Isaiah · chapter 26 · verse 3
Isaiah 26:3 in Kannada
ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
Drudhamanassullavanannu poorna samaadhaanadalli nelegolisi kaayuvi. Avanige ninnalli bharavasavide.
Isaiah 26:3 in English
- King James Version (KJV)
- Thou wilt keep [him] in perfect peace, [whose] mind [is] stayed [on thee:] because he trusteth in thee.
- World English Bible (WEB)
- You will keep whoever’s mind is steadfast in perfect peace, because he trusts in you.
- American Standard Version (ASV)
- Thou wilt keep [him] in perfect peace, [whose] mind [is] stayed [on thee]; because he trusteth in thee.
- Bible in Basic English (BBE)
- The man whose heart is unmoved you will keep in peace, because his hope is in you.
- Darby Translation (DBY)
- Thou wilt keep in perfect peace the mind stayed [on thee], for he confideth in thee.
- Webster's Bible (WBS)
- Thou wilt keep [him] in perfect peace, [whose] mind [is] stayed [on thee] : because he trusteth in thee.
- Young's Literal Translation (YLT)
- An imagination supported Thou fortifiest peace — peace! For in Thee it is confident.
Read in context
- 1ಆ ದಿವಸದಲ್ಲಿ ಯೆಹೂದ ದೇಶದೊಳಗೆ ಈ ಹಾಡನ್ನು ಹಾಡುವರು; ನಮಗೆ ಬಲ ವಾದ ಪಟ್ಟಣವಿದೆ. ರಕ್ಷಣೆಯನ್ನು ಕೋಟೆಯನ್ನಾ ಗಿಯೂ ಹೊರಪೌಳಿಯನ್ನಾಗಿಯೂ ದೇವರು ಮಾಡು ವನು.
- 2ಬಾಗಿಲುಗಳನ್ನು ತೆರೆಯಿರಿ. ಸತ್ಯವನ್ನು ಕೈಕೊ ಳ್ಳುವ ನೀತಿಯುಳ್ಳ ಜನಾಂಗವು ಒಳಗೆ ಪ್ರವೇಶಿಸಲಿ.
- 3ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
- 4ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
- 5ಆತನು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾ. ಉನ್ನತ ದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ.
Cross references
- Philippians 4:7 ಫಿಲಿಪ್ಪಿಯವರಿಗೆ 4:7ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.
- John 16:33 ಯೋಹಾನನು 16:33ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
- John 14:27 ಯೋಹಾನನು 14:27ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
- Jeremiah 17:7–8 ಯೆರೆಮೀಯ 17:7–8ಯಾವನು ಕರ್ತನಲ್ಲಿ ಭರವಸವಿಟ್ಟಿರುವನೋ ಯಾವನಿಗೆ ಕರ್ತನು ನಿರೀಕ್ಷೆ ಯಾಗಿದ್ದಾನೋ ಆ ಮನುಷ್ಯನು ಧನ್ಯನು. ಅವನು ನೀರಿನ ಬಳಿಯಲ್ಲಿ ನೆಡಲ್ಪಟ್ಟು ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು; ಧಗೆಯು ಬರುವಾಗ ಅದು ಬಾಡಿಹೋಗದೆ ಅದರ ಎಲೆ ಹಸುರಾಗಿರುವದು; ಕ್ಷಾಮದ ವರುಷದಲ್ಲಿ ಅದಕ್ಕೆ ಚಿಂತೆ ಇರುವದಿಲ್ಲ ಇಲ್ಲವೆ ಫಲಫಲಿಸುವದನ್ನು ನಿಲ್ಲಿಸುವದಿಲ್ಲ.
- Psalm 9:10 ಕೀರ್ತನೆಗಳು 9:10ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಓ ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ.
- Romans 5:1 ರೋಮಾಪುರದವರಿಗೆ 5:1ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
- Psalm 85:7–8 ಕೀರ್ತನೆಗಳು 85:7–8ಓ ಕರ್ತನೇ, ನಿನ್ನ ಕರುಣೆಯನ್ನು ನಮಗೆ ದಯಪಾಲಿಸು. ನಿನ್ನ ರಕ್ಷಣೆಯನ್ನು ನಮಗೆ ಕೊಡು. ಕರ್ತನಾದ ದೇವರು ಏನು ಹೇಳುತ್ತಾನೋ ಅದನ್ನು ಕೇಳುವೆನು; ನಿಶ್ಚಯವಾಗಿ ಜನರಿಗೂ ತನ್ನ ಪರಿಶುದ್ಧ ರಿಗೂ ಸಮಾಧಾನದ ಮಾತು ಹೇಳುವನು; ಇನ್ನು ಬುದ್ಧಿಹೀನತ್ವಕ್ಕೆ ಅವರು ತಿರುಗಿಕೊಳ್ಳದೆ ಇರಲಿ.
- Romans 4:18–21 ರೋಮಾಪುರದವರಿಗೆ 4:18–21ಅವನು ತಾನು ಅನೇಕ ಜನಾಂಗಗಳಿಗೆ ತಂದೆಯಾಗಿ ರುವನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ--ನಿನ್ನ ಸಂತಾನವು ಹೀಗಾಗುವದು ಎಂದು ಹೇಳಲ್ಪಟ್ಟಂತೆ ನಿರೀಕ್ಷಿಸಿ ನಂಬಿದನು. ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದನು; ಆದಾಗ್ಯೂ ಅವನು ಅಪನಂಬಿಕೆಯಿಂದ ಚಂಚಲನಾಗಲಿಲ್ಲ. ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು. ಆತನು ತನ್ನ ವಾಗ್ದಾನವನ್ನು ನೆರವೇರಿ ಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟನು.
- Ephesians 2:14–16 ಎಫೆಸದವರಿಗೆ 2:14–16ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು. ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು. ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ.
- Isaiah 31:1 ಯೆಶಾಯ 31:1ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Micah 5:5 ಮೀಕ 5:5ಇದಲ್ಲದೆ ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದಾಗ ಈತನೇ ಸಮಾಧಾನವಾಗಿರುವನು; ನಮ್ಮ ಅರಮನೆಗಳಲ್ಲಿ ಅವನು ತುಳಿಯುವಾಗ ನಾವು ಆತನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಮುಖ್ಯ ಮನುಷ್ಯರನ್ನೂ ಎಬ್ಬಿಸುವೆವು.