Isaiah · chapter 32 · verse 18
Isaiah 32:18 in Kannada
ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ ಭದ್ರವಾದ ಸ್ಥಾನಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
Aaga nanna janaru samaadhaanada nivaasagalalliyoo bhadravaada sthaanagalalliyoo nemmadiya aashrayagalalliyoo nelegolluvaru.
Isaiah 32:18 in English
- King James Version (KJV)
- And my people shall dwell in a peaceable habitation, and in sure dwellings, and in quiet resting places;
- World English Bible (WEB)
- My people will live in a peaceful habitation, in safe dwellings, and in quiet resting places,
- American Standard Version (ASV)
- And my people shall abide in a peaceable habitation, and in safe dwellings, and in quiet resting-places.
- Bible in Basic English (BBE)
- And my people will be living in peace, in houses where there is no fear, and in quiet resting-places.
- Darby Translation (DBY)
- And my people shall dwell in a peaceable habitation, and in sure dwellings, and in quiet resting-places.
- Webster's Bible (WBS)
- And my people shall dwell in a peaceable habitation, and in sure dwellings, and in quiet resting-places;
- Young's Literal Translation (YLT)
- And dwelt hath My people in a peaceful habitation, And in stedfast tabernacles, And in quiet resting-places.
Read in context
- 16ನ್ಯಾಯವು ಅರಣ್ಯದಲ್ಲಿಯೂ ನೆಲೆಗೊ ಳ್ಳುವದು. ಪೈರಿನ ಹೊಲದಲ್ಲಿ ನೀತಿಯು ನೆಲೆಯಾಗಿರುವದು.
- 17ನೀತಿಯ ಕೆಲಸವು ಸಮಾಧಾನವೂ ನೀತಿಯ ಫಲವು ನಿತ್ಯವಾದ ಶಾಂತಿಯೂ ಭರವಸವೂ ಆಗಿರುವದು.
- 18ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ ಭದ್ರವಾದ ಸ್ಥಾನಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
- 19ಆದರೆ ಕಲ್ಮಳೆ ಸುರಿಯುವಾಗ ವನವು ಹಾಳಾಗು ವದು; ಪಟ್ಟಣವು ತಗ್ಗಾದ ಸ್ಥಳಕ್ಕೆ ತಗ್ಗಿಸಲ್ಪಡುವದು.ಎಲ್ಲಾ ನೀರುಗಳ ಬಳಿಯಲ್ಲಿ ಬಿತ್ತುತ್ತಲೂ ಎತ್ತು ಕತ್ತೆಗಳನ್ನು (ಕಾವಲಿಗೆ) ಮೇಯ ಬಿಡುತ್ತಲೂ ಇರುವ ನೀವು ಧನ್ಯರೇ ಸರಿ.
- 20ಎಲ್ಲಾ ನೀರುಗಳ ಬಳಿಯಲ್ಲಿ ಬಿತ್ತುತ್ತಲೂ ಎತ್ತು ಕತ್ತೆಗಳನ್ನು (ಕಾವಲಿಗೆ) ಮೇಯ ಬಿಡುತ್ತಲೂ ಇರುವ ನೀವು ಧನ್ಯರೇ ಸರಿ.
Cross references
- Zechariah 2:5 ಜೆಕರ್ಯ 2:5ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.
- Hosea 2:18–23 ಹೋಶೇಯ 2:18–23ಆ ದಿನದಲ್ಲಿ ಅವರಿ ಗೋಸ್ಕರ ಅಡವಿಯ ಮೃಗಗಳ ಸಂಗಡಲೂ ಆಕಾಶದ ಪಕ್ಷಿಗಳ ಸಂಗಡಲೂ ಭೂಮಿಯ ಕ್ರಿಮಿಗಳ ಸಂಗಡಲೂ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ ಕತ್ತಿ ಯನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದು ಹಾಕಿ ಅವರನ್ನು ನಿರ್ಭಯವಾಗಿ ಮಲಗುವಂತೆ ಮಾಡುವೆನು. ನಿನ್ನನ್ನು ನನಗೆ ಸದಾ ಕಾಲಕ್ಕೆ ನಿಶ್ಚಿತ್ತಾರ್ಥ ಮಾಡಿಕೊಳ್ಳುವೆನು; ಹೌದು, ನೀತಿ ಯಿಂದಲೂ ನ್ಯಾಯದಿಂದಲೂ ದಯೆಯಿಂದಲೂ ಕರುಣೆಯಿಂದಲೂ ನನ್ನನ್ನು ನಿನಗೆ ನಿಶ್ಚಿತ್ತಾರ್ಥಮಾಡಿ ಕೊಳ್ಳುವೆನು. ನಾನು ನಿನ್ನನ್ನು ನಂಬಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು; ಆಗ ನೀನು ಕರ್ತನನ್ನು ತಿಳಿದುಕೊಳ್ಳುವಿ. ಆ ದಿನಗಳಲ್ಲಿ ಆಗುವದೇನಂದರೆ--ನಾನು ಕೇಳು ವೆನೆಂದು ಕರ್ತನು ಹೇಳುತ್ತಾನೆ; ನಾನು ಆಕಾಶಗ ಳನ್ನು ಕೇಳುವೆನು; ಅವು ಭೂಮಿಯನ್ನು ಕೇಳು ವವು. ಭೂಮಿಯು ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೇಳುವವು. ಅವು ಇಜ್ರೇಲನ್ನು ಕೇಳುವವು.ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ. ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Jeremiah 33:16 ಯೆರೆಮೀಯ 33:16ಆ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡುವದು; ಯೆರೂಸಲೇಮು ಭದ್ರವಾಗಿ ವಾಸಿಸುವದು; ಆಕೆಯು (ಯೆರೂಸ ಲೇಮು) ಕರೆಯಲ್ಪಡುವ ಹೆಸರು ಇದೇ--ನಮ್ಮ ನೀತಿ ಯಾಗಿರುವ ಕರ್ತನು.
- Ezekiel 34:25–26 ಯೆಹೆಜ್ಕೇಲನು 34:25–26ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು. ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು;
- Isaiah 33:20–22 ಯೆಶಾಯ 33:20–22ನಮ್ಮ ಹಬ್ಬಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ, ಯೆರೂಸಲೇಮ್ ನೆಮ್ಮದಿಯ ನಿವಾಸವಾಗಿಯೂ ಗೂಟಕೀಳದ, ಹಗ್ಗ ಹರಿಯದ, ಒಂದೇ ಕಡೆ ಇರುವ ಗುಡಾರವಾಗಿಯೂ ಇರುವದನ್ನು ನೀವು ಕಣ್ಣಾರೆ ಕಾಣುವಿರಿ. ಆದರೆ ಅಲ್ಲಿ ವಿಸ್ತಾರವಾದ ನದಿಗಳಂತೆ ಮತ್ತು ಪ್ರವಾಹಗ ಳಂತೆ ಮಹಿಮೆಯುಳ್ಳ ಕರ್ತನು ನಮಗೆ ಇರುವನು. ಅಲ್ಲಿ ಹುಟ್ಟುಗೋಲಿನ ದೋಣಿ ಹೋಗದು, ಘನ ನಾವೆಯು ಸಂಚರಿಸದು. ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.
- Isaiah 35:9–10 ಯೆಶಾಯ 35:9–10ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು.ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು. ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
- Jeremiah 23:5–6 ಯೆರೆಮೀಯ 23:5–6ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು. ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- 1 John 4:16 1 ಯೋಹಾನನು 4:16ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
- Hebrews 4:9 ಇಬ್ರಿಯರಿಗೆ 4:9ಆದದರಿಂದ ದೇವಜನರಿಗೆ ವಿಶ್ರಾಂತಿಯು ಇನ್ನೂ ಉಂಟು.
- Isaiah 60:17–18 ಯೆಶಾಯ 60:17–18ಹಿತ್ತಾಳೆಗೆ ಬದಲಾಗಿ ಬಂಗಾರವನ್ನು ತರುವೆನು; ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ ಮರಕ್ಕೆ ಬದಲಾಗಿ ಹಿತ್ತಾಳೆಯನ್ನೂ ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು, ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿಯೂ ನೀತಿಯನ್ನು ನಿನಗೆ ಅಧಿಕಾರಿ ಯನ್ನಾಗಿಯೂ ಮಾಡುವೆನು. ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ.
- Zechariah 2:8 ಜೆಕರ್ಯ 2:8ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.