Isaiah · chapter 28 · verse 22
Isaiah 28:22 in Kannada
ಹೀಗಿರುವದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗ ಬೇಡಿರಿ; ಸೈನ್ಯಗಳ ಕರ್ತನಾದ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರವು ನಿರ್ಣಯಿಸಿದೆ ಎಂಬದನ್ನು ನಾನು ಕೇಳಿದ್ದೇನೆ.
Heegiruvadarinda nimma bandhanagalu bigiyaagadante haasyagaararaaga bediri; sainyagala kartanaada devara kadeyinda bhoomandaladallellaa sanhaaravu nirnayiside embadannu naanu keliddene.
Isaiah 28:22 in English
- King James Version (KJV)
- Now therefore be ye not mockers, lest your bands be made strong: for I have heard from the Lord GOD of hosts a consumption, even determined upon the whole earth.
- World English Bible (WEB)
- Now therefore don’t be scoffers, lest your bonds be made strong; for I have heard a decree of destruction from the Lord, GOD of Armies, on the whole earth.
- American Standard Version (ASV)
- Now therefore be ye not scoffers, lest your bonds be made strong; for a decree of destruction have I heard from the Lord, Jehovah of hosts, upon the whole earth.
- Bible in Basic English (BBE)
- And now, take care that you do not make sport of him, or your bands will be made strong; for I have had word from the Lord, the Lord of armies, of an end, of a complete end, which is to come on all the land.
- Darby Translation (DBY)
- Now therefore be ye not scorners, lest your bonds be made strong; for I have heard from the Lord Jehovah of hosts a consumption, and [one] determined, upon the whole land.
- Webster's Bible (WBS)
- Now therefore be ye not mockers, lest your bands be made strong: for I have heard from the LORD God of hosts a consumption, even determined upon the whole earth.
- Young's Literal Translation (YLT)
- And now, show not yourselves scorners, Lest strong be your bands, For a consumption, that is determined, I have heard, by the Lord, Jehovah of Hosts, [Is] for all the land.
Read in context
- 20ಮೈ ಚಾಚುವದಕ್ಕೆ ಅವನ ಹಾಸಿಗೆ ಚಿಕ್ಕದಾಗಿರು ವದು. ಮುದುರಿಕೊಂಡು ಮಲಗೇನಂದರೆ ಹೊದಿ ಕೆಯ ಅಗಲ ಸಾಲದು;
- 21ಕರ್ತನು ಪೆರಾಚೀಮ್ ಪರ್ವತದಲ್ಲಿ ಅದರ ಹಾಗೆ ಎದ್ದು ಗಿಬ್ಯೋನ್ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ ಅಪರೂಪವಾದ ತನ್ನ ಕೆಲಸ ವನ್ನು ನಡಿಸಿ ಅಪೂರ್ವವಾದ ತನ್ನ ಕಾರ್ಯವನ್ನು ನೇರವೇರಿಸುವನು.
- 22ಹೀಗಿರುವದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗ ಬೇಡಿರಿ; ಸೈನ್ಯಗಳ ಕರ್ತನಾದ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರವು ನಿರ್ಣಯಿಸಿದೆ ಎಂಬದನ್ನು ನಾನು ಕೇಳಿದ್ದೇನೆ.
- 23ನನ್ನ ಧ್ವನಿಗೆ ಕಿವಿಗೊಟ್ಟು ಕೇಳಿರಿ; ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ.
- 24ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ತನ್ನ ಭೂಮಿಯ ಮಣ್ಣು ಹೆಂಟೆಯನ್ನು ತೆಗೆದು (ದಿನವೆಲ್ಲಾ) ಹೊಡೆ ಯುವನೋ?
Cross references
- Isaiah 10:22–23 ಯೆಶಾಯ 10:22–23ತನ್ನ ಜನರಾದ ಇಸ್ರಾಯೇಲ್ಯರು ಸಮುದ್ರದ ಮರಳಿನಂತೆ ಇದ್ದರೂ ಅವರಲ್ಲಿ ಉಳಿದವರು ಮಾತ್ರ ಹಿಂತಿರು ಗುವರು; ನಾಶವಾಗುವದಕ್ಕೆ ವಿಧಿಸಲ್ಪಟ್ಟದ್ದು ನೀತಿ ಯೊಂದಿಗೆ ತುಂಬಿ ತುಳುಕುವದು. ಸೈನ್ಯಗಳ ದೇವರಾದ ಕರ್ತನು ಎಲ್ಲಾ ದೇಶದ ಮಧ್ಯದಲ್ಲಿ ನಿಶ್ಚ ಯಿಸಲ್ಪಟ್ಟ ಕ್ಷೀಣತೆಯನ್ನು ಉಂಟುಮಾಡುವನು.
- Isaiah 24:1–23 ಯೆಶಾಯ 24:1–23ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ. ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೂ ದಾಸನಿಗೆ ಹೇಗೋ ಹಾಗೆಯೇ ಅವನ ಯಜಮಾನನಿಗೆ, ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ತರುವ ವನಿಗೆ; ಬಡ್ಡಿಕೊಡುವವನಿಗೆ ಹೇಗೋ ಹಾಗೆಯೇ ತಕ್ಕೊಳ್ಳುವವನಿಗೆ ಆಗುವದು. ಭೂಮಿಯು ಬರಿದೇ ಬರಿದಾಗುವದು ಮತ್ತು ಸಂಪೂರ್ಣ ಸುಲಿಗೆಯಾಗು ವದು. ಕರ್ತನು ತಾನೇ ಈ ಮಾತನ್ನು ಹೇಳಿದ್ದಾನೆ. ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವದು. ಲೋಕವು ಸೊರಗಿ ಬಾಡಿಹೋಗುವದು ಭೂಮಿಯ ಗರ್ವಿಷ್ಠರು ಕುಗ್ಗಿಹೋಗುವರು. ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು. ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ. ದ್ರಾಕ್ಷಾರಸವು ದುಃಖಿಸುತ್ತದೆ, ದ್ರಾಕ್ಷೆಯು ಕ್ಷೀಣಿಸು ವದು; ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ. ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು. ಇನ್ನು ಗಾನದೊಡನೆ ದ್ರಾಕ್ಷಾರಸ ವನ್ನು ಕುಡಿಯರು; ಕುಡಿಯುವವರಿಗೆ ಮದ್ಯಪಾನವು ಕಹಿಯಾಗುವದು. ಗಲಿಬಿಲಿಗುಂಟಾದ ಪಟ್ಟಣವು ಹಾಳಾಗಿದೆ. ಯಾರು ಒಳಗೆ ಬಾರದಂತೆ ಪ್ರತಿಯೊಂದು ಮನೆಯು ಮುಚ್ಚಿದೆ. ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ. ಪಟ್ಟಣ ದಲ್ಲಿ ಹಾಳೇ ಉಳಿದಿವೆ; ನಾಶನವು ಹೆಬ್ಬಾಗಿಲಿಗೆ ತಟ್ಟಿದೆ. ಎಣ್ಣೇ ಮರವನ್ನು ಬಡಿದ ಮೇಲೆಯೂ ದ್ರಾಕ್ಷೇ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವದು. ಅವರು ತಮ್ಮ ಸ್ವರವನ್ನೆತ್ತಿ ಕರ್ತನ ಮಹತ್ತಿನ ನಿಮಿತ್ತ ಹಾಡು ವರು, ಸಮುದ್ರದ ಕಡೆಯಿಂದ ಆರ್ಭಟಿಸುವರು. ಆದದರಿಂದ ನೀವು ಕರ್ತನಿಗೆ ಬೆಂಕಿಯಲ್ಲಿಯೂ ಸಮುದ್ರದ ದ್ವೀಪಗಳಲ್ಲಿಯೂ ಇಸ್ರಾಯೇಲ್ಯರ ದೇವ ರಾದ ಕರ್ತನ ಹೆಸರನ್ನು ಘನಪಡಿಸಿರಿ. ಭೂಮಂಡಲದ ಕಟ್ಟಕಡೆಯಿಂದ ನೀತಿವಂತರ ಘನತೆಗೆ ಬರುವಂತಹ ಗೀತೆಗಳು ನಮಗೆ ಕೇಳಿ ಬರು ತ್ತಿವೆ. ನಾನಾದರೋ--ಕ್ಷಮಿಸೇ ಕ್ಷಮಿಸುತ್ತೇನೆ. ನನಗೆ ಅಯ್ಯೋ! ಬಾಧಕರು ಬಾಧಿಸುವದರಲ್ಲಿಯೇ ನಿರತ ರಾಗಿದ್ದಾರೆ; ಹೌದು, ಬಾಧಕರು, ಬಹಳವಾಗಿ ಬಾಧಿ ಸುವದರಲ್ಲಿ ನಿರತರಾಗಿದ್ದಾರೆ. ಓ, ಭೂಮಿಯ ನಿವಾಸಿಗಳೇ, ಭಯವೂ ಗುಂಡಿಯೂ ಬಲೆಯೂ ನಿಮಗೆ ಕಾದಿವೆ. ಆಗ ಭಯದ ಶಬ್ದಕ್ಕೆ ಓಡಿ ಹೋಗುವವನು, ಕುಣಿಯೊಳಗೆ ಬೀಳುವನು; ಆ ಕುಣಿಯೊಳಗಿಂದ ಏರಿ ಬರುವವನು ಬಲೆಗೆ ಬೀಳು ವನು; ಮೇಲಿನ ಕಿಟಕಿಗಳು (ಆಕಾಶದ ದ್ವಾರಗಳು) ತೆರೆಯಲ್ಪಟ್ಟಿವೆ. ಭೂಮಿಯ ಅಸ್ತಿವಾರಗಳು ನಡುಗು ತ್ತವೆ. (ಕಂಪಿಸುತ್ತವೆ). ಭೂಮಿಯು ಸಂಪೂರ್ಣ ವಾಗಿ ಮುರಿಯಲ್ಪಟ್ಟಿದೆ. ಪೂರ್ತಿಯಾಗಿ ತುಂಡು ತುಂಡಾಗಿ ಹೋಗಿದೆ. ಭೂಮಿಯು ಮಿತಿವಿಾರಿ ಚಲಿಸ ಲ್ಪಟ್ಟಿದೆ. ಭೂಮಿಯು ಕುಡುಕನ ಹಾಗೆ ಓಲಾಡು ತ್ತದೆ ಮತ್ತು ಗುಡಿಸಲಿನ ಹಾಗೆ ತೆಗೆಯಲ್ಪಡುತ್ತದೆ ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ; ಅದು ಬಿದ್ದುಹೋಗುತ್ತದೆ ತಿರಿಗಿ ಏಳುವದೇ ಇಲ್ಲ. ಆ ದಿವಸದಲ್ಲಿ ಆಗುವದೇನಂದರೆ--ಕರ್ತನು ಉನ್ನತದಲ್ಲಿರುವ ಉನ್ನತವಾದವರ ಸೈನ್ಯವನ್ನೂ ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸು ವನು. ಕುಣಿಯೊಳಗೆ ಒಟ್ಟುಗೂಡಿದ ಸೆರೆಯವರ ಹಾಗೆ ಅವರು ಒಟ್ಟುಗೂಡಿ ಸೆರೆಮನೆಯಲ್ಲಿ ಮುಚ್ಚ ಲ್ಪಟ್ಟು ಬಹಳ ದಿವಸಗಳಾದ ಮೇಲೆ ದಂಡನೆಗೆ ಗುರಿ ಯಾಗುವರು.ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು. ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
- Luke 21:24 ಲೂಕನು 21:24ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
- Acts 17:32 ಅಪೊಸ್ತಲರ ಕೃತ್ಯಗಳು 17:32ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.
- Jeremiah 15:17 ಯೆರೆಮೀಯ 15:17ನಾನು ಹಾಸ್ಯಗಾರರ ಕೂಟದಲ್ಲಿ ಕೂತುಕೊಂಡು ಉತ್ಸಾಹಪಡಲಿಲ್ಲ, ನಿನ್ನ ಕೈ ನಿಮಿತ್ತ ಒಂಟಿಯಾಗಿ ಕೂತುಕೊಂಡಿದ್ದೇನೆ; ನನ್ನನ್ನು ಉಗ್ರತೆಯಿಂದ ತುಂಬಿಸಿದ್ದೀ.
- Lamentations 1:14 ಪ್ರಲಾಪಗಳು 1:14ನನ್ನ ಅಕ್ರಮಗಳ ನೊಗವು ಆತನ ಕೈಯಿಂದ ಕಟ್ಟಲ್ಪಟ್ಟಿದೆ; ಅವು ಹೆಣೆಯಲ್ಪಟ್ಟಿವೆ; ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ಮೇಲೆ ಬರುತ್ತವೆ. ಆತನು ನನ್ನ ಶಕ್ತಿಯು ಕುಗ್ಗುವ ಹಾಗೆ ಮಾಡಿದನು, ಕರ್ತನು ನನ್ನನ್ನು ಅವರ ಕೈಗಳಿಗೆ ಒಪ್ಪಿಸಿ ಅವರಿಂದ ನಾನು ಎದ್ದೇಳಲು ಶಕ್ತನಾಗದಂತೆ ಮಾಡಿದ್ದಾನೆ.
- Isaiah 28:14–15 ಯೆಶಾಯ 28:14–15ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನ ರನ್ನು ಆಳುವ ಹಾಸ್ಯದ ಜನರಾದ ನೀವು ಕರ್ತನ ಮಾತನ್ನು ಕೇಳಿರಿ, ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?
- 2 Chronicles 36:16 2 ಪೂರ್ವಕಾಲವೃತ್ತಾಂತ 36:16ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- Isaiah 32:12–14 ಯೆಶಾಯ 32:12–14ಇಷ್ಟವಾದ ಹೊಲಗಳ ಮತ್ತು ಫಲ ವತ್ತಾದ ದ್ರಾಕ್ಷಾಲತೆಗಳ ನಿಮಿತ್ತ ಎದೆ ಬಡುಕೊಳ್ಳು ವರು. ನನ್ನ ಜನರ ಭೂಮಿಯ ಮೇಲೂ ಹೌದು, ಉತ್ಸಾಹ ಪಟ್ಟಣದಲ್ಲಿ ಉಲ್ಲಾಸಗೊಳ್ಳುವ ಎಲ್ಲಾ ಮನೆ ಗಳ ಮೇಲೂ ಮುಳ್ಳು ಮತ್ತು ದತ್ತೂರಿ ಬೆಳೆಯುವವು. ಅರಮನೆಗಳು ಕೈಬಿಡಲ್ಪಡುವವು. (ವಿಸರ್ಜಿಸು ವವು) ಸಮೂಹಗಳಿಂದ ತುಂಬಿದ್ದ ಪಟ್ಟಣವು ನಿರ್ಜನ ವಾಗುವದು. ದುರ್ಗಗಳೂ ಕೋಟೆಗಳೂ ಯಾವಾ ಗಲೂ ಗುಹೆ (ಗವಿ)ಗಳಾಗಿಯೂ ಕಾಡುಕತ್ತೆಗಳಿಗೆ ಸಂತೋಷವಾಗಿಯೂ ಮಂದೆಗಳಿಗೆ ಮೇಯುವ ಸ್ಥಳವಾಗಿಯೂ ಇರುವವು.
- Revelation 22:18–19 ಪ್ರಕಟನೆ 22:18–19ಈ ಪುಸ್ತಕದ ಪ್ರವಾದನಾವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನಂ ದರೆ--ಯಾವನಾದರೂ ಇವುಗಳಿಗೆ ಕೂಡಿಸಿದರೆ ದೇವರು ಅವನಿಗೆ ಈ ಪುಸ್ತಕದಲ್ಲಿ ಬರೆದಿರುವ ಉಪ ದ್ರವಗಳನ್ನು ಕೂಡಿಸುವನು. ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ವಾಕ್ಯಗಳಿಂದ ತೆಗೆದು ಬಿಟ್ಟರೆ ಜೀವಗ್ರಂಥದಿಂದಲೂ ಪರಿಶುದ್ಧ ಪಟ್ಟಣ ದಿಂದಲೂ ಈ ಪುಸ್ತಕದಲ್ಲಿ ಬರೆದಿರುವವುಗಳಿಂದಲೂ ಅವನ ಪಾಲನ್ನು ದೇವರು ತೆಗೆದುಬಿಡುವನು.
- Jeremiah 39:7 ಯೆರೆಮೀಯ 39:7ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಅವನು ಕಿತ್ತುಹಾಕಿ ಬಾಬೆಲಿಗೆ ತಕ್ಕೊಂಡು ಹೋಗಬೇಕೆಂದು ಅವನನ್ನು ಸರಪಣಿಗಳಿಂದ ಕಟ್ಟಿಸಿದನು.
- Psalm 107:16 ಕೀರ್ತನೆಗಳು 107:16ಆತನು ಹಿತ್ತಾಳೆಯ ಕದ ಗಳನ್ನು ಮುರಿದು ಕಬ್ಬಿಣದ ಅಗುಳಿಗಳನ್ನು ಕಡಿದು ಬಿಟ್ಟಿದ್ದಾನೆ.