Isaiah · chapter 31 · verse 6
Isaiah 31:6 in Kannada
ಇಸ್ರಾಯೇಲ್ಯರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದ್ದೀರೋ ಆತನ ಕಡೆಗೆ ತಿರುಗಿ ಕೊಳ್ಳಿರಿ.
Israayelyare, neevu yaarige agaadha drohavannu maadiddeero aatana kadege tirugi kolliri.
Isaiah 31:6 in English
- King James Version (KJV)
- Turn ye unto [him from] whom the children of Israel have deeply revolted.
- World English Bible (WEB)
- Return to him from whom you have deeply revolted, children of Israel.
- American Standard Version (ASV)
- Turn ye unto him from whom ye have deeply revolted, O children of Israel.
- Bible in Basic English (BBE)
- Come back to him who has been so deeply sinned against by the children of Israel.
- Darby Translation (DBY)
- Turn unto him from whom ye have deeply revolted, ye children of Israel;
- Webster's Bible (WBS)
- Turn ye to [him from] whom the children of Israel have deeply revolted.
- Young's Literal Translation (YLT)
- Turn back to Him from whom sons of Israel Have deepened apostasy.
Read in context
- 4ಕರ್ತನು ನನಗೆ ಹೀಗೆ ಹೇಳಿದ್ದಾನೆ -- ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರು ಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವದೋ ಹಾಗೆಯೇ ಸೈನ್ಯಗಳ ಕರ್ತನು ಚೀಯೋನ್ ಪರ್ವತ ಕ್ಕೋಸ್ಕರವೂ ಅದರ ಗುಡ್ಡಕ್ಕೋಸ್ಕರವೂ ಯುದ್ಧ ಮಾಡಲು ಇಳಿದು ಬರುವನು.
- 5ಹಾರುವ ಪಕ್ಷಿಗಳಂತೆ ಸೈನ್ಯಗಳ ಕರ್ತನು ಯೆರೂಸಲೇಮನ್ನು ಕಾಪಾಡುವನು; ಅದನ್ನು ರಕ್ಷಿಸಿ ಕಾಯುವನು. ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು.
- 6ಇಸ್ರಾಯೇಲ್ಯರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದ್ದೀರೋ ಆತನ ಕಡೆಗೆ ತಿರುಗಿ ಕೊಳ್ಳಿರಿ.
- 7ನೀವು ನಿಮ್ಮ ಸ್ವಂತ ಕೈಗಳಿಂದ ಪಾಪಕ್ಕೋ ಸ್ಕರ ಮಾಡಿದ ಬೆಳ್ಳಿಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನು ಬಿಸಾಡಿಬಿಡುವನು.
- 8ಆಗ ಅಶ್ಶೂರ್ಯನು ಕತ್ತಿಯಿಂದ ಬೀಳುವನು, ಬಲಿಷ್ಟ ನಿಂದಲ್ಲ; ಅವನು ನುಂಗಲ್ಪಡುವನು, ಹೀನನ ಕತ್ತಿ ಯಿಂದಲ್ಲ; ಅವನು ಕತ್ತಿಯ ಕಡೆಯಿಂದ ಓಡುವನು, ಅವನ ಯೌವನಸ್ಥರು ಸೋಲಿಸಲ್ಪಡುವರು.ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.
Cross references
- Jeremiah 3:22 ಯೆರೆಮೀಯ 3:22ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ.
- Jeremiah 3:14 ಯೆರೆಮೀಯ 3:14ಹಿಂಜರಿದ ಮಕ್ಕಳೇ, ತಿರುಗಿಕೊಳ್ಳಿರೆಂದು ಕರ್ತನು ಅನ್ನುತ್ತಾನೆ; ನಾನು ನಿಮ್ಮನ್ನು ಮದುವೆಯಾಗಿದ್ದೇನೆ; ನಿಮ್ಮನ್ನು ಪಟ್ಟಣದೊಳಗಿಂದ ಒಬ್ಬನಂತೆಯೂ ಗೋತ್ರ ದೊಳಗಿಂದ ಇಬ್ಬರಂತೆಯೂ ತೆಗೆದುಕೊಂಡು ಚೀಯೋನಿಗೆ ಕರಕೊಂಡು ಬರುವೆನು.
- Isaiah 55:7 ಯೆಶಾಯ 55:7ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Jeremiah 3:10 ಯೆರೆಮೀಯ 3:10ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ.
- Acts 26:20 ಅಪೊಸ್ತಲರ ಕೃತ್ಯಗಳು 26:20ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
- Jeremiah 5:23 ಯೆರೆಮೀಯ 5:23ಆದರೆ ಈ ಜನರಿಗೆ ತಿರುಗಿ ಬೀಳುವಂಥ, ಪ್ರತಿಭಟಿಸುವಂಥ ಹೃದಯ ಉಂಟು; ಅವರು ತಿರುಗಿ ಬಿದ್ದು ಹೋಗಿಬಿಟ್ಟಿದ್ದಾರೆ.
- Joel 2:12–13 ಯೋವೇಲ 2:12–13ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ. ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.
- 2 Chronicles 33:9–16 2 ಪೂರ್ವಕಾಲವೃತ್ತಾಂತ 33:9–16ಹೀಗೆಯೇ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ನಾಶ ಮಾಡಿದ ಜನಾಂಗಗಳಿಗಿಂತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಕೆಟ್ಟದ್ದನ್ನು ಮಾಡು ವದಕ್ಕೆ ತಪ್ಪಿಹೋಗುವಂತೆ ಮನಸ್ಸೆಯು ಮಾಡಿದನು. ಕರ್ತನು ಮನಸ್ಸೆಯೊಂದಿಗೂ ಅವನ ಜನ ರೊಂದಿಗೂ ಮಾತನಾಡಿದನು; ಆದರೆ ಅವರು ಆಲೈ ಸದೆ ಹೋದರು. ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು. ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು. ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು. ಇದಾದ ತರುವಾಯ ಮನಸ್ಸೆಯು ದಾವೀದನ ಪಟ್ಟಣದ ಹೊರಭಾಗದಲ್ಲಿ ಗೀಹೋನಿನ ಪಶ್ಚಿಮ ಕಡೆಯ ತಗ್ಗಿನಲ್ಲಿ ವಿಾನುಬಾಗಲ ದ್ವಾರದ ವರೆಗೆ ಓಫೆಲ್ ಸುತ್ತಲೂ ಗೋಡೆಯನ್ನು ಕಟ್ಟಿಸಿ ಅದನ್ನು ಬಹಳ ಎತ್ತರ ಮಾಡಿ ಯೆಹೂದದ ಸಮಸ್ತ ಕೋಟೆ ಯುಳ್ಳ ಪಟ್ಟಣಗಳಲ್ಲಿ ಸೈನ್ಯದ ಅಧಿಪತಿಗಳನ್ನು ಇಟ್ಟನು. ಇದಲ್ಲದೆ ಅವನು ಅನ್ಯ ದೇವರುಗಳನ್ನೂ ಕರ್ತನ ಆಲಯದಲ್ಲಿರುವ ವಿಗ್ರಹವನ್ನೂ ಕರ್ತನ ಆಲಯದ ಪರ್ವತದಲ್ಲಿಯೂ ಯೆರೂಸಲೇಮಿನ ಲ್ಲಿಯೂ ತಾನು ಕಟ್ಟಿಸಿದ ಸಮಸ್ತ ಬಲಿಪೀಠಗಳನ್ನೂ ತೆಗೆದುಹಾಕಿ ಅವುಗಳನ್ನು ಪಟ್ಟಣದ ಹೊರಗೆ ಬಿಸಾಡಿ ಬಿಟ್ಟನು. ಅವನು ಕರ್ತನ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಸಮಾಧಾನದ ಬಲಿಗಳನ್ನೂ ಸ್ತೋತ್ರದ ಬಲಿಗಳನ್ನೂ ಅರ್ಪಿಸಿ ಇಸ್ರಾಯೇಲಿನ ದೇವರಾದ ಕರ್ತನನ್ನು ಸೇವಿಸಲು ಯೆಹೂದದವರಿಗೆ ಆಜ್ಞಾಪಿಸಿ ದನು.
- Isaiah 1:4–5 ಯೆಶಾಯ 1:4–5ಹಾ, ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಸಂತ ತಿಯೇ, ಭ್ರಷ್ಟರಾದ ಮಕ್ಕಳೇ, ಕರ್ತನನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧನಾ ದಾತನಿಗೆ ಕೋಪವನ್ನೆಬ್ಬಿಸುವಂತೆ ಅವರು ಹಿಂದಕ್ಕೆ ಹೋಗಿದ್ದಾರೆ. ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
- Hosea 9:9 ಹೋಶೇಯ 9:9ಗಿಬ್ಯದ ದಿನಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ; ಆದದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕಮಾಡಿಕೊಳ್ಳುವನು, ಅವರ ಪಾಪಗಳನ್ನು ವಿಚಾರಿಸುವನು.
- Jeremiah 31:18–20 ಯೆರೆಮೀಯ 31:18–20ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ. ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು. ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
- Acts 3:19 ಅಪೊಸ್ತಲರ ಕೃತ್ಯಗಳು 3:19ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.