Isaiah · chapter 33 · verse 13
Isaiah 33:13 in Kannada
ದೂರದಲ್ಲಿರುವವರೇ, ನಾನು ಮಾಡಿದ್ದನ್ನು ಕೇಳಿರಿ. ಸವಿಾಪದಲ್ಲಿರುವವರೇ, ನನ್ನ ಪರಾಕ್ರಮ ವನ್ನು ತಿಳಿದುಕೊಳ್ಳಿರಿ.
Dooradalliruvavare, naanu maadiddannu keliri. Saviాpadalliruvavare, nanna paraakrama vannu tilidukolliri.
Isaiah 33:13 in English
- King James Version (KJV)
- Hear, ye [that are] far off, what I have done; and, ye [that are] near, acknowledge my might.
- World English Bible (WEB)
- Hear, you who are far off, what I have done; and, you who are near, acknowledge my might.”
- American Standard Version (ASV)
- Hear, ye that are far off, what I have done; and, ye that are near, acknowledge my might.
- Bible in Basic English (BBE)
- Give ear, you who are far off, to what I have done: see my power, you who are near.
- Darby Translation (DBY)
- Hear, ye that are far off, what I have done; and ye that are near, acknowledge my might.
- Webster's Bible (WBS)
- Ye [that are] far off, hear what I have done; and ye [that are] near, acknowledge my might.
- Young's Literal Translation (YLT)
- Hear, ye far off, that which I have done, And know, ye near ones, My might.
Read in context
- 11ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರು ವಿರಿ. ನಿಮ್ಮ ಶ್ವಾಸವು ನಿಮ್ಮನ್ನೇ ನುಂಗುವ ಜ್ವಾಲೆಯಾಗು ವದು.
- 12ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು. ಕತ್ತರಿಸಿದ ಮುಳ್ಳು ಕೊಂಪೆಗೆ ಬೆಂಕಿಹಚ್ಚಿದಂತಾಗು ವದು.
- 13ದೂರದಲ್ಲಿರುವವರೇ, ನಾನು ಮಾಡಿದ್ದನ್ನು ಕೇಳಿರಿ. ಸವಿಾಪದಲ್ಲಿರುವವರೇ, ನನ್ನ ಪರಾಕ್ರಮ ವನ್ನು ತಿಳಿದುಕೊಳ್ಳಿರಿ.
- 14ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.
- 15ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.
Cross references
- Ephesians 2:11–18 ಎಫೆಸದವರಿಗೆ 2:11–18ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ. ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ. ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ. ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು. ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು. ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ. ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು. ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.
- Psalm 48:10 ಕೀರ್ತನೆಗಳು 48:10ಓ ದೇವರೇ, ನಿನ್ನ ಹೆಸರಿಗೆ ತಕ್ಕಂತಯೇ ನಿನ್ನ ಸ್ತೋತ್ರವು ಭೂಮಿಯ ಅಂತ್ಯಗಳ ವರೆಗೂ ಅದೆ. ನಿನ್ನ ಬಲಗೈ ನೀತಿಯಿಂದ ತುಂಬಿ ಅದೆ.
- Isaiah 49:1 ಯೆಶಾಯ 49:1ಓ ದ್ವೀಪ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ದೂರದ ಜನಗಳೇ, ಕಿವಿಗೊಡಿರಿ! ನಾನು ಗರ್ಭದಲ್ಲಿದ್ದಾಗಲೇ ಕರ್ತನು ನನ್ನನ್ನು ಕರೆ ದನು. ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.
- Psalm 148:14 ಕೀರ್ತನೆಗಳು 148:14ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
- Psalm 147:12–14 ಕೀರ್ತನೆಗಳು 147:12–14ಓ ಯೆರೂ ಸಲೇಮೇ, ಕರ್ತನನ್ನು ಸ್ತುತಿಸು; ಓ ಚೀಯೋನೇ, ನಿನ್ನ ದೇವರನ್ನು ಸ್ತುತಿಸು. ನಿನ್ನ ಬಾಗಲುಗಳ ಅಗುಳಿ ಗಳನ್ನು ಬಲಮಾಡಿ ಆತನು ನಿನ್ನ ಮಕ್ಕಳನ್ನು ನಿನ್ನ ಮಧ್ಯದಲ್ಲಿ ಆಶೀರ್ವದಿಸುತ್ತಾನೆ. ಆತನು ನಿನ್ನ ಮೇರೆಗಳನ್ನು ಸಮಾಧಾನಪಡಿಸುತ್ತಾನೆ. ಶ್ರೇಷ್ಠವಾದ ಗೋಧಿಯಿಂದ ನಿನ್ನನ್ನು ತೃಪ್ತಿಪಡಿಸುತ್ತಾನೆ.
- Isaiah 57:19 ಯೆಶಾಯ 57:19ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.
- 1 Samuel 17:46 1 ಸಮುವೇಲನು 17:46ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
- Joshua 2:9–11 ಯೆಹೋಶುವ 2:9–11ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು. ನೀವು ಐಗುಪ್ತದಿಂದ ಹೊರಡುವಾಗ ಕರ್ತನು ನಿಮಗೋಸ್ಕರ ಕೆಂಪು ಸಮುದ್ರದ ನೀರನ್ನು ಬತ್ತಿಹೋಗ ಮಾಡಿದ್ದನ್ನೂ ಯೊರ್ದನಿಗೆ ಆಚೆಯಲ್ಲಿದ್ದ ಅಮೋರಿ ಯರ ಇಬ್ಬರು ಅರಸುಗಳಾದ ಸೀಹೋನನನ್ನು ಓಗನನ್ನು ನೀವು ಸಂಪೂರ್ಣ ನಿರ್ಮೂಲ ಮಾಡಿದ್ದನ್ನೂ ನಾವು ಕೇಳಿದ್ದೇವೆ. ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕರಗಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ಯಾಕಂದರೆ ನಿಮ್ಮ ದೇವರಾದ ಕರ್ತನೇ ಮೇಲಿರುವ ಆಕಾಶದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾನೆ.
- Isaiah 37:20 ಯೆಶಾಯ 37:20ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು.
- Joshua 9:9–10 ಯೆಹೋಶುವ 9:9–10ಅವರು ಅವನಿಗೆ--ನಿಮ್ಮ ದೇವರಾದ ಕರ್ತನ ಹೆಸರಿಗೋಸ್ಕರ ನಿನ್ನ ಸೇವಕರಾದ ನಾವು ದೂರದೇಶದಿಂದ ಬಂದೆವು. ಯಾಕಂದರೆ ಆತನ ಕೀರ್ತಿಯನ್ನೂ ಆತನು ಐಗುಪ್ತದಲ್ಲಿ ಮಾಡಿದ ಎಲ್ಲವನ್ನೂ ಯೊರ್ದನಿಗೆ ಆಚೆಯಿರುವ ಅಮೋರಿಯರ ಇಬ್ಬರು ಅರಸುಗಳಾದ ಹೆಷ್ಬೋನಿನ ಅರಸನಾದ ಸೀಹೋನನಿಗೂ ಅಷ್ಟರೋತಿನಲ್ಲಿದ್ದ ಬಾಷಾನಿನ ಅರಸನಾದ ಓಗನಿಗೂ ಮಾಡಿದ್ದೆಲ್ಲವನ್ನೂ ನಾವು ಕೇಳಿದೆವು.
- Isaiah 18:3 ಯೆಶಾಯ 18:3ಭೂಲೋಕದ ನಿವಾಸಿಗಳೆಲ್ಲರೇ! ಭೂಮಿಯಲ್ಲಿ ವಾಸ ವಾಗಿರುವವರೆಲ್ಲರೇ! ಬೆಟ್ಟಗಳಲ್ಲಿ ಆತನು ಧ್ವಜವನ್ನು ಎತ್ತುವಾಗ ನೋಡಿರಿ; ಅವನು ತುತೂರಿಯನ್ನೂದು ವಾಗ ಕೇಳಿರಿ.