Isaiah · chapter 29 · verse 6
Isaiah 29:6 in Kannada
ಸೈನ್ಯಗಳ ಕರ್ತನ ಕಡೆಯಿಂದಲೇ ನೀನು ಗುಡುಗಿನಿಂದಲೂ ಮಹಾಶಬ್ದದಿಂದಲೂ ಬಿರುಗಾಳಿ, ಸುಳಿಗಾಳಿಯಿಂದಲೂ ದಹಿಸುವ ಅಗ್ನಿಜ್ವಾಲೆಯಿಂದ ಲೂ ವಿಚಾರಿಸಲ್ಪಡುವಿ.
Sainyagala kartana kadeyindale neenu guduginindaloo mahaashabdadindaloo birugaali, suligaaliyindaloo dahisuva agnijvaaleyinda loo vichaarisalpaduvi.
Isaiah 29:6 in English
- King James Version (KJV)
- Thou shalt be visited of the LORD of hosts with thunder, and with earthquake, and great noise, with storm and tempest, and the flame of devouring fire.
- World English Bible (WEB)
- She will be visited by the LORD of Armies with thunder, with earthquake, with great noise, with whirlwind and storm, and with the flame of a devouring fire.
- American Standard Version (ASV)
- She shall be visited of Jehovah of hosts with thunder, and with earthquake, and great noise, with whirlwind and tempest, and the flame of a devouring fire.
- Bible in Basic English (BBE)
- The Lord of armies will come in with thunder and earth-shaking and great noise, with rushing wind and storm, and the flame of burning fire.
- Darby Translation (DBY)
- Thou shalt be visited by Jehovah of hosts with thunder and with earthquake and great noise, with whirlwind and tempest, and the flame of devouring fire.
- Webster's Bible (WBS)
- Thou shalt be visited by the LORD of hosts with thunder, and with earthquake, and great noise, with storm and tempest, and the flame of devouring fire.
- Young's Literal Translation (YLT)
- By Jehovah of Hosts thou art inspected, With thunder, and with an earthquake, And great noise, hurricane, and whirlwind, And flame of devouring fire.
Read in context
- 4ಆಗ ನೀನು ತಗ್ಗಿಸಲ್ಪಟ್ಟು ಭೂಮಿಯೊಳಗಿಂದ ಮಾತಾಡುವಿ. ನಿನ್ನ ನುಡಿಯು ದೂಳಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವದು, ನಿನ್ನ ಸ್ವರವು ಭೂತದ ಹಾಗೆ ನೆಲದೊಳಗಿಂದ ಬರು ವದು; ನಿನ್ನ ನುಡಿಯು ದೂಳಿನೊಳಗಿಂದ ಪಿಸುಗುಟ್ಟು ವದು;
- 5ಅದೂ ಅಲ್ಲದೆ ನಿನ್ನ ಅನ್ಯರ ಗುಂಪು ಸೂಕ್ಷ್ಮ ವಾದ ದೂಳಿನಂತಾಗುವದು, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರು ವದು; ಹೌದು, ಅದು ಕ್ಷಣ ಮಾತ್ರದಲ್ಲಿ ಫಕ್ಕನೆ ಆಗುವದು.
- 6ಸೈನ್ಯಗಳ ಕರ್ತನ ಕಡೆಯಿಂದಲೇ ನೀನು ಗುಡುಗಿನಿಂದಲೂ ಮಹಾಶಬ್ದದಿಂದಲೂ ಬಿರುಗಾಳಿ, ಸುಳಿಗಾಳಿಯಿಂದಲೂ ದಹಿಸುವ ಅಗ್ನಿಜ್ವಾಲೆಯಿಂದ ಲೂ ವಿಚಾರಿಸಲ್ಪಡುವಿ.
- 7ಅರೀಯೇಲಿನ ಮೇಲೆ ಹೋರಾಡಿ ಅದಕ್ಕೂ ಅದರ ಕೋಟೆಗೂ ವಿರುದ್ಧ ವಾಗಿ ಯುದ್ಧ ಮಾಡಿ ಬಾಧಿಸುವ ಸಕಲ ಜನಾಂಗಗಳ ಗುಂಪು ರಾತ್ರಿಯ ದರ್ಶನದ ಕನಸಿನಂತೆ ಮಾಯ ವಾಗುವದು.
- 8ಹಸಿದ ಮನುಷ್ಯನು ಕನಸುಕಂಡು ಇಗೋ, ಉಣ್ಣುತ್ತಾನೆ ಆದರೆ ಅವನು ಎಚ್ಚತ್ತಾಗ ಪ್ರಾಣ ತುಂಬದ ಹಾಗೆಯೂ ಇಲ್ಲವೆ ಬಾಯಾರಿದ ವನು ಸ್ವಪ್ನದಲ್ಲಿ ಇಗೋ, ಕುಡಿಯುತ್ತಾನೆ ಆದರೆ ಅವನು ಎಚ್ಚರವಾದಾಗ ಇಗೋ, ಬಲಹೀನನಾಗಿದ್ದು ಪ್ರಾಣ ಆಶಿಸುವ ಹಾಗೆಯೂ ಚೀಯೋನ್ ಪರ್ವ ತಕ್ಕೆ ವಿರೋಧವಾಗಿ ಯುದ್ಧಮಾಡುವ ಹಾಗೆಯೇ ಎಲ್ಲಾ ಜನಾಂಗಗಳ ಸಮೂಹವಿರುವದು.
Cross references
- Mark 13:8 ಮಾರ್ಕನು 13:8ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಇದಲ್ಲದೆ ಬರ ಗಾಲಗಳು ಕಳವಳಗಳು ಉಂಟಾಗುವವು; ಇವು ಸಂಕಟಗಳ ಪ್ರಾರಂಭವಾಗಿವೆ.
- Revelation 16:18 ಪ್ರಕಟನೆ 16:18ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವುಂಟಾಯಿತು; ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ಬಲವಾದ ಮತ್ತು ದೊಡ್ಡ ದಾದ ಭೂಕಂಪವಾಗಿರಲಿಲ್ಲ.
- Matthew 24:7 ಮತ್ತಾಯನು 24:7ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು.
- 1 Samuel 2:10 1 ಸಮುವೇಲನು 2:10ಕರ್ತನ ಸಂಗಡ ವಿವಾದಿಸುವವರು ಮುರಿದು ಚೂರಾಗುವರು. ಆತನು ಆಕಾಶದಲ್ಲಿಂದ ಅವರ ಮೇಲೆ ಗುಡುಗುವನು. ಕರ್ತನು ಲೋಕಾಂತ್ಯದ ವರೆಗೂ ನ್ಯಾಯತೀರಿಸಿ ತನ್ನ ಅರಸನಿಗೆ ಬಲಕೊಡುವನು, ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು ಎಂಬದು.
- Revelation 11:19 ಪ್ರಕಟನೆ 11:19ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
- Isaiah 30:30 ಯೆಶಾಯ 30:30ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
- Isaiah 5:26–30 ಯೆಶಾಯ 5:26–30ಆತನು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಅಂಚಿನಿಂದ ಅವರಿಗೆ ಸಿಳ್ಳುಹಾಕುವನು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು; ಅವರಲ್ಲಿ ಯಾರೂ ದಣಿದು ಮುಗ್ಗರಿಸರು; ಅಥವಾ ಅವರು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ, ಇಲ್ಲವೆ ಅವರ ನಡುಕಟ್ಟು ಬಿಚ್ಚಿಕೊಳ್ಳುವದಿಲ್ಲ. ಕೆರದ ಬಾರು ಹರಿಯುವದಿಲ್ಲ. ಅವರ ಬಾಣಗಳು ಹದವಾಗಿವೆ, ಅವರ ಬಿಲ್ಲುಗಳು ಬೊಗ್ಗಿವೆ, ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ ಅವರ ಚಕ್ರಗಳು ಬಿರು ಗಾಳಿಯಂತೆಯೂ ರಭಸವಾಗಿವೆ. ಅವರ ಘರ್ಜ ನೆಯು ಸಿಂಹದಂತೆ ಅದೆ. ಪ್ರಾಯದ ಸಿಂಹಗಳಂತೆ ಆರ್ಭಟಿಸುತ್ತಾರೆ; ಹೌದು, ಘರ್ಜಿಸುತ್ತಾ ಬೇಟೆ ಹಿಡಿದು ಭದ್ರವಾಗಿ ಹೊತ್ತುಕೊಂಡು ಹೋಗುತ್ತಾರೆ ಅದನ್ನು ಬಿಡಿಸುವವನು ಒಬ್ಬನೂ ಇಲ್ಲ.ಆ ದಿನದಲ್ಲಿ ಅವರು ಸಮುದ್ರವು ಬೋರ್ಗರೆಯುವಂತೆ ಅವರ ಮೇಲೆ ಘರ್ಜಿಸುವರು; ಭೂಮಿಯನ್ನು ದೃಷ್ಟಿ ಸಿದರೆ ಅಂಧಕಾರವನ್ನೂ ದುಃಖವನ್ನೂ ನೋಡುವಿ. ಆಕಾಶಮಂಡಲದಲ್ಲಿ ಬೆಳಕು ಕತ್ತಲಾಗುವದು. ಆ ದಿನದಲ್ಲಿ ಅವರು ಸಮುದ್ರವು ಬೋರ್ಗರೆಯುವಂತೆ ಅವರ ಮೇಲೆ ಘರ್ಜಿಸುವರು; ಭೂಮಿಯನ್ನು ದೃಷ್ಟಿ ಸಿದರೆ ಅಂಧಕಾರವನ್ನೂ ದುಃಖವನ್ನೂ ನೋಡುವಿ. ಆಕಾಶಮಂಡಲದಲ್ಲಿ ಬೆಳಕು ಕತ್ತಲಾಗುವದು.
- 1 Samuel 12:17–18 1 ಸಮುವೇಲನು 12:17–18ಈ ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದ ರಿಂದ ಕರ್ತನ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತ ನವು ಹೆಚ್ಚಾಗಿದೆ ಎಂದು ತಿಳುಕೊಂಡು ನೋಡುವ ಹಾಗೆ ನಾನು ಕರ್ತನಿಗೆ ಮೊರೆಯಿಡುವೆನು; ಆಗ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವನು. ಸಮುವೇಲನು ಕರ್ತನಿಗೆ ಮೊರೆ ಇಟ್ಟದ್ದರಿಂದ ಆ ದಿವಸದಲ್ಲೇ ಕರ್ತನು ಗುಡುಗನ್ನೂ ಮಳೆಯನ್ನೂ ಕಳುಹಿಸಿದನು. ಆಗ ಜನರೆಲ್ಲರು ಕರ್ತನಿಗೂ ಸಮು ವೇಲನಿಗೂ ಬಹಳವಾಗಿ ಭಯಪಟ್ಟರು.
- Luke 21:11 ಲೂಕನು 21:11ಬೇರೆ ಬೇರೆ ಸ್ಥಳಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವವು; ಭಯಹುಟ್ಟಿ ಸುವ ದೃಶ್ಯಗಳೂ ಮಹಾಸೂಚನೆಗಳೂ ಆಕಾಶದಿಂದ ಆಗುವವು.
- Revelation 11:13 ಪ್ರಕಟನೆ 11:13ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.
- Isaiah 28:2 ಯೆಶಾಯ 28:2ಇಗೋ, ಕರ್ತನಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ಹೊಡೆದುಬಿಡುವ ಬಿರುಗಾಳಿ ಯಂತೆಯೂ ಪ್ರಳಯಮಾಡುವ ಪ್ರಚಂಡ ಮಳೆ ಯನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈ ಯಿಂದ ನೆಲಕ್ಕೆ ಬೀಳಿಸುವನು.
- 2 Samuel 22:14 2 ಸಮುವೇಲನು 22:14ಕರ್ತನು ಆಕಾಶದಿಂದ ಗುಡುಗಿದನು. ಮಹೋ ನ್ನತನು ತನ್ನ ಶಬ್ದವನ್ನು ಕೊಟ್ಟನು;