Isaiah · chapter 29 · verse 2
Isaiah 29:2 in Kannada
ಆದಾಗ್ಯೂ ನಾನು ಅರೀಯೇಲಿಗೆ ಇಕ್ಕಟ್ಟನ್ನು ಉಂಟುಮಾಡುವೆನು. ಅಲ್ಲಿ ಕಷ್ಟವೂ ದುಃಖವೂ ಇರುವದು.
Aadaagyoo naanu areeyelige ikkattannu untumaaduvenu. Alli kashtavoo duhkhavoo iruvadu.
Isaiah 29:2 in English
- King James Version (KJV)
- Yet I will distress Ariel, and there shall be heaviness and sorrow: and it shall be unto me as Ariel.
- World English Bible (WEB)
- then I will distress Ariel, and there will be mourning and lamentation. She shall be to me as an altar hearth.
- American Standard Version (ASV)
- then will I distress Ariel, and there shall be mourning and lamentation; and she shall be unto me as Ariel.
- Bible in Basic English (BBE)
- And I will send trouble on Ariel, and there will be weeping and cries of grief; and she will be to me as Ariel.
- Darby Translation (DBY)
- But I will distress Ariel, and there shall be sorrow and sadness; and it shall be unto me as an Ariel.
- Webster's Bible (WBS)
- Yet I will distress Ariel, and there shall be heaviness and sorrow; and it shall be to me as Ariel.
- Young's Literal Translation (YLT)
- And I have sent distress to Ariel, And it hath been lamentation and mourning, And it hath been to me as Ariel.
Read in context
- 1ಅಯ್ಯೋ, ಅರೀಯೇಲೇ, ಅರೀಯೇಲೇ, (ಅಗ್ನಿವೇದಿ) ದಾವೀದನು ವಾಸಿಸಿದ ಪಟ್ಟ ಣವೇ ವರುಷಕ್ಕೆ ವರುಷವನ್ನು ಕೂಡಿಸಿರಿ, ಬಲಿಗಳನ್ನು ವಧಿಸಿ ಅರ್ಪಿಸಿರಿ.
- 2ಆದಾಗ್ಯೂ ನಾನು ಅರೀಯೇಲಿಗೆ ಇಕ್ಕಟ್ಟನ್ನು ಉಂಟುಮಾಡುವೆನು. ಅಲ್ಲಿ ಕಷ್ಟವೂ ದುಃಖವೂ ಇರುವದು.
- 3ಅದು ನನಗೆ ಅರೀಯೇಲಾಗಿಯೇ ಪರಿಣಮಿಸುವದು. ಸುತ್ತಲೂ ದಂಡಿಳಿಸಿ ನಿನಗೆ ವಿರುದ್ಧವಾಗಿ ಕೋಟೆಗಳನ್ನು ಎಬ್ಬಿಸಿ ದಿಬ್ಬಹಾಕಿ ನಿನ್ನ ಮೇಲೆ ಮುತ್ತಿಗೆ ಹಾಕುವೆನು.
- 4ಆಗ ನೀನು ತಗ್ಗಿಸಲ್ಪಟ್ಟು ಭೂಮಿಯೊಳಗಿಂದ ಮಾತಾಡುವಿ. ನಿನ್ನ ನುಡಿಯು ದೂಳಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವದು, ನಿನ್ನ ಸ್ವರವು ಭೂತದ ಹಾಗೆ ನೆಲದೊಳಗಿಂದ ಬರು ವದು; ನಿನ್ನ ನುಡಿಯು ದೂಳಿನೊಳಗಿಂದ ಪಿಸುಗುಟ್ಟು ವದು;
Cross references
- Isaiah 5:25–30 ಯೆಶಾಯ 5:25–30ಆದಕಾರಣ ಕರ್ತನ ಕೋಪವು ಜನರಿಗೆ ವಿರೋ ಧವಾಗಿ ಉರಿಗೊಂಡು ಅವರ ಮೇಲೆ ತನ್ನ ಕೈಚಾಚಿ ಅವರನ್ನು ಹೊಡೆದಿದ್ದಾನೆ; ಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿ ರುವವು. ಇಷ್ಟೆಲ್ಲಾ ಆದರೂ ಆತನ ಕೋಪವು ಹಿಂತಿರುಗದೆ ಇನ್ನೂ ಕೈಚಾಚಿಯೇ ಇದೆ. ಆತನು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಅಂಚಿನಿಂದ ಅವರಿಗೆ ಸಿಳ್ಳುಹಾಕುವನು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು; ಅವರಲ್ಲಿ ಯಾರೂ ದಣಿದು ಮುಗ್ಗರಿಸರು; ಅಥವಾ ಅವರು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ, ಇಲ್ಲವೆ ಅವರ ನಡುಕಟ್ಟು ಬಿಚ್ಚಿಕೊಳ್ಳುವದಿಲ್ಲ. ಕೆರದ ಬಾರು ಹರಿಯುವದಿಲ್ಲ. ಅವರ ಬಾಣಗಳು ಹದವಾಗಿವೆ, ಅವರ ಬಿಲ್ಲುಗಳು ಬೊಗ್ಗಿವೆ, ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ ಅವರ ಚಕ್ರಗಳು ಬಿರು ಗಾಳಿಯಂತೆಯೂ ರಭಸವಾಗಿವೆ. ಅವರ ಘರ್ಜ ನೆಯು ಸಿಂಹದಂತೆ ಅದೆ. ಪ್ರಾಯದ ಸಿಂಹಗಳಂತೆ ಆರ್ಭಟಿಸುತ್ತಾರೆ; ಹೌದು, ಘರ್ಜಿಸುತ್ತಾ ಬೇಟೆ ಹಿಡಿದು ಭದ್ರವಾಗಿ ಹೊತ್ತುಕೊಂಡು ಹೋಗುತ್ತಾರೆ ಅದನ್ನು ಬಿಡಿಸುವವನು ಒಬ್ಬನೂ ಇಲ್ಲ.ಆ ದಿನದಲ್ಲಿ ಅವರು ಸಮುದ್ರವು ಬೋರ್ಗರೆಯುವಂತೆ ಅವರ ಮೇಲೆ ಘರ್ಜಿಸುವರು; ಭೂಮಿಯನ್ನು ದೃಷ್ಟಿ ಸಿದರೆ ಅಂಧಕಾರವನ್ನೂ ದುಃಖವನ್ನೂ ನೋಡುವಿ. ಆಕಾಶಮಂಡಲದಲ್ಲಿ ಬೆಳಕು ಕತ್ತಲಾಗುವದು. ಆ ದಿನದಲ್ಲಿ ಅವರು ಸಮುದ್ರವು ಬೋರ್ಗರೆಯುವಂತೆ ಅವರ ಮೇಲೆ ಘರ್ಜಿಸುವರು; ಭೂಮಿಯನ್ನು ದೃಷ್ಟಿ ಸಿದರೆ ಅಂಧಕಾರವನ್ನೂ ದುಃಖವನ್ನೂ ನೋಡುವಿ. ಆಕಾಶಮಂಡಲದಲ್ಲಿ ಬೆಳಕು ಕತ್ತಲಾಗುವದು.
- Zephaniah 1:7–8 ಚೆಫನ್ಯ 1:7–8ಕರ್ತ ನಾದ ದೇವರ ಮುಂದೆ ಮೌನವಾಗಿರ್ರಿ: ಕರ್ತನ ದಿನವು ಸವಿಾಪವಾಗಿದೆ; ಕರ್ತನು ಬಲಿಯನ್ನು ಸಿದ್ಧ ಮಾಡಿದ್ದಾನೆ; ತನ್ನ ಅತಿಥಿಗಳನ್ನು ಆಹ್ವಾನಿಸಿದ್ದಾನೆ. ಕರ್ತನ ಬಲಿಯ ದಿನದಲ್ಲಿ ಆಗುವದೇನಂದರೆ--ನಾನು ಪ್ರಧಾನರನ್ನೂ ಅರಸನ ಕುಮಾರರ ಮಕ್ಕಳನ್ನೂ ಅನ್ಯರ ಉಡುಪನ್ನು ತೊಟ್ಟುಕೊಳ್ಳುವವರೆಲ್ಲರನ್ನೂ ದಂಡಿಸುವೆನು.
- Isaiah 36:22 ಯೆಶಾಯ 36:22ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
- Isaiah 33:7–9 ಯೆಶಾಯ 33:7–9ಇಗೋ, ಅವರ ಪರಾಕ್ರಮಶಾಲಿಗಳು ಹೊರಗೆ ಕೂಗುತ್ತಾರೆ; ಸಮಾಧಾನದ ರಾಯಭಾರಿಗಳು ಘೋರ ವಾಗಿ ಅಳುತ್ತಿದ್ದಾರೆ. ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ನಿಂತುಹೋದರು. ಅವನು ಒಪ್ಪಂದವನ್ನು ವಿಾರಿದ್ದಾನೆ. ಪಟ್ಟಣಗಳನ್ನು ತಿರಸ್ಕಾರಮಾಡಿ ಯಾವ ಮನುಷ್ಯನನ್ನು ಗಣನೆಗೆತಾ ರನು. ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನ್ ನಾಚಿಕೆಪಟ್ಟು ಕಡಿದು ಬೀಳುವದು. ಶಾರೋನ್ ಬೆಂಗಾ ಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಹಣ್ಣುಗಳನ್ನು ಉದುರಿಸಿಬಿಟ್ಟಿವೆ.
- Isaiah 10:32 ಯೆಶಾಯ 10:32ಆ ದಿನ ದಲ್ಲಿ ಅವನು ನೋಬಿನಲ್ಲಿ ಇಳುಕೊಂಡವನಂತೆ ಇದ್ದಾಗ್ಯೂ ಚೀಯೋನ್ ಕುಮಾರ್ತೆಯ ಪರ್ವತಕ್ಕೂ ಯೆರೂಸಲೇಮಿನ ಗುಡ್ಡಕ್ಕೂ ವಿರೋಧವಾಗಿ ತನ್ನ ಕೈಯನ್ನು ಅಲ್ಲಾಡಿಸುವನು.
- Isaiah 24:1–12 ಯೆಶಾಯ 24:1–12ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ. ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೂ ದಾಸನಿಗೆ ಹೇಗೋ ಹಾಗೆಯೇ ಅವನ ಯಜಮಾನನಿಗೆ, ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ತರುವ ವನಿಗೆ; ಬಡ್ಡಿಕೊಡುವವನಿಗೆ ಹೇಗೋ ಹಾಗೆಯೇ ತಕ್ಕೊಳ್ಳುವವನಿಗೆ ಆಗುವದು. ಭೂಮಿಯು ಬರಿದೇ ಬರಿದಾಗುವದು ಮತ್ತು ಸಂಪೂರ್ಣ ಸುಲಿಗೆಯಾಗು ವದು. ಕರ್ತನು ತಾನೇ ಈ ಮಾತನ್ನು ಹೇಳಿದ್ದಾನೆ. ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವದು. ಲೋಕವು ಸೊರಗಿ ಬಾಡಿಹೋಗುವದು ಭೂಮಿಯ ಗರ್ವಿಷ್ಠರು ಕುಗ್ಗಿಹೋಗುವರು. ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು. ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ. ದ್ರಾಕ್ಷಾರಸವು ದುಃಖಿಸುತ್ತದೆ, ದ್ರಾಕ್ಷೆಯು ಕ್ಷೀಣಿಸು ವದು; ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ. ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು. ಇನ್ನು ಗಾನದೊಡನೆ ದ್ರಾಕ್ಷಾರಸ ವನ್ನು ಕುಡಿಯರು; ಕುಡಿಯುವವರಿಗೆ ಮದ್ಯಪಾನವು ಕಹಿಯಾಗುವದು. ಗಲಿಬಿಲಿಗುಂಟಾದ ಪಟ್ಟಣವು ಹಾಳಾಗಿದೆ. ಯಾರು ಒಳಗೆ ಬಾರದಂತೆ ಪ್ರತಿಯೊಂದು ಮನೆಯು ಮುಚ್ಚಿದೆ. ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ. ಪಟ್ಟಣ ದಲ್ಲಿ ಹಾಳೇ ಉಳಿದಿವೆ; ನಾಶನವು ಹೆಬ್ಬಾಗಿಲಿಗೆ ತಟ್ಟಿದೆ.
- Jeremiah 39:4–5 ಯೆರೆಮೀಯ 39:4–5ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು; ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು.
- Isaiah 34:6 ಯೆಶಾಯ 34:6ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ.
- Isaiah 37:3 ಯೆಶಾಯ 37:3ಆಗ ಅವರು ಅವನಿಗೆ--ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ದೂಷಣೆಯಾಗಿಯೂ ಇದೆ. ಪ್ರಸವವೇದನೆಯ ಕಾಲವು ಬಂದದೆ, ಆದರೆ ಹೆರುವದಕ್ಕೆ ಬಲ ಸಾಲದು.
- Isaiah 10:5–6 ಯೆಶಾಯ 10:5–6ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ. ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
- Isaiah 17:14 ಯೆಶಾಯ 17:14ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
- Lamentations 2:5 ಪ್ರಲಾಪಗಳು 2:5ಕರ್ತನು ಶತ್ರುವಿನಂತೆ ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾನೆ; ಆತನು ಅವನ ಅರಮನೆಗಳನ್ನೆಲ್ಲಾ ನುಂಗಿಬಿಟ್ಟಿದ್ದಾನೆ, ಆತನು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾನೆ; ಯೆಹೂದದ ಮಗಳ ದುಃಖವನ್ನೂ ಪ್ರಲಾಪವನ್ನೂ ಹೆಚ್ಚಿಸಿದ್ದಾನೆ.