Isaiah · chapter 30 · verse 3
Isaiah 30:3 in Kannada
ಆದಕಾರಣ ಫರೋಹನ ಬಲವು ನಿಮಗೆ ನಾಚಿಕೆಯೂ ಐಗುಪ್ತದ ನೆರಳಿನ ಭರವಸದಿಂದ ನಿಮ ಗೆ ನಿಂದೆಯೂ ಉಂಟಾಗುವದು.
Aadakaarana pharohana balavu nimage naachikeyoo aiguptada neralina bharavasadinda nima ge nindeyoo untaaguvadu.
Isaiah 30:3 in English
- King James Version (KJV)
- Therefore shall the strength of Pharaoh be your shame, and the trust in the shadow of Egypt [your] confusion.
- World English Bible (WEB)
- Therefore the strength of Pharaoh will be your shame, and the refuge in the shadow of Egypt your confusion.
- American Standard Version (ASV)
- Therefore shall the strength of Pharaoh be your shame, and the refuge in the shadow of Egypt your confusion.
- Bible in Basic English (BBE)
- And the strength of Pharaoh will be your shame, and your hope in the shade of Egypt will come to nothing.
- Darby Translation (DBY)
- For to you the protection of Pharaoh shall be a shame, and the trust in the shadow of Egypt a confusion.
- Webster's Bible (WBS)
- Therefore shall the strength of Pharaoh be your shame, and the trust in the shade of Egypt [your] confusion.
- Young's Literal Translation (YLT)
- And the strength of Pharaoh Hath been to you for shame, And the trust in the shadow of Egypt confusion,
Read in context
- 1ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
- 2ಫರೋಹನ ಬಲದಲ್ಲಿ ತಾವು ಬಲಗೊಳ್ಳುವ ಹಾಗೆ ಯೂ ಐಗುಪ್ತದ ನೆರಳಿನಲ್ಲಿ ಭರವಸವಿಟ್ಟು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿ ದ್ದಾರೆ.
- 3ಆದಕಾರಣ ಫರೋಹನ ಬಲವು ನಿಮಗೆ ನಾಚಿಕೆಯೂ ಐಗುಪ್ತದ ನೆರಳಿನ ಭರವಸದಿಂದ ನಿಮ ಗೆ ನಿಂದೆಯೂ ಉಂಟಾಗುವದು.
- 4ಅವನ ಪ್ರಧಾ ನರು ಚೋವನಿನಲ್ಲಿ ಇದ್ದರು. ಅವನ ರಾಯಭಾರಿ ಗಳು ಹಾನೇಸಿಗೆ ಬಂದಿದ್ದಾರೆ.
- 5ತಮಗೆ ಪ್ರಯೋ ಜನವಾಗದೆ ಸಹಾಯಕ್ಕೂ ಪ್ರಯೋಜನಕ್ಕೂ ಅಲ್ಲ, ನಿಂದೆಗೂ ನಾಚಿಕೆಗೂ ಇರುವ ಜನಕ್ಕೆ ಎಲ್ಲರೂ ನಾಚಿಕೆಪಡುತ್ತಾರೆ.
Cross references
- Isaiah 20:5 ಯೆಶಾಯ 20:5ಆಗ (ನನ್ನ ಜನರು) ಅವನು ನಿರೀಕ್ಷಿಸಿಕೊಂಡಿದ್ದ ಐಥಿಯೋ ಪಿಯರ ನಿಮಿತ್ತವಾಗಿಯೂ ತಮ್ಮ ವೈಭವದ ಐಗುಪ್ತದ ವಿಷಯವಾಗಿಯೂ ಬೆಚ್ಚಿ ಬೆರಗಾಗಿ ನಾಚಿಕೆಪಡು ವರು.ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.
- Romans 10:11 ರೋಮಾಪುರದವರಿಗೆ 10:11ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ.
- Jeremiah 17:5–6 ಯೆರೆಮೀಯ 17:5–6ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯನಲ್ಲಿ ನಂಬಿಕೆ ಇಟ್ಟು ಅವನನ್ನು ತನ್ನ ಬಾಹುವನ್ನಾಗಿ ಮಾಡಿ ಕೊಂಡು ಕರ್ತನ ಕಡೆಯಿಂದ ಯಾವನ ಹೃದಯವು ತೊಲಗುವದೋ ಅವನು ಶಾಪಗ್ರಸ್ತನು. ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.
- Romans 5:5 ರೋಮಾಪುರದವರಿಗೆ 5:5ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
- Isaiah 30:5–7 ಯೆಶಾಯ 30:5–7ತಮಗೆ ಪ್ರಯೋ ಜನವಾಗದೆ ಸಹಾಯಕ್ಕೂ ಪ್ರಯೋಜನಕ್ಕೂ ಅಲ್ಲ, ನಿಂದೆಗೂ ನಾಚಿಕೆಗೂ ಇರುವ ಜನಕ್ಕೆ ಎಲ್ಲರೂ ನಾಚಿಕೆಪಡುತ್ತಾರೆ. ದಕ್ಷಿಣ ಸೀಮೆಯ ಮೃಗಗಳ ವಿಷಯವಾದ ದೈವೋಕ್ತಿ. ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿ ಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿ ಗಳ ಬೆನ್ನುಗಳ ಮೇಲೆ ತಮ್ಮ ಬದುಕನ್ನೂ ಒಂಟೆಗಳ ಡಬ್ಬಗಳ ಮೇಲೆ ತಮ್ಮ ದ್ರವ್ಯಗಳನ್ನೂ ಪ್ರಯೋಜನ ವಲ್ಲದ ಜನಕ್ಕೆ ತಕ್ಕೊಂಡು ಹೋಗುತ್ತಾರೆ. ಐಗುಪ್ತ್ಯರ ಸಹಾಯವು ವ್ಯರ್ಥವೇ ವ್ಯರ್ಥ. ಆದದರಿಂದ ಇದನ್ನು ಕುರಿತು ಅವರ ಬಲವು ನಿಂತುಹೋಗಿದೆ ಎಂದು ನಾನು ಕೂಗಿದ್ದೇನೆ.
- Jeremiah 37:5–10 ಯೆರೆಮೀಯ 37:5–10ಫರೋಹನ ಸೈನ್ಯವು ಐಗುಪ್ತದಿಂದ ಹೊರಟಿತು; ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿದ್ದ ಕಸ್ದೀಯರು ಅದರ ಸುದ್ದಿಯನ್ನು ಕೇಳಿ ಯೆರೂಸಲೇಮನ್ನು ಬಿಟ್ಟುಹೋದರು. ಆಗ ಕರ್ತನ ವಾಕ್ಯವು ಪ್ರವಾದಿಯಾದ ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ನನ್ನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನಂದರೆ--ಇಗೋ, ನಿಮ್ಮ ಸಹಾಯಕ್ಕೆ ಹೊರಟ ಫರೋಹನ ಸೈನ್ಯವು ಅದರ ಸ್ವದೇಶವಾದ ಐಗುಪ್ತಕ್ಕೆ ಹಿಂತಿರುಗುವದು. ಕಸ್ದೀಯರು ತಿರುಗಿಕೊಂಡು ಈ ಪಟ್ಟಣಕ್ಕೆ ವಿರೋಧ ವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡುವರು. ಕರ್ತನು ಹೀಗೆ ಹೇಳುತ್ತಾನೆ--ಕಸ್ದೀ ಯರು ನಿಜವಾಗಿ ನಮ್ಮನ್ನು ಬಿಟ್ಟುಹೋಗುವರೆಂದು ನಿಮಗೆ ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವದೇ ಇಲ್ಲ. ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.
- Isaiah 45:16–17 ಯೆಶಾಯ 45:16–17ಅವರೆಲ್ಲರೂ ನಾಚಿಕೆಪಟ್ಟು ನಿಂದಿತರಾಗುವರು. ವಿಗ್ರಹಗಳನ್ನು ಮಾಡುವವರು ಒಟ್ಟಾಗಿ ಗಲಿಬಿಲಿಗೆ ಒಳಗಾಗುವರು. ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
- Isaiah 36:6 ಯೆಶಾಯ 36:6ಜಜ್ಜಿದ ದಂಡಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತಿಯಷ್ಟೆ; ಒಬ್ಬನು ಅಂತ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯೊಳಕ್ಕೆ ಹೋಗಿ ತಿವಿಯುತ್ತದೆ. ಐಗುಪ್ತದ ಅರಸ ನಾದ ಫರೋಹನು ತನ್ನಲ್ಲಿ ನಂಬಿಕೆ ಇಟ್ಟುಕೊಳ್ಳುವ ವರೆಲ್ಲರಿಗೆ ಹೀಗೆ ಇದ್ದಾನೆ.