Isaiah · chapter 29 · verse 13
Isaiah 29:13 in Kannada
ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
Heegiruvadarinda kartanu heluvadenandare --ee janaru baayinda nannannu saviాpisi; avara tutigalinda nannannu sanmaanisuttaare; aadare tamma hrudayavannu nanage doora maadikondu baayi paathavaagi kalitiruva manushyara aajnyege sariyaada bhayavannu maatra nannallittiddaare.
Isaiah 29:13 in English
- King James Version (KJV)
- Wherefore the Lord said, Forasmuch as this people draw near [me] with their mouth, and with their lips do honour me, but have removed their heart far from me, and their fear toward me is taught by the precept of men:
- World English Bible (WEB)
- The Lord said, “Because this people draws near with their mouth and honors me with their lips, but they have removed their heart far from me, and their fear of me is a commandment of men which has been taught;
- American Standard Version (ASV)
- And the Lord said, Forasmuch as this people draw nigh [unto me], and with their mouth and with their lips do honor me, but have removed their heart far from me, and their fear of me is a commandment of men which hath been taught [them];
- Bible in Basic English (BBE)
- And the Lord said, because this people come near to me with their mouths, and give honour to me with their lips, but their heart is far from me, and their fear of me is false, a rule given them by the teaching of men;
- Darby Translation (DBY)
- And the Lord saith, Forasmuch as this people draw near with their mouth, and honour me with their lips, but their heart is removed far from me, and their fear of me is a commandment taught of men;
- Webster's Bible (WBS)
- Wherefore the LORD said, Forasmuch as this people draw near [me] with their mouth, and with their lips do honor me, but have removed their heart far from me, and their fear towards me is taught by the precept of men:
- Young's Literal Translation (YLT)
- And the Lord saith: Because drawn near hath this people, with its mouth, And with its lips they have honoured Me, And its heart it hath put far off from Me, And their fear of Me is — A precept of men is taught!
Read in context
- 11ದರ್ಶನವೆಲ್ಲಾ ನಿಮಗೆ ಮುದ್ರೆ ಹಾಕಿ ದ ವಾಕ್ಯಗಳ ಪುಸ್ತಕದ ಹಾಗಾಯಿತು; ಅದನ್ನು ಅಕ್ಷರ ಬಲ್ಲವನಿಗೆ ಕೊಟ್ಟು ಇದನ್ನು ಓದು ಎಂದು ಬೇಡಿದರೆ ಅವನು--ಮುದ್ರೆ ಹಾಕಿದೆಯಲ್ಲಾ, ಆಗುವದಿಲ್ಲ ಅನ್ನು ವನು;
- 12ಅಕ್ಷರವಿಲ್ಲದವನಿಗೆ ಆ ಪುಸ್ತಕವನ್ನು ಒಪ್ಪಿಸಿದರೆ ಅವನು--ನನಗೆ ವಿದ್ಯೆಯಿಲ್ಲ ಅನ್ನುವನು.
- 13ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
- 14ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು.
- 15ತಮ್ಮ ಆಲೋಚನೆಯನ್ನು ಕರ್ತನಿಗೆ ಮರೆಮಾಜುವದಕ್ಕೆ ಅಗಾಧದಲ್ಲಿ ಮಾಡಿ--ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು ಅಂದುಕೊಂಡು ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸು ವವರಿಗೆ ಅಯ್ಯೋ!
Cross references
- Jeremiah 12:2 ಯೆರೆಮೀಯ 12:2ನೀನು ಅವರನ್ನು ನೆಟ್ಟಿದ್ದೀ, ಹೌದು, ಅವರು ಬೇರೂರಿದ್ದಾರೆ; ಬೆಳೆಯುತ್ತಾರೆ, ಹೌದು, ಫಲಫಲಿಸುತ್ತಾರೆ; ನೀನು ಅವರ ಬಾಯಲ್ಲಿ ಸವಿಾಪವಾಗಿದ್ದೀ, ಅವರ ಅಂತ ರಿಂದ್ರಿಯಗಳಿಗೆ ದೂರವೇ.
- Ezekiel 33:31–33 ಯೆಹೆಜ್ಕೇಲನು 33:31–33ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು. ಇಗೋ, ನೀನು ಅವರಿಗೆ ಇಂಪಾದ ಶಬ್ದವುಳ್ಳಂತ, ತಂತಿವಾದ್ಯಗಳನ್ನು ಚೆನ್ನಾಗಿ ಬಾರಿಸುವಂತ ಒಬ್ಬನ ಮನೋಹರವಾದ ರಾಗದ ಹಾಗಿರುವಿ; ಅವರು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಅವುಗಳನ್ನು ಮಾಡುವದಿಲ್ಲ.ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವದು. ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವದು.
- Mark 7:2–13 ಮಾರ್ಕನು 7:2–13ಆಗ ಆತನ ಶಿಷ್ಯರಲ್ಲಿ ಕೆಲವರು ಅಶುದ್ಧವಾದ ಅಂದರೆ ತೊಳೆಯದಿರುವ ಕೈಗಳಿಂದ ರೊಟ್ಟಿ ತಿನ್ನುವದನ್ನು ಅವರು ನೋಡಿ ತಪ್ಪು ಕಂಡು ಹಿಡಿದರು. ಯಾಕಂದರೆ ಫರಿಸಾಯರು ಮತ್ತು ಯೆಹೂದ್ಯರೆಲ್ಲರು ಹಿರಿಯರ ಸಂಪ್ರದಾಯವನ್ನು ಅನುಸರಿಸುವವರಾಗಿ ತಮ್ಮ ಕೈಗಳನ್ನು ಅನೇಕ ಸಾರಿ ತೊಳೆದುಕೊಳ್ಳದ ಹೊರತು ಊಟಮಾಡುವದಿಲ್ಲ. ಅವರು ಪೇಟೆಯಿಂದ ಬಂದಾಗ ಸ್ನಾನ ಮಾಡದೆ ಊಟಮಾಡುವದಿಲ್ಲ; ಮತ್ತು ಅವರು ಬಟ್ಟಲುಗಳನ್ನು ಪಾತ್ರೆಗಳನ್ನು ಹಿತ್ತಾಳೆಯ ಪಾತ್ರೆಗಳನ್ನು ಮೇಜುಗಳನ್ನು ತೊಳೆಯುವಂಥ ಅನೇಕ ಆಚಾರಗಳನ್ನು ಮಾಡಿಕೊಂಡಿ ದ್ದರು. ತರುವಾಯ ಫರಿಸಾಯರೂ ಶಾಸ್ತ್ರಿಗಳೂ ಆತನಿಗೆ--ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯದ ಪ್ರಕಾರ ಕೈತೊಳಕೊಳ್ಳದೆ ಯಾಕೆ ರೊಟ್ಟಿ ತಿನ್ನುತ್ತಾರೆ ಎಂದು ಕೇಳಿದರು. ಆತನು ಪ್ರತ್ಯುತ್ತರವಾಗಿ ಅವರಿಗೆ --ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸು ತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರ ವಾಗಿದೆ; ಮನುಷ್ಯರ ಕಟ್ಟಳೆಗಳನ್ನು ಬೋಧನೆ ಗಳನ್ನಾಗಿ ಮಾಡಿ ಕಲಿಸುವದರಿಂದ ಅವರು ನನ್ನನ್ನು ಆರಾಧಿಸುವದು ವ್ಯರ್ಥವಾಗಿದೆ ಎಂದು ಬರೆಯಲ್ಪಟ್ಟ ಪ್ರಕಾರ ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ. ನೀವು ದೈವಾಜ್ಞೆ ಯನ್ನು ಬದಿಗೆ ಇಡುವದಕ್ಕಾಗಿ ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ತೊಳೆಯುವ ಮನುಷ್ಯರ ಅನೇಕ ಸಂಪ್ರದಾಯಗಳನ್ನು ಹಿಡಿದು ಅನುಸರಿಸುತ್ತೀರಿ ಅಂದನು. ಆತನು ಅವರಿಗೆ--ನೀವು ನಿಮ್ಮ ಸಂಪ್ರ ದಾಯವನ್ನು ಕೈಕೊಳ್ಳುವಂತೆ ದೈವಾಜ್ಞೆಯನ್ನು ಸಂಪೂರ್ಣವಾಗಿ ಅಸಡ್ಡೆ ಮಾಡುತ್ತೀರಿ. ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ. ಆದರೆ ನೀವು--ಒಬ್ಬ ಮನುಷ್ಯನು ತನ್ನ ತಂದೆಗಾಗಲೀ ಅಥವಾ ತಾಯಿ ಗಾಗಲೀ--ನೀನು ನನ್ನಿಂದ ಹೊಂದಲಿಕ್ಕಿರುವ ಪ್ರಯೋಜನವು ಕೊರ್ಬಾನ್ (ಅಂದರೆ ಒಂದು ದಾನ) ಆಗಿದೆ ಎಂದು ಹೇಳಿದರೆ ಅವನು ಸ್ವತಂತ್ರ ನಾಗುವನು ಎಂದು ಅನ್ನುತ್ತೀರಿ; ಅವನು ತನ್ನ ತಂದೆಗಾದರೂ ತಾಯಿಗಾದರೂ ಏನನ್ನೂ ನೀವು ಮಾಡಗೊಡಿಸದೆ ನೀವು ಕಲಿಸಿರುವ ನಿಮ್ಮ ಸಂಪ್ರದಾಯದ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಇಂಥ ಅನೇಕವಾದವುಗಳನ್ನು ನೀವು ಮಾಡುತ್ತೀರಿ ಅಂದನು.
- Matthew 15:2–9 ಮತ್ತಾಯನು 15:2–9ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯ ವನ್ನು ಯಾಕೆ ಮಾರುತ್ತಾರೆ? ಯಾಕಂದರೆ ಅವರು ರೊಟ್ಟಿ ತಿನ್ನುವಾಗ ತಮ್ಮ ಕೈಗಳನ್ನು ತೊಳಕೊಳ್ಳುವದಿಲ್ಲ ಅಂದರು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಯಾಕೆ ಮಾರುತ್ತೀರಿ? ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ. ಆದರೆ ನೀವು--ಯಾವನಾದರೂ ತನ್ನ ತಂದೆಗಾಗಲೀ ತಾಯಿಗಾಗಲೀ-- ನನ್ನಿಂದ ನಿನಗೆ ಪ್ರಯೋಜನ ವಾಗತಕ್ಕದ್ದು ಕಾಣಿಕೆಯಾಯಿತು ಎಂದು ಹೇಳುವದಾ ದರೆ ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ. ಕಪಟಿಗಳೇ, ನಿಮ್ಮ ವಿಷಯವಾಗಿ ಯೆಶಾಯನು ಸರಿಯಾಗಿ ಪ್ರವಾದಿಸಿದನು; ಆದೇ ನಂದರೆ-- ಈ ಜನರು ತಮ್ಮ ಬಾಯಿಂದ ನನ್ನನ್ನು ಸಮಾಪಿಸಿ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಅವರು ಮನುಷ್ಯರ ಆಜ್ಞೆಗಳನ್ನು ಬೋಧಿಸಿ ಕಲಿಸುವ ದರಿಂದ ನನ್ನನ್ನು ಆರಾಧಿಸುವದು ವ್ಯರ್ಥ ಎಂಬದೇ.
- Jeremiah 3:10 ಯೆರೆಮೀಯ 3:10ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ.
- Isaiah 58:2–3 ಯೆಶಾಯ 58:2–3ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ. ನಾವು ಉಪವಾಸ ಮಾಡಿದ್ದೇವೆ, ನೀನು ಯಾಕೆ ನೋಡುವದಿಲ್ಲ? ನಮ್ಮ ಪ್ರಾಣವನ್ನು ಕುಂದಿಸಲು ನೀನು ಗಮನಿಸದಿರುವದೇಕೆ ಎಂದು ಅವರು ಅಂದು ಕೊಳ್ಳುತ್ತಾರೆ; ಇಗೋ, ನಿಮ್ಮ ಉಪವಾಸದ ದಿನದಲ್ಲಿ ನಿಮ್ಮ ಇಷ್ಟವನ್ನು ತೀರಿಸುತ್ತೀರಿ ಮತ್ತು ನಿಮ್ಮ ಎಲ್ಲಾ ದುಡಿತವನ್ನು ನಿರ್ಬಂಧಿಸುತ್ತೀರಿ.
- Proverbs 30:6 ಜ್ಞಾನೋಕ್ತಿಗಳು 30:6ಆತನು ನಿನ್ನನ್ನು ಗದರಿಸುವಂತೆಯೂ ನೀನು ಸುಳ್ಳುಗಾರನೆಂದು ತೋರು ವಂತೆಯೂ ಆತನ ಮಾತುಗಳಿಗೆ ಯಾವದನ್ನು ಸೇರಿಸ ಬೇಡ.
- Jeremiah 5:2 ಯೆರೆಮೀಯ 5:2ಅವರು--ಕರ್ತನು ಜೀವಿಸುತ್ತಾನೆಂದು ಹೇಳಿದರೂ ನಿಶ್ಚಯವಾಗಿ ಸುಳ್ಳಾಗಿಯೇ ಅವರು ಆಣೆ ಇಡುತ್ತಾರೆ.
- Colossians 2:22 ಕೊಲೊಸ್ಸೆಯವರಿಗೆ 2:22(ಆ ಪದಾರ್ಥಗಳೆಲ್ಲವೂ ಬಳಸುವ ದರಲ್ಲಿ ನಾಶವಾಗುತ್ತವೆ);ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.
- Isaiah 48:1–2 ಯೆಶಾಯ 48:1–2ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ. ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
- Jeremiah 42:2–4 ಯೆರೆಮೀಯ 42:2–4ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ್ದೇನಂ ದರೆ--ನಮ್ಮ ವಿಜ್ಞಾಪನೆ ನಿನ್ನ ಮುಂದೆ ಬರಲಿ; ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ ನಮ ಗೋಸ್ಕರವೂ ಅಂದರೆ ಈ ಸಮಸ್ತಶೇಷಕ್ಕೋಸ್ಕರವೂ ನಾವು ನಡೆಯತಕ್ಕ ಮಾರ್ಗವನ್ನು ನಾವು ಮಾಡತಕ್ಕ ಕಾರ್ಯವನ್ನು ನಿನ್ನ ದೇವರಾದ ಕರ್ತನು ನಮಗೆ ತಿಳಿಸುವ ಹಾಗೆ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡು ಅಂದರು. ಆಗ ಪ್ರವಾದಿಯಾದ ಯೆರೆವಿಾ ಯನು ಅವರಿಗೆ--ನಾನು ಕೇಳಿದ್ದೇನೆ; ಇಗೋ, ನಿಮ್ಮ ಮಾತುಗಳ ಪ್ರಕಾರ ನಿಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡುತ್ತೇನೆ; ಕರ್ತನು ನಿಮಗೆ ಯಾವ ಉತ್ತರವನ್ನು ಕೊಡುವನೋ ಅದನ್ನು ನಿಮಗೆ ತಿಳಿಸು ವೆನು; ಒಂದು ಮಾತನ್ನಾದರೂ ನಿಮ್ಮಿಂದ ಹಿಂತೆಗೆ ಯುವದಿಲ್ಲವೆಂದು ಹೇಳಿದನು.
- Jeremiah 42:20 ಯೆರೆಮೀಯ 42:20ನಮಗೋಸ್ಕರ ನಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡೆಂದೂ ನಮ್ಮ ದೇವರಾದ ಕರ್ತನು ಏನೇನು ಹೇಳುವನೋ ಅದನ್ನು ನಮಗೆ ತಿಳಿಸು, ಆಗ ನಾವು ಮಾಡುವೆವೆಂದೂ ಹೇಳಿ, ನನ್ನನ್ನು ನಿಮ್ಮ ದೇವರಾದ ಕರ್ತನ ಬಳಿಗೆ ಕಳುಹಿಸಿದಿರಿ.
Original words (Hebrew)
- Lord · H136אֲדֹנָי ʼĂdônây
- said · H559אָמַר ʼâmar
- Forasmuch · H3282יַעַן yaʻan
- people · H5971עַם ʻam
- near · H5066נָגַשׁ nâgash
- mouth · H6310פֶּה peh
- lips · H8193שָׂפָה sâphâh
- honour · H3513כָּבַד kâbad
- removed · H7368רָחַק râchaq
- heart · H3820לֵב lêb
- far · H7368רָחַק râchaq
- fear · H3374יִרְאָה yirʼâh
- taught · H3925לָמַד lâmad
- precept · H4687מִצְוָה mitsvâh
- men · H582אֱנוֹשׁ ʼĕnôwsh