Isaiah · chapter 28 · verse 10
Isaiah 28:10 in Kannada
ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ. ಇಲ್ಲಿ ಸ್ವಲ್ಪ.
Aajnyeya mele aajnye, aajnyeya mele aajnye, sootrada mele sootra, sootrada mele sootra, alli svalpa. Illi svalpa.
Isaiah 28:10 in English
- King James Version (KJV)
- For precept [must be] upon precept, precept upon precept; line upon line, line upon line; here a little, [and] there a little:
- World English Bible (WEB)
- For it is precept on precept, precept on precept; line on line, line on line; here a little, there a little.
- American Standard Version (ASV)
- For it is precept upon precept, precept upon precept; line upon line, line upon line; here a little, there a little.
- Bible in Basic English (BBE)
- For it is one rule after another; one line after another; here a little, there a little.
- Darby Translation (DBY)
- For [it is] precept upon precept, precept upon precept; line upon line, line upon line; here a little, there a little. ...
- Webster's Bible (WBS)
- For precept [must be] upon precept, precept upon precept; line upon line, line upon line; here a little, [and] there a little:
- Young's Literal Translation (YLT)
- For rule [is] on rule, rule on rule, line on line, line on line, A little here, a little there,
Read in context
- 8ಮೇಜುಗಳೆಲ್ಲಾ ಸ್ಥಳ ಉಳಿಯದ ಹಾಗೆ ಅಸಹ್ಯವಾದ ಕಕ್ಕುವಿಕೆಯಿಂದ ತುಂಬಿವೆ.
- 9ಈತನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಯಾರಿಗೆ ಬೋಧನೆಯನ್ನು ತಿಳುಕೊಳ್ಳುವ ಹಾಗೆ ಮಾಡುತ್ತಾನೆ? ಮೊಲೆಬಿಟ್ಟ ಕೂಸುಗಳಿಗೋ? ಎದೆ ಬಿಟ್ಟ ಮಕ್ಕಳಿಗೋ?
- 10ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ. ಇಲ್ಲಿ ಸ್ವಲ್ಪ.
- 11ತೊದಲು ಮಾತಿನವರು ಅನ್ಯಭಾಷಿಗಳು ಇವರ ಮೂಲಕವಾಗಿಯೇ ಆತನು ಈ ಜನರ ಸಂಗಡ ಮಾತನಾಡುತ್ತಾನೆ.
- 12ಆತನು ಮೊದಲು--ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ. ಬಳಲಿದವರನ್ನು ವಿಶ್ರಮಗೊಳಿಸಿರಿ, ನಿಮಗೆ ಅನುಕೂಲವಾದ ಉಪ ಶಮನ ಇದೇ ಎಂದು ಹೇಳಿದಾಗ್ಯೂ ಅವರು ಕೇಳ ಲಿಲ್ಲ.
Cross references
- Isaiah 28:13 ಯೆಶಾಯ 28:13ಆದರೆ ಅವರು ಹೋಗಿ ಹಿಂದಕ್ಕೆ ಎಡವಿ ಮುರಿದುಕೊಳ್ಳುವ ಹಾಗೆಯೂ ಬೋನಿನಲ್ಲಿ ಹಿಡಿ ಯಲ್ಪಟ್ಟು ಸಿಕ್ಕಿಬೀಳುವ ಹಾಗೆಯೂ ಕರ್ತನ ವಾಕ್ಯವು ಅವರಿಗೆ ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ ಇರುವದು.
- 2 Timothy 3:7 2 ತಿಮೊಥೆಯನಿಗೆ 3:7ಇವರು ಯಾವಾಗಲೂ ಕಲಿಯುತ್ತಿದ್ದರೂ ಸತ್ಯದ ಪರಿಜ್ಞಾನ ವನ್ನು ಹೊಂದಲಾರದವರು.
- Jeremiah 11:7 ಯೆರೆಮೀಯ 11:7ನಾನು ನಿಮ್ಮ ತಂದೆಗಳಿಗೆ ನನ್ನ ಮಾತನ್ನು ಕೇಳಿರೆಂದು ಖಂಡಿತವಾಗಿ ಹೇಳಿದೆನು. ಅವರನ್ನು ಐಗುಪ್ತದೇಶದೊಳಗಿಂದ ಮೇಲೆ ಬರ ಮಾಡಿದ ದಿನ ಮೊದಲುಗೊಂಡು ಇಂದಿನವರೆಗೂ ಬೆಳಿಗ್ಗೆ ಎದ್ದು ಖಂಡಿತವಾಗಿ ಹೇಳಿದೆನು,
- Jeremiah 25:3–7 ಯೆರೆಮೀಯ 25:3–7ಯೆಹೂದದ ಅರಸನಾದ ಅಮ್ಮೋನನ ಮಗನಾದ ಯೋಷೀಯನ ಹದಿಮೂರನೇ ವರುಷ ಮೊದಲ್ಗೊಂಡು ಇಂದಿನ ವರೆಗೂ ಈ ಇಪ್ಪತ್ತು ಮೂರು ವರುಷ ಕರ್ತನ ವಾಕ್ಯವು ನನಗೆ ಉಂಟಾಗಿ ನಾನು ಅದನ್ನು ನಿಮಗೆ ಹೇಳಿದ್ದೇನೆ, ಬೆಳಿಗ್ಗೆ ಎದ್ದು ಹೇಳಿದ್ದೇನೆ; ಆದರೆ ನೀವು ಕೇಳಲಿಲ್ಲ. ಇದಲ್ಲದೆ ಕರ್ತನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾನೆ, ಬೆಳಿಗ್ಗೆ ಎದ್ದು ಕಳುಹಿಸಿದ್ದಾನೆ; ಆದರೆ ನೀವು ಕೇಳಲಿಲ್ಲ, ಕೇಳು ವದಕ್ಕೆ ನಿಮ್ಮ ಕಿವಿಗೊಡಲಿಲ್ಲ. ಅವರು ಹೇಳಿದ್ದೇ ನಂದರೆ--ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನು ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ. ಬೇರೆ ದೇವರುಗಳನ್ನು ಸೇವಿಸುವದಕ್ಕೂ ಆರಾಧಿಸುವದಕ್ಕೂ ಹಿಂಬಾಲಿಸಬೇಡಿರಿ; ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ; ಆಗ ನಿಮಗೆ ಯಾವ ಕೇಡೂ ಮಾಡೆನು. ಆದಾಗ್ಯೂ ನೀವು ನನಗೆ ಕಿವಿಗೊಡದೆ ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ ಎಂದು ಕರ್ತನು ಅನ್ನುತ್ತಾನೆ.
- Hebrews 5:12 ಇಬ್ರಿಯರಿಗೆ 5:12ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.
- Nehemiah 9:29–30 ನೆಹೆಮೀಯ 9:29–30ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು. ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ. ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ.
- Deuteronomy 6:1–6 ಧರ್ಮೋಪದೇಶಕಾಂಡ 6:1–6ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಮಾಡತಕ್ಕವುಗಳು; ನೀನು ನಿನ್ನ ದೇವರಾದ ಕರ್ತನಿಗೆ ಭಯಪಟ್ಟು ನಾನು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ನೀನೂ ನಿನ್ನ ಮಗನೂ ನಿನ್ನ ಮೊಮ್ಮ ಗನೂ ನಿನ್ನ ಜೀವಿತದ ದಿವಸಗಳಲ್ಲೆಲ್ಲಾ ಕೈಕೊ ಳ್ಳುವ ಹಾಗೆಯೂ ನಿನ್ನ ದಿವಸಗಳು ಬಹಳವಾಗುವ ಹಾಗೆಯೂ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವ ರಾದ ಕರ್ತನು ಆಜ್ಞಾಪಿಸಿದ ಆಜ್ಞೆ ವಿಧಿ ನ್ಯಾಯ ಗಳು ಇವೇ. ಹೀಗಿರುವದರಿಂದ ಓ ಇಸ್ರಾಯೇಲೇ, ನಿನ್ನ ಪಿತೃಗಳ ದೇವರಾದ ಕರ್ತನು ವಾಗ್ದಾನ ಮಾಡಿದ ಪ್ರಕಾರ ಹಾಲೂಜೇನೂ ಹರಿಯುವ ದೇಶ ದಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ಅನುಸರಿಸಬೇಕು. ಓ ಇಸ್ರಾಯೇಲೇ, ಕೇಳು, ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನು. ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣ ಪ್ರಾಣದಿಂದಲೂ ಪೂರ್ಣಬಲದಿಂದಲೂ ಪ್ರೀತಿ ಮಾಡಬೇಕು. ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಮಾತುಗಳು ನಿನ್ನ ಹೃದಯದಲ್ಲಿ ಇರಬೇಕು.
- Isaiah 5:4 ಯೆಶಾಯ 5:4ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?
- Matthew 21:34–41 ಮತ್ತಾಯನು 21:34–41ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು. ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು. ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು. ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು. ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು. ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು. ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು. ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
- 2 Chronicles 36:15–16 2 ಪೂರ್ವಕಾಲವೃತ್ತಾಂತ 36:15–16ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು. ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- Philippians 3:1 ಫಿಲಿಪ್ಪಿಯವರಿಗೆ 3:1ಕಡೇದಾಗಿ ನನ್ನ ಸಹೋದರರೇ, ಕರ್ತ ನಲ್ಲಿ ಸಂತೋಷಪಡಿರಿ. ತಿರಿಗಿ ನಿಮಗೆ ಬರೆಯುವದರಲ್ಲಿ ನನಗೇನೂ ಬೇಸರವಿಲ್ಲ; ನಿಮ್ಮನ್ನಾ ದರೋ ಅದು ಭದ್ರಪಡಿಸುವದು.