Isaiah · chapter 30 · verse 13
Isaiah 30:13 in Kannada
ನೀವು ಈ ಮಾತನ್ನು ತಿರಸ್ಕಾರ ಮಾಡಿ ಬಲತ್ಕಾರ, ಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದ್ದರಿಂದ ಎತ್ತರ ವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವದು.
Neevu ee maatannu tiraskaara maadi balatkaara, kuyuktigalannu nambi avugalanne aadhaaramaadikondaddarinda ettara vaada godeya ondu bhaagavu ubbikondu tattane kshanamaatradalli kalachibeeluva haage nimma aparaadhavu nimage apaayakaravaagiruvadu.
Isaiah 30:13 in English
- King James Version (KJV)
- Therefore this iniquity shall be to you as a breach ready to fall, swelling out in a high wall, whose breaking cometh suddenly at an instant.
- World English Bible (WEB)
- therefore this iniquity shall be to you like a breach ready to fall, swelling out in a high wall, whose breaking comes suddenly in an instant.
- American Standard Version (ASV)
- therefore this iniquity shall be to you as a breach ready to fall, swelling out in a high wall, whose breaking cometh suddenly in an instant.
- Bible in Basic English (BBE)
- This sin will be to you like a crack in a high wall, causing its fall suddenly and in a minute.
- Darby Translation (DBY)
- therefore this iniquity shall be to you as a breach ready to fall, swelling out in a towering wall, whose breaking shall come suddenly in an instant.
- Webster's Bible (WBS)
- Therefore this iniquity shall be to you as a breach ready to fall, swelling out in a high wall, whose breaking cometh suddenly at an instant.
- Young's Literal Translation (YLT)
- Therefore is this iniquity to you as a breach falling, Swelled out in a wall set on high, Whose destruction suddenly, at an instant cometh.
Read in context
- 11ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗ ದಿಂದ ತೊಲಗಿರಿ; ಇಸ್ರಾಯೇಲ್ಯರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ.
- 12ಆದಕಾರಣ ಇಸ್ರಾಯೇಲ್ಯರ ಪರಿ ಶುದ್ಧನು ಹೇಳುವದೇನಂದರೆ--
- 13ನೀವು ಈ ಮಾತನ್ನು ತಿರಸ್ಕಾರ ಮಾಡಿ ಬಲತ್ಕಾರ, ಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದ್ದರಿಂದ ಎತ್ತರ ವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವದು.
- 14ಉರಿಯಿಂದ ಕೆಂಡವನ್ನು ತೆಗೆಯುವದಕ್ಕಾಗಲಿ ಬಾವಿಯಿಂದ ನೀರನ್ನು ತೆಗೆಯುವದಕ್ಕಾಗಲಿ ಬೋಕಿ ಯ ತುಂಡುಗಳಲ್ಲಿ ಒಂದೂ ಉಳಿಯದಂತೆ ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ಒಡೆದುಬಿಡುವನು.
- 15ಇಸ್ರಾಯೇಲಿನ ಪರಿಶುದ್ಧ ಕರ್ತನಾದ ದೇವರು ಹೇಳುವದೇನೆಂದರೆ--ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗು ವದು. ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.
Cross references
- Ezekiel 13:10–15 ಯೆಹೆಜ್ಕೇಲನು 13:10–15ಸಮಾಧಾನ ವಿಲ್ಲದಿರುವಾಗ ಅವರು ಸಮಾಧಾನವೆಂದು ಹೇಳಿದ್ದರಿಂ ದಲೂ ಮತ್ತು ಇಗೋ, ಒಬ್ಬನು ಗೋಡೆಯನ್ನು ಕಟ್ಟಿದರೆ ಮತ್ತೊಬ್ಬನು ಅದಕ್ಕೆ ಸುಣ್ಣ ಹಚ್ಚಿದ್ದರಿಂದಲೂ ಸುಣ್ಣ ಹಚ್ಚುತ್ತಿರುವವನಿಗೆ--ಅದು ಬೀಳುವದೆಂದು ಹೇಳು; ಅಲ್ಲಿ ವಿಪರೀತ ಮಳೆ ಬರುವದು ಮತ್ತು ದೊಡ್ಡ ಕಲ್ಮಳೆಯು ಬೀಳುವದು; ಬಿರುಗಾಳಿಯು ಅದನ್ನು ಸೀಳಿಬಿಡುವದು. ಇಗೋ, ಗೋಡೆ ಬಿದ್ದು ಹೋದಮೇಲೆ--ನೀವು ಹಚ್ಚಿದ ಸುಣ್ಣ ಎಲ್ಲಿ ಎಂದು ನಿಮಗೆ ಹೇಳುವರಲ್ಲಾ? ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅದನ್ನು ನನ್ನ ಉರಿಯಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶ ಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳೂ ಸುರಿಯುವವು; ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ ನೆಲಸಮ ಮಾಡಿ ಅದರ ಅಸ್ತಿವಾರ ವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವದು, ನೀವು ಅದರಲ್ಲಿ ನಾಶ ಮಾಡಲ್ಪಡು ವಿರಿ. ಆಗ ನಾನೇ ಕರ್ತನೆಂದು ನಿಮಗೆ ತಿಳಿದು ಬರುವದು. ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿ ಕೊಂಡು ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇಲ್ಲವೆಂದು
- Isaiah 29:5 ಯೆಶಾಯ 29:5ಅದೂ ಅಲ್ಲದೆ ನಿನ್ನ ಅನ್ಯರ ಗುಂಪು ಸೂಕ್ಷ್ಮ ವಾದ ದೂಳಿನಂತಾಗುವದು, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರು ವದು; ಹೌದು, ಅದು ಕ್ಷಣ ಮಾತ್ರದಲ್ಲಿ ಫಕ್ಕನೆ ಆಗುವದು.
- 1 Kings 20:30 1 ಅರಸುಗಳು 20:30ಮಿಕ್ಕಾದವರು ಅಫೇಕ್ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.
- Proverbs 29:1 ಜ್ಞಾನೋಕ್ತಿಗಳು 29:1ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
- Psalm 62:3 ಕೀರ್ತನೆಗಳು 62:3ಎಷ್ಟರವರೆಗೆ ಒಬ್ಬ ಮನುಷ್ಯನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತೀರಿ? ನೀವೆಲ್ಲರೂ ಕೊಲ್ಲಲ್ಪಡುವಿರಿ; ನೀವು ಕುಸಿದುಬೀಳುವ ಗೋಡೆಯಂತೆಯೂ ಅಲ್ಲಾ ಡುವ ಬೇಲಿಯಂತೆಯೂ ಇರುವಿರಿ.
- 1 Thessalonians 5:1–3 1 ಥೆಸಲೊನೀಕದವರಿಗೆ 5:1–3ಸಹೋದರರೇ, ಈ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯು ವದು ಅವಶ್ಯವಿಲ್ಲ. ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ. ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- Luke 6:49 ಲೂಕನು 6:49ಆದರೆ (ನನ್ನ ಮಾತುಗಳನ್ನು) ಕೇಳಿ ಅದರಂತೆ ಮಾಡದೆ ಇರುವವನು ಅಸ್ತಿವಾರ ವಿಲ್ಲದೆ ಮಣ್ಣಿನ ಮೇಲೆ ಮನೆಯನ್ನು ಕಟ್ಟಿದ ಮನುಷ್ಯನಿಗೆ ಹೋಲಿಕೆಯಾಗಿದ್ದಾನೆ; ಪ್ರವಾಹವು ಅದಕ್ಕೆ ರಭಸವಾಗಿ ಬಡಿದದ್ದರಿಂದ ಕೂಡಲೆ ಅದು ಬಿತ್ತು; ಇದರಿಂದ ಆ ಮನೆಯ ನಾಶನವು ದೊಡ್ಡದಾಗಿತ್ತು.
- Matthew 7:27 ಮತ್ತಾಯನು 7:27ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
- Psalm 73:19–20 ಕೀರ್ತನೆಗಳು 73:19–20ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ. ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ.
- Job 36:18 ಯೋಬನು 36:18ರೌದ್ರ ಉಂಟು, ಅವನು ನಿನ್ನನ್ನು ಒಂದೇ ಪೆಟ್ಟಿನಿಂದ ಒಯ್ಯದ ಹಾಗೆ ನೋಡು; ದೊಡ್ಡ ವಿಮೋಚನೆಯ ಕ್ರಯ ನಿನ್ನನ್ನು ಬಿಡಿಸದು.