Isaiah · chapter 24 · verse 6
Isaiah 24:6 in Kannada
ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.
Aadakaarana shaapavu lokavannu nungibittide, adaralli vaasavaagiru vavaru dhvansavaaguvaru; aaddarinda bhoonivaasi galu suttuhogi kelavaru maatra ulididdaare.
Isaiah 24:6 in English
- King James Version (KJV)
- Therefore hath the curse devoured the earth, and they that dwell therein are desolate: therefore the inhabitants of the earth are burned, and few men left.
- World English Bible (WEB)
- Therefore the curse has devoured the earth, and those who dwell therein are found guilty. Therefore the inhabitants of the earth are burned, and few men are left.
- American Standard Version (ASV)
- Therefore hath the curse devoured the earth, and they that dwell therein are found guilty: therefore the inhabitants of the earth are burned, and few men left.
- Bible in Basic English (BBE)
- For this cause the earth is given up to the curse, and those in it are judged as sinners: for this cause those living on the earth are burned up, and the rest are small in number.
- Darby Translation (DBY)
- Therefore doth the curse devour the earth, and they that dwell therein are held guilty; therefore the inhabitants of the earth are consumed, and few men are left.
- Webster's Bible (WBS)
- Therefore hath the curse devoured the earth, and they that dwell in it are desolate: therefore the inhabitants of the earth are burned, and few men left.
- Young's Literal Translation (YLT)
- Therefore a curse hath consumed the land, And the inhabitants in it are become desolate, Therefore consumed have been inhabitants of the land, And few men have been left.
Read in context
- 4ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವದು. ಲೋಕವು ಸೊರಗಿ ಬಾಡಿಹೋಗುವದು ಭೂಮಿಯ ಗರ್ವಿಷ್ಠರು ಕುಗ್ಗಿಹೋಗುವರು.
- 5ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು.
- 6ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.
- 7ದ್ರಾಕ್ಷಾರಸವು ದುಃಖಿಸುತ್ತದೆ, ದ್ರಾಕ್ಷೆಯು ಕ್ಷೀಣಿಸು ವದು; ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ.
- 8ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು.
Cross references
- Malachi 4:1 ಮಲಾಕಿಯ 4:1ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Matthew 7:14 ಮತ್ತಾಯನು 7:14ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.
- Zechariah 5:3–4 ಜೆಕರ್ಯ 5:3–4ಆಗ ಅವನು ನನಗೆ ಹೇಳಿದ್ದೇನಂದರೆ--ದೇಶದ ಮೇಲೆಲ್ಲಾ ಹೊರಡುವ ಶಾಪವು ಇದೇ; ಕಳ್ಳತನ ಮಾಡುವವರೆಲ್ಲರು ಈ ದಿಕ್ಕಿನ ಪ್ರಕಾರ ತೆಗೆದುಹಾಕಲ್ಪಡುವರು; ಆಣೆ ಇಡುವವರೆಲ್ಲರು ಆ ಕಡೆ ಅದರ ಪ್ರಕಾರ ತೆಗೆದುಹಾಕಲ್ಪಡುವರು. ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು.
- Leviticus 26:22 ಯಾಜಕಕಾಂಡ 26:22ನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು.
- Malachi 4:6 ಮಲಾಕಿಯ 4:6ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
- Romans 9:27 ರೋಮಾಪುರದವರಿಗೆ 9:27ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ.
- Ezekiel 5:3 ಯೆಹೆಜ್ಕೇಲನು 5:3ನೀನು ಅವುಗಳೊಳಗಿಂದ ಕೆಲವನ್ನು ಲೆಕ್ಕದಲ್ಲಿ ತೆಗೆದು ನಿನ್ನ ಸೆರಗುಗಳಲ್ಲಿ ಕಟ್ಟು ಅಂದನು.
- Deuteronomy 28:62 ಧರ್ಮೋಪದೇಶಕಾಂಡ 28:62ಆಗ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ಇರುವದರಿಂದ ನೀವು ಅಸಂಖ್ಯವಾದ ಆಕಾಶದ ನಕ್ಷತ್ರಗಳ ಹಾಗಿದ್ದದ್ದಕ್ಕೆ ಬದಲಾಗಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
- Joshua 23:15–16 ಯೆಹೋಶುವ 23:15–16ಈಗ ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಒಳ್ಳೇ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಹಾಗೆಯೇ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನು ನೀವು ವಿಾರಿ, ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಕರ್ತನು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವನು.ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು. ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
- Isaiah 42:24–25 ಯೆಶಾಯ 42:24–25ಯಾಕೋಬನ್ನು ಸುಲಿಗೆಗೂ ಇಸ್ರಾಯೇಲನ್ನು ಕೊಳ್ಳೆಗೂ ಗುರಿಮಾಡಿ ದವನು ಯಾರು? ನಾವು ಯಾರಿಗೆ ವಿರೋಧವಾಗಿ ಪಾಪವನ್ನು ಮಾಡಿದೆವು, ಅದು ಕರ್ತನಿಗಲ್ಲವೇ? ಅವರು ಆತನ ಮಾರ್ಗದಲ್ಲಿ ನಡೆಯದೆ ಇಲ್ಲವೆ ಆತನ ನ್ಯಾಯಪ್ರಮಾಣಕ್ಕೆ ಅವಿಧೇಯರಾದರಲ್ಲಾ.ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ. ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.
- Deuteronomy 4:27 ಧರ್ಮೋಪದೇಶಕಾಂಡ 4:27ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
- Deuteronomy 28:15–20 ಧರ್ಮೋಪದೇಶಕಾಂಡ 28:15–20ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು. ಪಟ್ಟಣದಲ್ಲಿ ನಿನಗೆ ಶಾಪ; ಹೊಲದಲ್ಲಿ ನಿನಗೆ ಶಾಪ; ನಿನ್ನ ಪುಟ್ಟಿಗೂ ಕಣಜಕ್ಕೂ ಶಾಪ. ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಶಾಪ. ಬರು ವಾಗ ನಿನಗೆ ಶಾಪ; ಹೊರಡುವಾಗ ನಿನಗೆ ಶಾಪ. ನೀನು ನನ್ನನ್ನು ಬಿಟ್ಟು ನಿನ್ನ ದುಷ್ಕ್ರಿಯೆಗಳ ಕೆಟ್ಟತ ನದ ನಿಮಿತ್ತ ನೀನು ನಾಶವಾಗುವ ವರೆಗೂ ಶೀಘ್ರ ವಾಗಿ ಕೆಟ್ಟುಹೋಗುವ ವರೆಗೂ ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಶಾಪವನ್ನೂ ಗಾಬರಿಯನ್ನೂ ಗದರಿಕೆಯನ್ನೂ ಕರ್ತನು ನಿನ್ನ ಮೇಲೆ ಕಳುಹಿಸುವನು.