Isaiah · chapter 26 · verse 8
Isaiah 26:8 in Kannada
ಹೌದು, ಓ ಕರ್ತನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಾವು ನಿನಗೋಸ್ಕರ ಕಾದುಕೊಂಡಿದ್ದೇವೆ; ನಿನ್ನ ಹೆಸರಿನ ನೆನಪಿನ ಕಡೆಗೆ ನಮ್ಮ ಆತ್ಮದ ಇಷ್ಟವಾಗಿದೆ.
Haudu, o kartane, ninna nyaayateerpina maargadalli naavu ninagoskara kaadukondiddeve; ninna hesarina nenapina kadege namma aatmada ishtavaagide.
Isaiah 26:8 in English
- King James Version (KJV)
- Yea, in the way of thy judgments, O LORD, have we waited for thee; the desire of [our] soul [is] to thy name, and to the remembrance of thee.
- World English Bible (WEB)
- Yes, in the way of your judgments, LORD, we have waited for you. Your name and your renown are the desire of our soul.
- American Standard Version (ASV)
- Yea, in the way of thy judgments, O Jehovah, have we waited for thee; to thy name, even to thy memorial [name], is the desire of our soul.
- Bible in Basic English (BBE)
- We have been waiting for you, O Lord; the desire of our soul is for the memory of your name.
- Darby Translation (DBY)
- Yea, in the way of thy judgments, O Jehovah, have we waited for thee; the desire of [our] soul is to thy name, and to thy memorial.
- Webster's Bible (WBS)
- Yes, in the way of thy judgments, O LORD, have we waited for thee; the desire of [our] soul [is] to thy name, and to the remembrance of thee.
- Young's Literal Translation (YLT)
- Also, [in] the path of Thy judgments, O Jehovah, we have waited [for] Thee, To Thy name and to Thy remembrance [Is] the desire of the soul.
Read in context
- 6ಕಾಲು ತುಳಿ ತಕ್ಕೆ ಈಡಾಗಿದೆ, ಬಡವರ ಕಾಲುಗಳೂ ದೀನರ ಪಾದಗಳೂ ಅದನ್ನು ತುಳಿಯುವವು;
- 7ನೀತಿವಂತನ ಮಾರ್ಗವು ಯಥಾರ್ಥವಾಗಿದೆ. ನೀನು ಅತ್ಯಧಿಕ ವಾದ ಯಥಾರ್ಥವಂತನು; ನೀತಿವಂತನ ದಾರಿಯನ್ನು ತೂಗಿ ನೋಡುತ್ತೀ;
- 8ಹೌದು, ಓ ಕರ್ತನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಾವು ನಿನಗೋಸ್ಕರ ಕಾದುಕೊಂಡಿದ್ದೇವೆ; ನಿನ್ನ ಹೆಸರಿನ ನೆನಪಿನ ಕಡೆಗೆ ನಮ್ಮ ಆತ್ಮದ ಇಷ್ಟವಾಗಿದೆ.
- 9ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಬಯಸಿದ್ದೇನೆ, ಹೌದು, ನನ್ನಲ್ಲಿ ರುವ ನನ್ನ ಆತ್ಮದೊಂದಿಗೆ ನಿನ್ನನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ; ಭೂಮಿಗೆ ನಿನ್ನ ನ್ಯಾಯತೀರ್ವಿಕೆ ಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.
- 10ದುಷ್ಟನಿಗೆ ಕನಿಕರ ತೋರಿಸಿದಾಗ್ಯೂ ನೀತಿಯನ್ನು ಅವನು ಕಲಿಯಲಾರನು. ಯಥಾರ್ಥವಂತನ ದೇಶದಲ್ಲಿ ಅವನು ಅನ್ಯಾ ಯವನ್ನಾಚರಿಸುವನು ಮತ್ತು ಕರ್ತನ ಮಹತ್ವವನ್ನು ಲಕ್ಷಿಸುವದಿಲ್ಲ.
Cross references
- James 5:7–11 ಯಾಕೋಬನು 5:7–11ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು. ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು. ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ. ನನ್ನ ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿ ಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಿಂದ ಮಾತ ನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ. ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.
- Psalm 37:3–7 ಕೀರ್ತನೆಗಳು 37:3–7ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ. ಕರ್ತನಲ್ಲಿ ಆನಂದವಾಗಿರು; ಆಗ ಆತನು ನಿನ್ನ ಹೃದಯದ ಅಪೇಕ್ಷೆಗಳನ್ನು ನಿನಗೆ ಕೊಡುವನು. ನಿನ್ನ ಮಾರ್ಗವನ್ನು ಕರ್ತನಿಗೆ ಒಪ್ಪಿಸು; ಆತನಲ್ಲಿ ಭರವಸ ವಿಡು; ಆತನು ಅದನ್ನು ನೆರವೇರಿಸುವನು. ನಿನ್ನ ನೀತಿಯನ್ನು ಬೆಳಕಿನ ಹಾಗೆಯೂ ನಿನ್ನ ನ್ಯಾಯಗಳನ್ನು ಮಧ್ಯಾಹ್ನದ ಹಾಗೆಯೂ ಆತನು ಹೊರಗೆ ಬರ ಮಾಡುವನು. ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ.
- Isaiah 33:2 ಯೆಶಾಯ 33:2ಓ ಕರ್ತನೇ, ನಮ್ಮ ಕಡೆಗೆ ಕೃಪೆತೋರಿಸು, ನಿನಗೋಸ್ಕರ ನಾವು ಕಾದಿದ್ದೇವೆ. ಪ್ರತಿ ಮುಂಜಾನೆ ನಮಗೆ ಭುಜಬಲವಾಗಿ ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು.
- Exodus 3:15 ವಿಮೋಚನಕಾಂಡ 3:15ದೇವರು ಮೋಶೆಗೆ--ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿ ದ್ದಾನೆಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು; ಇದೇ ಯುಗ ಯುಗಕ್ಕೆ ನನ್ನ ಹೆಸರೂ ತಲತಲಾಂತರಕ್ಕೆ ನನ್ನ ಸ್ಮರಣೆಯೂ ಆಗಿದೆ ಎಂದು ಹೇಳಿದನು.
- 2 Thessalonians 3:5 2 ಥೆಸಲೊನೀಕದವರಿಗೆ 3:5ಕರ್ತನು ನಿಮ್ಮ ಹೃದಯಗಳನ್ನು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನಿಗಾಗಿ ತಾಳ್ಮೆಯಿಂದ ಕಾದು ಕೊಂಡಿರುವ ಹಾಗೆಯೂ ನಡಿಸಲಿ.
- Psalm 65:6 ಕೀರ್ತನೆಗಳು 65:6ಬೆಟ್ಟಗಳನ್ನು ತನ್ನ ಶಕ್ತಿಯಿಂದ ನಿಲ್ಲಿಸುವಾತನೇ, ಪರಾಕ್ರಮದಿಂದ ನಡುಕಟ್ಟಿಕೊಂಡಾತನೇ,
- Romans 8:25 ರೋಮಾಪುರದವರಿಗೆ 8:25ಕಾಣದಿರುವದನ್ನು ನಾವು ನಿರೀಕ್ಷಿಸುವದಾಗಿದ್ದರೆ ಅದಕ್ಕಾಗಿ ನಾವು ತಾಳ್ಮೆ ಯಿಂದ ಕಾದುಕೊಂಡಿರುತ್ತೇವೆ.
- Acts 1:4 ಅಪೊಸ್ತಲರ ಕೃತ್ಯಗಳು 1:4ಆತನು ಅವರೊಂದಿಗೆ ಕೂಡಿಕೊಂಡಿದ್ದಾಗ--ನೀವು ಯೆರೂಸಲೇಮಿನಿಂದ ಹೊರಟುಹೋಗದೆ ನನ್ನಿಂದ ಕೇಳಿದ ತಂದೆಯ ವಾಗ್ದಾನಕೋಸ್ಕರ ಕಾಯ ಬೇಕೆಂದು ಅವರಿಗೆ ಅಪ್ಪಣೆಕೊಟ್ಟನು.
- Psalm 84:2 ಕೀರ್ತನೆಗಳು 84:2ಕರ್ತನ ಅಂಗಳ ಗಳಿಗಾಗಿ ನನ್ನ ಪ್ರಾಣವು ಬಯಸಿ, ಹೌದು, ಅದು ಕುಂದುತ್ತದೆ; ನನ್ನ ಹೃದಯವೂ ಶರೀರವೂ ಜೀವ ವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ.
- Song of Solomon 1:2–4 ಪರಮಗೀತೆ 1:2–4ತನ್ನ ಬಾಯಿಯ ಮುದ್ದುಗಳಿಂದ ನನಗೆ ಮುದ್ದಿ ಡಲಿ; ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಉತ್ತಮ. ನಿನ್ನ ಒಳ್ಳೇ ತೈಲಗಳ ಪರಿಮಳದಂತೆ ನಿನ್ನ ಹೆಸರು ಹೊಯ್ಯಲ್ಪಟ್ಟ ತೈಲವಾಗಿದೆ; ಆದದರಿಂದ ಕನ್ನಿಕೆಯರು ನಿನ್ನನ್ನು ಪ್ರೀತಿಮಾಡುತ್ತಾರೆ. ನನ್ನನ್ನು ಎಳಕೋ, ನಾವು ನಿನ್ನ ಹಿಂದೆ ಓಡುವೆವು; ಅರಸನು ನನ್ನನ್ನು ತನ್ನ ಕೊಠಡಿಗಳಿಗೆ ಕರಕೊಂಡು ಬಂದಿದ್ದಾನೆ. ನಾವು ನಿನ್ನಲ್ಲಿ ಉಲ್ಲಾಸಪಟ್ಟು ಸಂತೋಷಪಡುತ್ತೇವೆ; ದ್ರಾಕ್ಷಾರಸ ಕ್ಕಿಂತ ನಿನ್ನ ಪ್ರೀತಿಯನ್ನು ಜ್ಞಾಪಕಮಾಡುತ್ತೇವೆ; ಯಥಾ ರ್ಥರು ನಿನ್ನನ್ನು ಪ್ರೀತಿಮಾಡುತ್ತಾರೆ.
- Psalm 18:23 ಕೀರ್ತನೆಗಳು 18:23ಆತನ ಮುಂದೆ ಸಂಪೂರ್ಣನಾಗಿದ್ದು ನನ್ನ ಅಕ್ರಮದಿಂದ ನನ್ನನ್ನು ಕಾಪಾಡಿಕೊಂಡೆನು.
- Isaiah 64:4–5 ಯೆಶಾಯ 64:4–5ದೇವರೇ, ನಿನಗೋಸ್ಕರ ಕಾದುಕೊಳ್ಳುವವನಿಗೆ ನೀನು ಮಾಡು ವದನ್ನು, ಲೋಕದ ಉತ್ಪತ್ತಿಗೆ ಮುಂಚೆ ನಿನ್ನ ಹೊರ ತಾಗಿ ಯಾರೂ ಕೇಳಲಿಲ್ಲ ಇಲ್ಲವೆ ಯಾರ ಕಿವಿ ಯಲ್ಲಿಯೂ ಬೀಳಲಿಲ್ಲ, ಯಾರ ಕಣ್ಣು ನೋಡಲಿಲ್ಲ. ಸಂತೋಷಪಟ್ಟು ನೀತಿಯನ್ನು ಕೈಕೊಳ್ಳುವವನನ್ನೂ ನಿನ್ನ ಮಾರ್ಗಗಳಲ್ಲಿ ನಿನ್ನನ್ನು ಜ್ಞಾಪಕಮಾಡುವವ ನನ್ನೂ ನೀನು ಎದುರುಗೊಳ್ಳುತ್ತೀ; ಇಗೋ, ನೀನು ರೌದ್ರನಾಗಿರುವಿ, ಯಾಕಂದರೆ ನಾವು ರಕ್ಷಿಸಲ್ಪಡದ ಹಾಗೆ ಪಾಪದಲ್ಲಿ ಮುಂದುವರಿದೆವು.