Isaiah · chapter 25 · verse 2
Isaiah 25:2 in Kannada
ನೀನು ದುರ್ಗವನ್ನು ನಾಶಪಡಿಸಿ ಪಟ್ಟಣ ವನ್ನು ಹಾಳುದಿಬ್ಬವನ್ನಾಗಿಯೂ ಅನ್ಯರ ಅರಮನೆಯನ್ನು ಯಾರೂ ಎಂದಿಗೂ ಕಟ್ಟಬಾರದಂತೆ ಮಾಡಿದ್ದೀ.
Neenu durgavannu naashapadisi pattana vannu haaludibbavannaagiyoo anyara aramaneyannu yaaroo endigoo kattabaaradante maadiddee.
Isaiah 25:2 in English
- King James Version (KJV)
- For thou hast made of a city an heap; [of] a defenced city a ruin: a palace of strangers to be no city; it shall never be built.
- World English Bible (WEB)
- For you have made a city into a heap, a fortified city into a ruin, a palace of strangers to be no city. It will never be built.
- American Standard Version (ASV)
- For thou hast made of a city a heap, of a fortified city a ruin, a palace of strangers to be no city; it shall never be built.
- Bible in Basic English (BBE)
- For you have made a town a waste place: a strong town a mass of broken walls; the tower of the men of pride has come to an end; it will never be put up again.
- Darby Translation (DBY)
- For thou hast made of the city a heap, of the fortified town a ruin, the palace of strangers to be no city; it shall never be built up.
- Webster's Bible (WBS)
- For thou hast made of a city a heap; [of] a fortified city a ruin: a palace of strangers to be no city; it shall never be built.
- Young's Literal Translation (YLT)
- For Thou didst make of a city a heap, Of a fenced city a ruin, A high place of strangers from [being] a city, To the age it is not built.
Read in context
- 1ಓ ಕರ್ತನೇ, ನೀನೇ ನನ್ನ ದೇವರು ನೀನು ಸತ್ಯ ಪ್ರಾಮಾಣಿಕತೆಗಳನ್ನು (ಆಲೋ ಚಿಸಿ) ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಕಾರ್ಯಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿ ಸುವೆನು.
- 2ನೀನು ದುರ್ಗವನ್ನು ನಾಶಪಡಿಸಿ ಪಟ್ಟಣ ವನ್ನು ಹಾಳುದಿಬ್ಬವನ್ನಾಗಿಯೂ ಅನ್ಯರ ಅರಮನೆಯನ್ನು ಯಾರೂ ಎಂದಿಗೂ ಕಟ್ಟಬಾರದಂತೆ ಮಾಡಿದ್ದೀ.
- 3ಆದಕಾರಣ ಬಲಿಷ್ಠವಾದ ಜನಾಂಗವು, ನಿನ್ನನ್ನು ಘನಪಡಿಸುವದು ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವದು.
- 4ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.
Cross references
- Isaiah 13:22 ಯೆಶಾಯ 13:22ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
- Isaiah 17:1 ಯೆಶಾಯ 17:1ದಮಸ್ಕದ ವಿಷಯವಾದ ದೈವೋಕ್ತಿ. ಇಗೋ, ದಮಸ್ಕವು ಇನ್ನು ಪಟ್ಟಣವಾಗಿ ರದೆ ತೆಗೆದುಹಾಕಲ್ಪಟ್ಟಿದೆ ಅದು ಹಾಳು ದಿಬ್ಬವಾಗಿ ರುವದು.
- Isaiah 25:12 ಯೆಶಾಯ 25:12ದುರ್ಗಮವಾಗಿಯೂ ಎತ್ತರವಾಗಿ ಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲಸಮಮಾಡಿ ದೂಳಿಗೆ ತರುವನು.
- Revelation 18:2–3 ಪ್ರಕಟನೆ 18:2–3ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು. ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
- Jeremiah 51:26 ಯೆರೆಮೀಯ 51:26ಒಬ್ಬರೂ ನಿನ್ನಿಂದ ಮೂಲೆಯ ಕಲ್ಲನ್ನಾಗಲಿ, ಅಸ್ತಿವಾರದ ಕಲ್ಲನ್ನಾಗಲಿ ತೆಗೆಯರು; ನೀನು ಎಂದೆಂದಿಗೂ ಹಾಳಾಗುವಿ ಎಂದು ಕರ್ತನು ಅನ್ನುತ್ತಾನೆ.
- Isaiah 23:13 ಯೆಶಾಯ 23:13ಇಗೋ, ಕಸ್ದೀಯರ ದೇಶವು! ಅಶ್ಶೂರರು ಅದನ್ನು ಅರಣ್ಯ ನಿವಾಸಿಗಳಿಗೆ ಈಡು ಮಾಡುವತನಕ ಈ ಜನರು ಇರಲಿಲ್ಲ. (ನಿರ್ನಾ ಮವಾಗಿರಲಿಲ್ಲ) ಅವರು ಗೋಪುರಗಳನ್ನೂ ಅದರ ಅರಮನೆಗಳನ್ನೂ ಕಟ್ಟಿಸಿಕೊಂಡು ಅದನ್ನು ಹಾಳು ಮಾಡಿದ್ದಾರೆ.
- Isaiah 21:9 ಯೆಶಾಯ 21:9ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ ಮತ್ತು ಪ್ರತ್ಯುತ್ತರ ವಾಗಿ--ಬಾಬೆಲ್ ಬಿತ್ತು, ಆದರೆ ಕೆತ್ತಿದ ದೇವತೆಗಳ ವಿಗ್ರಹಗಳನ್ನು ಮುರಿದು ನೆಲಸಮ ಮಾಡಿಬಿಟ್ಟರು ಎಂದು ಹೇಳಿದನು.
- Revelation 18:19 ಪ್ರಕಟನೆ 18:19ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು
- Nahum 3:12–15 ನಹೂಮ 3:12–15ನಿನ್ನ ಕೋಟೆಗಳೆಲ್ಲಾ ಮೊದಲನೇ ಹಣ್ಣುಗಳುಳ್ಳ ಅಂಜೂರದ ಗಿಡಗಳ ಹಾಗಿರುವವು; ಅಲ್ಲಾಡಿಸಲ್ಪಟ್ಟರೆ ತಿನ್ನುವವನ ಬಾಯಲ್ಲಿಯೇ ಬೀಳುವವು. ಇಗೋ, ನಿನ್ನ ಮಧ್ಯದಲ್ಲಿರುವ ನಿನ್ನ ಜನರು ಹೆಂಗಸರ ಹಾಗಿದ್ದಾರೆ; ನಿನ್ನ ದೇಶದ ಬಾಗಲುಗಳು ನಿನ್ನ ಶತ್ರುಗಳಿಗೆ ಅಗಲವಾಗಿ ತೆರೆಯಲ್ಪಡುವವು; ಬೆಂಕಿ ನಿನ್ನ ಅಗುಳಿಗಳನ್ನು ತಿಂದುಬಿಡುವದು. ಮುತ್ತಿಗೆಗೋಸ್ಕರ ನೀರನ್ನು ಸೇದು ನಿನ್ನ ಬಲವಾದ ಕೋಟೆಗಳನ್ನು ಭದ್ರ ಮಾಡು; ಕೆಸರಿನಲ್ಲಿ ಸೇರು ಮಣ್ಣನ್ನು ತುಳಿ, ಇಟ್ಟಿಗೆ ಗೂಡನ್ನು ಬಲಪಡಿಸು. ಅಲ್ಲೇ ಬೆಂಕಿ ನಿನ್ನನ್ನು ನುಂಗುವದು; ಕತ್ತಿಯು ನಿನ್ನನ್ನು ಕಡಿದುಬಿಡುವದು; ನಾಶಕ ಹುಳದಂತೆ ಅದು ನಿನ್ನನ್ನು ತಿಂದುಬಿಡುವದು; ನಾಶಕ ಹುಳದಂತೆ ಬಹು ಮಂದಿಯಾಗು; ಮಿಡತೆಗಳಂತೆ ಬಹು ಮಂದಿಯಾಗು.
- Isaiah 14:23 ಯೆಶಾಯ 14:23ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Deuteronomy 13:16 ಧರ್ಮೋಪದೇಶಕಾಂಡ 13:16ಇದಲ್ಲದೆ ಅದರ ಎಲ್ಲಾ ಕೊಳ್ಳೆಯನ್ನು ಅದರ ಬೀದಿಯ ಮಧ್ಯದಲ್ಲಿ ಕೂಡಿಸಿ ಆ ಪಟ್ಟಣವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ಸಂಪೂರ್ಣವಾಗಿ ನಿನ್ನ ದೇವರಾದ ಕರ್ತನಿಗೆ ಬೆಂಕಿಯಿಂದ ಸುಟ್ಟುಬಿಡಬೇಕು; ಅದು ಎಂದೆಂದಿಗೂ ದಿಬ್ಬವಾಗಬೇಕು; ತರುವಾಯ ಅದನ್ನು ಕಟ್ಟಬಾರದು.
- Isaiah 17:3 ಯೆಶಾಯ 17:3ಎಫ್ರಾ ಯಾಮಿನಿಂದ ಕೋಟೆಯೂ ದಮಸ್ಕದ ರಾಜ್ಯವೂ ಸಿರಿಯಾದ ಉಳಿದವುಗಳೂ ನಿಂತು ಹೋಗುವವು; ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರು ವರು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.