Isaiah · chapter 26 · verse 15
Isaiah 26:15 in Kannada
ಜನಾಂಗವನ್ನು ಹೆಚ್ಚಿಸಿದ್ದೀ, ಓ ಕರ್ತನೇ, ಜನಾಂಗ ವನ್ನು ಹೆಚ್ಚಿಸಿದ್ದೀ, ನೀನು ಮಹಿಮೆ ಹೊಂದಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ಭೂಮಿಯ ಕಟ್ಟಕಡೆ ಯ ವರೆಗೂ ವಿಸ್ತರಿಸಿದ್ದೀ.
Janaangavannu hechchisiddee, o kartane, janaanga vannu hechchisiddee, neenu mahime hondiddee; neenu deshada meregalannellaa bhoomiya kattakade ya varegoo vistarisiddee.
Isaiah 26:15 in English
- King James Version (KJV)
- Thou hast increased the nation, O LORD, thou hast increased the nation: thou art glorified: thou hadst removed [it] far [unto] all the ends of the earth.
- World English Bible (WEB)
- You have increased the nation, O LORD. You have increased the nation! You are glorified! You have enlarged all the borders of the land.
- American Standard Version (ASV)
- Thou hast increased the nation, O Jehovah, thou hast increased the nation; thou art glorified; thou hast enlarged all the borders of the land.
- Bible in Basic English (BBE)
- You have made the nation great, O Lord, you have made it great; glory is yours: you have made wide the limits of the land.
- Darby Translation (DBY)
- Thou hast increased the nation, Jehovah, thou hast increased the nation: thou art glorified. Thou hadst removed [it] far [unto] all the ends of the earth.
- Webster's Bible (WBS)
- Thou hast increased the nation, O LORD, thou hast increased the nation; thou art glorified: thou hadst removed [it] far to all the ends of the earth.
- Young's Literal Translation (YLT)
- Thou hast added to the nation, O Jehovah, Thou hast added to the nation, Thou hast been honoured, Thou hast put far off all the ends of earth.
Read in context
- 13ಓ ಕರ್ತನೇ, ನಮ್ಮ ದೇವರೇ, ನಿನ್ನ ಬದಲು ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು. ಆದರೆ ನಿನ್ನಿಂದ ಮಾತ್ರವೇ ನಿನ್ನ ನಾಮವನ್ನು ನಾವು ಜ್ಞಾಪಿಸಿ ಕೊಳ್ಳುವಂತಾಯಿತು.
- 14ಅವರು ಸತ್ತರು ಬದುಕುವ ದಿಲ್ಲ; ಆದ್ದರಿಂದ ನೀನು ಅವರನ್ನು ಸಂದರ್ಶಿಸಿ ನಾಶ ಮಾಡಿ ಅವರ ಎಲ್ಲಾ ಜ್ಞಾಪಕಗಳನ್ನು ಅಳಿಸಿಬಿಟ್ಟಿದ್ದೀ.
- 15ಜನಾಂಗವನ್ನು ಹೆಚ್ಚಿಸಿದ್ದೀ, ಓ ಕರ್ತನೇ, ಜನಾಂಗ ವನ್ನು ಹೆಚ್ಚಿಸಿದ್ದೀ, ನೀನು ಮಹಿಮೆ ಹೊಂದಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ಭೂಮಿಯ ಕಟ್ಟಕಡೆ ಯ ವರೆಗೂ ವಿಸ್ತರಿಸಿದ್ದೀ.
- 16ಕರ್ತನೇ, ಇಕ್ಕಟ್ಟಿನಲ್ಲಿ ಅವರು ನಿನ್ನನ್ನು ಹುಡುಕಿದರು, ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿ ದರು.
- 17ಓ ಕರ್ತನೇ, ಬಸುರಾದ ಸ್ತ್ರೀಯು ಹೆರುವ ದಕ್ಕೆ ಸವಿಾಪ ಬಂದಾಗ ನೋವಿನಲ್ಲಿದ್ದು ತನ್ನ ಬೇನೆ ಯಲ್ಲಿ ಅರಚುವಂತೆ ಓ ಕರ್ತನೇ, ನಾವು ನಿನ್ನ ಸಮ್ಮುಖದಲ್ಲಿದ್ದೆವು.
Cross references
- Isaiah 9:3 ಯೆಶಾಯ 9:3ನೀನು ಜನಾಂಗವನ್ನು ವೃದ್ಧಿಗೊಳಿಸಿದ್ದೀ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀ ಸುಗ್ಗಿಕಾಲದ ಸಂತೋಷ ದಂತೆಯೂ ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾ ಸಿಸುವ ಹಾಗೆಯೂ ನಿನ್ನ ಮುಂದೆ ಸಂತೋಷಿಸು ವರು.
- Ezekiel 36:24 ಯೆಹೆಜ್ಕೇಲನು 36:24ನಾನು ನಿಮ್ಮನ್ನು ಅನ್ಯಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.
- John 12:23–28 ಯೋಹಾನನು 12:23–28ಯೇಸು ಪ್ರತ್ಯುತ್ತರವಾಗಿ ಅವರಿಗೆ--ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆ ಬಂದದೆ. ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯ ದಿದ್ದರೆ ಅದು ಒಂದೇ ಆಗಿ ಉಳಿಯುವದು; ಅದು ಸತ್ತಮೇಲೆ ಬಹಳ ಫಲಕೊಡುವದು. ತನ್ನ ಪ್ರಾಣ ವನ್ನು ಪ್ರೀತಿಸುವವನು ಅದನ್ನು ಕಳಕೊಳ್ಳುವನು; ಈ ಲೋಕದಲ್ಲಿ ತನ್ನ ಪ್ರಾಣವನ್ನು ಹಗೆಮಾಡುವವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು. ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು. ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು. ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಆಗ--ನಾನು ಮಹಿ ಮೆಪಡಿಸಿದ್ದೇನೆ, ತಿರಿಗಿ ಅದನ್ನು ಮಹಿಮೆಪಡಿಸುವೆನು ಎಂದು ಹೇಳುವ ಧ್ವನಿಯು ಪರಲೋಕದಿಂದ ಬಂತು.
- Nehemiah 9:23 ನೆಹೆಮೀಯ 9:23ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿ ಅವರು ಸ್ವಾಧೀನಮಾಡಿಕೊಳ್ಳಲು ಹೋಗುವರೆಂದು ನೀನು ಅವರ ಪಿತೃಗ ಳಿಗೆ ವಾಗ್ದಾನಮಾಡಿದ ದೇಶದಲ್ಲಿ ಅವರನ್ನು ಬರಮಾಡಿದಿ;
- Numbers 23:10 ಅರಣ್ಯಕಾಂಡ 23:10ಯಾಕೋಬನ ಧೂಳನ್ನು ಎಣಿಸುವದಕ್ಕೂ ಇಸ್ರಾಯೇಲಿನ ನಾಲ್ಕನೇ ಒಂದು ಪಾಲನ್ನಾದರೂ ಲೆಕ್ಕ ಮಾಡುವದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು, ನನ್ನ ಕಡೇ ಅಂತ್ಯವು ಅವನಂತೆಯೇ ಆಗಲಿ ಎಂದು ಹೇಳಿದನು.
- Jeremiah 32:37 ಯೆರೆಮೀಯ 32:37ಇಗೋ, ನಾನು ನನ್ನ ಕೋಪ ದಲ್ಲಿಯೂ ಉಗ್ರದಲ್ಲಿಯೂ ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶಗಳೊಳಗಿಂದ ಅವರನ್ನು ಕೂಡಿಸಿ ಈ ಸ್ಥಳಕ್ಕೆ ತಿರಿಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.
- Isaiah 54:2–3 ಯೆಶಾಯ 54:2–3ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ನಿನ್ನ ನಿವಾಸದ ಪರದೆಗಳು ಹರಡಲಿ; ಹಿಂತೆ ಗೆಯಬೇಡ; ನಿನ್ನ ಹಗ್ಗಗಳನ್ನು ಉದ್ದ ಮಾಡಿ ಗೂಟ ಗಳನ್ನು ಬಲಪಡಿಸು. ನೀನು ಬಲಗಡೆಗೂ ಎಡ ಗಡೆಗೂ ಹಬ್ಬಿಕೊಳ್ಳುವಿ; ನಿನ್ನ ಸಂತಾನವು ಅನ್ಯ ಜನಾಂಗಗಳನ್ನು ವಶಪಡಿಸಿಕೊಂಡು ಹಾಳಾದ ಪಟ್ಟಣ ಗಳನ್ನು ನಿವಾಸವಾಗಮಾಡುವದು.
- Jeremiah 30:19 ಯೆರೆಮೀಯ 30:19ಅವುಗಳೊಳಗಿಂದ ಕೃತಜ್ಞತಾ ಸ್ತೋತ್ರವೂ ಸಂತೋ ಷಪಡುವವರ ಸ್ವರವೂ ಹೊರಡುವದು; ಅವರನ್ನು ಅಭಿವೃದ್ಧಿಮಾಡುವೆನು; ಅವರು ಕೊಂಚವಾಗಿರರು, ಅವರು ಅಲ್ಪವಾಗದ ಹಾಗೆ ಅವರಿಗೆ ಘನವನ್ನು ಕೊಡುವೆನು.
- Deuteronomy 10:22 ಧರ್ಮೋಪದೇಶಕಾಂಡ 10:22ಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು; ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ.
- Ezekiel 5:12 ಯೆಹೆಜ್ಕೇಲನು 5:12ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.
- Isaiah 60:21 ಯೆಶಾಯ 60:21ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
- Isaiah 44:23 ಯೆಶಾಯ 44:23ಓ ಆಕಾಶಗಳೇ, ಹಾಡಿರಿ; ಕರ್ತನು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭ ಟಿಸು; ಪರ್ವತಗಳೇ, ಓ ವನವೇ, ಅದರಲ್ಲಿರುವ ಎಲ್ಲಾ ಮರಗಳೇ, ಉತ್ಸಾಹ ಧ್ವನಿಮಾಡಿರಿ; ಯಾಕಂದರೆ ಕರ್ತನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾ ಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.