Isaiah · chapter 29 · verse 21
Isaiah 29:21 in Kannada
ಒಂದು ಮಾತಿನ ನಿಮಿತ್ತ ಮನುಷ್ಯರಿಗೆ ತಪ್ಪು ಹೊರಿಸುವವರೂ ಬಾಗಲಲ್ಲಿ ವಾದಿಸುವವನಿಗೆ ಉರ್ಲು ಒಡ್ಡುವವರೂ ಏನೂ ಇಲ್ಲದೆ ಕಾರ್ಯಕ್ಕೆ ನೀತಿವಂತನನ್ನು ತಿರುಗಿಸುವವರೂ ನಿರ್ನಾಮವಾಗುವರು.
Ondu maatina nimitta manushyarige tappu horisuvavaroo baagalalli vaadisuvavanige urlu odduvavaroo enoo illade kaaryakke neetivantanannu tirugisuvavaroo nirnaamavaaguvaru.
Isaiah 29:21 in English
- King James Version (KJV)
- That make a man an offender for a word, and lay a snare for him that reproveth in the gate, and turn aside the just for a thing of nought.
- World English Bible (WEB)
- who cause a person to be indicted by a word, and lay a snare for one who reproves in the gate, and who deprive the innocent of justice with false testimony.
- American Standard Version (ASV)
- that make a man an offender in [his] cause, and lay a snare for him that reproveth in the gate, and turn aside the just with a thing of nought.
- Bible in Basic English (BBE)
- Who give help to a man in a wrong cause, and who put a net for the feet of him who gives decisions in the public place, taking away a man's right without cause.
- Darby Translation (DBY)
- that make a man an offender for a word, and lay a snare for him that reproveth in the gate, and pervert [the judgment of] the righteous by futility.
- Webster's Bible (WBS)
- That make a man an offender for a word, and lay a snare for him that reproveth in the gate, and turn aside the just for a thing of naught.
- Young's Literal Translation (YLT)
- Causing men to sin in word, And for a reprover in the gate lay a snare, And turn aside into emptiness the righteous.
Read in context
- 19ದೀನರ ಸಂತೋಷವು ಕರ್ತನಲ್ಲಿ ಹೆಚ್ಚಾಗುವದು, ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸು ವರು.
- 20ಭಯಂಕರನು ಇಲ್ಲವಾಗುತ್ತಾನೆ, ಹಾಸ್ಯಗಾ ರನು ದಹಿಸಲ್ಪಡುವನು, ಕೇಡಿಗೆ ಕಾಯುವವರೆಲ್ಲರು ಕಡಿದು ಹಾಕಲ್ಪಡುವರು.
- 21ಒಂದು ಮಾತಿನ ನಿಮಿತ್ತ ಮನುಷ್ಯರಿಗೆ ತಪ್ಪು ಹೊರಿಸುವವರೂ ಬಾಗಲಲ್ಲಿ ವಾದಿಸುವವನಿಗೆ ಉರ್ಲು ಒಡ್ಡುವವರೂ ಏನೂ ಇಲ್ಲದೆ ಕಾರ್ಯಕ್ಕೆ ನೀತಿವಂತನನ್ನು ತಿರುಗಿಸುವವರೂ ನಿರ್ನಾಮವಾಗುವರು.
- 22ಆದದರಿಂದ ಅಬ್ರಹಾಮನನ್ನು ವಿಮೋಚಿಸಿದ ಕರ್ತನು ಯಾಕೋಬನ ಮನೆತನದ ವಿಷಯವಾಗಿ ಹೇಳುವದೇನಂದರೆ--ಈಗ ಯಾಕೋಬ್ಯರು ನಾಚಿಕೆ ಪಡುವದಿಲ್ಲ ಇಲ್ಲವೆ ಅವನ ಮುಖವು ಕಳೆಗುಂದು ವದಿಲ್ಲ.
- 23ಆದರೆ ನನ್ನ ಕೈಕೆಲಸವಾದ ಅವನ ಮಕ್ಕಳನ್ನು ತನ್ನ ಮಧ್ಯದಲ್ಲಿ ನೋಡುವಾಗ ನನ್ನ ನಾಮವನ್ನು ಪರಿಶುದ್ಧವೆಂದೆಣಿಸಿ ಯಾಕೋಬನ ಪರಿ ಶುದ್ಧನನ್ನು ಪ್ರತಿಷ್ಠಿಸುವರು; ಇಸ್ರಾಯೇಲಿನ ದೇವ ರಿಗೆ ಭಯಪಡುವರು.ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು. ಗುಣುಗುಟ್ಟುವವರು ಬೋಧನೆ ಕಲಿಯುವರು.
Cross references
- Amos 5:10–12 ಆಮೋಸ 5:10–12ಅವರು ಬಾಗಿಲಲ್ಲಿ ಬೆದರಿಸುವ ನನ್ನು ಹಗೆಮಾಡುತ್ತಾರೆ, ಯಥಾರ್ಥವಾಗಿ ಮಾತನಾ ಡುವವನನ್ನು ಅವರು ಅಸಹ್ಯಿಸುತ್ತಾರೆ. ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ. ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು.
- James 5:6 ಯಾಕೋಬನು 5:6ನೀತಿವಂತನಿಗೆ ದಂಡನೆಯನ್ನು ವಿಧಿಸಿ ಕೊಂದು ಹಾಕಿ ದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.
- Acts 3:14 ಅಪೊಸ್ತಲರ ಕೃತ್ಯಗಳು 3:14ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ
- Judges 12:6 ನ್ಯಾಯಸ್ಥಾಪಕರು 12:6ಆಗ ಅವನು ಹಾಗೆ ಹೇಳಲಾರದೆ ಸಿಬ್ಬೋಲೆತ್ ಅನ್ನುವನು. ಆಗ ಅವನನ್ನು ಹಿಡಿದು ಯೊರ್ದನಿನ ರೇವುಗಳ ಬಳಿಯಲ್ಲಿ ಕೊಂದುಹಾಕಿದರು. ಹೀಗೆ ಆ ಕಾಲದಲ್ಲಿ ಎಫ್ರಾಯಾಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ಸತ್ತುಹೋದರು.
- Matthew 26:15 ಮತ್ತಾಯನು 26:15ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Jeremiah 20:7–10 ಯೆರೆಮೀಯ 20:7–10ಓ ಕರ್ತನೇ, ನೀನು ನನ್ನನ್ನು ವಂಚಿಸಿದಿ; ನಾನು ವಂಚಿಸಲ್ಪಟ್ಟೆನು. ನೀನು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿ; ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿ ಯಾಗಿದ್ದೇನೆ; ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡು ತ್ತಾನೆ. ನಾನು ಮಾತನಾಡುವನಾದದ್ದರಿಂದ ಗಟ್ಟಿಯಾಗಿ ಕೂಗುತ್ತೇನೆ; ಬಲಾತ್ಕಾರವೂ ಕೊಳ್ಳೆಯೂ ಎಂದು ಕೂಗುತ್ತೇನೆ ಕರ್ತನ ವಾಕ್ಯವು ನನಗೆ ಪ್ರತಿದಿನ ಪರಿಹಾಸ್ಯಕ್ಕೂ ಗೇಲಿಗೂ ಆಯಿತು. ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು. ಅನೇಕರ ಚಾಡಿಯನ್ನು ಕೇಳಿದೆನು; ಸುತ್ತಲೂ ಭಯವದೆ--ತಿಳಿಸಿರಿ, ಆಗ ಅದನ್ನು ನಾವು ತಿಳಿಸುತ್ತೇವೆ ಎಂದು ಅನ್ನುತ್ತಾರೆ; ನನ್ನ ಆಪ್ತರೆಲ್ಲರೂ ನಾನು ಕುಂಟುವದನ್ನು ನೋಡಿಕೊಳ್ಳುತ್ತಾ--ಒಂದು ವೇಳೆ ಅವನು ಮೋಸ ಗೊಂಡಾನು; ಆಗ ನಾವು ಅವನನ್ನು ಗೆದ್ದು ಅವನಲ್ಲಿ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.
- Ezekiel 13:19 ಯೆಹೆಜ್ಕೇಲನು 13:19ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಬಾರ್ಲಿಗೂ ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಪಡಿಸುವಿರೋ?
- Micah 2:6–7 ಮೀಕ 2:6–7ಪ್ರವಾದಿಸಬೇಡಿರೆಂದು ಪ್ರವಾದಿಸುವವರಿಗೆ ಅನ್ನು ತ್ತಾರೆ; ಅವರಿಗೆ ಆತನು ಪ್ರವಾದಿಸನು, ಆದರೆ ಅವರು ನಾಚಿಕೆಪಡುವದಿಲ್ಲ. ಯಾಕೋಬಿನ ಮನೆತನದವ ರೆಂದು ಹೆಸರುಗೊಂಡವರೇ, ಕರ್ತನ ಆತ್ಮವು ಕಡಿಮೆ ಯಾಯಿತೋ? ಇವು ಆತನ ಕ್ರಿಯೆಗಳೋ? ಯಥಾ ರ್ಥವಾಗಿ ನಡೆಯುವವನಿಗೆ ನನ್ನ ಮಾತುಗಳು ಒಳ್ಳೇದನ್ನು ಮಾಡುವದಿಲ್ಲವೋ?
- Amos 7:10–17 ಆಮೋಸ 7:10–17ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು. ಯಾರೊಬ್ಬಾಮನು ಕತ್ತಿಯಿಂದ ಸಾಯುವನೆಂದೂ ಇಸ್ರಾಯೇಲ್ಯರು ನಿಶ್ಚಯವಾಗಿ ತಮ್ಮ ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವರೆಂದೂ ಆಮೋಸನು ಹೇಳಿದನು. ಇನ್ನೂ ಅಮಚ್ಯನು ಆಮೋಸನಿಗೆ ಹೇಳಿದ್ದೇನಂದರೆ--ಓ ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು; ಅಲ್ಲಿ ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು. ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ; ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ ರಾಜನ ಅರಮನೆಯಾಗಿಯೂ ಇದೆ. ಆಗ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--ನಾನು ಪ್ರವಾದಿಯಲ್ಲ, ಪ್ರವಾ ದಿಯ ಮಗನೂ ಅಲ್ಲ; ಆದರೆ ನಾನು ಕುರುಬನೂ ಹತ್ತಿ ಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ. ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆ ಯಲ್ಲಿ ಕರ್ತನು ನನ್ನನ್ನು ಕರೆದು ಹೇಳಿದ್ದೇನಂದರೆ--ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದಿಸು. ಹೀಗಿರುವದರಿಂದ ನೀನು ಈಗ ಕರ್ತನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ ಇಸಾಕನ ಮನೆತನಕ್ಕೆ ವಿರೋಧ ವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವಿ ಯಲ್ಲಾ.ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು. ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.
- Isaiah 32:7 ಯೆಶಾಯ 32:7ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು.
- Proverbs 28:21 ಜ್ಞಾನೋಕ್ತಿಗಳು 28:21ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹಮಾಡುವನು.