Isaiah · chapter 29 · verse 24
Isaiah 29:24 in Kannada
ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು. ಗುಣುಗುಟ್ಟುವವರು ಬೋಧನೆ ಕಲಿಯುವರು.
Tappida aatmavullavaru vivekigalaaguvaru. Gunuguttuvavaru bodhane kaliyuvaru.
Isaiah 29:24 in English
- King James Version (KJV)
- They also that erred in spirit shall come to understanding, and they that murmured shall learn doctrine.
- World English Bible (WEB)
- They also who err in spirit will come to understanding, and those who grumble will receive instruction.”
- American Standard Version (ASV)
- They also that err in spirit shall come to understanding, and they that murmur shall receive instruction.
- Bible in Basic English (BBE)
- Those whose hearts were turned away from him will get knowledge, and those who made an outcry against him will give attention to his teaching.
- Darby Translation (DBY)
- And they that are of erring spirit shall know understanding, and the disobedient shall learn doctrine.
- Webster's Bible (WBS)
- They also that erred in spirit shall come to understanding, and they that murmured shall learn doctrine.
- Young's Literal Translation (YLT)
- And the erring in spirit have known understanding, And murmurers learn doctrine!'
Read in context
- 22ಆದದರಿಂದ ಅಬ್ರಹಾಮನನ್ನು ವಿಮೋಚಿಸಿದ ಕರ್ತನು ಯಾಕೋಬನ ಮನೆತನದ ವಿಷಯವಾಗಿ ಹೇಳುವದೇನಂದರೆ--ಈಗ ಯಾಕೋಬ್ಯರು ನಾಚಿಕೆ ಪಡುವದಿಲ್ಲ ಇಲ್ಲವೆ ಅವನ ಮುಖವು ಕಳೆಗುಂದು ವದಿಲ್ಲ.
- 23ಆದರೆ ನನ್ನ ಕೈಕೆಲಸವಾದ ಅವನ ಮಕ್ಕಳನ್ನು ತನ್ನ ಮಧ್ಯದಲ್ಲಿ ನೋಡುವಾಗ ನನ್ನ ನಾಮವನ್ನು ಪರಿಶುದ್ಧವೆಂದೆಣಿಸಿ ಯಾಕೋಬನ ಪರಿ ಶುದ್ಧನನ್ನು ಪ್ರತಿಷ್ಠಿಸುವರು; ಇಸ್ರಾಯೇಲಿನ ದೇವ ರಿಗೆ ಭಯಪಡುವರು.ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು. ಗುಣುಗುಟ್ಟುವವರು ಬೋಧನೆ ಕಲಿಯುವರು.
- 24ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು. ಗುಣುಗುಟ್ಟುವವರು ಬೋಧನೆ ಕಲಿಯುವರು.
Cross references
- Hebrews 5:2 ಇಬ್ರಿಯರಿಗೆ 5:2ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರ ಮೇಲೆಯೂ ಮಾರ್ಗ ತಪ್ಪಿದವರ ಮೇಲೆಯೂ ಕರುಣೆ ತೋರಿಸಬಲ್ಲನು.
- Isaiah 28:7 ಯೆಶಾಯ 28:7ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.
- Luke 15:17–19 ಲೂಕನು 15:17–19ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ. ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ; ಇನ್ನೆಂದಿಗೂ ನಾನು ನಿನ್ನ ಮಗನೆಂದು ಕರೆಯಲ್ಪಡುವದಕ್ಕೆ ಯೋಗ್ಯನಲ್ಲ; ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಅನ್ನುವೆನು ಎಂದು ಅಂದುಕೊಂಡು
- Revelation 20:2–3 ಪ್ರಕಟನೆ 20:2–3ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು. ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು.
- 1 Timothy 1:13–15 1 ತಿಮೊಥೆಯನಿಗೆ 1:13–15ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು. ನಮ್ಮ ಕರ್ತನ ಕೃಪೆಯು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಯೊಂದಿಗೆ ಅತ್ಯಧಿಕವಾಯಿತು. ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
- 1 Corinthians 6:11 1 ಕೊರಿಂಥದವರಿಗೆ 6:11ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
- Acts 6:7 ಅಪೊಸ್ತಲರ ಕೃತ್ಯಗಳು 6:7ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.
- Acts 9:19–20 ಅಪೊಸ್ತಲರ ಕೃತ್ಯಗಳು 9:19–20ತರುವಾಯ ಊಟ ಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದನು. ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.
- Acts 2:37 ಅಪೊಸ್ತಲರ ಕೃತ್ಯಗಳು 2:37ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
- Isaiah 41:20 ಯೆಶಾಯ 41:20ಆಗ ಕರ್ತನ ಹಸ್ತವು ಇದನ್ನು ಮಾಡಿದೆ ಎಂದೂ ಇಸ್ರಾ ಯೇಲಿನ ಪರಿಶುದ್ಧನು ಇದನ್ನು ಸೃಷ್ಟಿಸಿದನು ಎಂದೂ ಅವರು ನೋಡಿ, ತಿಳಿದು ಮನಸ್ಸಿಗೆ ತಂದು ಗ್ರಹಿಸಿ ಕೊಳ್ಳುವರು.
- Isaiah 29:10–11 ಯೆಶಾಯ 29:10–11ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ. ದರ್ಶನವೆಲ್ಲಾ ನಿಮಗೆ ಮುದ್ರೆ ಹಾಕಿ ದ ವಾಕ್ಯಗಳ ಪುಸ್ತಕದ ಹಾಗಾಯಿತು; ಅದನ್ನು ಅಕ್ಷರ ಬಲ್ಲವನಿಗೆ ಕೊಟ್ಟು ಇದನ್ನು ಓದು ಎಂದು ಬೇಡಿದರೆ ಅವನು--ಮುದ್ರೆ ಹಾಕಿದೆಯಲ್ಲಾ, ಆಗುವದಿಲ್ಲ ಅನ್ನು ವನು;
- Zechariah 12:10 ಜೆಕರ್ಯ 12:10ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.