Isaiah · chapter 30 · verse 21
Isaiah 30:21 in Kannada
ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿ ಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು.
Neevu balakkaagali edakkaagali tirugi kolluvaaga ide maarga, idaralle nadeyiri endu nimma hinde aaduva maatu nimma kivige beeluvadu.
Isaiah 30:21 in English
- King James Version (KJV)
- And thine ears shall hear a word behind thee, saying, This [is] the way, walk ye in it, when ye turn to the right hand, and when ye turn to the left.
- World English Bible (WEB)
- and when you turn to the right hand, and when you turn to the left, your ears will hear a voice behind you, saying, “This is the way. Walk in it.”
- American Standard Version (ASV)
- and thine ears shall hear a word behind thee, saying, This is the way, walk ye in it; when ye turn to the right hand, and when ye turn to the left.
- Bible in Basic English (BBE)
- And at your back, when you are turning to the right hand or to the left, a voice will be sounding in your ears, saying, This is the way in which you are to go.
- Darby Translation (DBY)
- And when ye turn to the right hand or when ye turn to the left, thine ears shall hear a word behind thee, saying, This is the way, walk ye in it.
- Webster's Bible (WBS)
- And thy ears shall hear a word behind thee, saying, This [is] the way, walk ye in it, when ye turn to the right hand, and when ye turn to the left.
- Young's Literal Translation (YLT)
- And thine ear heareth a word behind thee, Saying, 'This [is] the way, go ye in it,' When ye turn to the right, And when ye turn to the left.
Read in context
- 19ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳು ವದೇ ಇಲ್ಲ. ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವನು. ಆತನು ಅದನ್ನು ಕೇಳಿದಾಗಲೇ ಸದುತ್ತರವನ್ನು ದಯಪಾಲಿಸು ವನು.
- 20ಕರ್ತನು ನಿಮಗೆ ಕಷ್ಟವನ್ನು, ಶ್ರಮೆಯನ್ನು, ಅನ್ನಪಾನಗಳನ್ನಾಗಿ ಕೊಟ್ಟರೂ ಇನ್ನೂ ನಿಮ್ಮ ಬೋಧಕರು ತಮ್ಮನ್ನು ಮರೆಮಾಡಿಕೊಳ್ಳುವದಿಲ್ಲ. ಆದರೆ ನಿಮ್ಮ ಕಣ್ಣುಗಳು ನಿಮ್ಮ ಬೋಧಕನನ್ನು ನೋಡು ತ್ತಿರುವವು.
- 21ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿ ಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು.
- 22ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನು ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಕ್ಕೆ ತೊಲಗಿಹೋಗಿರಿ ಎಂದು ಹೊಲೆಯ ಬಟ್ಟೆಯಂತೆ ಬಿಸಾಡಿಬಿಡುವಿರಿ.
- 23ಆಗ ನೀವು ಹೊಲದಲ್ಲಿ ಬೀಜ ಬಿತ್ತುವದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸು ವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರ ವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಸ್ಥಳದಲ್ಲಿ ಮೇಯುವವು.
Cross references
- Psalm 32:8 ಕೀರ್ತನೆಗಳು 32:8ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.
- Proverbs 3:5–6 ಜ್ಞಾನೋಕ್ತಿಗಳು 3:5–6ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ. ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
- Isaiah 58:11 ಯೆಶಾಯ 58:11ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.
- Isaiah 42:16 ಯೆಶಾಯ 42:16ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
- Deuteronomy 5:32 ಧರ್ಮೋಪದೇಶಕಾಂಡ 5:32ಹೀಗಿರುವದರಿಂದ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದಂತೆ ಕೈಕೊಂಡು ನಡೆಯಬೇಕು; ಎಡಕ್ಕಾದರೂ ಬಲಕ್ಕಾದರೂ ತಿರುಗಬೇಡಿರಿ.ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.
- Isaiah 35:8–9 ಯೆಶಾಯ 35:8–9ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು. ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು.ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
- Psalm 143:8–10 ಕೀರ್ತನೆಗಳು 143:8–10ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ. ಓ ಕರ್ತನೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನಾನು ಅಡಗಿಕೊಳ್ಳು ವಂತೆ ನಿನ್ನ ಬಳಿಗೆ ಓಡುತ್ತೇನೆ. ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.
- Isaiah 48:17 ಯೆಶಾಯ 48:17ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ.
- Jeremiah 6:16 ಯೆರೆಮೀಯ 6:16ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು.
- Joshua 1:7 ಯೆಹೋಶುವ 1:7ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣವೆಲ್ಲಾದರ ಪ್ರಕಾರ ನೀನು ಕೈಕೊಂಡು ನಡೆ ಯುವ ಹಾಗೆ ಬಲವಾಗಿರು, ಬಹು ಧೈರ್ಯದಿಂದಿರು, ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ ಅದನ್ನು (ನ್ಯಾಯಪ್ರಮಾಣವನ್ನು) ಬಿಟ್ಟು ಬಲ ಕ್ಕಾದರೂ ಎಡಕ್ಕಾದರೂ ತಿರುಗಬೇಡ.
- Psalm 25:8–9 ಕೀರ್ತನೆಗಳು 25:8–9ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು. ದೀನರನ್ನು ನ್ಯಾಯ ದಲ್ಲಿ ನಡಿಸಿ ಅವರಿಗೆ ತನ್ನ ಮಾರ್ಗವನ್ನು ಕಲಿಸುವನು.
- Proverbs 4:27 ಜ್ಞಾನೋಕ್ತಿಗಳು 4:27ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.