Isaiah · chapter 30 · verse 29
Isaiah 30:29 in Kannada
ಪರಿಶುದ್ಧ ಹಬ್ಬವನ್ನು ಆಚರಿಸುವ ರಾತ್ರಿಯಲ್ಲಿ ಹೇಗೋ ಹಾಗೆ ನಿಮಗೆ ಹಾಡುವಿರಿ; ಕರ್ತನ ಪರ್ವತಕ್ಕೆ ಇಸ್ರಾಯೇಲಿನ ಬಂಡೆಯ ಬಳಿಗೆ ಬರುವದಕ್ಕೆ ಕೊಳಲಿನ ಸಂಗಡ ಹೋಗುವ ಪ್ರಕಾರ ಹೃದಯದ ಸಂತೋಷವಿರುವದು.
Parishuddha habbavannu aacharisuva raatriyalli hego haage nimage haaduviri; kartana parvatakke israayelina bandeya balige baruvadakke kolalina sangada hoguva prakaara hrudayada santoshaviruvadu.
Isaiah 30:29 in English
- King James Version (KJV)
- Ye shall have a song, as in the night [when] a holy solemnity is kept; and gladness of heart, as when one goeth with a pipe to come into the mountain of the LORD, to the mighty One of Israel.
- World English Bible (WEB)
- You will have a song, as in the night when a holy feast is kept, and gladness of heart, as when one goes with a flute to come to the LORD’s mountain, to Israel’s Rock.
- American Standard Version (ASV)
- Ye shall have a song as in the night when a holy feast is kept; and gladness of heart, as when one goeth with a pipe to come unto the mountain of Jehovah, to the Rock of Israel.
- Bible in Basic English (BBE)
- You will have a song, as in the night when a holy feast is kept; and you will be glad in heart, as when they go with music of the pipe to the mountain of the Lord, the Rock of Israel.
- Darby Translation (DBY)
- Ye shall have a song, as in the night when a feast is sanctified; and joy of heart, as of one who goeth with a pipe to come unto the mountain of Jehovah, to the Rock of Israel.
- Webster's Bible (WBS)
- Ye shall have a song, as in the night, [when] a holy solemnity is kept; and gladness of heart, as when one goeth with a pipe to come upon the mountain of the LORD, to the mighty One of Israel.
- Young's Literal Translation (YLT)
- Singing is to you as in a night sanctified for a festival, And joy of heart as he who is going with a pipe, To go in to the mountain of Jehovah, Unto the rock of Israel.
Read in context
- 27ಇಗೋ, ಕರ್ತನ ನಾಮವು ದೂರದಿಂದ ಬರು ತ್ತದೆ. ಆತನ ಕೋಪವು ಉರಿಯುತ್ತದೆ. ಅದರಿಂದೇ ಳುವ ಉರಿಯು ದಟ್ಟವಾಗಿದೆ. ಆತನ ತುಟಿಗಳು ರೋಷದಿಂದ ತುಂಬಿವೆ. ನಾಲಿಗೆಯು ದಹಿಸುವ ಅಗ್ನಿ ಯಂತಿದೆ.
- 28ಆತನ ಶ್ವಾಸವು ತುಂಬಿ ತುಳುಕಿ ಕಂಠದ ವರೆಗೂ ಏರುವ ತೊರೆಯಂತಿದೆ; ಜನಾಂಗಗಳನ್ನು ಏನೂ ಉಳಿಸದ ಜಲ್ಲಡಿಯಿಂದ ಜಾಲಿಸುವದಕ್ಕೆ ಬರು ತ್ತಾನೆ; ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆ ಗಳಲ್ಲಿರುವದು.
- 29ಪರಿಶುದ್ಧ ಹಬ್ಬವನ್ನು ಆಚರಿಸುವ ರಾತ್ರಿಯಲ್ಲಿ ಹೇಗೋ ಹಾಗೆ ನಿಮಗೆ ಹಾಡುವಿರಿ; ಕರ್ತನ ಪರ್ವತಕ್ಕೆ ಇಸ್ರಾಯೇಲಿನ ಬಂಡೆಯ ಬಳಿಗೆ ಬರುವದಕ್ಕೆ ಕೊಳಲಿನ ಸಂಗಡ ಹೋಗುವ ಪ್ರಕಾರ ಹೃದಯದ ಸಂತೋಷವಿರುವದು.
- 30ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
- 31ಕರ್ತನು ದಂಡದಿಂದ ದಂಡಿಸುವಾಗ ಅಶ್ಶೂರ್ಯವು ಆತನ ಸ್ವರದಿಂದಲೇ ಮುರಿದುಹೋಗು ವದು.
Cross references
- Psalm 42:4 ಕೀರ್ತನೆಗಳು 42:4ಇವುಗಳನ್ನು ಜ್ಞಾಪಕಮಾಡಿಕೊಂಡಾಗ ನನ್ನ ಪ್ರಾಣವು ನನ್ನಲ್ಲಿ ಕ್ಷೀಣಿಸುತ್ತದೆ; ಸಮೂಹ ದೊಂದಿಗೆ ನಾನು ಹೋಗಿ ಉತ್ಸಾಹಧ್ವನಿಯಿಂದಲೂ ಸ್ತೋತ್ರದಿಂದಲೂ ಪರಿಶುದ್ಧ ದಿನವನ್ನು ಆಚರಿಸುವ ಸಮೂಹದ ಸಂಗಡ ದೇವರ ಆಲಯಕ್ಕೆ ಅವರೊಂ ದಿಗೆ ನಾನು ಹೋದೆನಲ್ಲಾ.
- Psalm 95:1–2 ಕೀರ್ತನೆಗಳು 95:1–2ಬನ್ನಿರಿ, ಕರ್ತನಿಗೆ ಉತ್ಸಾಹ ಧ್ವನಿಮಾಡುವಾ ನಮ್ಮ ರಕ್ಷಣೆಯ ಬಂಡೆಗೆ ಜಯಧ್ವನಿ ಮಾಡೋಣ. ಸ್ತೋತ್ರದಿಂದ ಆತನ ಸನ್ನಿಧಿಯ ಮುಂದೆ ಬಂದು ಕೀರ್ತನೆಗಳಿಂದ ಆತನಿಗೆ ಆನಂದದ ಧ್ವನಿಮಾಡೋಣ.
- Exodus 15:1–21 ವಿಮೋಚನಕಾಂಡ 15:1–21ಆಗ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ. ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು. ಕರ್ತನು ಯುದ್ಧ ಶೂರನು; ಕರ್ತನು ಎಂಬದೇ ಆತನ ಹೆಸರು. ಆತನು ಫರೋಹನ ರಥಗಳನ್ನೂ ಅವನ ಸೈನ್ಯವನ್ನೂ ಸಮುದ್ರ ದಲ್ಲಿ ನೂಕಿದ್ದಾನೆ; ಆಯಲ್ಪಟ್ಟ ಅವನ ಅಧಿಪತಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿಹೋದರು. ಅಗಾಧಗಳು ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ (ಸಮುದ್ರದ) ತಳಕ್ಕೆ ಮುಳುಗಿದರು. ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು. ನಿನ್ನ ಮಹತ್ತಾದ ಘನತೆಯಲ್ಲಿ ನಿನಗೆ ವಿರೋಧವಾಗಿ ಎದ್ದವರನ್ನು ಕೆಡವಿ ಬಿಟ್ಟಿರುವಿ. ನಿನ್ನ ರೌದ್ರವು ಹೊರಟು ಅವರನ್ನು ಹುಲ್ಲಿನಂತೆ ದಹಿಸಿಬಿಟ್ಟಿತು. ನಿನ್ನ ಮೂಗಿನ ಬಿರುಸಾದ ಗಾಳಿ ಯಿಂದ ನೀರುಗಳು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು; ಸಮುದ್ರದ ಅಗಾಧಗಳ ನೀರು ಗಟ್ಟಿಯಾದವು. ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು. ನೀನು ನಿನ್ನ ಗಾಳಿಯನ್ನು ಊದಿದಾಗ ಸಮುದ್ರವು ಅವರನ್ನು ಮುಚ್ಚಿಕೊಂಡಿತು. ಅವರು ಸೀಸದಂತೆ ಮಹಾಜಲಗಳಲ್ಲಿ ಮುಳುಗಿ ಹೊದರು. ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ? ನೀನು ನಿನ್ನ ಬಲಗೈಯನ್ನು ಚಾಚಲು ಭೂಮಿಯು ಅವರನ್ನು ನುಂಗಿತು. ನೀನು ವಿಮೋಚಿ ಸಿದ ಜನರನ್ನು ಕರುಣೆಯಿಂದ ನಡಿಸಿದಿ; ನೀನು ಅವ ರನ್ನು ನಿನ್ನ ಬಲದಿಂದ ನಿನ್ನ ಪರಿಶುದ್ಧ ನಿವಾಸಕ್ಕೆ ನಡಿಸಿದಿ. ಜನರು ಇದನ್ನು ಕೇಳಿ ಭಯಪಡುವರು; ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವದು. ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು. ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು. ನೀನು ಅವರನ್ನು ಒಳಗೆ ಬರಮಾಡಿ ಓ ಕರ್ತನೇ, ನಿನ್ನ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ (ಓ ಕರ್ತನೇ,) ನೀನು ವಾಸಿಸುವದಕ್ಕೆ ಮಾಡಿಕೊಂಡಿರುವ ನಿನ್ನ ಸ್ವಾಸ್ಥ್ಯದ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿ. ಕರ್ತನು ಯುಗಯುಗಾಂತರಗಳ ವರೆಗೆ ಆಳುವನು. ಫರೋ ಹನ ಕುದುರೆಗಳು ಅವನ ರಥಗಳ ಸಂಗಡಲೂ ಸವಾರರ ಸಂಗಡಲೂ ಸಮುದ್ರದೊಳಗೆ ಬಂದಾಗ ಕರ್ತನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರ ಮಾಡಿದನು; ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣನೆಲದ ಮೇಲೆ ಹೋದರು. ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು. ಮಿರ್ಯಾಮಳು ಅವರಿಗೆ ಕೊಟ್ಟ ಉತ್ತರವೇನಂದರೆ--ನೀವು ಕರ್ತನಿಗೆ ಹಾಡಿರಿ, ಆತನು ಮಹಿಮೆಯಿಂದ ಜಯಿಸಿದ್ದಾನೆ; ಕುದುರೆಯನ್ನು ಸವಾರ ನನ್ನು ಸಮುದ್ರದಲ್ಲಿ ಹಾಕಿದ್ದಾನೆ ಎಂಬದು.
- Revelation 15:3 ಪ್ರಕಟನೆ 15:3ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
- Matthew 26:30 ಮತ್ತಾಯನು 26:30ತರುವಾಯ ಅವರು ಕೀರ್ತನೆ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೋದರು.
- Isaiah 26:4 ಯೆಶಾಯ 26:4ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
- Deuteronomy 16:6 ಧರ್ಮೋಪದೇಶಕಾಂಡ 16:6ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀನು ಪಸ್ಕವನ್ನು ಸಾಯಂಕಾಲದಲ್ಲಿ ಸೂರ್ಯನು ಅಸ್ತಮಿಸುವಾಗ ನೀನು ಐಗುಪ್ತವನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು.
- Psalm 81:1–4 ಕೀರ್ತನೆಗಳು 81:1–4ನಮ್ಮ ಬಲವಾಗಿರುವ ದೇವರಿಗೆ ಗಟ್ಟಿಯಾದ ಧ್ವನಿಯಿಂದ ಹಾಡಿರಿ; ಯಾಕೋಬನ ದೇವರಿಗೆ ಜಯಧ್ವನಿಗೈಯಿರಿ. ಕೀರ್ತನೆಯನ್ನು ಎತ್ತಿರಿ; ದಮ್ಮಡಿಯನ್ನೂ ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ತನ್ನಿರಿ. ಅಮಾವಾಸ್ಯೆಯಲ್ಲಿಯೂ ನೇಮಕವಾದ ಪರಿಶುದ್ಧ ಹಬ್ಬದ ದಿವಸದಲ್ಲಿಯೂ ತುತೂರಿಯನ್ನು ಊದಿರಿ. ಅದು ಇಸ್ರಾಯೇಲಿಗೆ ಕಟ್ಟಳೆಯೇ; ಯಾಕೋಬನ ದೇವರ ನ್ಯಾಯಪ್ರಮಾಣವೇ;
- Isaiah 2:3 ಯೆಶಾಯ 2:3ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
- Deuteronomy 32:4 ಧರ್ಮೋಪದೇಶಕಾಂಡ 32:4ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
- Jeremiah 19:1–7 ಯೆರೆಮೀಯ 19:1–7ಕರ್ತನು ಹೀಗೆ ಹೇಳುತ್ತಾನೆ--ಹೋಗಿ, ಕುಂಬಾರನ ಮಣ್ಣಿನ ಕೂಜೆಯನ್ನು ತಕ್ಕೊಂಡು, ಜನರ ಹಿರಿಯರಿಂದಲೂ ಯಾಜಕರ ಹಿರಿಯರಿಂದಲೂ ಕೆಲವರನ್ನು ಕರಕೊಂಡು ಮೂಡಣ ಬಾಗಿಲಿನ ಪ್ರವೇಶದ ಬಳಿಯಲ್ಲಿ ಹಿನ್ನೋಮನ ಮಗನ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು. ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗನ್ನುತ್ತಾನೆ--ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ; ಅದನ್ನು ಕೇಳುವವ ರೆಲ್ಲರ ಕಿವಿಗಳು ಗುಂಯ್ಗುಟ್ಟುವವು. ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಪರಸ್ಥಳ ಮಾಡಿ, ಅವರೂ ಅವರ ತಂದೆಗಳೂ ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪಸುಟ್ಟು ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತ ದಿಂದ ತುಂಬಿಸಿ ತಮ್ಮ ಮಕ್ಕಳನ್ನು ಬಾಳನಿಗೆ ದಹನ ಬಲಿಗಳಾಗಿ ಬೆಂಕಿಯಲ್ಲಿ ಸುಡುವದಕ್ಕೆ ಬಾಳನ ಉನ್ನತ ಸ್ಥಳಗಳನ್ನು ಕಟ್ಟಿದ್ದಾರೆ. ಇಂಥದ್ದನ್ನು ನಾನು ಆಜ್ಞಾ ಪಿಸಲಿಲ್ಲ, ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ. ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಇಗೋ, ದಿನಗಳು ಬರುವವು; ಆಗ ಈ ಸ್ಥಳವು ಇನ್ನು ತೋಫೆತೆಂದು, ಹಿನ್ನೋಮನ ಮಗನ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲ್ಪಡುವದು. ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು; ಅವರ ಶತ್ರುಗಳ ಮುಂದೆಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಿಂದಲೂ ಅವರನ್ನು ಕತ್ತಿಯಿಂದ ಬೀಳು ವಂತೆ ಮಾಡುವೆನು; ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
- Psalm 32:7 ಕೀರ್ತನೆಗಳು 32:7ನೀನು ನನ್ನ ಮರೆಯು; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀ; ಬಿಡುಗಡೆಯ ಹಾಡುಗಳಿಂದ ನನ್ನನ್ನು ಆವರಿಸಿ ಕೊಳ್ಳುತ್ತೀ ಸೆಲಾ.
Original words (Hebrew)
- song · H7892שִׁיר shîyr
- night · H3915לַיִל layil
- holy · H6942קָדַשׁ qâdash
- solemnity · H2282חַג chag
- kept · H6942קָדַשׁ qâdash
- gladness · H8057שִׂמְחָה simchâh
- heart · H3824לֵבָב lêbâb
- goeth · H1980הָלַךְ hâlak
- pipe · H2485חָלִיל châlîyl
- come · H935בּוֹא bôwʼ
- mountain · H2022הַר har
- One · H6697צוּר tsûwr
- Israel · H3478יִשְׂרָאֵל Yisrâʼêl