws, changed the ordinance, broken the everlasting covenant.
- Young's Literal Translation (YLT)
- And the land hath been defiled under its inhabitants, Because they have transgressed laws, They have changed a statute, They have made void a covenant age-during.
Read in context
- 3ಭೂಮಿಯು ಬರಿದೇ ಬರಿದಾಗುವದು ಮತ್ತು ಸಂಪೂರ್ಣ ಸುಲಿಗೆಯಾಗು ವದು. ಕರ್ತನು ತಾನೇ ಈ ಮಾತನ್ನು ಹೇಳಿದ್ದಾನೆ.
- 4ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವದು. ಲೋಕವು ಸೊರಗಿ ಬಾಡಿಹೋಗುವದು ಭೂಮಿಯ ಗರ್ವಿಷ್ಠರು ಕುಗ್ಗಿಹೋಗುವರು.
- 5ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು.
- 6ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.
- 7ದ್ರಾಕ್ಷಾರಸವು ದುಃಖಿಸುತ್ತದೆ, ದ್ರಾಕ್ಷೆಯು ಕ್ಷೀಣಿಸು ವದು; ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ.
Cross references
- Hebrews 13:20 ಇಬ್ರಿಯರಿಗೆ 13:20ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
- Romans 8:20–21 ರೋಮಾಪುರದವರಿಗೆ 8:20–21ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ. ಸೃಷ್ಟಿಯು ತಾನೇ ದೇವರ ಮಕ್ಕಳ ಮಹಿಮೆಯ ಸ್ವಾತಂತ್ರ್ಯತೆಯಲ್ಲಿ ಸೇರುವಂತೆ ನಾಶನದ ದಾಸತ್ವದಿಂದ ಬಿಡುಗಡೆ ಹೊಂದುವದು.
- Hebrews 9:1 ಇಬ್ರಿಯರಿಗೆ 9:1ಹೀಗಿದ್ದರೂ ಮೊದಲನೆಯ ಒಡಂಬಡಿಕೆ ಯಲ್ಲಿ ನಿಜವಾಗಿಯೂ ದೈವಸೇವೆಯ ನಿಯಮಗಳಿದ್ದವು; ಇಹಲೋಕ ಸಂಬಂಧವಾದ ಪವಿತ್ರಸ್ಥಳವಿತ್ತು.
- Daniel 7:25 ದಾನಿಯೇಲನು 7:25ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
- Genesis 3:17–18 ಆದಿಕಾಂಡ 3:17–18ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ. ಇದಲ್ಲದೆ ಭೂಮಿಯು ಮುಳ್ಳುಗಳನ್ನೂ ದತ್ತೂರಿಗಳನ್ನೂ ನಿನಗಾಗಿ ಬೆಳೆಯುವದು. ನೀನು ಹೊಲದ ಪಲ್ಯವನ್ನು ತಿನ್ನುವಿ.
- Numbers 35:33–34 ಅರಣ್ಯಕಾಂಡ 35:33–34ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ. ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
- 2 Kings 17:7–23 2 ಅರಸುಗಳು 17:7–23ಯಾಕೆ ಹೀಗಾಯಿತಂದರೆ, ಇಸ್ರಾಯೇಲಿನ ಮಕ್ಕಳು, ಐಗುಪ್ತದ ಅರಸನಾದ ಫರೋಹನ ಕೈಯಿಂದ ತಪ್ಪಿಸಿ ಐಗುಪ್ತದೇಶದೊಳಗಿಂದ ಬರ ಮಾಡಿದ ತಮ್ಮ ದೇವರಾದ ಕರ್ತನಿಗೆ ವಿರೋಧ ವಾಗಿ ಪಾಪಮಾಡಿ ಇತರ ದೇವರುಗಳಿಗೆ ಭಯಪಟ್ಟರು. ಇಸ್ರಾಯೇಲ್ಯರ ಮುಂದೆ ಕರ್ತನು ಹೊರ ಡಿಸಿಬಿಟ್ಟ ಅನ್ಯ ಜನಾಂಗಗಳ ಕಟ್ಟಳೆಗಳಲ್ಲಿಯೂ ಇಸ್ರಾ ಯೇಲಿನ ಅರಸುಗಳು ಮಾಡಿದ ಕಟ್ಟಳೆಗಳಲ್ಲಿಯೂ ನಡೆದರು. ಇಸ್ರಾಯೇಲಿನ ಮಕ್ಕಳು ಗುಪ್ತವಾಗಿ ತಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಅಯುಕ್ತ ವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲು ಗೊಂಡು ಕೋಟೆಯುಳ್ಳ ಪಟ್ಟಣಗಳ ವರೆಗೂ ತಮ್ಮ ಎಲ್ಲಾ ಪಟ್ಟಣಗಳಲ್ಲಿ ತಮಗೆ ಉನ್ನತ ಸ್ಥಳಗಳನ್ನು ಕಟ್ಟಿಸಿ ಕೊಂಡಿದ್ದರು. ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ ಹಸುರಾದ ಎಲ್ಲಾ ಮರಗಳ ಕೆಳಗೂ ತಮಗೆ ವಿಗ್ರಹಗಳನ್ನು ನಿಲ್ಲಿಸಿ ಅಲ್ಲಿ ಕರ್ತನು ತಮ್ಮ ಮುಂದೆ ಓಡಿಸಿಬಿಟ್ಟ ಅನ್ಯ ಜನಾಂಗಗಳ ಹಾಗೆ ಅವರು ಎಲ್ಲಾ ಉನ್ನತ ಸ್ಥಳಗಳಲ್ಲಿ ಧೂಪವನ್ನು ಸುಟ್ಟು ಕರ್ತನನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು-- ನೀವು ಈ ಕಾರ್ಯವನ್ನು ಮಾಡಬೇಡಿರೆಂದು ಕರ್ತನು ತಮಗೆ ಹೇಳಿದ ಮಣ್ಣು ಪ್ರತಿಮೆಗಳನ್ನು ಸೇವಿಸಿದರು. ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು. ಆದರೆ ಅವರು ಕೇಳ ದೆಯೂ ತಮ್ಮ ದೇವರಾದ ಕರ್ತನಲ್ಲಿ ನಂಬಿಕೆ ಇಡ ದೆಯೂ ತಮ್ಮ ಪಿತೃಗಳ ಕುತ್ತಿಗೆಯ ಹಾಗೆ ತಮ್ಮ ಕುತ್ತಿಗೆಯನ್ನು ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು. ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು. ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ. ಆದರೆ ಯೆಹೂದದವರು ತಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳದೆ ಇಸ್ರಾ ಯೇಲು ಮಾಡಿಕೊಂಡ ಕಟ್ಟಳೆಗಳಲ್ಲಿ ನಡೆದರು. ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವನು ಇಸ್ರಾಯೇಲನ್ನು ದಾವೀದನ ಮನೆಯಿಂದ ಹರಿದುಬಿಟ್ಟನು; ಅವರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲ್ಯರನ್ನು ಕರ್ತ ನನ್ನು ಹಿಂಬಾಲಿಸುವದರಿಂದ ತಪ್ಪಿಸಿ ಅವರನ್ನು ಮಹಾ ಪಾಪಮಾಡಲು ಪ್ರೇರೇಪಿಸಿದನು. ಕರ್ತನು ಪ್ರವಾ ದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಹಾಗೆ ಅವನು ಇಸ್ರಾಯೇಲನ್ನು ತನ್ನ ಸಮ್ಮುಖದಿಂದ ತೆಗೆದು ಹಾಕುವ ವರೆಗೆ ಇಸ್ರಾಯೇಲಿನ ಮಕ್ಕಳು ಯಾರೊ ಬ್ಬಾಮನು ಮಾಡಿದ ಎಲ್ಲಾ ಪಾಪಗಳಲ್ಲಿ ನಡೆದರು; ಅವುಗಳನ್ನು ತೊರೆದು ಬಿಡಲಿಲ್ಲ. ಹೀಗೆಯೇ ಇಸ್ರಾ ಯೇಲಿನವರು ಇಂದಿನ ವರೆಗೂ ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಯಾಗಿ ಒಯ್ಯಲ್ಪಟ್ಟರು.
- Leviticus 18:24–28 ಯಾಜಕಕಾಂಡ 18:24–28ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಹೊಲೆ ಮಾಡಿಕೊಳ್ಳಬಾರದು. ನಿಮ್ಮ ಮುಂದೆ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಲ್ಲಿ ಹೊಲೆಯಾಗಿವೆ. ದೇಶವೂ ಹೊಲೆಯಾಗಿದೆ. ಆದದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು, ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವದು. ಆದದರಿಂದ ನೀವು ನನ್ನ ನಿಯಮಗಳನ್ನು ನಿರ್ಣಯಗಳನ್ನು ಕೈಕೊಳ್ಳಬೇಕು. ನಿಮ್ಮ ದೇಶದವರಲ್ಲಿ ಯಾವನೇ ಆಗಲಿ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿದ್ದ ಪರಕೀಯನಾಗಲಿ ಈ ಅಸಹ್ಯವಾದವುಗಳಲ್ಲಿ ಒಂದನ್ನಾದರೂ ಮಾಡ ಬಾರದು. (ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲ ಅಸಹ್ಯವಾದವುಗಳನ್ನು ಮಾಡಿದರು, ಮತ್ತು ದೇಶವೂ ಹೊಲೆಯಾಯಿತು;) ನೀವೂ ಅದನ್ನು ಅಶುದ್ಧಮಾಡಿದರೆ ಅದು ನಿಮ್ಮ ಮುಂದಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವದು.
- 2 Kings 22:13–17 2 ಅರಸುಗಳು 22:13–17ನೀವು ಹೋಗಿ ಸಿಕ್ಕಿದ ಈ ಪುಸ್ತಕದ ಮಾತುಗಳನ್ನು ಕುರಿತು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಕರ್ತನ ಬಳಿಯಲ್ಲಿ ವಿಚಾರಿಸಿರಿ. ಯಾಕಂದರೆ ನಮ್ಮನ್ನು ಕುರಿತು ಬರೆಯಲ್ಪಟ್ಟ ಎಲ್ಲಾದರ ಪ್ರಕಾರ ಮಾಡಲು ನಮ್ಮ ಪಿತೃಗಳು ಈ ಪುಸ್ತಕದ ಮಾತುಗಳನ್ನು ಕೇಳದೆ ಹೋದದರಿಂದ ನಮಗೆ ವಿರೋಧವಾಗಿ ಉರಿ ಯುವ ದೇವರ ಕೋಪವು ದೊಡ್ಡದಾಗಿದೆ ಅಂದನು. ಹಾಗೆಯೇ ಯಾಜಕನಾದ ಹಿಲ್ಕೀಯನೂ ಅಹೀಕಾ ಮನೂ ಅಕ್ಬೋರನೂ ಶಾಫಾನನೂ ಅಸಾಯನೂ ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ವಸ್ತ್ರಗಳ ಕೆಲಸಗಾರರಾದ ಶಲ್ಲೂಮನ ಹೆಂಡತಿಯಾದ ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಮಾತನಾಡಿದರು. ಅವಳು ಯೆರೂಸಲೇಮಿ ನೊಳಗೆ ಎರಡನೇ ಭಾಗದಲ್ಲಿ ವಾಸವಾಗಿದ್ದಳು. ಆಗ ಅವಳು--ಅವರಿಗೆ ಹೇಳಿದ್ದು--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಹೇಳಬೇಕಾದದ್ದು ಇದೇ--ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನು ಅಂದರೆ ಯೆಹೂದದ ಅರಸನು ಓದಿದ ಪುಸ್ತಕದ ಮಾತುಗ ಳನ್ನೆಲ್ಲಾ ಬರಮಾಡುವೆನು. ಅವರು ತಮ್ಮ ಎಲ್ಲಾ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ನನ್ನ ಕೋಪ ಈ ಸ್ಥಳದ ಮೇಲೆ ಹೊತ್ತಿ ಉರಿಯುವದು, ಆರಿಹೋಗದು ಎಂದು ಕರ್ತನು ಹೇಳುತ್ತಾನೆ.
- Psalm 106:36–39 ಕೀರ್ತನೆಗಳು 106:36–39ಅವರ ವಿಗ್ರಹಗಳಿಗೆ ಸೇವೆ ಮಾಡಿದರು ಅವು ಅವರಿಗೆ ನೇಣು ಆದವು. ತಮ್ಮ ಗಂಡು ಹೆಣ್ಣು ಮಕ್ಕಳನ್ನೂ ದೆವ್ವಗಳಿಗೆ ಅರ್ಪಿಸಿದರು. ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾ ಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ; ದೇಶವನ್ನು ರಕ್ತದಿಂದ ಅಶುದ್ಧಮಾಡಿದರು. ಹೀಗೆ ತಮ್ಮ ಕೆಲಸಗಳಿಂದ ತಮ್ಮನ್ನು ಹೊಲೆಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ಜಾರರಾದರು.
- Isaiah 59:1–3 ಯೆಶಾಯ 59:1–3ಇಗೋ, ಕರ್ತನ ಕೈ ರಕ್ಷಿಸಲಾರದ ಹಾಗೆ ಮೋಟುಗೈಯಲ್ಲ. ಆತನ ಕಿವಿ ಕೇಳ ಲಾರದ ಹಾಗೆ ಕಿವುಡಲ್ಲ. ನಿಮ್ಮ ಅಕ್ರಮಗಳೇ ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿಯವೆ; ನಿಮ್ಮ ಪಾಪಗಳೇ ಆತನು ಕೇಳದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಯವೆ. ನಿಮ್ಮ ಕೈಗಳು ರಕ್ತದಿಂದಲೂ ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ; ನಿಮ್ಮ ತುಟಿಗಳು ಸುಳ್ಳನ್ನು ಮಾತಾಡುತ್ತವೆ; ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ.
- Genesis 6:11–13 ಆದಿಕಾಂಡ 6:11–13ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು; ಭೂಮಿಯು ಬಲಾತ್ಕಾರದಿಂದ ತುಂಬಿತ್ತು. ದೇವರು ಭೂಮಿಯನ್ನು ನೋಡಲಾಗಿ, ಇಗೋ, ಅದು ಕೆಟ್ಟುಹೋದದ್ದಾಗಿತ್ತು; ಮನುಷ್ಯ ರೆಲ್ಲರು ಭೂಮಿಯ ಮೇಲೆ ತಮ್ಮ ಮಾರ್ಗವನ್ನು ಕೆಡಿಸಿಕೊಂಡಿದ್ದರು. ಆಗ ದೇವರು ನೋಹನಿಗೆ--ಮನುಷ್ಯರೆಲ್ಲರ ಅಂತ್ಯವು ನನ್ನ ಮುಂದೆ ಬಂತು; ಅವರಿಂದ ಭೂಮಿಯು ಬಲಾತ್ಕಾರದಿಂದ ತುಂಬಿದೆ; ಇಗೋ, ನಾನು ಭೂಮಿಯೊಂದಿಗೆ ಅವರನ್ನು ನಾಶಮಾಡು ವೆನು.