Isaiah · chapter 28 · verse 20
Isaiah 28:20 in Kannada
ಮೈ ಚಾಚುವದಕ್ಕೆ ಅವನ ಹಾಸಿಗೆ ಚಿಕ್ಕದಾಗಿರು ವದು. ಮುದುರಿಕೊಂಡು ಮಲಗೇನಂದರೆ ಹೊದಿ ಕೆಯ ಅಗಲ ಸಾಲದು;
Mai chaachuvadakke avana haasige chikkadaagiru vadu. Mudurikondu malagenandare hodi keya agala saaladu;
Isaiah 28:20 in English
- King James Version (KJV)
- For the bed is shorter than that [a man] can stretch himself [on it:] and the covering narrower than that he can wrap himself [in it].
- World English Bible (WEB)
- For the bed is too short to stretch out on, and the blanket is too narrow to wrap oneself in.
- American Standard Version (ASV)
- For the bed is shorter than that a man can stretch himself on it; and the covering narrower than that he can wrap himself in it.
- Bible in Basic English (BBE)
- For the bed is not long enough for a man to be stretched out on: and the cover is not wide enough for him to be covered with.
- Darby Translation (DBY)
- For the bed is too short to stretch oneself on, and the covering too narrow when he would wrap himself in it.
- Webster's Bible (WBS)
- For the bed is shorter than that [a man] can stretch himself [on it] : and the covering narrower than that he can wrap himself [in it] .
- Young's Literal Translation (YLT)
- For shorter hath been the bed Than to stretch one's self out in, And the covering hath been narrower Than to wrap one's self up in.
Read in context
- 18ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವದಿಲ್ಲ; ವಿಪರೀತ ಬಾಧೆಯು ಹಾದುಹೋಗುವಾಗ ನೀವು ಅದರಿಂದ ತುಳಿಯಲ್ಪಡುವಿರಿ.
- 19ಅದು ಹಾದು ಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವದು. ಅದು ಹೊತ್ತಾರೆಯಿಂದ ಹೊತ್ತಾರೆಗೆ (ಬೆಳಬೆಳಕೂ) ಹಗಲು ರಾತ್ರಿಯೂ ಹಾದು ಹೋಗುವದು; ಅದರ ಸುದ್ದಿ ಯನ್ನು ತಿಳುಕೊಳ್ಳುವದರಿಂದ ಭಯವಾಗುವದು.
- 20ಮೈ ಚಾಚುವದಕ್ಕೆ ಅವನ ಹಾಸಿಗೆ ಚಿಕ್ಕದಾಗಿರು ವದು. ಮುದುರಿಕೊಂಡು ಮಲಗೇನಂದರೆ ಹೊದಿ ಕೆಯ ಅಗಲ ಸಾಲದು;
- 21ಕರ್ತನು ಪೆರಾಚೀಮ್ ಪರ್ವತದಲ್ಲಿ ಅದರ ಹಾಗೆ ಎದ್ದು ಗಿಬ್ಯೋನ್ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ ಅಪರೂಪವಾದ ತನ್ನ ಕೆಲಸ ವನ್ನು ನಡಿಸಿ ಅಪೂರ್ವವಾದ ತನ್ನ ಕಾರ್ಯವನ್ನು ನೇರವೇರಿಸುವನು.
- 22ಹೀಗಿರುವದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗ ಬೇಡಿರಿ; ಸೈನ್ಯಗಳ ಕರ್ತನಾದ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರವು ನಿರ್ಣಯಿಸಿದೆ ಎಂಬದನ್ನು ನಾನು ಕೇಳಿದ್ದೇನೆ.
Cross references
- Isaiah 64:6 ಯೆಶಾಯ 64:6ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ.
- 1 Corinthians 1:18–31 1 ಕೊರಿಂಥದವರಿಗೆ 1:18–31ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ. ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ. ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ? ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು. ಯೆಹೂದ್ಯರು ಸೂಚಕಕಾರ್ಯವನ್ನು ಕೇಳುತ್ತಾರೆ; ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ; ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ. ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ. ದೇವರ ಹುಚ್ಚುತನವು ಮನುಷ್ಯರಿಗಿಂತಲೂ ಜ್ಞಾನವುಳ್ಳದ್ದಾಗಿದೆ. ದೇವರ ಬಲಹೀನತೆಯು ಮನುಷ್ಯರಿಗಿಂತಲೂ ಬಲವುಳ್ಳದ್ದಾಗಿದೆ. ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ. ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ; ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ. ಹೀಗಿರಲು ಆತನ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ. ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು. ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- Romans 9:30–32 ರೋಮಾಪುರದವರಿಗೆ 9:30–32ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು. ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ. ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
- Isaiah 66:3–6 ಯೆಶಾಯ 66:3–6ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ. ನಾನು ಸಹ ಅವರ ಮೋಸಗಳನ್ನು ಆದುಕೊಂಡು ಅವರ ಭಯಗಳನ್ನು ಅವರ ಮೇಲೆ ಬರಮಾಡುವೆನು; ಯಾಕಂದರೆ ನಾನು ಕರೆಯಲು ಯಾರೂ ಉತ್ತರ ಕೊಡಲಿಲ್ಲ. ನಾನು ಮಾತನಾಡಲು ಅವರು ಕೇಳಲಿಲ್ಲ. ಆದರೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ನಾನು ಮೆಚ್ಚದ್ದನ್ನು ಆದುಕೊಂಡರು. ಕರ್ತನ ವಾಕ್ಯವನ್ನು ಕೇಳಿರಿ, ಆತನ ವಾಕ್ಯಕ್ಕೆ ನಡಗುವವರೇ, ನಿಮ್ಮ ಸಹೋದರರು ನಿಮ್ಮನ್ನು ಹಗೆಮಾಡಿ ನನ್ನ ಹೆಸರಿಗೋಸ್ಕರ ನಿಮ್ಮನ್ನು ಹೊರಗೆ ಹಾಕಿ--ಕರ್ತನು ಮಹಿಮೆ ಹೊಂದಲೆಂದು ಹೇಳಿ ದ್ದಾರೆ; ಆದರೆ ಆತನು ನಿಮ್ಮ ಸಂತೋಷಕ್ಕಾಗಿ ಕಾಣಿಸಿ ಕೊಳ್ಳುವನು; ಅವರು ನಾಚಿಕೆಪಡುವರು. ಪಟ್ಟಣ ದೊಳಗಿನ ಗದ್ದಲದ ಶಬ್ದವೂ ದೇವಾಲಯದೊಳಗಿಂದ ಸ್ವರವೂ ತನ್ನ ಶತ್ರುಗಳಿಗೆ ಮುಯ್ಯಿಗೆಮುಯ್ಯಿ ತೀರಿ ಸುವ ಕರ್ತನ ಸ್ವರವಾಗಿದೆ.
- Isaiah 59:5–6 ಯೆಶಾಯ 59:5–6ಹಾವಿನಂತೆ ಮೊಟ್ಟೆಗಳನ್ನು ಮರಿ ಮಾಡುತ್ತಾರೆ, ಜೇಡಹುಳದ ನೂಲನ್ನು ನೇಯುತ್ತಾರೆ; ಅದರ ಮೊಟ್ಟೆಗಳನ್ನು ತಿನ್ನುವವನು ಸಾಯುವನು; ಒಡೆಯುವಂಥಾದ್ದರಿಂದ ವಿಷದ ಮರಿಯು ಹೊರಡುವದು. ಅವರ ನೂಲು ವಸ್ತ್ರಕ್ಕಾಗದು; ತಮ್ಮ ಕೆಲಸಗಳಿಂದ ತಮ್ಮನ್ನು ಹೊದ್ದು ಕೊಳ್ಳರು; ಅವರ ಕೆಲಸಗಳು ಅಕ್ರಮದ ಕೆಲಸಗಳೇ; ಅವರ ಕೈಗಳಲ್ಲಿ ಹಿಂಸೆಯ ಕ್ರಿಯೆಗಳು ಅವೆ.
- Isaiah 57:12–13 ಯೆಶಾಯ 57:12–13ನಾನೇ ನಿನ್ನ ನೀತಿಯನ್ನೂ ನಿನ್ನ ಕ್ರಿಯೆಗಳನ್ನೂ ತಿಳಿಯ ಮಾಡುವೆನು. ಅವು ನಿನಗೆ ಪ್ರಯೋಜನವಾಗು ವದಿಲ್ಲ. ನೀನು ಕೂಗುವಾಗ ನಿನ್ನ ವಿಗ್ರಹಗಳು ನಿನ್ನನ್ನು ತಪ್ಪಿಸಲಿ; ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವದು; ವ್ಯರ್ಥವಾದದ್ದು ಅವುಗಳನ್ನು ತೆಗೆದುಕೊಂಡು ಹೋಗುವದು; ಆದರೆ ನನ್ನಲ್ಲಿ ನಂಬಿಕೆ ಇಡುವವನು ದೇಶವನ್ನು ವಶಮಾಡಿ ಕೊಂಡು ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.
- Jeremiah 7:8–10 ಯೆರೆಮೀಯ 7:8–10ಇಗೋ, ನೀವು ಪ್ರಯೋಜನವಿಲ್ಲದ ಸುಳ್ಳಾದ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ. ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?