Isaiah · chapter 27 · verse 4
Isaiah 27:4 in Kannada
ರೌದ್ರವು ನನ್ನಲ್ಲಿ ಇಲ್ಲ; ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ ನಾನು ಅವುಗಳನ್ನು ಹಾದು ಹೋಗಿ ಅವುಗಳನ್ನು ಒಟ್ಟಿಗೆ ಸುಡುವೆನು.
Raudravu nannalli illa; yaavanaadaroo mullu dattoorigalannu nanage virodhavaagi yuddhakke ittare naanu avugalannu haadu hogi avugalannu ottige suduvenu.
Isaiah 27:4 in English
- King James Version (KJV)
- Fury [is] not in me: who would set the briers [and] thorns against me in battle? I would go through them, I would burn them together.
- World English Bible (WEB)
- Wrath is not in me, but if I should find briers and thorns, I would do battle! I would march on them and I would burn them together.
- American Standard Version (ASV)
- Wrath is not in me: would that the briers and thorns were against me in battle! I would march upon them, I would burn them together.
- Bible in Basic English (BBE)
- My passion is over: if the thorns were fighting against me, I would make an attack on them, and they would be burned up together.
- Darby Translation (DBY)
- Fury is not in me. Oh that I had briars [and] thorns in battle against me! I would march against them, I would burn them together.
- Webster's Bible (WBS)
- Fury [is] not in me: who would set the briers [and] thorns against me in battle? I would go through them, I would burn them together.
- Young's Literal Translation (YLT)
- Fury is not in Me; Who giveth Me a brier — a thorn in battle? I step into it, I burn it at once.
Read in context
- 2ಆ ದಿನದಲ್ಲಿ ದ್ರಾಕ್ಷಾ ರಸವುಳ್ಳ ತೋಟದ ವಿಷಯವಾಗಿ ಅವಳಿಗೆ ಹಾಡಿರಿ;
- 3ಕರ್ತನಾದ ನಾನೇ ಅದನ್ನು ಕಾಯುತ್ತೇನೆ, ಕ್ಷಣ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ; ಯಾರೂ ಅದಕ್ಕೆ ಕೇಡು ಮಾಡದ ಹಾಗೆ ರಾತ್ರಿ ಹಗಲು ಅದನ್ನು ಕಾಯುತ್ತೇನೆ.
- 4ರೌದ್ರವು ನನ್ನಲ್ಲಿ ಇಲ್ಲ; ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ ನಾನು ಅವುಗಳನ್ನು ಹಾದು ಹೋಗಿ ಅವುಗಳನ್ನು ಒಟ್ಟಿಗೆ ಸುಡುವೆನು.
- 5ಇಲ್ಲದಿದ್ದರೆ ಅವನು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನ ಬಲವನ್ನು ಹಿಡುಕೊ ಳ್ಳಲಿ, ನನ್ನೊಡನೆ ಸಮಾಧಾನ ಮಾಡಿಕೊಳ್ಳಲಿ.
- 6ಮುಂದಿನ ಕಾಲದಲ್ಲಿ ಯಾಕೋಬು ಬೇರೂರಿ ಇಸ್ರಾ ಯೇಲು ಹೂ ಅರಳಿ ಚಿಗುರುವದು ಮತ್ತು ಭೂಲೋ ಕದ ಮೇಲ್ಭಾಗವನ್ನು ಫಲದಿಂದ ತುಂಬಿಸುವನು.
Cross references
- Hebrews 6:8 ಇಬ್ರಿಯರಿಗೆ 6:8ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.
- Isaiah 10:17 ಯೆಶಾಯ 10:17ಇಸ್ರಾಯೇಲಿನ ಬೆಳಕು ಬೆಂಕಿಯಾಗುವದು, ಅದರ ಪರಿಶುದ್ಧನು ಜ್ವಾಲೆ ಯಂತಿರುವನು; ಅದು ಒಂದೇ ದಿನದಲ್ಲಿ ಅವನ ಮುಳ್ಳು ದತ್ತೂರಿಗಳನ್ನು ದಹಿಸಿನುಂಗಿಬಿಡುವದು;
- Matthew 3:12 ಮತ್ತಾಯನು 3:12ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
- Psalm 85:3 ಕೀರ್ತನೆಗಳು 85:3ನಿನ್ನ ಕೋಪ ವನ್ನೆಲ್ಲಾ ನೀನು ತೆಗೆದುಬಿಟ್ಟಿದ್ದೀ; ನೀನು ಕೋಪದ ಉರಿಯಿಂದ ತಿರುಗಿಕೊಂಡಿದ್ದೀ.
- 2 Samuel 23:6 2 ಸಮುವೇಲನು 23:6ಆದರೆ ಬೆಲಿಯಾಳನ ಮಕ್ಕಳೆಲ್ಲರೂ ತಳ್ಳಲ್ಪಡುವ ಮುಳ್ಳುಗಳ ಹಾಗೆ ಇರುವರು.
- Nahum 1:3–7 ನಹೂಮ 1:3–7ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ. ಆತನು ಸಮುದ್ರವನ್ನು ಗದರಿಸಿ ಅದನ್ನು ಒಣಗುವಂತೆ ಮಾಡುತ್ತಾನೆ; ನದಿಗಳನ್ನೆಲ್ಲಾ ಬತ್ತಿಹೋಗುವಂತೆ ಮಾಡುತ್ತಾನೆ; ಬಾಷಾನೂ ಕರ್ಮೆಲೂ ಬಾಡಿಹೋಗುತ್ತವೆ, ಲೆಬನೋನಿನ ಹೂವು ಬಾಡಿಹೋಗುತ್ತದೆ. ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು. ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ. ಕರ್ತನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಬಲವಾದ ಕೋಟೆಯಾಗಿದ್ದಾನೆ; ತನ್ನಲ್ಲಿ ನಂಬಿಕೆಯಿಡು ವವರನ್ನು ಬಲ್ಲನು.
- Isaiah 12:1 ಯೆಶಾಯ 12:1ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.
- Malachi 4:3 ಮಲಾಕಿಯ 4:3ದುಷ್ಟರನ್ನು ತುಳಿದುಬಿಡುವಿರಿ; ಯಾಕಂದರೆ ನಾನು ಕಾರ್ಯ ಸಾಧಿಸುವ ದಿನದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Isaiah 54:6–10 ಯೆಶಾಯ 54:6–10ನೀನು ಬಿಡಲ್ಪಟ್ಟು ಆತ್ಮದಲ್ಲಿ ವ್ಯಥೆಪಟ್ಟ ಹೆಂಗಸು, ತ್ಯಜಿಸಲ್ಪಟ್ಟವಳಾದ ಯೌವನದ ಪತ್ನಿಯ ಹಾಗೆ ಇದ್ದಾಗ ಕರ್ತನು ನಿನ್ನನ್ನು ಕರೆದಿದ್ದಾನೆ ಎಂದು ನಿನ್ನ ದೇವರು ಹೇಳುತ್ತಾನೆ. ಕ್ಷಣ ಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ; ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು. ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ. ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ. ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
- Isaiah 26:20–21 ಯೆಶಾಯ 26:20–21ನನ್ನ ಜನರೇ, ಬನ್ನಿರಿ, ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ; ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿ.ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು. ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
- 2 Peter 2:9 2 ಪೇತ್ರನು 2:9ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
- Psalm 103:9 ಕೀರ್ತನೆಗಳು 103:9ಆತನು ಸದಾಕಾಲಕ್ಕೂ ಗದರಿಸುವದಿಲ್ಲ; ನಿತ್ಯವೂ ಕೋಪಿ ಸುವಾತನಲ್ಲ;