Isaiah · chapter 26 · verse 4
Isaiah 26:4 in Kannada
ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
Neevu kartanalli sadaa bharavasavidiri; kartanaada yehovanalli nityavaada balavuntu.
Isaiah 26:4 in English
- King James Version (KJV)
- Trust ye in the LORD for ever: for in the LORD JEHOVAH [is] everlasting strength:
- World English Bible (WEB)
- Trust in the LORD forever; for in the LORD, the LORD, is an everlasting Rock.
- American Standard Version (ASV)
- Trust ye in Jehovah for ever; for in Jehovah, [even] Jehovah, is an everlasting rock.
- Bible in Basic English (BBE)
- Let your hope be in the Lord for ever: for the Lord Jah is an unchanging Rock.
- Darby Translation (DBY)
- Confide ye in Jehovah for ever; for in Jah, Jehovah, is the rock of ages.
- Webster's Bible (WBS)
- Trust ye in the LORD for ever: for in the LORD JEHOVAH [is] everlasting strength:
- Young's Literal Translation (YLT)
- Trust ye in Jehovah for ever, For in Jah Jehovah [is] a rock of ages,
Read in context
- 2ಬಾಗಿಲುಗಳನ್ನು ತೆರೆಯಿರಿ. ಸತ್ಯವನ್ನು ಕೈಕೊ ಳ್ಳುವ ನೀತಿಯುಳ್ಳ ಜನಾಂಗವು ಒಳಗೆ ಪ್ರವೇಶಿಸಲಿ.
- 3ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
- 4ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
- 5ಆತನು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾ. ಉನ್ನತ ದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ.
- 6ಕಾಲು ತುಳಿ ತಕ್ಕೆ ಈಡಾಗಿದೆ, ಬಡವರ ಕಾಲುಗಳೂ ದೀನರ ಪಾದಗಳೂ ಅದನ್ನು ತುಳಿಯುವವು;
Cross references
- Isaiah 12:2 ಯೆಶಾಯ 12:2ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
- Psalm 62:8 ಕೀರ್ತನೆಗಳು 62:8ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Philippians 4:13 ಫಿಲಿಪ್ಪಿಯವರಿಗೆ 4:13ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.
- Psalm 55:22 ಕೀರ್ತನೆಗಳು 55:22ನಿನ್ನ ಭಾರವನ್ನು ಕರ್ತನ ಮೇಲೆ ಹಾಕು; ಆತನು ನಿನಗೆ ಆಧಾರವಾಗಿರುವನು. ಆತನು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸನು.ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
- Psalm 18:2 ಕೀರ್ತನೆಗಳು 18:2ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.
- Psalm 62:11 ಕೀರ್ತನೆಗಳು 62:11ಅಧಿಕಾರವು ದೇವರದೆಂದು ಆತನು ಒಂದು ಸಾರಿ ಮಾತನಾಡಿದ್ದನ್ನು; ನಾನು ಎರಡು ಸಾರಿ ಕೇಳಿದ್ದೇನೆ; ಶಕ್ತಿಯು ದೇವರಿಗೆ ಸಂಬಂಧಪಟ್ಟದ್ದು.ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
- Proverbs 3:5–6 ಜ್ಞಾನೋಕ್ತಿಗಳು 3:5–6ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ. ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
- Psalm 46:1 ಕೀರ್ತನೆಗಳು 46:1ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
- 1 Samuel 2:2 1 ಸಮುವೇಲನು 2:2ಕರ್ತನ ಹಾಗೆ ಪರಿಶುದ್ಧನಾದವನಿಲ್ಲ; ನಿಶ್ಚಯವಾಗಿ ನಿನ್ನ ಹೊರತು ಮತ್ತೊಬ್ಬನಿಲ್ಲ. ನಮ್ಮ ದೇವರ ಹಾಗೆ ಯಾವ ಬಂಡೆಯೂ ಇಲ್ಲ.
- Matthew 6:13 ಮತ್ತಾಯನು 6:13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
- Isaiah 45:24 ಯೆಶಾಯ 45:24ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
- Isaiah 32:2 ಯೆಶಾಯ 32:2ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.