Isaiah · chapter 27 · verse 7
Isaiah 27:7 in Kannada
ಆತನನ್ನು ಹೊಡೆದವನನ್ನು ಹೊಡೆದ ಪ್ರಕಾರ ಅವನನ್ನು ಹೊಡೆದನೋ? ಇಲ್ಲವೆ ಆತನಿಂದ ಕೊಲ್ಲಲ್ಪಟ್ಟವರು ಕೊಲ್ಲಲ್ಪಟ್ಟ ಪ್ರಕಾರ ಅವನನ್ನು ಕೊಂದನೋ?
Aatanannu hodedavanannu hodeda prakaara avanannu hodedano? Illave aataninda kollalpattavaru kollalpatta prakaara avanannu kondano?
Isaiah 27:7 in English
- King James Version (KJV)
- Hath he smitten him, as he smote those that smote him? [or] is he slain according to the slaughter of them that are slain by him?
- World English Bible (WEB)
- Has he struck them as he struck those who struck them? Or are they killed like those who killed them were killed?
- American Standard Version (ASV)
- Hath he smitten them as he smote those that smote them? or are they slain according to the slaughter of them that were slain by them?
- Bible in Basic English (BBE)
- Is his punishment like the punishment of those who overcame him? or are his dead as great in number as those he put to the sword?
- Darby Translation (DBY)
- Hath he smitten him according to the smiting of those that smote him? Is he slain according to the slaughter of those slain by him?
- Webster's Bible (WBS)
- Hath he smitten him, as he smote those that smote him? [or] is he slain according to the slaughter of them that are slain by him?
- Young's Literal Translation (YLT)
- As the smiting of his smiter hath He smitten him? As the slaying of his slain doth He slay?
Read in context
- 5ಇಲ್ಲದಿದ್ದರೆ ಅವನು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನ ಬಲವನ್ನು ಹಿಡುಕೊ ಳ್ಳಲಿ, ನನ್ನೊಡನೆ ಸಮಾಧಾನ ಮಾಡಿಕೊಳ್ಳಲಿ.
- 6ಮುಂದಿನ ಕಾಲದಲ್ಲಿ ಯಾಕೋಬು ಬೇರೂರಿ ಇಸ್ರಾ ಯೇಲು ಹೂ ಅರಳಿ ಚಿಗುರುವದು ಮತ್ತು ಭೂಲೋ ಕದ ಮೇಲ್ಭಾಗವನ್ನು ಫಲದಿಂದ ತುಂಬಿಸುವನು.
- 7ಆತನನ್ನು ಹೊಡೆದವನನ್ನು ಹೊಡೆದ ಪ್ರಕಾರ ಅವನನ್ನು ಹೊಡೆದನೋ? ಇಲ್ಲವೆ ಆತನಿಂದ ಕೊಲ್ಲಲ್ಪಟ್ಟವರು ಕೊಲ್ಲಲ್ಪಟ್ಟ ಪ್ರಕಾರ ಅವನನ್ನು ಕೊಂದನೋ?
- 8ಮಿತಿಯಾಗಿ ಕಳುಹಿಸಿ ಬಿಡುವದರ ಮೂಲಕ ಅದರೊಡನೆ ವಿವಾದ ಮಾಡಿದಿ. ಮೂಡಣ ಗಾಳಿಯು ಬೀಸುವ ದಿನದಲ್ಲಿ ತನ್ನ ಬಲವಾದ ವಾಯು ವಿನಿಂದ ಆತನು ಅದನ್ನು ತೊಲಗಿಸಿದನು.
- 9ಹೀಗಿರಲು (ಈ ಕಾರಣದಿಂದ) ಯಾಕೋಬು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಒಡೆದುಹೋದ ಸುಣ್ಣದ ಕಲ್ಲುಗಳಂತೆ ಮಾಡುವಾಗ ವಿಗ್ರಹಸ್ತಂಭಗಳೂ ಸೂರ್ಯಸ್ತಂಭ ಗಳೂ ಏಳುವದಿಲ್ಲ ಮತ್ತು ಅದರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವು ಇದೇ.
Cross references
- Isaiah 37:36–38 ಯೆಶಾಯ 37:36–38ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು. ಆಗ ಅಶ್ಶೂರದ ಅರಸನಾದ ಸನ್ಹೇರೀಬನು ಹಿಂತಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿ ದನು.ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು. ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು.
- Nahum 3:19 ನಹೂಮ 3:19ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು?
- Jeremiah 50:33–34 ಯೆರೆಮೀಯ 50:33–34ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ-- ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಕೂಡ ಹಿಂಸಿಸಲ್ಪಟ್ಟರು; ಅವರನ್ನು ಸೆರೆಗೆ ಒಯ್ಯುವವ ರೆಲ್ಲರು ಅವರನ್ನು ಬಲವಾಗಿ ಹಿಡಿದು, ಕಳುಹಿಸಿ ಬಿಡಲೊಲ್ಲದೆ ಇದ್ದರು. ಅವರ ವಿಮೋಚಕನು ಬಲಿಷ್ಠನೇ, ಸೈನ್ಯಗಳ ಕರ್ತನು ಆತನ ಹೆಸರು; ಆತನು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ ಬಾಬೆಲಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವನು.
- Isaiah 14:22–23 ಯೆಶಾಯ 14:22–23ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Jeremiah 50:40 ಯೆರೆಮೀಯ 50:40ದೇವರು ಸೊದೋಮನ್ನೂ ಗೊಮೋರವನ್ನು ಅವುಗಳ ಸವಿಾಪದಲ್ಲಿದ್ದ ಪಟ್ಟಣಗಳನ್ನೂ ಕೆಡವಿಹಾಕಿದಾಗ ಆದ ಹಾಗೆ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ; ಅದರಲ್ಲಿ ಯಾವ ನರಪುತ್ರನಾದರೂ ತಂಗುವದಿ ಲ್ಲವೆಂದು ಕರ್ತನು ಅನ್ನುತ್ತಾನೆ.
- Isaiah 17:3 ಯೆಶಾಯ 17:3ಎಫ್ರಾ ಯಾಮಿನಿಂದ ಕೋಟೆಯೂ ದಮಸ್ಕದ ರಾಜ್ಯವೂ ಸಿರಿಯಾದ ಉಳಿದವುಗಳೂ ನಿಂತು ಹೋಗುವವು; ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರು ವರು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Jeremiah 51:24 ಯೆರೆಮೀಯ 51:24ಬಾಬೆಲಿಗೂ ಕಸ್ದೀಯರ ನಿವಾಸಿಗಳೆಲ್ಲ ರಿಗೂ--ಅವರು ಚೀಯೋನಿನಲ್ಲಿ ನಿಮ್ಮ ಸನ್ನಿಧಿಯಲ್ಲಿ ಮಾಡಿದ ಕೇಡನ್ನೆಲ್ಲಾ ಸಲ್ಲಿಸುವೆನೆಂದು ಕರ್ತನು ಅನ್ನುತ್ತಾನೆ.
- Isaiah 17:14 ಯೆಶಾಯ 17:14ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
- Daniel 2:31–35 ದಾನಿಯೇಲನು 2:31–35ಓ ರಾಜನೇ, ನೀನು ನೋಡಲಾಗಿ, ಇಗೋ, ಒಂದು ದೊಡ್ಡ ಪ್ರತಿಮೆಯು ಕಾಣಿಸಿತು. ಮಹಾ ಪ್ರಕಾಶಮಾನ ವಾದ ಈ ದೊಡ್ಡ ಪ್ರತಿಮೆಯು ನಿನ್ನ ಮುಂದೆ ನಿಂತಿತ್ತು; ಅದರ ಆಕಾರವು ಭಯಂಕರವಾಗಿತ್ತು. ಈ ಪ್ರತಿ ಮೆಯ ತಲೆಯು ಚೊಕ್ಕ ಬಂಗಾರದಿಂದಲೂ ಅದರ ಎದೆಯು ಮತ್ತು ತೋಳುಗಳು ಬೆಳ್ಳಿಯಿಂದಲೂ ಅದರ ಹೊಟ್ಟೆಯು ಮತ್ತು ತೊಡೆಗಳು ಹಿತ್ತಾಳೆಯಿಂದಲೂ ಅದರ ಕಾಲುಗಳು ಕಬ್ಬಿಣದಿಂದಲೂ ಅದರ ಪಾದಗಳು ಅರ್ಧ ಕಬ್ಬಿಣವೂ ಮತ್ತು ಅರ್ಧ ಮಣ್ಣು ಆಗಿತ್ತು. ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು. ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
- Isaiah 10:20–25 ಯೆಶಾಯ 10:20–25ಆ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಉಳಿದವರೂ ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಇಸ್ರಾಯೇಲಿನ ಪರಿಶುದ್ಧನಾದ ಕರ್ತನ ಸತ್ಯವನ್ನು ಆಧಾರ ಮಾಡಿಕೊಳ್ಳುವರು. ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾ ಕ್ರಮಿಯಾದ ದೇವರ ಕಡೆಗೆ ಹಿಂತಿರುಗುವರು. ತನ್ನ ಜನರಾದ ಇಸ್ರಾಯೇಲ್ಯರು ಸಮುದ್ರದ ಮರಳಿನಂತೆ ಇದ್ದರೂ ಅವರಲ್ಲಿ ಉಳಿದವರು ಮಾತ್ರ ಹಿಂತಿರು ಗುವರು; ನಾಶವಾಗುವದಕ್ಕೆ ವಿಧಿಸಲ್ಪಟ್ಟದ್ದು ನೀತಿ ಯೊಂದಿಗೆ ತುಂಬಿ ತುಳುಕುವದು. ಸೈನ್ಯಗಳ ದೇವರಾದ ಕರ್ತನು ಎಲ್ಲಾ ದೇಶದ ಮಧ್ಯದಲ್ಲಿ ನಿಶ್ಚ ಯಿಸಲ್ಪಟ್ಟ ಕ್ಷೀಣತೆಯನ್ನು ಉಂಟುಮಾಡುವನು. ಆದದರಿಂದ ಸೈನ್ಯಗಳ ದೇವರಾದ ಕರ್ತನು ಇಂತೆ ನ್ನುತ್ತಾನೆ--ಚೀಯೋನಿನಲ್ಲಿ ವಾಸಿಸುವ ಓ ನನ್ನ ಜನರೇ, ಐಗುಪ್ತ್ಯರಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ. ಇನ್ನು ಸ್ವಲ್ಪ ಕಾಲದಲ್ಲಿ, (ನಿಮ್ಮ ಮೇಲಿನ) ಉಗ್ರವು ತೀರಿ ನನ್ನ ಕೋಪವು ಅವರ ನಾಶನಕ್ಕಾ ಗುವದು.
- Jeremiah 30:11–16 ಯೆರೆಮೀಯ 30:11–16ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ. ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಗಾಯವು ಗುಣಹೊಂದದು ನಿನ್ನ ಬಾಸುಂಡೆಯು ಅಘೋರ ವಾದದ್ದು. ಅದನ್ನು ನಿನಗೆ ಕಟ್ಟುವ ಹಾಗೆ ನಿನಗೋ ಸ್ಕರ ವಾದಿಸುವವರು ಯಾರೂ ಇರುವದಿಲ್ಲ. ವಾಸಿ ಮಾಡುವ ಔಷಧಗಳು ನಿನಗೆ ಇಲ್ಲ. ನಿನ್ನನ್ನು ಪ್ರೀತಿ ಮಾಡುವವರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವದಿಲ್ಲ; ನಿನ್ನ ಅಕ್ರಮಗಳು ಬಹಳವೂ ನಿನ್ನ ಪಾಪಗಳು ಪ್ರಬಲವೂ ಆಗಿರುವದರಿಂದ ಶತ್ರುವಿನ ಗಾಯದಿಂದಲೂ ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ. ನಿನ್ನ ಗಾಯದ ನೋವಿನ ನಿಮಿತ್ತ ಯಾಕೆ ಕೂಗುತ್ತೀ? ನಿನ್ನ ದುಃಖವು ಗುಣವಾಗ ದಂಥದ್ದೇ; ನಿನ್ನ ಅಕ್ರಮಗಳು ಬಹಳವಾಗಿರುವದ ರಿಂದಲೂ ನಿನ್ನ ಪಾಪಗಳು ಪ್ರಬಲವಾಗಿರುವದ ರಿಂದಲೂ ಇವುಗಳನ್ನು ನಿನಗೆ ಮಾಡಿದ್ದೇನೆ. ಆದರೂ ನಿನ್ನನ್ನು ನುಂಗುವವರೆಲ್ಲರೂ ನುಂಗಲ್ಪಡು ವರು; ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಗೆ ಹೋಗುವನು; ನಿನ್ನನ್ನು ಕೊಳ್ಳೆಮಾಡುವವರು ಕೊಳ್ಳೆ ಯಾಗುವರು; ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು.
- Nahum 1:14 ನಹೂಮ 1:14ನಿನ್ನ ವಿಷಯವಾಗಿ ಕರ್ತನು ಆಜ್ಞಾಪಿಸುವದೇ ನಂದರೆ--ನಿನ್ನ ಹೆಸರುಳ್ಳವರು ಇನ್ನು ಬಿತ್ತಲ್ಪಡರು; ನಿನ್ನ ದೇವರುಗಳ ಮನೆಯೊಳಗಿಂದ ಕೆತ್ತಿದ ವಿಗ್ರಹ ವನ್ನೂ ಎರಕ ಹೊಯಿದದ್ದನ್ನೂ ಕಡಿದುಬಿಡುವೆನು; ನೀನು ತುಚ್ಛನಾದದ್ದರಿಂದ ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು.ಇಗೋ, ಬೆಟ್ಟಗಳ ಮೇಲೆ ಶುಭಸಮಾಚಾರವನ್ನು ತಂದು ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಪ್ರಮಾಣ ಗಳನ್ನು ಸಲ್ಲಿಸು; ಯಾಕಂದರೆ ಇನ್ನು ಮೇಲೆ ದುಷ್ಟನು ನಿನ್ನನ್ನು ಹಾದುಹೋಗನು; ಅವನು ಸಂಪೂರ್ಣವಾಗಿ ಕಡಿದು ಬಿಡಲ್ಪಟ್ಟಿದ್ದಾನೆ.