Isaiah · chapter 32 · verse 9
Isaiah 32:9 in Kannada
ನಿಶ್ಚಿಂತೆಯರಾದ ಹೆಂಗಸರೇ, ಏಳಿರಿ, ನನ್ನ ಸ್ವರ ವನ್ನು ಕೇಳಿರಿ, ಭಯವಿಲ್ಲದ ಹೆಣ್ಣುಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ.
Nishchinteyaraada hengasare, eliri, nanna svara vannu keliri, bhayavillada hennumakkale, nanna maatige kivigodiri.
Isaiah 32:9 in English
- King James Version (KJV)
- Rise up, ye women that are at ease; hear my voice, ye careless daughters; give ear unto my speech.
- World English Bible (WEB)
- Rise up, you women who are at ease! Hear my voice! You careless daughters, give ear to my speech!
- American Standard Version (ASV)
- Rise up, ye women that are at ease, [and] hear my voice; ye careless daughters, give ear unto my speech.
- Bible in Basic English (BBE)
- Give ear to my voice, you women who are living in comfort; give attention to my words, you daughters who have no fear of danger.
- Darby Translation (DBY)
- Rise up, ye women that are at ease, hear my voice; ye careless daughters, give ear unto my speech.
- Webster's Bible (WBS)
- Rise up, ye women that are at ease; hear my voice, ye careless daughters; give ear to my speech.
- Young's Literal Translation (YLT)
- Women, easy ones, rise, hear my voice, Daughters, confident ones, give ear [to] my saying,
Read in context
- 7ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು.
- 8ಘನವಂತನಾ ದರೋ, ಘನಕಾರ್ಯಗಳನ್ನು ಕಲ್ಪಿಸುವನು; ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.
- 9ನಿಶ್ಚಿಂತೆಯರಾದ ಹೆಂಗಸರೇ, ಏಳಿರಿ, ನನ್ನ ಸ್ವರ ವನ್ನು ಕೇಳಿರಿ, ಭಯವಿಲ್ಲದ ಹೆಣ್ಣುಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ.
- 10ನಿಶ್ಚಿಂತೆಯ ಸ್ತ್ರಿಯರೇ, ನೀವು ವರುಷದ ಮೇಲೆ ಹೆಚ್ಚಾದ ದಿವಸಗಳಲ್ಲಿ ಕಳವಳ ಪಡುವಿರಿ, ದ್ರಾಕ್ಷೇ ಕೊಯ್ಯುವ ಕಾಲ ಇಲ್ಲದೆ ಹೋಗುವದು; ಹಣ್ಣು ಕೂಡಿಸುವ ಕಾಲ ಬಾರದು.
- 11ನಿಶ್ಚಿಂತೆಯುಳ್ಳ ಹೆಂಗಸರೇ, ನೀವು ನಡುಗಿರಿ, ನಿರ್ಭೀತರೇ ಕಳವಳಗೊಳ್ಳಿರಿ; ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣೀತಟ್ಟನ್ನು ಸುತ್ತಿಕೊಳ್ಳಿರಿ.
Cross references
- Isaiah 3:16 ಯೆಶಾಯ 3:16ಇದಲ್ಲದೆ ಕರ್ತನು ಇಂತೆನ್ನುತ್ತಾನೆ --ಚೀಯೋನ್ ಕುಮಾರ್ತೆಯರು ಅಹಂಕಾರಿಗಳಾಗಿದ್ದು ಕತ್ತು ತೂಗುತ್ತಾ ಕಣ್ಣುಗಳನ್ನು ತಿರುಗಿಸುತ್ತಾ ನಾಜೂಕಿ ನಿಂದ ಹೆಜ್ಜೆಇಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆ ಯುವವರಾಗಿರುವದರಿಂದ,
- Isaiah 28:23 ಯೆಶಾಯ 28:23ನನ್ನ ಧ್ವನಿಗೆ ಕಿವಿಗೊಟ್ಟು ಕೇಳಿರಿ; ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ.
- Matthew 13:9 ಮತ್ತಾಯನು 13:9ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
- Jeremiah 48:11–12 ಯೆರೆಮೀಯ 48:11–12ಮೋವಾಬು ತನ್ನ ಚಿಕ್ಕಂದಿನಿಂದ ಸುಖವಾಗಿತ್ತು; ಅದು ತನ್ನ ಮಡ್ಡಿಯ ಮೇಲೆ ಸುಮ್ಮನೆ ಇತ್ತು; ಒಂದು ಪಾತ್ರೆಯೊಳಗಿಂದ ಮತ್ತೊಂದು ಪಾತ್ರೆಗೆ ಹೊಯ್ಯ ಲ್ಪಡಲಿಲ್ಲ; ಸೆರೆಗೆ ಹೋಗಲಿಲ್ಲ; ಆದದರಿಂದ ಅದರ ರುಚಿ ಅದರಲ್ಲಿ ಉಂಟು; ಅದರ ವಾಸನೆ ಬೇರೆ ಆಗಲಿಲ್ಲ. ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅದರ ಬಳಿಗೆ ಅಲೆದಾಡುವವರನ್ನು ಕಳುಹಿಸುವೆನು; ಅವರು ಅದು ಅಲೆದಾಡುವಂತೆ ಮಾಡುವರು, ಅದರ ಪಾತ್ರೆಗಳನ್ನು ಬರಿದುಮಾಡಿ ತಮ್ಮ ಬುದ್ದಲಿಗಳನ್ನು ಒಡೆಯುವರು.
- Jeremiah 6:2–6 ಯೆರೆಮೀಯ 6:2–6ಚೀಯೋನಿನ ಮಗಳನ್ನು ಸೌಂದರ್ಯವಾದ ಮತ್ತು ಕೋಮಲವಾದವಳಿಗೆ ನಾನು ಹೋಲಿಸುತ್ತೇನೆ. ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು. ಅವಳಿಗೆ ವಿರೋಧವಾಗಿ ಯುದ್ಧವನ್ನು ಸಿದ್ಧಮಾಡಿರಿ; ಏಳಿರಿ, ಮಧ್ಯಾಹ್ನದಲ್ಲಿ ಏರಿ ಹೋಗೋಣ, ನಮಗೆ ಅಯ್ಯೋ! ಹೊತ್ತು ಮುಣುಗುತ್ತದಲ್ಲಾ; ಸಂಜೆಯ ನೆರಳುಗಳು ಉದ್ದವಾ ಗುತ್ತವೆ. ಏಳಿರಿ, ರಾತ್ರಿಯಲ್ಲಿ ಏರಿಹೋಗಿ ಅವಳ ಅರಮನೆಗಳನ್ನು ನಾಶಮಾಡೋಣ; ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಮರಗಳನ್ನು ಕಡಿಯಿರಿ; ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ; ವಿಚಾರಿಸಲ್ಪಡತಕ್ಕ ಪಟ್ಟಣವು ಇದೇ; ಅವಳಲ್ಲಿ ತುಂಬ ಬಲಾತ್ಕಾರ ಅದೆ.
- Zephaniah 2:15 ಚೆಫನ್ಯ 2:15ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
- Lamentations 4:5 ಪ್ರಲಾಪಗಳು 4:5ರುಚಿ ಯಾದವುಗಳನ್ನು ತಿಂದವರು ಬೀದಿಗಳಲ್ಲಿ ಹಾಳಾಗಿ ದ್ದಾರೆ; ಸಕಲಾತಿಗಳಲ್ಲಿ ಬೆಳೆಸಲ್ಪಟ್ಟವರು ತಿಪ್ಪೆಗಳನ್ನು ಅಪ್ಪಿಕೊಳ್ಳುತ್ತಾರೆ.
- Psalm 49:1–2 ಕೀರ್ತನೆಗಳು 49:1–2ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ; ಭೂಲೋಕದ ಜನರೇ, ಉಚ್ಚ ನೀಚ ಬಡವ ಬಲ್ಲಿದರೇ, ಕೇಳಿರಿ.
- Judges 9:7 ನ್ಯಾಯಸ್ಥಾಪಕರು 9:7ಯೋತಾಮನಿಗೆ ಇದನ್ನು ತಿಳಿಸಿದಾಗ ಅವನು ಹೋಗಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ಏರಿ ನಿಂತು ಗಟ್ಟಿಯಾಗಿ ಕೂಗಿ ಅವರಿಗೆ--ಶೆಕೆಮಿನ ಜನರೇ, ದೇವರು ನಿಮ್ಮ ಮೊರೆ ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ.
- Isaiah 47:7–8 ಯೆಶಾಯ 47:7–8ನಾನು ಶಾಶ್ವತವಾಗಿ ರಾಣಿಯೆಂದು ನೀನು ಅಂದುಕೊಂಡಿದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯ ದಲ್ಲಿಟ್ಟುಕೊಳ್ಳಲಿಲ್ಲ; ಇಲ್ಲವೆ ಅವರ ಅಂತ್ಯವನ್ನು ನೆನಸ ಲಿಲ್ಲ. ನಾನೇ ಇರುವವಳು ನನ್ನ ಹೊರತು ಇನ್ನು ಯಾರೂ ಇಲ್ಲ. ನಾನು ವಿಧವೆಯಾಗಿ ಕೂತುಕೊಳ್ಳು ವದಿಲ್ಲ; ಪುತ್ರಶೋಕವನ್ನು ಅನುಭವಿಸುವದಿಲ್ಲ ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿ ಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.
- Amos 6:1–6 ಆಮೋಸ 6:1–6ಚೀಯೋನಿನಲ್ಲಿ ನಿಶ್ಚಿಂತೆಯಿಂದಿರುವವ ರಿಗೂ ಸಮಾರ್ಯ ಬೆಟ್ಟದಲ್ಲಿ ನಂಬಿಕೆ ಯಿಡುವವರಿಗೂ ಇಸ್ರಾಯೇಲಿನ ಮನೆತನದವರ ಯಾರ ಬಳಿಗೆ ಬರುತ್ತಾರೋ ಆ ಪ್ರಮುಖ ಜನಾಂಗ ದಲ್ಲಿ ಹೆಸರುಗೊಂಡವರಿಗೂ ಅಯ್ಯೋ! ಕಲ್ನೆಗೆ ಹಾದುಹೋಗಿ ನೋಡಿರಿ; ಅಲ್ಲಿಂದ ಮಹಾ ಹಮಾತಿಗೆ ಹೋಗಿರಿ; ಅಲ್ಲಿಂದ ಫಿಲಿಷ್ಟಿಯರ ಗಾತಿಗೆ ಇಳಿದು ಹೋಗಿರಿ; ಅವು ಈ ರಾಜ್ಯಗಳಿಗಿಂತ ಒಳ್ಳೆಯವು ಗಳೇನು? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಕ್ಕಿಂತ ದೊಡ್ಡದೋ? ನೀವು ಕೆಟ್ಟ ದಿನವನ್ನು ದೂರಮಾಡಿ ಕೊಂಡು ಬಲಾತ್ಕಾರದ ಪೀಠವನ್ನು ಹತ್ತಿರ ಮಾಡಿಕೊ ಳ್ಳುತ್ತೀರಿ. ದಂತದ ಮಂಚಗಳ ಮೇಲೆ ಮಲಗಿಕೊಳ್ಳು ತ್ತಾರೆ; ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿ ಕೊಳ್ಳುತ್ತಾರೆ; ಮಂದೆಯೊಳಗಿಂದ ಕುರಿಮರಿಗಳನ್ನು, ಹಟ್ಟಿಯ ಮಂದೆಯೊಳಗಿಂದ ಕರುಗಳನ್ನು ತಿನ್ನುತ್ತಾರೆ. ವೀಣೆಯ ಸ್ವರಕ್ಕೆ ಹಾಡುತ್ತಾರೆ; ದಾವೀದನ ಹಾಗೆ ತಮಗೆ ತಾವೇ ಗಾನ ವಾದ್ಯಗಳನ್ನು ಕಲ್ಪಿಸಿಕೊಳ್ಳು ತ್ತಾರೆ. ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ.
- Deuteronomy 28:56 ಧರ್ಮೋಪದೇಶಕಾಂಡ 28:56ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ