Isaiah · chapter 25 · verse 3
Isaiah 25:3 in Kannada
ಆದಕಾರಣ ಬಲಿಷ್ಠವಾದ ಜನಾಂಗವು, ನಿನ್ನನ್ನು ಘನಪಡಿಸುವದು ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವದು.
Aadakaarana balishthavaada janaangavu, ninnannu ghanapadisuvadu bhayankaravaada janara pattanavu ninage anjuvadu.
Isaiah 25:3 in English
- King James Version (KJV)
- Therefore shall the strong people glorify thee, the city of the terrible nations shall fear thee.
- World English Bible (WEB)
- Therefore a strong people will glorify you. A city of awesome nations will fear you.
- American Standard Version (ASV)
- Therefore shall a strong people glorify thee; a city of terrible nations shall fear thee.
- Bible in Basic English (BBE)
- For this cause will the strong people give glory to you, the town of the cruel ones will be in fear of you.
- Darby Translation (DBY)
- Therefore shall the mighty people glorify thee, the city of terrible nations shall fear thee.
- Webster's Bible (WBS)
- Therefore shall the strong people glorify thee, the city of the terrible nations shall fear thee.
- Young's Literal Translation (YLT)
- Therefore honour Thee do a strong people, A city of the terrible nations feareth Thee.
Read in context
- 1ಓ ಕರ್ತನೇ, ನೀನೇ ನನ್ನ ದೇವರು ನೀನು ಸತ್ಯ ಪ್ರಾಮಾಣಿಕತೆಗಳನ್ನು (ಆಲೋ ಚಿಸಿ) ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಕಾರ್ಯಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿ ಸುವೆನು.
- 2ನೀನು ದುರ್ಗವನ್ನು ನಾಶಪಡಿಸಿ ಪಟ್ಟಣ ವನ್ನು ಹಾಳುದಿಬ್ಬವನ್ನಾಗಿಯೂ ಅನ್ಯರ ಅರಮನೆಯನ್ನು ಯಾರೂ ಎಂದಿಗೂ ಕಟ್ಟಬಾರದಂತೆ ಮಾಡಿದ್ದೀ.
- 3ಆದಕಾರಣ ಬಲಿಷ್ಠವಾದ ಜನಾಂಗವು, ನಿನ್ನನ್ನು ಘನಪಡಿಸುವದು ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವದು.
- 4ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.
- 5ಒಣಗಿದ ಸ್ಥಳದಲ್ಲಿನ ಬಿಸಿಲಿನ ಹಾಗೆ ನೀನು ಅನ್ಯರ ಗದ್ದಲವನ್ನು ತಗ್ಗಿಸುವಿ; ಮೋಡದ ನೆರಳಿನಿಂದ ಬಿಸಿಲು ಹೇಗೋ ಹಾಗೆಯೇ ನಿನ್ನಿಂದ ಅವರ ಭೀಕರತೆಯನ್ನು ಕೀಳು ಸ್ಥಿತಿಗೆ ತರುವಿ.
Cross references
- Zechariah 14:9 ಜೆಕರ್ಯ 14:9ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.
- Psalm 46:10–11 ಕೀರ್ತನೆಗಳು 46:10–11ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ. ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Zechariah 14:16 ಜೆಕರ್ಯ 14:16ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು.
- Isaiah 49:23–26 ಯೆಶಾಯ 49:23–26ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು. ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದು ಕೊಳ್ಳಬಹುದೋ? ಇಲ್ಲವೆ ನ್ಯಾಯವಾಗಿ ಸೆರೆಯವ ರನ್ನು ಬಿಡಿಸಬಹುದೋ? 25ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು. ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು. ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
- Revelation 11:15–17 ಪ್ರಕಟನೆ 11:15–17ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು. ತರುವಾಯ ದೇವರ ಸಮಕ್ಷಮದಲ್ಲಿ ತಮ ತಮ್ಮ ಆಸನಗಳ ಮೇಲೆ ಕೂತಿರುವ ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡಬಿದ್ದು-- ಓ ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.
- Isaiah 66:18–20 ಯೆಶಾಯ 66:18–20ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು. ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು. ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥ ಗಳಲ್ಲಿಯೂ ಪಾಲ್ಕಿಗಳಲ್ಲಿಯೂ ಹೇಸರ ಕತ್ತೆಗಳ ಮೇಲೆಯೂ ವೇಗವಾಗಿ ಹೋಗುವ ಪ್ರಾಣಿಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಕರ್ತ ನಿಗೆ ಕಾಣಿಕೆಯಾಗಿ ಇಸ್ರಾಯೇಲಿನ ಮಕ್ಕಳು ಕಾಣಿಕೆ ಯನ್ನು ಶುದ್ಧ ಪಾತ್ರೆಯಲ್ಲಿ ಕರ್ತನ ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸ ಲೇಮಿಗೆ ತರುವರೆಂದು ಕರ್ತನು ಹೇಳುತ್ತಾನೆ.
- Isaiah 13:11 ಯೆಶಾಯ 13:11ಅವರ ಕೆಟ್ಟವುಗಳಿಗೋಸ್ಕರವೂ ದುಷ್ಟರ ಅಪ ರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸು ವೆನು; ಗರ್ವಿಷ್ಟರ ಅಹಂಕಾರವನ್ನು ನಿಲ್ಲಿಸಿಬಿಡುವೆನು, ಭಯಂಕರವಾದ ಹೆಮ್ಮೆಯನ್ನು ತಗ್ಗಿಸುವೆನು.
- Psalm 72:8–11 ಕೀರ್ತನೆಗಳು 72:8–11ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು. ಆತನ ಮುಂದೆ ಅರಣ್ಯ ನಿವಾಸಿಗಳು ಎರಗುವರು; ಆತನ ಶತ್ರುಗಳು ಧೂಳನ್ನು ನೆಕ್ಕುವರು. ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು. ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
- Ezekiel 39:21–22 ಯೆಹೆಜ್ಕೇಲನು 39:21–22ನಾನು ನನ್ನ ಮಹಿಮೆಯನ್ನು ಅನ್ಯಜನಾಂಗಗಳಲ್ಲಿ ಸ್ಥಾಪಿಸುತ್ತೇನೆ; ಎಲ್ಲಾ ಅನ್ಯಜನಾಂಗಗಳು ನಾನು ನಡೆಸಿದ ನನ್ನ ನ್ಯಾಯತೀರ್ಪನ್ನು ಮತ್ತು ಅವರ ಮೇಲೆ ಇರಿಸಿದ ನನ್ನ ಕೈಯನ್ನು ನೋಡುವವು. ಹೀಗೆ ಇಸ್ರಾಯೇಲನ ಮನೆತನದವರು ಕರ್ತನಾದ ನಾನೇ ಅಂದಿನಿಂದಲೂ ಇನ್ನು ಮುಂದೆಯೂ ಅವರ ದೇವ ರಾಗಿರುವೆನೆಂದು ತಿಳಿಯುವರು.
- Revelation 11:13 ಪ್ರಕಟನೆ 11:13ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.
- Psalm 66:3 ಕೀರ್ತನೆಗಳು 66:3ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು;
- Ezekiel 38:23 ಯೆಹೆಜ್ಕೇಲನು 38:23ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.